ರೋಹಿತ್ ಶರ್ಮಾ ಸೆಂಚುರಿಗೆ ಸಚಿನ್ ಸಾರ್ವಕಾಲಿಕ ದಾಖಲೆ ಉಡೀಸ್ – Kannada News | Rohit Sharma Breaks Sachin Tendulkar’s All Time Record
ಲಾರ್ಡ್ಸ್ ಮೈದಾನದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸಿಡಿಸಿದ ಸೆಂಚುರಿಗೆ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆ ಧೂಳೀಪಟವಾಗಿದೆ. ಈ ಶತಕದೊಂದಿಗೆ ಹಿಟ್ಮ್ಯಾನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI) ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 84 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡರು….