ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಉಗ್ರರ ಸ್ಕೆಚ್, ಜೈಶ್ ನೆಟ್ವರ್ಕ್ ಧ್ವಂಸಗೊಳಿಸಿದ ಎಟಿಎಸ್, ಐವರ ಬಂಧನ – Kannada News | Gujarat ATS Busts Jaish Terror Plot: 13 Arrested for Pan India Bomb Blasts
ಅಹಮದಾಬಾದ್, ಜುಲೈ 18: ದೇಶಾದ್ಯಂತ ಭಾರಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸುತ್ತಿದ್ದ ಉಗ್ರ(Terrorist)ರ ಬೃಹತ್ ಜಾಲವನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಯಶಸ್ವಿಯಾಗಿ ಭೇದಿಸಿದೆ. ಗುಜರಾತ್ನ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿರುವ ಅಧಿಕಾರಿಗಳು, ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಈ ಜಾಗತಿಕ ಭಯೋತ್ಪಾದಕ ಜಾಲದಕ್ಕೆ ಸಂಬಂಧಿಸಿ ಬಂಧಿತರಾದವರ ಒಟ್ಟು ಸಂಖ್ಯೆ 13ಕ್ಕೇರಿದೆ. ಈಗಾಗಲೇ ಕಸ್ಟಡಿಯಲ್ಲಿದ್ದ ಎಂಟು ಜನ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಭ್ಯವಾದ…