Headlines

PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು

ಪಾಕಿಸ್ತಾನ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಪೇಶಾವರ್ ಝಲ್ಮಿ ತಂಡವು ಕರಾಚಿ ಕಿಂಗ್ಸ್ ವಿರುದ್ಧ 159 ರನ್‌ಗಳ ಬೃಹತ್ ಅಂತರದಿಂದ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದೆ. ಇದು ರನ್‌ಗಳ ಅಂತರದ ಆಧಾರದ ಮೇಲೆ PSL ಇತಿಹಾಸದಲ್ಲೇ ದಾಖಲಾದ ಅತಿದೊಡ್ಡ ವಿಜಯವಾಗಿದೆ. ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪೇಶಾವರ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 246 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕರಾಚಿ…

Read More

Video: ಮಾನಸಿಕ ಕಿರಿಕಿರಿ, ಒಂಟಿತನ ಫ್ರೀಯಾಗಿ ಕೊಟ್ಟ ವರ್ಕ್ ಫ್ರಮ್ ಹೋಮ್; ಯುವಕ ಹೀಗೆಂದಿದ್ದೇಕೆ? – Kannada News | Young man says ‘Work from Home’ robbed him of his peace of mind.

ವರ್ಕ್ ಫ್ರಂ ಹೋಮ್ ಆಯ್ಕೆಯ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಕಾಮನ್ ಆಗಿ ಬಿಟ್ಟಿದೆ. ಆಫೀಸಿಗೆ ಹೋಗಿ ಕೆಲಸ ಮಾಡೋದಕ್ಕಿಂತ ವರ್ಕ್ ಫ್ರಮ್ ಹೋಮ್ (work from home) ಬೆಸ್ಟ್ ಎನ್ನುವುದು ಅನೇಕರ ಅಭಿಪ್ರಾಯ. ವರ್ಕ್ ಫ್ರಮ್ ಹೋಮ್ ಆಪ್ಷನ್ ಸಿಕ್ರೆ ಖುಷಿ ಎಷ್ಟಿದೆಯೋ, ಅಷ್ಟೇ ಕಿರಿಕಿರಿ ಕೂಡ. ಇದೀಗ ಯುವಕನೊಬ್ಬನದ್ದು ಇದೇ ಪರಿಸ್ಥಿತಿ. ಮನೆಯಲ್ಲೇ ಕೆಲಸ ಮಾಡಿಕೊಂಡು ತಾನು ಅನುಭವಿಸುವ ಒಂಟಿತನ ಹಾಗೂ ಕಿರಿಕಿರಿಯ ಬಗ್ಗೆ ಮಾತನಾಡಿದ್ದಾನೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು…

Read More

IND vs PAK: ಪಾಕ್ ನಾಯಕನೊಂದಿಗೆ ವಿಶ್ವಕಪ್​ನಲ್ಲೂ ಕೈಕುಲುಕುದ ಸೂರ್ಯ – Kannada News | India vs Pakistan T20 World Cup 2026: No Handshake Drama Continues

2026 ರ ಟಿ20 ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಅಂತಿಮವಾಗಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೂಪರ್ 8 ಸುತ್ತಿಗೆ ಟಿಕೆಟ್ ಸಿಗಲಿದೆ. ಆದ್ದರಿಂದ, ಎರಡೂ ತಂಡಗಳು ಗೆಲುವಿಗಾಗಿ ನಾನಾ ತಂತ್ರಗಳೊಂದಿಗೆ ಅಖಾಡಕ್ಕಿಳಿದಿವೆ. ಆದಾಗ್ಯೂ ಇಷ್ಟು ದಿನ ಕಾಡುತ್ತಿದ್ದ ಪ್ರಶ್ನೆಗೆ ಈ ಪಂದ್ಯದ ಆರಂಭದೊಂದಿಗೆ ಉತ್ತರ ಸಿಕ್ಕಿದೆ. ವಾಸ್ತವವಾಗಿ ಇಂದಿನ ಪಂದ್ಯದಲ್ಲಾದರೂ ಉಭಯ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡುತ್ತಾರಾ ಎಂಬುದನ್ನು ನೋಡಲು ಅಭಿಮಾನಿಗಳು ಕಾದು…

Read More

ಕೋವಿಡ್ ಸಮಯದಲ್ಲಿ ಬೇಕಿದ್ವಿ, ಈಗ ಬೇಡವಾದ್ವಾ?; ಹಾಸನದಲ್ಲಿ ಗ್ರೂಪ್ ಡಿ ನೌಕರರ ಕಣ್ಣೀರು: 20 ಸ್ವಚ್ಛತಾ ಸಿಬ್ಬಂದಿ ಏಕಾಏಕಿ ವಜಾ – Kannada News | Hassan: Contract Cleanliness Staff Fired, Protest Erupts at Holenarasipura Hospital

ಹಾಸನ, ಜೂ.23: ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ 20 ಸ್ವಚ್ಛತಾ ಸಿಬ್ಬಂದಿಯನ್ನು ಏಕಾಏಕಿ ವಜಾ ಮಾಡಲಾಗಿದ್ದು, ಇದನ್ನು ಖಂಡಿಸಿ ಉಳಿದ ಗುತ್ತಿಗೆ ಸಿಬ್ಬಂದಿ ಆಸ್ಪತ್ರೆ ಎದುರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸುರಕ್ಷಾ ಏಜೆನ್ಸಿ ಎಂಬ ಸಂಸ್ಥೆಯು 20 ಸಿಬ್ಬಂದಿಯ ಪಟ್ಟಿ ಮಾಡಿ, ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ತಿಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಕೆಲಸಕ್ಕೆ ಬಂದಲ್ಲಿ ಪೊಲೀಸರನ್ನು ಕರೆಸಿ ಓಡಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಸುಮಾರು 50 ಮಂದಿ…

Read More

Karnataka Weather: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 10: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ (Heat Wave) ಮುಂದುವರಿಯಲಿದೆ. ವಿಜಯನಗರ, ಕಲಬುರಗಿ, ಯಾದಗಿರಿ ಮತ್ತು ಹಾವೇರಿಯಲ್ಲಿಯೂ ಬಿಸಿಲಿನ ಝಳ ಹೆಚ್ಚಾಗಲಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಇಳಿಕೆ ಕಂಡುಬರುವುದಿಲ್ಲ. ಬದಲಿಗೆ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್​ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ…

Read More

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More

ಆರ್​​ಆರ್​ ವಿರುದ್ಧ ಕೇಸ್ ಹಾಕಿದ ಅರ್ಜುನ್ ಕಪೂರ್? ಪೋಸ್ಟ್​ ಡಿಲೀಟ್​ಗೆ ಇದುವೇ ಕಾರಣ – Kannada News | Arjun Kapoor vs RR: Why Rajasthan Royals Deleted Controversial IPL Meme on Personality Rights

ಐಪಿಎಲ್ 2026ರ ಪ್ಲೇಆಫ್ ರೇಸ್‌ನಿಂದ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ಬೆನ್ನಲ್ಲೇ, ಸೋಶಿಯಲ್ ಮೀಡಿಯಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಕಿದ್ದ ಮೀಮ್ ಒಂದು ಚರ್ಚೆ ಹುಟ್ಟುಹಾಕಿತ್ತು. ಈ ಮೀಮ್ ಪಂಜಾಬ್ ಕಾಲೆಳೆಯಲು ಹಾಕಿದ್ದಾದರೂ ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಘನತೆಗೆ ಧಕ್ಕೆ ತರುವ ರೀತಿ ಇತ್ತು. ಈಗ ಈ ಮೀಮ್​ ಅನ್ನು ಡಿಲೀಟ್ ಮಾಡಲಾಗಿದೆ. ಅರ್ಜುನ್ ಕಪೂರ್ ಅವರು ಆರ್ಆರ್ ಫ್ರಾಂಚೈಸಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರ್​​ಆರ್​ ತಂಡದವರು ಈ…

Read More

ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂ ಅಗತ್ಯವನ್ನು ಪೂರೈಸಿಕೊಳ್ಳಲು ಈ ಆಹಾರಗಳ ಸೇವನೆ ಮಾಡಿ! – Kannada News | Why Pregnant Women Need More Calcium Than Usual

ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ಮಹತ್ವದ ಹಂತಗಳಲ್ಲಿ ಒಂದು. ಈ ಸಮಯದಲ್ಲಿ ತಾಯಿಯ ದೇಹದಲ್ಲಿ ಅನೇಕ ರೀತಿಯ ದೈಹಿಕ ಮತ್ತು ಹಾರ್ಮೋನಲ್ ಬದಲಾವಣೆಗಳಾಗುತ್ತದೆ. ಅದರ ಜೊತೆಗೆ ಗರ್ಭದಲ್ಲಿರುವ ಮಗುವಿನ ಬೆಳವಣಿಗೆಗೆ ಬೇಕಾದ ಪೌಷ್ಟಿಕಾಂಶಗಳನ್ನು ಒದಗಿಸುವ ಜವಾಬ್ದಾರಿಯೂ ತಾಯಿಯದ್ದಾಗಿರುತ್ತದೆ. ಆದ್ದರಿಂದ ಪ್ರೋಟೀನ್, ಕಬ್ಬಿಣ, ಫೋಲಿಕ್ ಆಸಿಡ್ ಜೊತೆಗೆ ಕ್ಯಾಲ್ಸಿಯಂ ಕೂಡ ಅತ್ಯಗತ್ಯ ಖನಿಜವಾಗಿದೆ. ಕ್ಯಾಲ್ಸಿಯಂ ಕೊರತೆಯಾದರೆ ತಾಯಿಯ ಮೂಳೆಗಳು ದುರ್ಬಲವಾಗುವುದಷ್ಟೇ ಅಲ್ಲ, ಮಗುವಿನ ಮೂಳೆ ಮತ್ತು ಹಲ್ಲುಗಳ ಬೆಳವಣಿಗೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಗರ್ಭಿಣಿಯರಿಗೆ ಕ್ಯಾಲ್ಸಿಯಂ…

Read More

ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ

ಬೆಂಗಳೂರು, ಮಾರ್ಚ್​ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ. ಟಿಕೆಟ್​ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ…

Read More

ಪುತ್ರಿಯರಿಂದಲೇ ಅಂತ್ಯಸಂಸ್ಕಾರ: ಗಂಡು ಮಕ್ಕಳಿಲ್ಲದಿದ್ದರೇನು? ತಂದೆಗೆ ಅಗ್ನಿಸ್ಪರ್ಶ ಮಾಡಿದ ಇಬ್ಬರು ಹೆಣ್ಮಕ್ಕಳು!

ಕಡೂರು, ಮಾ.14 : “ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ” ಎಂಬ ಹಳೆಯ ಸಂಪ್ರದಾಯದ ನಂಬಿಕೆಯನ್ನು ಬದಿಗೊತ್ತಿ, ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಬೀರೂರು ಪಟ್ಟಣದ ನಿವಾಸಿ ವಿಶ್ವನಾಥ್ ಅವರು ನಿನ್ನೆ ನಿಧನರಾಗಿದ್ದರು. ಇವರಿಗೆ ಗಂಡು ಮಕ್ಕಳಿರಲಿಲ್ಲ, ಕೇವಲ ಇಬ್ಬರು ಹೆಣ್ಣು ಮಕ್ಕಳಿದ್ದರು. ತಂದೆಯ ಸಾವಿನಿಂದ ಕಂಗಾಲಾಗಿದ್ದ ಪುತ್ರಿಯರು, ತಂದೆಯ ಮೇಲಿನ ಗೌರವ…

Read More