Headlines

ISRO Recruitment 2026: ಇಸ್ರೋದಲ್ಲಿ 460 ಅಪ್ರೆಂಟಿಸ್ ಹುದ್ದೆಗಳ ಭರ್ತಿ; ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ! – Kannada News | VSSC ISRO Apprentice Recruitment 2026 27: 460 Vacancies, Walk in Interview for Engineers

Isro ಇಂಟರ್ನ್‌ಶಿಪ್‌ ಅವಕಾಶImage Credit source: Getty Images ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವ್ಯಾಪ್ತಿಗೆ ಒಳಪಡುವ ತಿರುವನಂತಪುರಂನ ಪ್ರತಿಷ್ಠಿತ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು (VSSC) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುವರ್ಣಾವಕಾಶವನ್ನು ನೀಡಿದೆ. 2026-27ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 460 ಹುದ್ದೆಗಳನ್ನು ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತಿದೆ. ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವಿವಿಧ ಪದವೀಧರರಿಗೆ ಇಸ್ರೋದಂತಹ ಹೆಮ್ಮೆಯ ಸಂಸ್ಥೆಯಲ್ಲಿ…

Read More

Auto Tips: ಕಾರ್ ಸನ್‌ಶೇಡ್ ನಿಜವಾಗಿಯೂ ಕೆಲಸ ಮಾಡುತ್ತದೆಯೇ? – Kannada News | Car sunshade benefits does it really reduce car heat and protect interior

ಬೇಸಿಗೆಯಲ್ಲಿ ಕಾರನ್ನು (Car) ಕೆಲವೇ ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿದರೂ ಅದರೊಳಗೆ ಕುಳಿತುಕೊಳ್ಳುವುದು ಕಷ್ಟವಾಗುತ್ತದೆ. ಸ್ಟೀರಿಂಗ್, ಸೀಟ್‌ಗಳು ಮತ್ತು ಡ್ಯಾಶ್‌ಬೋರ್ಡ್ ಅತಿಯಾಗಿ ಬಿಸಿಯಾಗಿರುವುದರಿಂದ ಚಾಲನೆ ಆರಂಭಿಸುವ ಮುನ್ನವೇ ಎಸಿ ಆನ್ ಮಾಡಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಕಾರಿನ ಮುಂಭಾಗದ ಗಾಜಿಗೆ ಸನ್‌ಶೇಡ್ ಅಳವಡಿಸುತ್ತಾರೆ. ಆದರೆ ಇದು ಕೇವಲ ಬಿಸಿಲು ತಡೆಯುವ ಪರಿಕರವೋ ಅಥವಾ ನಿಜವಾಗಿಯೂ ಪರಿಣಾಮಕಾರಿಯೇ ಎಂಬ ಪ್ರಶ್ನೆ ಹಲವರಲ್ಲಿ ಇರುತ್ತದೆ. ತಜ್ಞರ ಪ್ರಕಾರ, ಉತ್ತಮ ಗುಣಮಟ್ಟದ ಸನ್‌ಶೇಡ್ ಅನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಅದು ಕಾರಿನ…

Read More

ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ – Kannada News | Liquor sale banned across hassan district On July 20 And 21 Over HD Devegowda Wife chennamma funeral

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಸಕಲ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ,ಸೋಮವಾರ ಮಧ್ಯಾಹ್ನ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದ್ದು,…

Read More

ಪತ್ನಿಯ ಪಾರ್ಥಿವ ಶರೀರವನ್ನ ಮನೆಯಿಂದ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡ್ರು – Kannada News | H.D. Deve Gowda Grieves as Wife Chennamma Embarks on Final Journey

ಬೆಂಗಳೂರು, ಜುಲೈ 19: ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಅಂತಿಮ ಯಾತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಹೆಚ್​.ಡಿ. ದೇವೇಗೌಡರು ತೀವ್ರವಾಗಿ ಭಾವುಕರಾದರು. ಪತ್ನಿ ಅಗಲಿಕೆಯ ನೋವು ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಎಲ್ಲರ ಮನಸ್ಸನ್ನು ಕಲಕಿದವು. ಶೈತ್ಯಾಗಾರ ಪೆಟ್ಟಿಗೆಯ ಮೇಲೆ ಕೈಯಿಟ್ಟು ಕಣ್ಣೀರಿಟ್ಟ ದೇವೇಗೌಡರು, ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸಿದರು. ಅವರ ಪುತ್ರಿ ಹಾಗೂ ಇತರ ಕುಟುಂಬ ಸದಸ್ಯರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ನೋವಿನ ಸಂದರ್ಭದಲ್ಲಿ, ಮಾಜಿ ಪ್ರಧಾನಮಂತ್ರಿಯವರ ಪತ್ನಿಯ…

Read More

ಟಿಎಂಸಿ ಬಂಡಾಯ ಸಂಸದರಿಗೂ ಆಹ್ವಾನ ವಿರೋಧಿಸಿ ಸರ್ವಪಕ್ಷ ಸಭೆಯಿಂದ ಹೊರನಡೆದ ವಿರೋಧ ಪಕ್ಷಗಳು – Kannada News | Opposition walks out of All Party Meet Over Invite To TMC Rebels to Meeting

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನದ (Parliament Monsoon Session) ಮುನ್ನಾದಿನವಾದ ಇಂದು (ಭಾನುವಾರ) ಆಯೋಜಿಸಲಾಗಿದ್ದ ಸರ್ವಪಕ್ಷ ಸಭೆಯಿಂದ ವಿರೋಧ ಪಕ್ಷಗಳ ನಾಯಕರು ವಾಕ್‌ಔಟ್ ನಡೆಸಿದರು. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಲವು ಬಂಡಾಯ ಸಂಸದರನ್ನು ಒಳಗೊಂಡ ಹೊಸದಾಗಿ ರೂಪುಗೊಂಡಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷವು ಸಭೆಯಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಪ್ರತಿಪಕ್ಷಗಳ ಸಂಸದರು ಸಭೆಗೆ ಮರಳಿದರು. ಕಳೆದ ತಿಂಗಳು ಸುಮಾರು 20 ಬಂಡಾಯ…

Read More

IND vs ENG: 3 ಪಂದ್ಯಗಳಲ್ಲೂ ಟಾಸ್ ಸೋತ ಗಿಲ್; ಭಾರತ ತಂಡದಲ್ಲಿ 3 ಬದಲಾವಣೆ – Kannada News | IND vs ENG 3rd ODI: Lords Series Decider Preview, Playing XI and India’s 22 Year Wait

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಏತನ್ಮಧ್ಯೆ, ಕಾರ್ಡಿಫ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ಲಾರ್ಡ್ಸ್‌ನಲ್ಲಿ ಉಭಯ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಕೈಸೇರಲಿದೆ. ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ…

Read More

Life Style: ನಿಮ್ಮ ಚಿನ್ನದ ಆಭರಣಗಳು ಕಪ್ಪಾಗಿವೆಯೇ?, ನಿಮಿಷಗಳಲ್ಲಿ ಹೊಳೆಯುವಂತೆ ಮಾಡಲು ಇಲ್ಲಿದೆ ಟಿಪ್ಸ್ – Kannada News | How to clean gold jewellery at home Here is the easy method tips

ಚಿನ್ನದ (Gold) ಆಭರಣಗಳು ಪ್ರತಿಯೊಬ್ಬರಿಗೂ ಅಮೂಲ್ಯವಾದ ಆಸ್ತಿ. ಮದುವೆ, ಹಬ್ಬ ಅಥವಾ ವಿಶೇಷ ಕಾರ್ಯಕ್ರಮಗಳಲ್ಲಿ ಧರಿಸುವ ಈ ಆಭರಣಗಳು ಪ್ರತಿದಿನದ ಬಳಕೆಯಿಂದ ನಿಧಾನವಾಗಿ ತಮ್ಮ ಹೊಳಪನ್ನು ಕಳೆದುಕೊಳ್ಳುತ್ತವೆ. ಬೆವರು, ಧೂಳು, ಮೇಕಪ್ ಉತ್ಪನ್ನಗಳು ಮತ್ತು ಪರಿಸರದ ಕಸ ಆಭರಣದ ಮೇಲೆ ಅಂಟಿಕೊಂಡು ಅದರ ಕಾಂತಿಯನ್ನು ಕಡಿಮೆ ಮಾಡಬಹುದು. ಆದರೆ ಇದಕ್ಕಾಗಿ ಪ್ರತಿ ಬಾರಿ ಜ್ಯುವೆಲ್ಲರ್ ಬಳಿ ಹೋಗಬೇಕೆಂದಿಲ್ಲ. ಮನೆಯಲ್ಲೇ ಸುಲಭವಾಗಿ ಸಿಗುವ ಕೆಲವು ವಸ್ತುಗಳ ಸಹಾಯದಿಂದ ಚಿನ್ನದ ಆಭರಣಗಳನ್ನು ಸುರಕ್ಷಿತವಾಗಿ ಸ್ವಚ್ಛಗೊಳಿಸಿ ಮತ್ತೆ ಹೊಸದಿನಂತೆ ಹೊಳೆಯುವಂತೆ ಮಾಡಬಹುದು….

Read More

FIFA World Cup 2026: ಫಿಫಾ ಫೈನಲ್ ಹಿನ್ನೆಲೆಯಲ್ಲಿ ಜು. 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಕೇರಳ ಸರ್ಕಾರ! – Kannada News | Kerala Declares Holiday for FIFA World Cup 2026 Final: Schools and Colleges Off

ಕೇರಳಿಗರಲ್ಲಿ ಫುಟ್‌ಬಾಲ್ ಆಟದ ಮೇಲಿರುವ ಜಾಗತಿಕ ಮಟ್ಟದ ಕ್ರೇಜ್ ಮತ್ತೊಮ್ಮೆ ಸಾಬೀತಾಗಿದೆ. ಇಂದು ಮಧ್ಯರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ 2026ರ (FIFA World Cup 2026) ಮಹಾ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಕೇರಳ ಸರ್ಕಾರವು ಜುಲೈ 20 ರ ಸೋಮವಾರದಂದು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಿಸಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಈ ಹೈ-ವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ವಿಶಿಷ್ಟ ನಿರ್ಧಾರ…

Read More

ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾಗಳನ್ನು ಎಲ್ಲಿ ವೀಕ್ಷಿಸಬಹುದು? – Kannada News | Where to watch 72 national award winning movies on OTT

ನಿನ್ನೆಯಷ್ಟೆ (ಜುಲೈ 18) 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕನ್ನಡದ ‘ಮಿಥ್ಯ’ ಸಿನಿಮಾ ಸೇರಿದಂತೆ ಹಲವಾರು ಸಿನಿಮಾಗಳು ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿವೆ. ಕೆಲವು ಬಹಳ ಜನಪ್ರಿಯ, ಕಮರ್ಶಿಯಲ್ ಸಿನಿಮಾಗಳ ಜೊತೆಗೆ ಚಿತ್ರಮಂದಿರಗಳಲ್ಲಿ ಹೆಚ್ಚು ಗಮನ ಸೆಳೆದ ಆದರೆ ಒಳ್ಳೆಯ ಸಿನಿಮಾಗಳು ಎನಿಸಿಕೊಂಡಿರುವ ಸಿನಿಮಾಗಳಿಗೂ ಸಹ ಪ್ರಶಸ್ತಿ ಸಿಕ್ಕಿವೆ. ಇಂಥಹಾ ಸಿನಿಮಾಗಳನ್ನೆಲ್ಲ ಎಲ್ಲಿ ನೋಡಬಹುದು? ಇಲ್ಲಿದೆ ಮಾಹಿತಿ…. ಮಿಥ್ಯ ಕನ್ನಡದ ಸಿನಿಮಾ ‘ಮಿಥ್ಯ’ಗೆ ಒಟ್ಟು ಮೂರು ಪ್ರಶಸ್ತಿಗಳು ದೊರಕಿದ್ದು, ಅವುಗಳಲ್ಲಿ ಒಂದು ಪ್ರಾದೇಶಿಕ…

Read More

ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್ – Kannada News | Belagavi Crime News: Man unalived by Friend in Temple Over Mobile Phone Dispute

ಬೆಳಗಾವಿ, ಜುಲೈ 19: ಇತ್ತೀಚೆಗೆ ಸಮಾಜದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಸುಲಿಗೆಗಳಂತಹ ಹೇಯ ಕೃತ್ಯಗಳೇ ನಡೆದು ಹೋಗುತ್ತವೆ. ಅಂತದ್ದೇ ಒಂದು ಅಮಾನವೀಯ ಕೃತ್ಯ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೇವಲ ಒಂದು ಮೊಬೈಲ್ ಫೋನ್‌ಗಾಗಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮೊಬೈಲ್ ಮರಳಿ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಆವರಣದಲ್ಲೇ ಮಲಗಿದ್ದ ವ್ಯಕ್ತಿಯೊಬ್ಬರ ಜೀವ ತೆಗೆದಿರುವ ಘಟನೆ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಹಿನ್ನೆಲೆ ಗ್ರಾಮದ ನಿವಾಸಿಯಾದ ಫಕ್ಕೀರಪ್ಪ ಪಿಡ್ಡೆನ್ನವರ್…

Read More