ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್ಗಳಲ್ಲಿ ಕಲೆಹಾಕಿದ್ದು 114 ರನ್ಗಳು ಮಾತ್ರ. ಆದರೆ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್ಗಳಲ್ಲಿ 125 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…