IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ – Kannada News | Virat Kohli’s ODI Comeback vs England: Eyeing Historic Records and Milestones

ಏಕದಿನ ಕ್ರಿಕೆಟ್​ನಲ್ಲಿ ಪ್ರಸ್ತುತ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಕೊಹ್ಲಿ, ಈ ಸರಣಿಯಲ್ಲಿ 81 ರನ್​ಗಳ ಗಡಿ ದಾಟಿದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 16,000 ರನ್​ಗಳನ್ನು ಪೂರೈಸಲಿದ್ದಾರೆ(PC-PTI).

Source link

ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ – Kannada News | Mangoes Are Healthy, But Not For Everyone: Know Who Should Be Careful

ಮಾವಿನಹಣ್ಣು ತಿನ್ನುವಾಗ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿImage Credit source: Getty Images

ಮಳೆಗಾಲವಾದರೂ ಮಾವಿನ ಹಣ್ಣಿನ ಸೀಸನ್ ಇನ್ನೂ ಮುಗಿದಿಲ್ಲ. ರುಚಿ, ಸುವಾಸನೆ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೈಬರ್, ಪೊಟ್ಯಾಸಿಯಂ, ಫೋಲೇಟ್ ಹಾಗೂ ಹಲವು ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ ಮಾವು ಆರೋಗ್ಯಕರವಾದರೂ ಎಲ್ಲರೂ ಸೇವನೆ ಮಾಡಬಹುದೇ ಎಂಬ ಪ್ರಶ್ನೆಗೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಪ್ರಕಾರ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಇದು ಒಳ್ಳೆಯದಲ್ಲ. ಯಾರಿಗೆ, ಯಾಕೆ ಒಳ್ಳೆಯದಲ್ಲ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ಆರೋಗ್ಯ ಸಮಸ್ಯೆ ಇರುವವರು ಮಾವು ತಿನ್ನುವಾಗ ಎಚ್ಚರಿಕೆ ವಹಿಸಿ;

ಮಧುಮೇಹ ಇರುವವರು ಮಾವನ್ನು ಸಂಪೂರ್ಣವಾಗಿ ಬಿಡಬೇಕಾಗಿಲ್ಲ. ಆದರೆ ಒಂದೇ ಬಾರಿಗೆ ಹೆಚ್ಚು ಪ್ರಮಾಣದಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಬಹುದು. ಆದ್ದರಿಂದ ವೈದ್ಯರು ಅಥವಾ ಪೌಷ್ಟಿಕ ತಜ್ಞರು ಸೂಚಿಸುವ ಪ್ರಮಾಣದಲ್ಲಿಯೇ ಸೇವಿಸುವುದು ಉತ್ತಮ. ಇದೇ ಸಲಹೆ ಪ್ರೀ-ಡಯಾಬಿಟಿಸ್, ಇನ್ಸುಲಿನ್ ರೆಸಿಸ್ಟೆನ್ಸ್ ಹಾಗೂ ಮೆಟಾಬಾಲಿಕ್ ಸಿಂಡ್ರೋಮ್ ಇರುವವರಿಗೂ ಅನ್ವಯಿಸುತ್ತದೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಸಹ ಎಚ್ಚರಿಕೆ ವಹಿಸಬೇಕು. ಮಾವಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಕ್ಯಾಲೊರಿ ಇರುವುದರಿಂದ ಅತಿಯಾಗಿ ತಿಂದರೆ ತೂಕ ಮಾಡಿಕೊಳ್ಳುವುದಕ್ಕೆ ಅಡ್ಡಿಯಾಗಬಹುದು. ಫ್ಯಾಟಿ ಲಿವರ್ ಸಮಸ್ಯೆ ಇರುವವರು ಮಾವನ್ನು ಸಮತೋಲಿತ ಆಹಾರದ ಭಾಗವಾಗಿ ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

ಇದನ್ನೂ ಓದಿ: ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂ ಅಗತ್ಯವನ್ನು ಪೂರೈಸಿಕೊಳ್ಳಲು ಈ ಆಹಾರಗಳ ಸೇವನೆ ಮಾಡಿ!

ಮಾವು ತಿನ್ನುವ ಸರಿಯಾದ ವಿಧಾನ ಯಾವುದು?

ಸಾಮಾನ್ಯವಾಗಿ ಮಾವಿನ ಜ್ಯೂಸ್, ಮಿಲ್ಕ್‌ಶೇಕ್ ಅಥವಾ ಹೆಚ್ಚು ಸಕ್ಕರೆ ಸೇರಿಸಿದ ಮಾವಿನ ಸಿಹಿ ಪದಾರ್ಥಗಳಿಗಿಂತ ಹಣ್ಣನ್ನೇ ತಿನ್ನುವುದು ಆರೋಗ್ಯಕರ. ಮೊಸರು ಅಥವಾ ಒಂದು ಮುಷ್ಟಿ ಬಾದಾಮಿ, ಗೋಡಂಬಿ ಅಥವಾ ಇತರ ನಟ್ಸ್ ಜೊತೆಗೆ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ವೇಗವಾಗಿ ಏರುವ ಸಾಧ್ಯತೆ ಕಡಿಮೆಯಾಗಬಹುದು.

ತಜ್ಞರು ನೀಡಿರುವ ಹೆಚ್ಚುವರಿ ಸಲಹೆ

ಮಾವು ತಿನ್ನುವ ಮೊದಲು ಚೆನ್ನಾಗಿ ತೊಳೆದು 20–30 ನಿಮಿಷ ನೀರಿನಲ್ಲಿ ನೆನೆಸಿಡುವುದು ಉತ್ತಮ ಎಂದು ಕೆಲವು ತಜ್ಞರು ಸಲಹೆ ನೀಡುತ್ತಾರೆ. ಇದರಿಂದ ಮೇಲ್ಮೈಯಲ್ಲಿರುವ ಧೂಳು, ಕಲ್ಮಶಗಳು ಹಾಗೂ ಕೆಲವು ಲ್ಯಾಟೆಕ್ಸ್ ಅಂಶಗಳು ಕಡಿಮೆಯಾಗಬಹುದು. ಆದರೆ ಇದರಿಂದ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಸಾಕ್ಷ್ಯವಿಲ್ಲ.

ಅತಿಯಾಗಿ ಹಣ್ಣಾದ ಮಾವಿಗಿಂತ ಸಹಜವಾಗಿ ಹಣ್ಣಾದ ಹಣ್ಣನ್ನು ಆಯ್ಕೆ ಮಾಡುವುದು ಉತ್ತಮ. ಒಂದು ದಿನಕ್ಕೆ ಸುಮಾರು ಒಂದು ಮಧ್ಯಮ ಗಾತ್ರದ ಮಾವು ಸಾಕಷ್ಟು ಎಂದು ಪರಿಗಣಿಸಲಾಗುತ್ತದೆ. ಯಾವುದೇ ಆಹಾರವನ್ನು ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮದ ಜೊತೆಗೆ ಮಾವನ್ನು ಸೇವಿಸಿದರೆ ಅದರ ಪೌಷ್ಟಿಕ ಲಾಭಗಳನ್ನು ಸುರಕ್ಷಿತವಾಗಿ ಪಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’; ಚುನಾವಣಾ ಆಯುಕ್ತರೆದುರು ಹೀಗಂದಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ – Kannada News | Will commit suicide; What EX PM Manmohan Singh told former CEC Quraishi during 2012 elections

ನವದೆಹಲಿ, ಜುಲೈ 13: ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಅವರು ತಮ್ಮ ಹೊಸ ಪುಸ್ತಕದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ಅವರಿಗೆ ಸಂಬಂಧಿಸಿದ ಕೆಲವು ಕುತೂಹಲಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. 2012ರ ಉತ್ತರ ಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ತಮ್ಮದೇ ಸರ್ಕಾರದ ಸಚಿವರು ಚುನಾವಣಾ ಆಯೋಗದ ವಿರುದ್ಧ ಆಡುತ್ತಿದ್ದ ಹಗುರವಾದ ಮಾತುಗಳಿಂದ ಬೇಸತ್ತಿದ್ದ ಮನಮೋಹನ್ ಸಿಂಗ್, “ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಕೂಡ ಹೇಳಿದ್ದರು ಎಂದು ಖುರೇಷಿ ನೆನಪಿಸಿಕೊಂಡಿದ್ದಾರೆ.

ಖುರೇಷಿ ಅವರ ‘India and I: A Hundred Memories, Not a Memoir’ (ಇಂಡಿಯಾ ಆ್ಯಂಡ್ ಐ: ಎ ಹಂಡ್ರೆಡ್ ಮೆಮೊರಿಸ್, ನಾಟ್ ಎ ಮೆಮೊಯಿರ್) ಎಂಬ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ.

ಏನಿದು ಘಟನೆ?:

2012ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಅಂದಿನ ಕೇಂದ್ರ ಸಚಿವರಾಗಿದ್ದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು, “ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯೋಗಗಳಲ್ಲಿ ಮುಸ್ಲಿಮರ ಕೋಟಾವನ್ನು ಶೇ. 4.5ರಿಂದ 9ಕ್ಕೆ ಹೆಚ್ಚಿಸಲಾಗುವುದು” ಎಂದು ಭರವಸೆ ನೀಡಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ಹೊಸ ಯೋಜನೆ ಅಥವಾ ಕೋಟಾವನ್ನು ಪ್ರಕಟಿಸುವಂತಿಲ್ಲ ಎಂದು ಆರೋಪಿಸಿ ಬಿಜೆಪಿ ತಕ್ಷಣವೇ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಇದನ್ನೂ ಓದಿ: ಹಾರ್ಟ್​ ಸರ್ಜರಿ ಬಳಿಕ ಮನಮೋಹನ್ ಸಿಂಗ್ ವೈದ್ಯರ ಬಳಿ ತಮ್ಮ ಆರೋಗ್ಯದ ವಿಚಾರ ಬಿಟ್ಟು ಬೇರೇನೋ ಕೇಳಿದ್ದರಂತೆ

“ಈ ಕುರಿತು ನಾವು 4 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದೆವು. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮತ್ತು ಬಿಜೆಪಿ ಪರವಾಗಿ ಅರುಣ್ ಜೇಟ್ಲಿ ಅವರಂತಹ ಇಬ್ಬರು ಘಟಾನುಘಟಿ ತಜ್ಞರು ವಾದ-ಪ್ರತಿವಾದ ನಡೆಸಿದರು. ಅಂತಿಮವಾಗಿ, ನೀತಿ ಸಂಹಿತೆಯ ಅಡಿಯಲ್ಲಿ ಲಭ್ಯವಿರುವ ಅತ್ಯಂತ ಕಠಿಣ ಕ್ರಮವಾಗಿ ನಾವು ಸಲ್ಮಾನ್ ಖುರ್ಷಿದ್ ಅವರಿಗೆ ಎಚ್ಚರಿಕೆ ನೀಡಿದೆವು” ಎಂದು ಖುರೇಷಿ ಬರೆದಿದ್ದಾರೆ.

ಸಚಿವರಿಂದ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ:

ಚುನಾವಣಾ ಆಯೋಗದ ಈ ಎಚ್ಚರಿಕೆಯಿಂದ ಕೆರಳಿದ ಅಂದಿನ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಕೆಲವು ಸಚಿವರು ಬಹಿರಂಗವಾಗಿಯೇ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಟೀಕಿಸಿದ್ದರು. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದರಿಂದ ಆಗ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಎಸ್.ವೈ. ಖುರೇಷಿ ತೀವ್ರ ಬೇಸರಗೊಂಡಿದ್ದರು. ಕೇಂದ್ರ ಸಚಿವರ ಬೇಜವಾಬ್ದಾರಿ ವರ್ತನೆಯಿಂದ ಮನನೊಂದ ಖುರೇಷಿ ಪ್ರಧಾನಮಂತ್ರಿಗಳ ಆಪ್ತ ಕಾರ್ಯದರ್ಶಿಯ ಬಳಿ ಈ ಬಗ್ಗೆ ಬೇಸರ ತೋಡಿಕೊಂಡಿದ್ದರು.

ಅದೇ ದಿನ ಪ್ರಧಾನಿ ಮನಮೋಹನ್ ಸಿಂಗ್ ಕರೆ ಮಾಡಿ ಖುರೇಷಿಯವರಿಗೆ ಮನೆಗೆ ಬರಲು ಸೂಚಿಸಿದ್ದರಂತೆ. ಸಂಜೆ 7 ಗಂಟೆಗೆ ನಮ್ಮ ಮನೆಗೆ ಬನ್ನಿ ಎಂದಿದ್ದರಂತೆ. ಅದರಂತೆ ಖುರೇಷಿ ಅವರು ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು.

ಆತ್ಮಹತ್ಯೆಯ ಮಾತನ್ನಾಡಿದ್ದರು ಮನಮೋಹನ್ ಸಿಂಗ್:

ಆಗ ತಮ್ಮ ಸರ್ಕಾರದ ಸಚಿವರ ವರ್ತನೆಯಿಂದ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಬಹಳ ಮುಜುಗರಕ್ಕೊಳಗಾಗಿದ್ದರು ಮತ್ತು ನೊಂದಿದ್ದರು. ಈ ಬಗ್ಗೆ ಖುರೇಷಿ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ. “ನಾನು ಪ್ರಧಾನಿಗಳ ನಿವಾಸಕ್ಕೆ ಹೋದಾಗ ಡಾ. ಮನಮೋಹನ್ ಸಿಂಗ್ ಅವರು ಅತ್ಯಂತ ಬೇಸರದಲ್ಲಿದ್ದರು. ನನ್ನನ್ನು ನೋಡಿದ ಕೂಡಲೆ ಅವರು, ಖುರೇಷಿ ಅವರೇ, ನನ್ನ ಸಚಿವರು ಈ ರೀತಿ ಮಾತನಾಡುತ್ತಿದ್ದರೆ ನಾನೇನು ಮಾಡಲಿ? ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದರು. ಅವರ ಬಾಯಿಂದ ಅಂತಹ ಮಾತುಗಳನ್ನು ಕೇಳಿ ನನಗೆ ತೀವ್ರ ಆಘಾತವಾಯಿತು. ನಂತರ ನಾನೇ ಅವರಿಗೆ ಸಾಂತ್ವನ ಹೇಳಿ ಮನೆಗೆ ಬಂದಿದ್ದೆ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಮನಮೋಹನ್ ಸಿಂಗ್ ನಿಧನದ ಬಳಿಕ ಪ್ರಮುಖ ನಿರ್ಧಾರ ತೆಗೆದುಕೊಂಡ ಸಲ್ಮಾನ್ ಖಾನ್

“ನನಗೆ ಈ ವಿಷಯದ ಬಗ್ಗೆ ಅರಿವೇ ಇರಲಿಲ್ಲ. ಒಂದು ವೇಳೆ ಗೊತ್ತಿದ್ದಿದ್ದರೆ ಅವರಿಗೆ ನಾನೇ ತರಾಟೆಗೆ ತೆಗೆದುಕೊಳ್ಳುತ್ತಿದ್ದೆ. ಇನ್ನು ಮುಂದೆ ಏನೇ ಇದ್ದರೂ ನೇರವಾಗಿ ನನಗೆ ಫೋನ್ ಮಾಡಿ ತಿಳಿಸಿ” ಎಂದು ಮನಮೋಹನ್ ಸಿಂಗ್ ಹೇಳಿದ್ದರೆಂದು ಖುರೇಷಿ ಬರೆದಿದ್ದಾರೆ.

“ಚುನಾವಣಾ ಆಯೋಗವು ಕೇವಲ ಭಾರತದ ಹೆಮ್ಮೆ ಮಾತ್ರವಲ್ಲ, ಅದು ನಮ್ಮ ಪ್ರಜಾಪ್ರಭುತ್ವದ ಆತ್ಮ. ಅದನ್ನು ನಾವು ಕಳೆದುಕೊಂಡರೆ, ಎಲ್ಲವನ್ನೂ ಕಳೆದುಕೊಂಡಂತೆ.” ಎಂದು ಮನಮೋಹನ್ ಸಿಂಗ್ ಹೇಳಿದ್ದ ಮಾತು ನನಗೆ ಇನ್ನೂ ನೆನಪಿದೆ. “ರಾಜಕೀಯದ ಕಾರಣಕ್ಕಾಗಿ ಅಲ್ಲ, ಬದಲಿಗೆ ಸಾಂವಿಧಾನಿಕ ಶಿಷ್ಟಾಚಾರವನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ ತಮ್ಮ ಜೀವನದ ತತ್ವವಾಗಿಸಿಕೊಂಡಿದ್ದ ಒಬ್ಬ ನಾಯಕನನ್ನು ನೋಡಿ ನಾನು ಭಾವುಕನಾಗಿದ್ದೆ” ಎಂದು ಖುರೇಷಿ ನೆನಪಿಸಿಕೊಂಡಿದ್ದಾರೆ.

ಡಾ. ಮನಮೋಹನ್ ಸಿಂಗ್ ಅತ್ಯಂತ ಸೌಮ್ಯ ಸ್ವಭಾವದ ಮತ್ತು ಗೌರವಾನ್ವಿತ ರಾಜಕಾರಣಿಯಾಗಿದ್ದರು. ತಮ್ಮದೇ ಸಂಪುಟದ ಸಹೋದ್ಯೋಗಿಗಳು ಚುನಾವಣಾ ಆಯೋಗದಂತಹ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯ ಘನತೆಗೆ ಧಕ್ಕೆ ತರುತ್ತಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಪ್ರಧಾನಿಯವರ ಈ ಭಾವುಕ ಪ್ರತಿಕ್ರಿಯೆಯು ಅವರು ಸಾಂವಿಧಾನಿಕ ಸಂಸ್ಥೆಗಳಿಗೆ ನೀಡುತ್ತಿದ್ದ ಗೌರವ ಮತ್ತು ಅವರ ಪ್ರಾಮಾಣಿಕತೆಯನ್ನು ತೋರಿಸುತ್ತದೆ ಎಂದು ಖುರೇಷಿ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:04 pm, Mon, 13 July 26

Source link

ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ – Kannada News | Karnataka Govt Issues Official Order to Setup 10,000 ‘Bharat Jodo Youth Bharat Jodo Yuva Sanghas’ with Rs 1,010 Crore Budget

ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಪರಮೇಶ್ವರ್​Image Credit source: G. Parameshwar X Account

ಬೆಂಗಳೂರು, ಜುಲೈ 13: ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದೇವೆ ಎಂದವರು ತಿಳಿಸಿದ್ದಾರೆ.

ಪ್ರತಿ ಸಂಘಕ್ಕೆ ವಾರ್ಷಿಕ ತಲಾ 10 ಲಕ್ಷ ಅನುದಾನ

ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಪ್ರತಿಯೊಂದು ಸಂಘದ ಒಬ್ಬ ತರಬೇತುದಾರರಿಗೆ ವಾರ್ಷಿಕ ತಲಾ ₹24,000 ಗೌರವಧನದ ಜೊತೆಗೆ ಪ್ರತಿ ಸಂಘಕ್ಕೆ ವಾರ್ಷಿಕ ತಲಾ ₹10 ಲಕ್ಷ ಅನುದಾನ ನೀಡಲಾಗುವುದು. ಭಾರತ್‌ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪ್ರಜೆಗಳಾಗಿ ರೂಪಿಸುವುದು ನಮ್ಮ ಉದ್ದೇಶ ಎಂದು ಡಿಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ‘ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?’; ಸರ್ಕಾರದ ವಿಳಂಬ ನೀತಿ ವಿರುದ್ಧ ಜೆಡಿಎಸ್ ಕೆಂಡಾಮಂಡಲ!

ಸರ್ಕಾರದ ಆದೇಶದಲ್ಲಿ ಏನಿದೆ?

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 6,000, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸರಾಸರಿ 4000 ಸೇರಿ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುವುದು. 1010 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs ENG: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್ 11 ಪ್ರಕಟ – Kannada News | England’s Squad for 1st ODI vs India: Bethell and Duckett Open, Archer Returns

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಹೀನಾಯವಾಗಿ ಮಣಿಸಿದ್ದ ಆತಿಥೇಯ ಇಂಗ್ಲೆಂಡ್‌ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14 ರಂದು ಬರ್ಮಿಂಗ್ಹ್ಯಾಮ್‌ನ ಐತಿಹಾಸಿಕ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ. ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆಯೇ ಆತಿಥೇಯ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತನ್ಮ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ನಾಯಕ ಹ್ಯಾರಿ ಬ್ರೂಕ್ ನೇತೃತ್ವದ ಇಂಗ್ಲೆಂಡ್ ತಂಡದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಹೊಸ ಆರಂಭಿಕ ಜೋಡಿ

ಭಾರತದ ವಿಶ್ವ ದರ್ಜೆಯ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ತನ್ನ ಅಗ್ರ ಕ್ರಮಾಂಕದಲ್ಲಿ ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಯನ್ನು ಮಾಡಿದೆ. ಯುವ ಆಲ್‌ರೌಂಡರ್ ಜಾಕೋಬ್ ಬೆಥೆಲ್ ಅವರನ್ನು ಹಾರ್ಡ್ ಬ್ಯಾಟ್ಸ್‌ಮನ್ ಬೆನ್ ಡಕೆಟ್ ಜೊತೆಗೆ ಇನ್ನಿಂಗ್ಸ್ ಆರಂಭಿಸಲು ಬಡ್ತಿ ನೀಡಲಾಗಿದೆ. ಇತ್ತೀಚೆಗೆ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಬೆಥೆಲ್ ಈಗ ಆರಂಭಿಕ ಆಟಗಾರನಾಗಿ ಆಡಲಿದ್ದಾರೆ. ಏತನ್ಮಧ್ಯೆ, ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.

ಇಂಗ್ಲೆಂಡ್‌ನ ಅತ್ಯಂತ ಆಕ್ರಮಣಕಾರಿ ಆಟಗಾರರಲ್ಲಿ ಒಬ್ಬರಾದ ಜೋಸ್ ಬಟ್ಲರ್ ಅವರನ್ನು ಮಧ್ಯಮ ಕ್ರಮಾಂಕಕ್ಕೆ ತಳ್ಳಲಾಗಿದೆ. ಈ ಪಂದ್ಯದಲ್ಲಿ ಬಟ್ಲರ್ ವಿಕೆಟ್ ಕೀಪಿಂಗ್ ಕರ್ತವ್ಯಗಳನ್ನು ಸಹ ನಿರ್ವಹಿಸಲಿದ್ದಾರೆ. ಈ ಪಂದ್ಯ ಜೋಸ್ ಬಟ್ಲರ್‌ಗೆ ಬಹಳ ವಿಶೇಷವಾಗಲಿದೆ. ಟೀಂ ಇಂಡಿಯಾ ವಿರುದ್ಧದ ಈ ಪಂದ್ಯ ಬಟ್ಲರ್ ವೃತ್ತಿಜೀವನದ 200 ನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದೆ.

ಬೌಲಿಂಗ್ ವಿಭಾಗ ಹೇಗಿದೆ?

ಎಡ್ಜ್‌ಬಾಸ್ಟನ್ ಪಿಚ್ ಮತ್ತು ಭಾರತದ ಬಲಿಷ್ಠ ಬ್ಯಾಟಿಂಗ್ ಲೈನ್‌ಅಪ್ ಅನ್ನು ಗಮನದಲ್ಲಿಟ್ಟುಕೊಂಡು, ಇಂಗ್ಲೆಂಡ್ ಸಮತೋಲಿತ ಬೌಲಿಂಗ್ ದಾಳಿಯನ್ನು ಆಯ್ಕೆ ಮಾಡಿದೆ. ಜೋಫ್ರಾ ಆರ್ಚರ್ ಸೇರಿದಂತೆ ಸ್ಯಾಮ್ ಕರನ್ ಮತ್ತು ಜೋಶ್ ಟಂಗ್ ವೇಗದ ಬೌಲಿಂಗ್ ಮುನ್ನಡೆಸಲಿದ್ದಾರೆ. ಹಾಗೆಯೇ ಸ್ಪಿನ್ ವಿಭಾಗದಲ್ಲಿ ಮೂವರನ್ನು ಆಯ್ಕೆ ಮಾಡಲಾಗಿದ್ದು, ಅನುಭವಿ ಲೆಗ್-ಸ್ಪಿನ್ನರ್ ಆದಿಲ್ ರಶೀದ್ ಜೊತೆಗೆ ವಿಲ್ ಜ್ಯಾಕ್ಸ್ ಮತ್ತು ಲಿಯಾಮ್ ಡಾಸನ್ ಸ್ಪಿನ್ ವಿಭಾಗವನ್ನು ಬಲಪಡಿಸಲಿದ್ದಾರೆ.

ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್ 11: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಳೆಯುವ ತ್ವಚೆ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ತಪ್ಪದೇ ಈ ಕಾರ್ಯಗಳನ್ನು ಮಾಡಿ – Kannada News | Do these things in your morning routine to get glowing skin

ಮೇಕಪ್ ಇಲ್ಲದಿದ್ದರೂ ಸಹ, ಚರ್ಮ ಕಾಂತಿಯುತವಾಗಿ ಹೊಳೆಯಬೇಕು, ತ್ವಚೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಹೀಗೆ ಮುಖದ ಗ್ಲೋ (glowing skin) ಹೆಚ್ಚಿಸಲು ದುಬಾರಿ ಉತ್ಪನ್ನಗಳ ಅಗತ್ಯವಿದೆ ಎಂದು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ ಸಾಕಷ್ಟು ನೀರು ಕುಡಿಯುವ ಮೂಲಕ, ಜಂಕ್‌ಫುಡ್‌ಗಳನ್ನು ತ್ಯಜಿಸಿ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ ಜೊತೆಗೆ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಸರಳ ಅಭ್ಯಾಸಗಳನ್ನು ಪಾಲಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಬಹುದು. ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿಯಾದ ಬೆಳಗಿನ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ತ್ವಚೆಯ ಹೊಳಪನ್ನು ಹೆಚ್ಚಿಸುವ ಬೆಳಗಿನ ಅಭ್ಯಾಸಗಳು:

ಉಗುರು ಬೆಚ್ಚಗಿನ ನೀರು ಕುಡಿಯಿರಿ: ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನಿಧಾನಕ್ಕೆ ಒಂದು ಅಥವಾ ಎರಡು ಲೋಟ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಈ ಅಭ್ಯಾಸವು ದೇಹಕ್ಕೆ ಒಳಗಿನಿಂದ ಜಲಸಂಚಯನವನ್ನು ಒದಗಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ, ಜೊತೆಗೆ ಚರ್ಮದ ಹೊಳಪನ್ನು ಸಹ ಹೆಚ್ಚಿಸುತ್ತದೆ.

ಪ್ರತಿದಿನ ಲಘು ವ್ಯಾಯಾಮ ಮಾಡಿ: ಬೆಳಿಗ್ಗೆ ಎದ್ದ ಬಳಿಕ ಮೊಬೈಲ್‌ ನೋಡುವ ಬದಲು ನೀವು ಕನಿಷ್ಠ 20-30 ನಿಮಿಷಗಳ ಕಾಲ ವಾಕಿಂಗ್, ಲಘು ವ್ಯಾಯಾಮ ಅಥವಾ ಯೋಗಾಭ್ಯಾಸ ಮಾಡಿ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಇದರೊಂದಿಗೆ, ಆಮ್ಲಜನಕ ಮತ್ತು ಪೋಷಕಾಂಶಗಳು ಚರ್ಮದ ಕೋಶಗಳಿಗೆ ಉತ್ತಮವಾಗಿ ತಲುಪುತ್ತವೆ. ಚರ್ಮವನ್ನು ಆರೋಗ್ಯಕವಾಗಿಡುವುದರ ಜೊತೆಗೆ ನಿಯಮಿತ ವ್ಯಾಯಾಮವು ಒತ್ತಡವನ್ನು ಕಡಿಮೆ ಮಾಡಿ ದೇಹಾರೋಗ್ಯವನ್ನು ಉತ್ತಮವಾಗಿಡುತ್ತದೆ.

ಆರೋಗ್ಯಕರ, ಸಮತೋಲಿತ ಉಪಹಾರ ಸೇವಿಸಿ: ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬುಗಳು, ವಿಟಮಿನ್‌ಗಳಲ್ಲಿ ಸಮೃದ್ಧವಾಗಿರುವ ಆಹಾರಗಳನ್ನು ಬೆಳಗಿನ ಉಪಹಾರದಲ್ಲಿ ಸೇವಿಸಿ. ಮೊಟ್ಟೆ, ಚೀಸ್, ಮೊಸರು, ಓಟ್ಸ್, ಕಾಲೋಚಿತ ಹಣ್ಣುಗಳು, ಬಾದಾಮಿ ಮತ್ತು ವಾಲ್ನಟ್ ಇತ್ಯಾದಿ ಆರೋಗ್ಯಕರ ಆಹಾರವನ್ನು ಬೆಳಗ್ಗಿನ ಉಪಹಾರದ ಸಮಯದಲ್ಲಿ ಸೇವಿಸಿ. ಇದು ಚರ್ಮದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದಲ್ಲದೆ ಚೀಯಾ, ಅಗಸೆ ಬೀಜ, ಮೊಳಕೆಯೊಡದ ಧಾನ್ಯಗಳನ್ನು ಸೇವನೆ ಮಾಡಬಹುದು.

ಇದನ್ನೂ ಓದಿ: ಹಣ್ಣುಗಳ ನಿಯಮಿತ ಸೇವನೆಯಿಂದ ತ್ವಚೆಯ ಹೊಳಪನ್ನು ಹೆಚ್ಚಿಸಬಹುದು

ಬೆಳಿಗ್ಗೆ ತ್ವಚೆಯ ಆರೈಕೆಯನ್ನು ಮಾಡಿ: ಪ್ರತಿದಿನ ಬೆಳಿಗ್ಗೆ, ನಿಮ್ಮ ಚರ್ಮದ ಪ್ರಕಾರಕ್ಕೆ ಅನುಗುಣವಾದ ಸೌಮ್ಯವಾದ ಕ್ಲೆನ್ಸರ್‌ನಿಂದ ಮುಖವನ್ನು ಸ್ವಚ್ಛಗೊಳಿಸಿ. ನಂತರ ಮಾಯಿಶ್ಚರೈಸರ್ ಅನ್ನು ಹಚ್ಚಿ. ಜೊತೆಗೆ ಸನ್‌ಸ್ಕ್ರೀನ್‌ ಹಚ್ಚುವುದು ಕೂಡ ತುಂಬಾನೇ ಮುಖ್ಯ. ಇದು ತ್ವಚೆಯ ಹೊಳಪನ್ನು ಹೆಚ್ಚಿಸುವುದು ಮಾತ್ರವಲ್ಲ ತ್ವಚೆಯ ಆರೋಗ್ಯವನ್ನು ವೃದ್ಧಿಸಲು ಕೂಡ ಸಹಕಾರಿ.

ತ್ವಚೆಯ ಹೊಳಪನ್ನು ಹೆಚ್ಚಿಸಲು ಈ ವಿಷಯಗಳನ್ನು ಸಹ ನೆನಪಿನಲ್ಲಿಡಿ:

  • ಪ್ರತಿದಿನ 7 ರಿಂದ 9 ಗಂಟೆಗಳ ಕಾಲ ಚೆನ್ನಾಗಿ ನಿದ್ರೆ ಮಾಡಿ.
  • ಧೂಮಪಾನ ಮಾಡುವುದನ್ನು ತಪ್ಪಿಸಿ, ಏಕೆಂದರೆ ಇದು ಚರ್ಮದಲ್ಲಿರುವ ಕಾಲಜನ್ ಅನ್ನು ಹಾನಿಗೊಳಿಸುತ್ತದೆ.
  • ಒತ್ತಡವನ್ನು ಕಡಿಮೆ ಮಾಡಲು ಯೋಗ, ಧ್ಯಾನ ಅಥವಾ ಆಳವಾದ ಉಸಿರಾಟದಂತಹ ಚಟುವಟಿಕೆಗಳನ್ನು ಮಾಡಲು ಪ್ರಾರಂಭಿಸಿ. ಏಕೆಂದರೆ ಒತ್ತಡವು ಕೂಡ ತ್ವಚೆಯ ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
  • ದಿನವಿಡೀ ಸಾಕಷ್ಟು ನೀರು ಕುಡಿಯಿರಿ ಮತ್ತು ನಿಮ್ಮ ಆಹಾರದಲ್ಲಿ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs England ODI Series 2026: Match Details, Free Live Stream and Squads

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಸರಣಿಯ ಮೊದಲ ಪಂದ್ಯ ಯಾವಾಗ? ಎಲ್ಲಿ? ಎಷ್ಟು ಗಂಟೆಗೆ ಆರಂಭವಾಗುತ್ತದೆ ಮತ್ತು ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದನ್ನು ನಾವು ನಿಮಗೆ ತಿಳಿಸಲಿದ್ದೇವೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಜುಲೈ 14 ರಂದು ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಡಿಜಿಟಲ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಸೌಲಭ್ಯವನ್ನು ನೀಡುತ್ತದೆ.

ಉಭಯ ತಂಡಗಳು

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:19 pm, Mon, 13 July 26

Source link

ನೇಪಾಳದಲ್ಲಿ ಮತ್ತೆ ಭುಗಿಲೆದ್ದ ಜೆನ್-ಝಡ್ ಪ್ರತಿಭಟನೆ; ಪ್ರಧಾನಿ ಬಾಲೆನ್ ಶಾ ವಿರುದ್ಧ ಆಕ್ರೋಶಕ್ಕೆ ಕಾರಣವೇನು? – Kannada News | Nepal’s Gen Z protests return Why Nepal Youths and Public angry on PM Balen Shah

ಕಠ್ಮಂಡು, ಜುಲೈ 13: ನೇಪಾಳದಲ್ಲಿ ಮತ್ತೊಮ್ಮೆ ಯುವಪೀಳಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದೆ. ಯಾವುದೇ ಪರ್ಯಾಯ ಪುನರ್ವಸತಿ ಯೋಜನೆ ಇಲ್ಲದೆ ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸುತ್ತಿರುವ ಸರ್ಕಾರದ ನೀತಿಯನ್ನು ವಿರೋಧಿಸಿ ಭಾನುವಾರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನೂರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲವೇ ತಿಂಗಳುಗಳ ಹಿಂದೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ಬಾಲೇಂದ್ರ ಶಾ (ಬಾಲೆನ್ ಶಾ) ನೇತೃತ್ವದ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.

ಭೂಮಿಹೀನರು ಮತ್ತು ಕೊಳೆಗೇರಿ ನಿವಾಸಿಗಳ ಒಕ್ಕಲೆಬ್ಬಿಸುವುದು ಯುವ ಪೀಳಿಗೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಠ್ಮಂಡು ಕಣಿವೆ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅನಧಿಕೃತವಾಗಿ ವಾಸಿಸುತ್ತಿದ್ದ ಸಾವಿರಾರು ಭೂಮಿಹೀನರು ಮತ್ತು ಕೊಳೆಗೇರಿ ನಿವಾಸಿಗಳ ತಾತ್ಕಾಲಿಕ ಶೆಡ್‌ಗಳನ್ನು ಸರ್ಕಾರ ತೆರವುಗೊಳಿಸಿದೆ. ಯಾವುದೇ ಬದಲಿ ವಸತಿ ಅಥವಾ ಪುನರ್ವಸತಿ ವ್ಯವಸ್ಥೆ ಕಲ್ಪಿಸದೆ ಸುಮಾರು 2,600 ಕುಟುಂಬಗಳ 15,000ಕ್ಕೂ ಹೆಚ್ಚು ಜನರನ್ನು ಏಕಾಏಕಿ ಬೀದಿಗೆ ತಳ್ಳಲಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನೆರೆ ಹಾವಳಿ ಹಾಗೂ ಸರ್ಕಾರದ ನಿರ್ಲಕ್ಷ್ಯ:

ಇತ್ತೀಚೆಗೆ ಕಠ್ಮಂಡುವಿನ ತಾತ್ಕಾಲಿಕ ಪುನರ್ವಸತಿ ಕೇಂದ್ರವೊಂದಕ್ಕೆ ಪ್ರವಾಹದ ನೀರು ನುಗ್ಗಿದಾಗ ಜನರು ಪರದಾಡಬೇಕಾಯಿತು. ಬಡವರ ಮೇಲಿನ ಈ ದೌರ್ಜನ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ವಿರೋಧಿಸಿ ‘ಜೆನ್ ಝಡ್’ ಯುವಕರು “ಬಡವರ ಮೇಲಿನ ದೌರ್ಜನ್ಯ ನಿಲ್ಲಿಸಿ”, “ಮಾನವ ಹಕ್ಕು ಗೌರವಿಸಿ” ಎಂದು ಘೋಷಣೆ ಕೂಗುತ್ತಾ ಕಠ್ಮಂಡುವಿನ ಮೈತಿಘರ್ ಮಂಡಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಜಾಗತಿಕ ಬಿಕ್ಕಟ್ಟು ಹಾಗೂ ಹೆಚ್ಚುತ್ತಿರುವ ಹಣದುಬ್ಬರ:

ಬಾಲೆನ್ ಶಾ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಯಿತು. ಇದರ ನೇರ ಹೊಡೆತ ನೇಪಾಳದ ಮೇಲೆ ಬಿದ್ದಿದೆ. ಅಡುಗೆ ಅನಿಲ ಮತ್ತು ಇಂಧನದ ಬೆಲೆಗಳು ಗಗನಕ್ಕೇರಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನಜೀವನ ದುಸ್ತರವಾಗಿದೆ. 100 ದಿನಗಳಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದಿದ್ದ ಸರ್ಕಾರ ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಯುವಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೇಪಾಳದ ಯುವಕರು ವಿದೇಶಗಳಿಗೆ (ವಿಶೇಷವಾಗಿ ಗಲ್ಫ್ ದೇಶಗಳಿಗೆ) ವಲಸೆ ಹೋಗುವುದನ್ನು ತಪ್ಪಿಸಲು ಬಾಲೆನ್ ಶಾ ಅವರ ‘ರಾಷ್ಟ್ರೀಯ ಸ್ವತಂತ್ರ ಪಾರ್ಟಿ’ (RSP) ಮುಂದಿನ 5 ವರ್ಷಗಳಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಯಾವುದೇ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿಲ್ಲ. ಇದು ಕೂಡ ಯುವಕರ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರವನ್ನೇ ಪತನಗೊಳಿಸಿತ್ತು ಯುವಕರ ಪ್ರತಿಭಟನೆ:

ನೇಪಾಳದಲ್ಲಿ 2025ರ ಅಂತ್ಯದಲ್ಲಿ ಸೋಷಿಯಲ್ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ‘ಜೆನ್ ಝಡ್’ ಯುವಕರು ಬೃಹತ್ ಕ್ರಾಂತಿ ನಡೆಸಿ ಅಂದಿನ ಪ್ರಧಾನಿ ಕೆ.ಪಿ. ಶರ್ಮಾ ಓಲಿ ನೇತೃತ್ವದ ಸರ್ಕಾರವನ್ನು ಪತನಗೊಳಿಸಿದ್ದರು. ಆ ಆಂದೋಲನದ ಆಕ್ರೋಶದ ಅಲೆಯನ್ನೇ ರಾಜಕೀಯ ಶಕ್ತಿಯಾಗಿ ಪರಿವರ್ತಿಸಿಕೊಂಡು 35 ವರ್ಷದ ಬಾಲೆನ್ ಶಾ 2026ರ ಮಾರ್ಚ್‌ನಲ್ಲಿ ಪ್ರಧಾನಿಯಾದರು. ಅವರು ಅಲ್ಲಿನ ವ್ಯವಸ್ಥೆಯನ್ನು ಬದಲಾಯಿಸುತ್ತಾರೆ ಎಂದು ನಂಬಿದ್ದ ಅದೇ ಯುವಕರು, ಇಂದು ಅದೇ ನಾಯಕನ ವಿರುದ್ಧ ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಭಾರತದ ಜೊತೆಗಿನ ಗಡಿ ವಿವಾದ ಬಗೆಹರಿಸಲು ಬ್ರಿಟನ್ ಸಹಾಯ ಬೇಕಿಲ್ಲ; ನೇಪಾಳದ ಪ್ರಧಾನಿ ಬಾಲೆನ್ ಶಾ ಸ್ಪಷ್ಟನೆ

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:

ನೇಪಾಳದ ಯುವಪೀಳಿಗೆ ಮತ್ತು ಪ್ರತಿಭಟನಾಕಾರರು ಸರ್ಕಾರದ ಮುಂದೆ ಕೆಲವು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಅವುಗಳೆಂದರೆ,

  • ಪ್ರಧಾನಿ ಬಾಲೆನ್ ಶಾ ರಾಜೀನಾಮೆ ನೀಡಬೇಕು.
  • ಯುವ ನಿರುದ್ಯೋಗ ಸಮಸ್ಯೆಯನ್ನು ಎದುರಿಸಲು ತಕ್ಷಣ ಆರ್ಥಿಕ ಸುಧಾರಣೆಗಳನ್ನು ತರಬೇಕು.
  • ಸೂಕ್ತ ಪುನರ್ವಸತಿ ಕಲ್ಪಿಸದೆ ಬಲವಂತವಾಗಿ ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು.
  • ಬಂಧಿತ ಯುವ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು.
  • ನಿರಾಶ್ರಿತ ಕುಟುಂಬಗಳಿಗೆ ಖಾಯಂ ವಸತಿ ಒದಗಿಸಬೇಕು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಆಚಾರ್ಯ ಶಂಕರರ ನಿಂದನೆ ಆರೋಪ: ವಿಡಿಯೋ ವೈರಲ್​​ – Kannada News | Controversy in Udupi: Viral Video of Girls Allegedly Insulting Adi Shankaracharya at Sri Krishna Mutt Sparks Outrage

ಶ್ರೀ ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ ಆರೋಪ

ಉಡುಪಿ, ಜುಲೈ 13: ಶ್ರೀಕೃಷ್ಣ ಮಠದಲ್ಲಿ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಮಠದ ರಾಜಾಂಗಣದಲ್ಲಿ ನಡೆದಿದ್ದ ಹರಿಕಥೆ ಕಾರ್ಯಕ್ರಮದ ವೇಳೆ ಆಚಾರ್ಯ ಮಧ್ವರ ಕಥೆ ಹೇಳುವ ಸಂದರ್ಭದಲ್ಲಿ ಯುವತಿಯರು ಶಂಕರಾಚಾರ್ಯರನ್ನು ಏಕವಚನದಲ್ಲಿ ಸಂಬೋಧಿಸಿ ಮಾತನಾಡಿದ್ದಾರೆ. ಅಲ್ಲದೆ ಕೆಲವು ಕಟ್ಟು ಕತೆಗಳನ್ನು ಪ್ರಸ್ತಾಪಿಸಿ ಕೀಳು ಮಟ್ಟದಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​

ಯುವತಿಯರು ಶಂಕರಾಚಾರ್ಯರ ಬಗ್ಗೆ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​​ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಬೆಳಗಾವಿಯಿಂದ ಬಂದಿದ್ದ ತಂಡದ ಧಾರ್ಮಿಕ ಕಾರ್ಯಕ್ರಮ ಇದಾಗಿತ್ತು ಎನ್ನಲಾಗಿದ್ದು, ಇವರ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆಚಾರ್ಯ ಶಂಕರರ ಅನುಯಾಯಿಗಳು ಕಿಡಿ ಕಾರಿದ್ದಾರೆ. ತಮ್ಮ ಹೇಳಿಕೆ ಸಂಬಂಧ ಯುವತಿಯರು ಕ್ಷಮೆ ಕೇಳಬೇಕು ಇಲ್ಲವೇ ಕಾನೂನು ಹೋರಾಟ ನಡೆಸುವ ಬಗ್ಗೆಯೂ ಅಭಿಪ್ರಾಯಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ

ನೆಟ್ಟಿಗರಿಂದ ಭಾರಿ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ಜಗತ್ತೇ ವಂದಿಸುವ ಶಂಕರಾಚಾರ್ಯರರನ್ನು ಹೀಗೆ ತೆಗಳಲು ಇವರ್ಯಾರು ಎಂದು ಒಬ್ಬರು ಪ್ರಶ್ನಿಸಿದ್ದರೆ, ಈ ಯುವತಿಯರು ಮೊದಲು ಶಂಕರರ ಜೀವನ ಚರಿತ್ರೆ ಬಗ್ಗೆ ತಿಳಿದುಕೊಳ್ಳಬೇಕು. ಬಳಿಕವಷ್ಟೇ ಇಂಥಹ ಕಾರ್ಯಕ್ರಮಗಳನ್ನು ನೀಡಬೇಕು ಎಂದು ಮತ್ತೋರ್ವರು ಹೇಳಿದ್ದಾರೆ. ಮಕ್ಕಳಲ್ಲೂ ಇಂತಹ ಭಾವನೆ ತುಂಬುತ್ತಿರೋದು ನಿಜಕ್ಕೂ ದುರ್ದೈವ ಎಂದು ಇನ್ನೊಬ್ಬರು ತಿಳಿಸಿದ್ದಾರೆ. ನಾನೂ ಹುಟ್ಟಿನಿಂದ ಮಾಧ್ವನೇ. ಆದರೆ ನಮ್ಮ ಬೆಳೆವಣಿಗೆ ಮದರಸಾ ಶಿಕ್ಷಣಕ್ಕಿಂತ ಉತ್ತಮವಾಗಿದೆ ಎಂದು ನನಗೆ ಅನಿಸುವುದಿಲ್ಲ. ಸಹ ಬ್ರಾಹ್ಮಣರನ್ನೇ ದ್ವೇಷಿಸುವುದೇ? ಈ ಮಕ್ಕಳಲ್ಲೂ ಇಂತಹ ಆಲೋಚನೆಗಳನ್ನು ಬಿತ್ತಿದವರನ್ನೂ ಒಮ್ಮೆ ಬಾಂಗ್ಲಾದೇಶಕ್ಕೆ ಕಳುಹಿಸಬೇಕು. ಆಗ ಅವರು ಇನ್ನೂ ಮಾಧ್ವರಾಗಿಯೇ ಅಥವಾ ಹಿಂದೂಗಳಾಗಿಯೇ ಉಳಿಯಲು ಸಾಧ್ಯವೇ ಎಂಬುದು ಅವರಿಗೆ ಅರ್ಥವಾಗುತ್ತದೆ ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:03 pm, Mon, 13 July 26

Source link

ಅನ್ನಭಾಗ್ಯ ಯೋಜನೆಗೆ ಗ್ರಹಣ: ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆ ವಿಳಂಬ; ಜನರು ಪರದಾಟ – Kannada News | Anna Bhagya Scheme: Delay in Ration Rice Distribution Across Karnataka Leaves Beneficiaries Struggling

ಬೆಂಗಳೂರು, ಜುಲೈ 13: ಅನ್ನಭಾಗ್ಯ (Anna Bhagya) ಯೋಜನೆಗೆ ಇದೀಗ ದೊಡ್ಡ ಗ್ರಹಣ ಹಿಡಿದಂತಾಗಿದೆ. ಬಡವರ ಹೊಟ್ಟೆ ತುಂಬಿಸಬೇಕಾದ ಪಡಿತರ ಅಕ್ಕಿ ವಿತರಣೆ ರಾಜ್ಯದಲ್ಲಿ ಸಂಪೂರ್ಣವಾಗಿ ವಿಳಂಬವಾಗುತ್ತಿದೆ. ಕಳೆದ ಮೂರು ತಿಂಗಳಿಂದ ಅಕ್ಕಿ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಅಷ್ಟಕ್ಕೂ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲವಾ ಎನ್ನುವ ಅನುಮಾನ ದಟ್ಟವಾಗಿದೆ.

ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಹಣದ ಕೊರತೆ?

ಕಳೆದ ಮೂರು ತಿಂಗಳಿಂದ ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆಯಲ್ಲಿ ಭಾರೀ ಸಮಸ್ಯೆ ಎದುರಾಗಿದೆ. ಪ್ರತಿ ತಿಂಗಳು ದಿನಾಂಕ 5ರ ಒಳಗಾಗಿ ಬಡವರ ಕೈ ಸೇರಬೇಕಾಗಿದ್ದ ಅಕ್ಕಿ ಇದೀಗ ಸರಿಯಾಗಿ ಸಿಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಹಣದ ಕೊರತೆ ಎಂಬ ಮಾತು ಕೇಳಿಬರುತ್ತಿದೆ. ಅನ್ನಭಾಗ್ಯದ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಸಕಾಲಕ್ಕೆ ಹಣ ಪಾವತಿ ಮಾಡದ ಹಿನ್ನೆಲೆ, ಅಕ್ಕಿ ಪೂರೈಕೆ ಸಂಪೂರ್ಣ ಹಳಿ ತಪ್ಪಿದೆ.

ಇದನ್ನೂ ಓದಿ: ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಕೈಸೇರಲಿದೆ ಇಂದಿರಾ ಕಿಟ್

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಬರೋಬ್ಬರಿ 2 ಲಕ್ಷದ 12 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ಖರೀದಿ ಮಾಡುತ್ತಿದೆ. ಇದಕ್ಕಾಗಿ ಪ್ರತಿ ತಿಂಗಳು ಸುಮಾರು 300 ರಿಂದ 400 ಕೋಟಿ ರೂ ಹಣವನ್ನು ಕೇಂದ್ರಕ್ಕೆ ರಾಜ್ಯ ಸರ್ಕಾರ ಪಾವತಿಸಬೇಕಾಗುತ್ತದೆ. ಆದರೆ, ಕಳೆದ ಕೆಲವು ತಿಂಗಳಿಂದ ಈ ಹಣ ಪಾವತಿಯಲ್ಲಿ ಭಾರೀ ವಿಳಂಬವಾಗುತ್ತಿದೆ. ಸರ್ಕಾರದ ಕಡೆಯಿಂದ ಹಣ ಬಿಡುಗಡೆಯಾಗದ ಕಾರಣ, ಕೇಂದ್ರದ ಗೋದಾಮುಗಳಿಂದ ಅಕ್ಕಿಯನ್ನು ಲಿಫ್ಟ್ ಮಾಡುವ ಪ್ರಕ್ರಿಯೆ ತಡವಾಗುತ್ತಿದ್ದು, ಇದು ನೇರವಾಗಿ ಬಡವರ ಹೊಟ್ಟೆಯ ಮೇಲೆ ಹೊಡೆಯುವಂತೆ ಮಾಡಿದೆ.

ನ್ಯಾಯಬೆಲೆ ಅಂಗಡಿಗಳ ಮುಂದೆ ಕ್ಯೂ; ಗ್ರಾಹಕರ ಆಕ್ರೋಶ

ಇತ್ತ ಅಕ್ಕಿ ಸರಬರಾಜು ವಿಳಂಬವಾಗುತ್ತಿರುವುದರಿಂದ ರೇಷನ್ ಶಾಪ್‌ಗಳ ಮುಂದೆ ಸಾರ್ವಜನಿಕರು ಹಗಲು-ರಾತ್ರಿ ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆ ನ್ಯಾಯಬೆಲೆ ಅಂಗಡಿಗಳು ಮುಚ್ಚಿರುತ್ತಿರುವುದರಿಂದ ಸಾರ್ವಜನಿಕರು ಪ್ರತಿನಿತ್ಯ ಖಾಲಿ ಕೈಯಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದಾರೆ. ಕೂಲಿ ನಾಲಿ ಮಾಡಿ ಬದುಕುವ ತಮಗೆ ರೇಷನ್ ಅಂಗಡಿ ಮುಂದೆ ಕಾಯುವುದೇ ಕೆಲಸವಾಗಿದೆ ಎಂದು ಪಡಿತರ ಗ್ರಾಹಕರಾದ ಚಂದ್ರಕಲಾ ಹಾಗೂ ನಾಗರತ್ನಮ್ಮ ಸೇರಿದಂತೆ ಹಲವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸಿಎಂ ಡಿಕೆ ಶಿವಕುಮಾರ್​ ಈ ಇಕ್ಕಟ್ಟಿನಿಂದ ಬಡವರನ್ನು ಹೇಗೆ ಪಾರು ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ವರದಿ: ಅರುಣ್ ಕುಮಾರ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version