Headlines

ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ! – Kannada News | Drought vs Determination: Elderly Bidar Couple Inspires by Re sowing Crop Despite Failure

ಬೀದರ್, ಜುಲೈ 18: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹಳ್ಳಿಕೇಡ್ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ತಿಪ್ಪಣ್ಣ ಮತ್ತು ಗಂಗಮ್ಮ ಅವರು ತೀವ್ರ ಬರಗಾಲದ ನಡುವೆಯೂ ತಮ್ಮ ಹೊಲದಲ್ಲಿ ಮರುಬಿತ್ತನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ದಂಪತಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ ತುಂಡುಭೂಮಿಯನ್ನೇ ನಂಬಿಕೊಂಡಿದ್ದಾರೆ. ದೊಡ್ಡ ಜಮೀನು ಇಲ್ಲದ ಇವರು, ಪ್ರಸ್ತುತ ಮಳೆ ಕೊರತೆ ಮತ್ತು ಬೆಳೆ ವೈಫಲ್ಯದ ಹೊರತಾಗಿಯೂ ಮತ್ತೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಗಂಗಮ್ಮ ಅವರು ತಮ್ಮ ಪತಿ ತಿಪ್ಪಣ್ಣ ಅವರಿಗೆ ಹೆಗಲು ಕೊಟ್ಟು ಜಮೀನಿನಲ್ಲಿ…

Read More

BMRCL Recruitment 2026: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ; ಆ. 10ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | Namma Metro DGM Job: Apply Online for Operation Safety Post by Aug 10

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ನಮ್ಮ ಮೆಟ್ರೋ, ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಯಾವ ಹುದ್ದೆಗೆ ನೇಮಕಾತಿ? ಮೆಟ್ರೋ ರೈಲು ನಿಗಮದ ಯೋಜನಾ ವಿಭಾಗದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು (Operation Safety – Deputy General…

Read More

ತಡರಾತ್ರಿ ಬೆಂಗಳೂರಿನ 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ರೈಡ್ – Kannada News | DCP Saidulla Leads Massive Whitefield Operation Against Rowdies in Bengaluru

ಬೆಂಗಳೂರು, ಜು.18: ರಾಜಧಾನಿಯಲ್ಲಿ ರೌಡಿ ಚಟುವಟಿಕೆಗಳು ಹಾಗೂ ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ವಿಭಾಗದ ಡಿಸಿಪಿ (DCP) ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 150ಕ್ಕೂ ಹೆಚ್ಚು ಹಳೆಯ ಹಾಗೂ ಸಕ್ರಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಲಾಗಿದೆ. ನಗರದ ವೈಟ್‌ಫೀಲ್ಡ್, ವರ್ತೂರು, ಮಹದೇವಪುರ, ಕೆ.ಆರ್. ಪುರಂ ಹಾಗೂ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ತಡರಾತ್ರಿ 12…

Read More

ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ ಯಶಸ್ವಿ: ಸ್ಕೈರೂಟ್ ತಂಡದೊಂದಿಗೆ ಮಾತನಾಡಿ, ಅಭಿನಂದಿಸಿದ ಪ್ರಧಾನಿ ಮೋದಿ – Kannada News | Vikram 1 Rocket Launch: India’s Private Space Triumph and Skyroot’s Historic Feat

ಶ್ರೀಹರಿಕೋಟ, ಜುಲೈ 18: ಭಾರತದ ಪ್ರಪ್ರಥಮ ಖಾಸಗಿ ರಾಕೆಟ್ ‘ವಿಕ್ರಮ್-1’ (Vikram-1)ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಚಿಮ್ಮುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ದೊಡ್ಡ ಸಾಧನೆಯ ಬೆನ್ನಲ್ಲೇ ಸ್ಕೈರೂಟ್ ಏರೋಸ್ಪೇಸ್ ತಂಡದೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಅತ್ಯಂತ ನಿರ್ಣಾಯಕ ಕ್ಷಣವಾಗಿದೆ. ನಮ್ಮ ಖಾಸಗಿ ವಲಯದ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆಯು ಹೊಸ ಆವಿಷ್ಕಾರಗಳಿಗೆ ದಾರಿ ಮಾಡಿಕೊಡುತ್ತಿದೆ. ಈ ಮಹಾನ್ ಸಾಧನೆಯು…

Read More

ಎಸ್‌ಐಆರ್ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳು-ಪೋಷಕರ ಪ್ರತಿಭಟನೆ – Kannada News | SIR Duty Deployment of Teachers Disrupts Classes in Bengaluru School, Students and Parents Protest

ಬೆಂಗಳೂರು, ಜುಲೈ 18: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಗೆ ಶಿಕ್ಷಕರನ್ನು ನಿಯೋಜಿಸಿರುವ ಪರಿಣಾಮ ಶಾಲಾ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಗುರುಕುಲ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 7 ಶಿಕ್ಷಕರ ಪೈಕಿ 6 ಮಂದಿಯನ್ನು ಎಸ್‌ಐಆರ್ ಕರ್ತವ್ಯಕ್ಕೆ ನಿಯೋಜಿಸಿರುವುದರಿಂದ 8, 9 ಮತ್ತು 10ನೇ ತರಗತಿಗಳಿಗೆ ಒಬ್ಬ ಶಿಕ್ಷಕರೇ ಎಲ್ಲಾ ವಿಷಯಗಳನ್ನು ಬೋಧಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. 1ರಿಂದ 7ನೇ ತರಗತಿಗಳಿಗೂ ಸೀಮಿತ ಶಿಕ್ಷಕರಿಂದಲೇ ಪಾಠ ನಡೆಯುತ್ತಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗಿದೆ…

Read More

ತುಮಕೂರಿನ ಶಿರಾದಲ್ಲೇ ಎರಡನೇ ವಿಮಾನ ನಿಲ್ದಾಣ ಯಾಕೆ? ಮಧ್ಯ-ಉತ್ತರ ಕರ್ನಾಟಕ ಅಭಿವೃದ್ಧಿಗೆ ಇದು ಅಗತ್ಯ ಎಂದ ಸೋಮಣ್ಣ – Kannada News | Why Tumkur’s Sira is the Best Choice for Bengaluru’s Second Airport? Union Minister V Somanna Explains

ವಿ. ಸೋಮಣ್ಣ Image Credit source: Facebook ಬೆಂಗಳೂರು, ಜುಲೈ 18: ಬೆಂಗಳೂರಿನಲ್ಲಿ (Bengaluru) ಎರಡನೇ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ, ನೂತನ ಏರ್​ಪೋರ್ಟ್​ಗೆ ತುಮಕೂರು ಜಿಲ್ಲೆಯ ಶಿರಾ ಸೂಕ್ತ ಸ್ಥಳವೆಂದು ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಪಾದಿಸಿದ್ದಾರೆ. ಈ ಕುರಿತು ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನ ಸಮೀಪ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವುದಕ್ಕಿಂತ ಶಿರಾದಲ್ಲಿ ನಿರ್ಮಾಣ ಮಾಡಿದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಶಿರಾದಲ್ಲಿ ವಿಮಾನ…

Read More

ಫಿಫಾ ವಿಶ್ವಕಪ್ ಫೈನಲ್ ಪಂದ್ಯದ ಟಿಕೆಟ್ ದರ ಕೇಳಿದ್ರೆ ದಂಗಾಗುವುದು ಗ್ಯಾರೆಂಟಿ! – Kannada News | FIFA World Cup 2026 Final Tickets Spark Price Records

ಜಾಗತಿಕ ಕ್ರೀಡಾ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯದ ಟಿಕೆಟ್ ದರಗಳು ಗಗನಕ್ಕೇರಿವೆ. ಅಮೆರಿಕದ ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಭಾನುವಾರ (ಜುಲೈ 19) ನಡೆಯಲಿರುವ ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಈ ಮಹಾಸಮರ ಕ್ರೀಡಾ ಲೋಕದ ಅತ್ಯಂತ ದುಬಾರಿ ಈವೆಂಟ್ ಆಗಿ ಹೊರಹೊಮ್ಮಿದೆ. ಲಿಯೋನೆಲ್ ಮೆಸ್ಸಿ ಮತ್ತು ಸ್ಪೇನ್‌ನ ಉದಯೋನ್ಮುಖ ತಾರೆ ಲಾಮಿನ್ ಯಮಾಲ್ ನಡುವಿನ ಈ ಪಂದ್ಯವನ್ನು ಕಣ್ಣುಂಬಿಕೊಳ್ಳಲು ಅಭಿಮಾನಿಗಳು ಕೋಟಿ ಕೋಟಿ ಖರ್ಚು ಮಾಡಲು ಸಿದ್ಧರಾಗಿದ್ದಾರೆ. ಫಿಫಾ ಟಿಕೆಟ್​ಗಳ…

Read More

ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್‌ಗೆ ಷರತ್ತುಬದ್ಧ ಅನುಮತಿ; ಜಿಲ್ಲಾಡಳಿತದ ನಡೆಗೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ! – Kannada News | Koppal Kalyani Steels Gets Conditional Permission to Reopen Amid Controversy

ಕಲ್ಯಾಣಿ ಸ್ಟೀಲ್ಸ್‌ಗೆ ಷರತ್ತುಬದ್ಧ ಅನುಮತಿ ಕೊಪ್ಪಳ, ಜುಲೈ 18: ತಾಲೂಕಿನ ಗಿಣಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್ಸ್ ಆಂಡ್ ಪವರ್ ಲಿಮಿಟೆಡ್’ ಕಾರ್ಖಾನೆಗೆ ಕೊನೆಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಿದೆ. ಆದರೆ, ಕಾರ್ಖಾನೆ ಬಂದ್ ಮಾಡುವ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ನಡೆದುಕೊಂಡ ರೀತಿಯು ಸಾರ್ವಜನಿಕರಲ್ಲಿ ಮತ್ತು ಪರಿಸರ ಪ್ರೇಮಿಗಳಲ್ಲಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಪರಿಸರ ನಿಯಮ ಉಲ್ಲಂಘನೆ: ಏನಿದು ಹಿನ್ನೆಲೆ? ಕಲ್ಯಾಣಿ…

Read More

NEET UG 2026: ಕುರಿ ಕಾಯುತ್ತಲೇ ನೀಟ್‌ನಲ್ಲಿ ಅಪ್ರತಿಮ ಸಾಧನೆ; ದೇಶಕ್ಕೇ 694ನೇ ರ‍್ಯಾಂಕ್ ಪಡೆದ ಕೊಪ್ಪಳದ ಹಳ್ಳಿ ಹೈದ! – Kannada News | Koppal’s Puttaraj Bheemanur: Overcoming Poverty, Achieving Top NEET Rank

ಕೊಪ್ಪಳ: ಕಠಿಣ ಪರಿಶ್ರಮ ಮತ್ತು ಛಲವೊಂದಿದ್ದರೆ ಎಂತಹ ಬಡತನವೂ ಸಾಧನೆಗೆ ಅಡ್ಡಿಯಾಗಲ್ಲ ಎಂಬುದನ್ನು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಭಾನ್ವಿತ ಯುವಕನೊಬ್ಬ ಸಾಬೀತುಪಡಿಸಿದ್ದಾನೆ. ಹಗಲಲ್ಲಿ ಕುರಿ ಕಾಯುತ್ತಾ, ಸಗಣಿ ಬಳಿಯುತ್ತಾ ಕಡು ಬಡತನದಲ್ಲೇ ಓದಿದ ಈ ಹಳ್ಳಿ ಹೈದ ಪುಟ್ಟರಾಜ್ ಭೀಮನೂರ ನೀಟ್ (NEET) ಪರೀಕ್ಷೆಯಲ್ಲಿ ದೇಶಕ್ಕೇ ಅದ್ಭುತ ರ್ಯಾಂಕ್ ಪಡೆಯುವ ಮೂಲಕ ಇಡೀ ಜಿಲ್ಲೆ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ. ಕೊಪ್ಪಳ ತಾಲೂಕಿನ ನಿವಾಸಿಯಾದ ಪುಟ್ಟರಾಜ್ ಭೀಮನೂರ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದವನು. ಇವರ ತಂದೆ…

Read More

ಮೊದಲ ದಿನವೇ 480 ಕೋಟಿ ಗಳಿಸಿದ ‘ಆಡಸ್ಸಿ’, ಭಾರತದಲ್ಲಿ ಗಳಿಸ್ಸಿದ್ದೆಷ್ಟು? – Kannada News | The Odyssey movie first day collection in India and world box office

ಕ್ರಿಸ್ಟೋಫರ್ ನೋಲನ್ (christopher nolan) ನಿರ್ದೇಶನದ ‘ದಿ ಆಡಸ್ಸಿ’ (The Odyssey) ಸಿನಿಮಾ ಜುಲೈ 17ಕ್ಕೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ವಿಶ್ವದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿತ್ತು ‘ದಿ ಆಡಸ್ಸಿ’. ಈ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್ ವರ್ಷಕ್ಕೆ ಮುಂಚೆಯೇ ಮಾರಾಟವಾಗಿದ್ದವು. ಮ್ಯಾಟ್ ಡೇಮನ್, ಟಾಮ್ ಹಾಲೆಂಡ್, ಅನ್ನಾ ಹಾಥ್​​ವೇ, ಜೆಂಡೆಯಾ ಸೇರಿದಂತೆ ಇನ್ನೂ ಹಲವು ದೊಡ್ಡ ಸ್ಟಾರ್ ನಟ-ನಟಿಯರು ನಟಿಸಿದ್ದಾರೆ. ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಭಾರತದಲ್ಲೂ ಸಹ ದೊಡ್ಡ ಮೊತ್ತವನ್ನು ಗಳಿಕೆ…

Read More