Headlines

ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು – Kannada News | Former PM HD Deve Gowda Emotional Over His Wife Chennamma’s Demise

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: Chennamma Deve Gowda…

Read More

ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ – Kannada News | Authorities Launch Demolition Drive Near TMC MP Abhishek Banerjee’s Office in Amtala

ಕೋಲ್ಕತ್ತಾ, ಜುಲೈ 18: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಶನಿವಾರ ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪ್ರಭಾವಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸೇರಿದ ಕಚೇರಿಯನ್ನು ಆಡಳಿತ ಮಂಡಳಿಯು ಬುಲ್ಡೋಜರ್‌ಗಳ ಮೂಲಕ ನೆಲಸಮಗೊಳಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಅಮ್ತಾಲಾದಲ್ಲಿ ಈ ಭಾರಿ ಕಾರ್ಯಾಚರಣೆ ನಡೆದಿದ್ದು, ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸಂಪೂರ್ಣ ನಿಯಮಗಳನ್ನು ಉಲ್ಲಂಘಿಸಿ ಈ ಬೃಹತ್ ಐದು ಅಂತಸ್ತಿನ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗಿತ್ತು ಎಂಬುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ…

Read More

IND vs ENG: ಲಾರ್ಡ್ಸ್‌ನಲ್ಲಿ ತಮ್ಮ ವೃತ್ತಿಜೀವನದ ಮಹದಾಸೆಯನ್ನು ಈಡೇರಿಸಿಕೊಳ್ತಾರಾ ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದ್ದು, ಎರಡೂ ತಂಡಗಳು ಟ್ರೋಫಿಯನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಬೇಕಾದರೆ ತಂಡ ಸಾಂಘಿಕ ಪ್ರದರ್ಶನ ನೀಡಬೇಕು. ಅದರಲ್ಲೂ ತಂಡದ ಬ್ಯಾಟಿಂಗ್‌ ಆಧಾರಸ್ತಂಭವಾಗಿರುವ ವಿರಾಟ್ ಕೊಹ್ಲಿಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬರಬೇಕು (PC-PTI). ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಶತಕದತ್ತ…

Read More

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಲೈವ್ ನೋಡಿ – Kannada News | 72nd National film awards announcement live video

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡುತ್ತಿದೆ. 2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು, ಪ್ರಶಸ್ತಿ ಆಯ್ಕೆ ಸಮಿತಿಯು ವೀಕ್ಷಿಸಿ ಅವುಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿದೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​​ನಲ್ಲಿ ಆಯೋಜಿಸಲಾಗಿರುವ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿಯ ಪ್ರಮುಖರು ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆ ಪ್ರಮುಖರು ಪ್ರಶಸ್ತಿ ಪಡೆದ ಚಲನಚಿತ್ರಗಳು, ಕಲಾವಿದರು ಹಾಗೂ ತಂತ್ರಜ್ಞರ ಹೆಸರು ಘೋಷಣೆ ಮಾಡುತ್ತಿದ್ದಾರೆ. ಲೈವ್ ವಿಡಿಯೋ…

Read More

ಪಟಾಕಿ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ; 8 ಕಾರ್ಮಿಕರು ಸಾವು, ಹಲವರಿಗೆ ಗಂಭೀರ ಗಾಯ – Kannada News | Ahmedabad Firecracker Factory Blast Kills 8: Illegal Operation Exposed

ಅಹಮದಾಬಾದ್, ಜುಲೈ 18: ಗುಜರಾತ್‌ನ ಅಹಮದಾಬಾದ್ ನಗರದ ವಸ್ತ್ರಲ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ(Blast) ಸಂಭವಿಸಿದೆ. ಇಲ್ಲಿನ ರಾಮೋಲ್-ಗತ್ರಾಡ್ ರಸ್ತೆಯ ಮೆಹಮೂದ್‌ಪುರ ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ ಎಂಟು ಜನ ಕಾರ್ಮಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆಗೆ ದೈತ್ಯ ಬೆಂಕಿ ಹೊತ್ತಿಕೊಂಡಿದ್ದು, ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ದುರಂತ ಸಂಭವಿಸಿದ ಕಾರ್ಖಾನೆಯ ಸಮೀಪದಲ್ಲೇ ಕ್ಷಿಪ್ರ ಕಾರ್ಯ ಪಡೆಯ (RAF) ಸೇನಾ ಶಿಬಿರವಿತ್ತು. ಶನಿವಾರ ಮಧ್ಯಾಹ್ನ…

Read More

ಪ್ರತಿದಿನ ಒಂದು ಸಣ್ಣ ತುಂಡು ಶುಂಠಿ ತಿನ್ನುವುದರಿಂದ ಸಿಗುವ ಪ್ರಯೋಜನಗಳು! – Kannada News | Daily Ginger Benefits: Boost Immunity and Improve Digestion Naturally

ಅಡುಗೆಮನೆಯಲ್ಲಿ ಬಹುತೇಕ ಪ್ರತಿದಿನ ಬಳಸುವ ಪ್ರಮುಖ ಮಸಾಲೆ ಪದಾರ್ಥಗಳಲ್ಲಿ ಶುಂಠಿ ಕೂಡ ಒಂದು. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ, ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ನೈಸರ್ಗಿಕ ಔಷಧೀಯ ಗುಣಗಳನ್ನೂ ಹೊಂದಿದೆ. ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಶುಂಠಿಯನ್ನು ಜೀರ್ಣಕ್ರಿಯೆ, ಶೀತ, ಕೆಮ್ಮು, ಗಂಟಲು ನೋವು ಹಾಗೂ ಉರಿಯೂತದ ಸಮಸ್ಯೆಗಳಿಗೆ ಬಳಸಲಾಗುತ್ತಿದೆ. ಶುಂಠಿಯಲ್ಲಿ ಜಿಂಜರಾಲ್ (Gingerol) ಎಂಬ ಶಕ್ತಿಶಾಲಿ ಜೈವಿಕ ಸಂಯುಕ್ತವಿದ್ದು, ಇದು ಉರಿಯೂತ ನಿವಾರಕ (Anti-inflammatory), ಆಂಟಿಆಕ್ಸಿಡೆಂಟ್ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ನಿಯಮಿತ ಪ್ರಮಾಣದಲ್ಲಿ…

Read More

Chennamma Deve Gowda Death: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ – Kannada News | HD Deve Gowda’s Wife Chennamma Passes Away in Manipal Hospital Bengaluru

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ (HD Devegowda) ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. ಕಳೆದ 2-3 ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಈ ನಡುವೆ ಬುಧವಾರ ಚನ್ನಮ್ಮನವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ…

Read More

ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಇದ್ದ ಏಕೈಕ ಮಗನನ್ನ ಕಳೆದುಕೊಂಡ ಕುಟುಂಬದ ಕಣ್ಣೀರ ಕಥೆ – Kannada News | Sanjan Organ Donation: Family’s Selfless Decision Gives New Life to Others

ಅಂಗಾಂಗ ದಾನ ಮಾಡಿದ ಪೋಷಕರುImage Credit source: tv9 kannada ಆನೇಕಲ್, ಜುಲೈ 18: ಮಗನನ್ನು ಕಳೆದುಕೊಂಡ ನೋವು ಒಂದೆಡೆ, ಮಗನ ಅಂಗಾಂಗ ದಾನದ (Organ Donation) ಮೂಲಕ ಹಲವು ಜೀವಗಳಿಗೆ ಹೊಸ ಬದುಕು ನೀಡಿದ ಹೆಮ್ಮೆ ಮತ್ತೊಂದೆಡೆ. ರ‍್ಯಾಂಕ್​ ವಿದ್ಯಾರ್ಥಿಯಾಗಿದ್ದ 19 ವರ್ಷದ  ಸಂಜನ್​,​ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಬಳಿಕ, ಕುಟುಂಬ ತೆಗೆದುಕೊಂಡ ಮಾನವೀಯ ನಿರ್ಧಾರ ಇದೀಗ ಹಲವರಿಗೆ ಜೀವ ದಾನವಾಗಿದೆ. ಆನೇಕಲ್‌ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಈ  ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ. ಬೆಂಗಳೂರಿನ…

Read More

Karnataka Weather Forecast: ಕರ್ನಾಟಕದಲ್ಲಿ ಮಳೆ ಚುರುಕು, 7 ದಿನ ಅಬ್ಬರಿಸಲಿರುವ ವರುಣ – Kannada News | Karnataka Weather Turns Monsoon Like: IMD Issues 7 Day Heavy Rain Forecast

ಪ್ರಾತಿನಿಧಿಕ ಚಿತ್ರImage Credit source: India Today ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಿ (Karnataka) ಕಳೆದ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮಳೆ (Rain) ಮತ್ತೆ ಚುರುಕುಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಅದರಲ್ಲೂ ಕರಾವಳಿ ಮತ್ತು…

Read More

ಕ್ರಿಕೆಟ್ ತನ್ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ; ಕೊಹ್ಲಿ ಭಾವುಕ ಪೋಸ್ಟ್ – Kannada News | Sir Garfield Sobers Demise: Cricket World Mourns Legend, Kohli’s Viral Tribute

ವೆಸ್ಟ್ ಇಂಡೀಸ್ ಕ್ರಿಕೆಟ್​ನ ಲೆಜೆಂಡರಿ ಆಲ್‌ರೌಂಡರ್ ಸರ್ ಗಾರ್ಫೀಲ್ಡ್ ಸೋಬರ್ಸ್ (Sir Garfield Sobers) ಜುಲೈ 17 ರಂದು ತಮ್ಮ 89 ನೇ ವಯಸ್ಸಿನಲ್ಲಿ ನಿಧನರಾದರು. ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಈ ವಿಂಡೀಸ್ ದಿಗ್ಗಜನ ಅಗಲಿಕೆಗೆ ಇಡೀ ಕ್ರಿಕೆಟ್ ಜಗತ್ತೇ ಕಂಬನಿ ಮಿಡಿದಿದೆ. ಅದರಲ್ಲೂ ಟೀಂ ಇಂಡಿಯಾದ ಭಾಗಶಃ ಕ್ರಿಕೆಟಿಗರು ಸೋಬರ್ಸ್ ಅವರ ನಿಧನಕ್ಕೆ ಭಾವುಕ ಪೋಸ್ಟ್​ಗಳ ಮೂಲಕ ತಮ್ಮ ಸಂತಾಪ ಸೂಚಿಸಿದ್ದಾರೆ. ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ವಿರಾಟ್ ಕೊಹ್ಲಿ…

Read More