ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow
ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಹೆಸರನ್ನು…