ಅತಿ ಆಸೆ ಗತಿಗೇಡು: ಲೋನ್ ಆಸೆಗೆ ತಾಳಿ ಅಡವಿಟ್ಟು ಮುಂಗಾಡ ಹಣ ಕಟ್ಟಿ ಮೋಸ ಹೋದ ಮಹಿಳೆಯರು – Kannada News | Vijayapura Loan Fraud: Women Duped of Lakhs in Low Interest Loan Scam
ವಿಜಯಪುರ, ಜುಲೈ 20: “ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ” ಎಂಬ ಮಾತಿಗೆ ಪುಷ್ಟಿ ನೀಡುವಂತಹ ಮತ್ತೊಂದು ವಂಚನೆ (Fraud) ಜಾಲ ವಿಜಯಪುರದಲ್ಲಿ (vijayapura) ಬಯಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಅಮಾಯಕ ಗ್ರಾಮೀಣ ಮಹಿಳೆಯರಿಗೆ ಮಕ್ಮಲ್ ಟೋಪಿ ಹಾಕಲಾಗಿದ್ದು, ಸಾಲದ ಆಸೆಗೆ ಬಿದ್ದ ನೂರಾರು ಜನ ಮುಂಗಾಡವಾಗಿ ಹಣ ಕಟ್ಟಿ ಲಕ್ಷ ಲಕ್ಷ ಹಣ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಜನರನ್ನ ನಂಬಿಸಲು ಹೈಟೆಕ್ ಪ್ಲ್ಯಾನ್ ಮಾಡಿದ್ದ ಖದೀಮರು ವಿಜಯಪುರ…