Headlines

ಇಂದು ಮಧ್ಯಾಹ್ನ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ, 4 ಸಾವಿರ ಆಸನ ವ್ಯವಸ್ಥೆ: ಜೋಶಿ ಸೇರಿ ಪ್ರಮುಖ ಬಿಜೆಪಿ ನಾಯಕರು ಭಾಗಿ – Kannada News | HD Deve Gowda’s Wife Chennamma Funeral Today at Mavinakere; 4,000 Seats Arranged for Final Rites

ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರವು ಇಂದು ಮಧ್ಯಾಹ್ನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಅಂತ್ಯಕ್ರಿಯೆಗೆ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಮಾವಿನಕೆರೆಯಲ್ಲಿ ಸುಮಾರು 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಮೈಸೂರಿನಿಂದ ಕುರ್ಚಿಗಳನ್ನು ತರಿಸಲಾಗಿದ್ದು, ಶಾಮಿಯಾನ ಹಾಗೂ ವಿದ್ಯುತ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ವಿವಿಧ ಭಾಗಗಳ ಜನಪ್ರತಿನಿಧಿಗಳು ಭಾಗಿಯಾಗುವ ಸಾಧ್ಯತೆ ಇದೆ. ಬೆಳಗ್ಗೆ 9:30ರವರೆಗೆ ಹೊಳೆನರಸೀಪುರದ ರೇವಣ್ಣ…

Read More

ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ! ನಕಲಿ ಹೂಡಿಕೆ ಜಾಹೀರಾತುಗಳ ಬಗ್ಗೆ ಎಚ್ಚರ – Kannada News | Bengaluru Retiree Loses Rs 6.88 Lakh After Falling for Deepfake Nirmala Sitharaman Investment Scam

ಬೆಂಗಳೂರು, ಜುಲೈ 20: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಡೀಪ್‌ಫೇಕ್ (Deepfake) ವಿಡಿಯೊ ಬಳಸಿಕೊಂಡು ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 6.88 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಾರಾಯಣಪುರ ನಿವಾಸಿಯಾದ 66 ವರ್ಷದ ವ್ಯಕ್ತಿಗೆ, ಕೇಂದ್ರ ಸರ್ಕಾರ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜಂಟಿಯಾಗಿ ಹೂಡಿಕೆ ಯೋಜನೆ ಆರಂಭಿಸಿರುವಂತೆ ತೋರಿಸುವ ವಿಡಿಯೊ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿತ್ತು. ಅದರಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಉತ್ತಮ ಲಾಭ ಸಿಗುತ್ತದೆ ಎಂದು ನಿರ್ಮಲಾ ಸೀತಾರಾಮನ್…

Read More

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಮಸೂದೆಗಳ ಮಂಡನೆ,ನೀಟ್ ಪೇಪರ್ ಸೋರಿಕೆ ಕುರಿತು ಗದ್ದಲ ಸಾಧ್ಯತೆ – Kannada News | Monsoon Session 2026 Begins: NEET Scam, Major Bills and Political Tensions Flare Up

ನವದೆಹಲಿ, ಜುಲೈ 20: ಸಂಸತ್ ಮುಂಗಾರು ಅಧಿವೇಶನ(Parliament Monsoon Session) ಇಂದಿನಿಂದ ಪ್ರಾರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆ, ಕ್ಷೇತ್ರ ಪುನರ್ವಿಂಗಡಣೆ ಹಾಗೂ ದೇಶಾದ್ಯಂತ ಸದ್ದು ಮಾಡುತ್ತಿರುವ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನದ ಆರಂಭಕ್ಕೂ…

Read More

ಅರ್ಜುನ್ ಕಪೂರ್-ಸಾಹಿಬಾ ಬಾಲಿ ಡೇಟಿಂಗ್? ಲಾರ್ಡ್ಸ್​​ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಜೋಡಿ – Kannada News | Arjun Kapoor and Sahiba Bali Spark Dating Rumors After Being Spotted Together At Lords

ಜುಲೈ 19ರಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು ಅರ್ಜುನ್ ಕಪೂರ್-ಸಾಹಿಬಾ ಬಾಲಿ ಒಟ್ಟಿಗೆ ವೀಕ್ಷಿಸಿದ್ದಾರೆ. ಕ್ರೀಡಾಂಗಣದ ಗ್ಯಾಲರಿಯಲ್ಲಿ ಕುಳಿತಿದ್ದ ಇವರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅರ್ಜುನ್ ಮತ್ತು ಸಾಹಿಬಾ ಪಂದ್ಯವನ್ನು ಎಂಜಾಯ್ ಮಾಡುತ್ತಾ ರಿಲ್ಯಾಕ್ಸ್ ಆಗಿ ಕಂಡರು. ಈ ಸಾರ್ವಜನಿಕ ಭೇಟಿಯು ಇಬ್ಬರ ನಡುವೆ ಸ್ನೇಹಕ್ಕಿಂತ ಮೀರಿದ ಸಂಬಂಧ ಇದೆಯೇ ಎಂಬ ಚರ್ಚೆಗೆ ಕಾರಣವಾಗಿದೆ. ಆದರೆ ಈ ಹೊಸ ವದಂತಿಗಳ ಬಗ್ಗೆ ಅರ್ಜುನ್ ಕಪೂರ್ ಅಥವಾ ಸಾಹಿಬಾ ಬಾಲಿ…

Read More

ವಿಶ್ವ ಚಾಂಪಿಯನ್​ ಪಟ್ಟದೊಂದಿಗೆ ಹೊಸ ಇತಿಹಾಸ ಬರೆದ ಸ್ಪೇನ್ – Kannada News | Spain Crowned 2026 FIFA World Cup Champions

ಜುಲೈ 19, 2026 ರಂದು ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಸೋಲಿಸಿ, 2026ರ ಫಿಫಾ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ನಿಗದಿತ 90 ನಿಮಿಷಗಳಲ್ಲಿ ಉಭಯ ತಂಡಗಳು ಯಾವುದೇ ಗೋಲು ಬಾರಿಸಿರಲಿಲ್ಲ. ಆ ಬಳಿಕ ನಡೆದ ಹೆಚ್ಚುವರಿ ನಿಮಿಷದಲ್ಲಿ ಪಂದ್ಯ ಫಲಿತಾಂಶ ನಿರ್ಧಾರವಾಯಿತು. ಪಂದ್ಯದ ಮುಖ್ಯಾಂಶಗಳು: ಗೆಲುವಿನ ಗೋಲು: ಪಂದ್ಯದ 106ನೇ ನಿಮಿಷದಲ್ಲಿ ಬದಲಿ ಆಟಗಾರನಾಗಿ…

Read More

ಬೆಂಗಳೂರಿಗರೇ ಎಚ್ಚರ! ನೀವು ತಿನ್ನುವ ಸೊಪ್ಪು, ತರಕಾರಿಯಲ್ಲೂ ಇದೆ ಸೀಸದ ಅಂಶ! – Kannada News | Lead in Vegetables: Shocking Pollution Report of Bengaluru Vegetables and AQI Levels

ನೀವು ತಿನ್ನುವ ಸೊಪ್ಪು, ತರಕಾರಿಯಲ್ಲೂ ಇದೆ ಸೀಸದ ಅಂಶ! ಬೆಂಗಳೂರು, ಜುಲೈ 20: ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದ್ದು, ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟ ತಲುಪುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಿಗರ ಆರೋಗ್ಯಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆಯಲಾಗುವ ಹಸಿರೆಲೆ ಸೊಪ್ಪು ಮತ್ತು ತರಕಾರಿಗಳಲ್ಲಿ ಸೀಸ (Lead), ಕೀಟನಾಶಕ ಹಾಗೂ ಅಪಾಯಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿವೆ ಎಂದು ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ (CPCB)…

Read More

‘ಓಂ ನನ್ನ ಆಲ್​ ಟೈಮ್​ ಫೇವರಿಟ್’; ಹಾಡಿ ಹೊಗಳಿದ ಪ್ರಥ್ವಿರಾಜ್ ಸುಕುಮಾರನ್ – Kannada News | Prithviraj Sukumaran Names Shivarajkumar’s Om As His All Time Favorite Indian Film

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಹಲವು ದಾಖಲೆ ಬರೆದಿದ್ದ ಖ್ಯಾತಿ ‘ಓಂ’ ಚಿತ್ರಕ್ಕೆ ಇದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಈ ಸಿನಿಮಾ ಬಗ್ಗೆ ಮಾಲಿವುಡ್‌ನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಓಂ’ ಚಿತ್ರ ತಮ್ಮ ಆಲ್ ಟೈಮ್ ಫೇವರಿಟ್ ಸಿನಿಮಾಗಳಲ್ಲಿ ಒಂದು ಎಂದು ಹೇಳಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದ 5 ಪ್ರಮುಖ ಭಾಷೆಗಳ ತಲಾ ಒಂದು ಸಿನಿಮಾವನ್ನು ಆಯ್ಕೆ ಮಾಡುವಾಗ, ಕನ್ನಡದಿಂದ ಅವರು ‘ಓಂ’…

Read More

Bengaluru Air Quality: ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ – Kannada News | Bengaluru AQI Today: Air Quality Index of Karnataka Cities on July 20

ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ Image Credit source: Deccan herald ಬೆಂಗಳೂರು ಜುಲೈ 20: ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟವು ತೃಪ್ತಿಕರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವದಿಂದಾಗಿ ಧೂಳಿನ ಕಣಗಳು ನಿಯಂತ್ರಣದಲ್ಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜನರು ನಿರಾಳವಾಗಿ ಉಸಿರಾಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು…

Read More

‘ರಾಮಾಯಣ’ ವೇದಿಕೆಯಲ್ಲಿ ಯಶ್ ಹವಾ ಕಂಡು ದಂಗಾದ ಬಾಲಿವುಡ್ ಮಂದಿ – Kannada News | Yash Steals the Show at Ramayana Event Outshines Ranbir Kapoor as Craze Soars

ರಾಕಿಂಗ್ ಸ್ಟಾರ್ ಯಶ್ (Yash) ಕ್ರೇಜ್ ಯಾವ ರೀತಿ ಇದೆ ಎಂಬುದನ್ನು ಮತ್ತೊಮ್ಮೆ ಹೇಳುವ ಅಗತ್ಯವಿಲ್ಲ. ಅವರ ನಟನೆಯ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇದೆ. ಇನ್ನು, ‘ರಾಮಾಯಣ’ ಸಿನಿಮಾದಲ್ಲಿ ಅವರನ್ನು ರಾವಣನಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈಗ ಯಶ್ ಜನಪ್ರಿಯತೆ ಎಷ್ಟಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಅವರು ‘ರಾಮಾಯಣ’ ಸಿನಿಮಾದ ವೇದಿಕೆ ಏರುತ್ತಿದ್ದಂತೆ ಅವರಿಗೆ ದೊಡ್ಡ ಮಟ್ಟದಲ್ಲಿ ಚಪ್ಪಾಳೆ ಹಾಗೂ ಸಿಳ್ಳೆ ಬಿದ್ದಿವೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ಯಶ್…

Read More

Karnataka Weather Forecast: ಕರಾವಳಿ ಕರ್ನಾಟಕ, ಒಳನಾಡಿನಲ್ಲಿ ಗಾಳಿ ಸಹಿತ ಮಳೆ; ಐಎಂಡಿ ಮುನ್ಸೂಚನೆ – Kannada News | Karnataka Weather Forecast: Moderate Rain in Coastal Districts, Strong Winds Across Interior Regions on July 20 21

ಬೆಂಗಳೂರು ಮಳೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ತುಸು ಬಿಡುವು ಪಡೆದಿದ್ದ ಮುಂಗಾರು (Monsoon Rain) ಈಗ ಮತ್ತೆ ಸ್ವಲ್ಪ ಮಟ್ಟಿಗೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ…

Read More