ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ – Kannada News | Authorities Launch Demolition Drive Near TMC MP Abhishek Banerjee’s Office in Amtala
ಕೋಲ್ಕತ್ತಾ, ಜುಲೈ 18: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಶನಿವಾರ ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪ್ರಭಾವಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸೇರಿದ ಕಚೇರಿಯನ್ನು ಆಡಳಿತ ಮಂಡಳಿಯು ಬುಲ್ಡೋಜರ್‌ಗಳ ಮೂಲಕ ನೆಲಸಮಗೊಳಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಅಮ್ತಾಲಾದಲ್ಲಿ ಈ ಭಾರಿ ಕಾರ್ಯಾಚರಣೆ ನಡೆದಿದ್ದು, ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸಂಪೂರ್ಣ ನಿಯಮಗಳನ್ನು ಉಲ್ಲಂಘಿಸಿ ಈ ಬೃಹತ್ ಐದು ಅಂತಸ್ತಿನ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗಿತ್ತು ಎಂಬುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ…