ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ ತಿಳಿಯದಂತೆ ಸಮುದ್ರದ ಆಳಕ್ಕೆ ಇಳಿದಿದ್ದಾನೆ. ಅಲೆಗಳ ಅಬ್ಬರಕ್ಕೆ ಸಿಲುಕಿ ಆತ ನೀರಿನಲ್ಲಿ ಮುಳುಗುತ್ತಿರುವುದನ್ನು ತೀರದಲ್ಲಿದ್ದ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತಕ್ಷಣವೇ ಗಮನಿಸಿದ್ದಾರೆ. ಸ್ವಲ್ಪ ತಡಮಾಡಿದ್ದರೂ ಯುವಕ ಸಮುದ್ರದ ಪಾಲಾಗುತ್ತಿದ್ದನು. ಆದರೆ, ಪೊಲೀಸರು ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಕ್ಷಣವೇ ಸ್ಪೀಡ್ ಬೋಟ್ ಮೂಲಕ ಸಮುದ್ರದ ಮಧ್ಯಕ್ಕೆ ಧಾವಿಸಿದ್ದಾರೆ. ಅಲೆಗಳ ನಡುವೆಯೂ ಚಾಣಾಕ್ಷತನದಿಂದ ಬೋಟ್ ಮುನ್ನಡೆಸಿದ ಪೊಲೀಸ್ ಸಿಬ್ಬಂದಿ, ಮುಳುಗುತ್ತಿದ್ದ ಯುವಕನನ್ನು ಸುರಕ್ಷಿತವಾಗಿ ನೀರಿನಿಂದ ಮೇಲೆತ್ತಿ ಬೋಟ್ ಒಳಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಸಮುದ್ರದ ಮಧ್ಯದಿಂದ ಸುರಕ್ಷಿತವಾಗಿ ದಡಕ್ಕೆ ತಂದು ಬಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ – Kannada News | 7.4 Magnitude Earthquake strikes Mexico Tsunami Warning Issued

ಮೆಕ್ಸಿಕೋ, ಜುಲೈ 17: ದಕ್ಷಿಣ ಮೆಕ್ಸಿಕೋದಲ್ಲಿ ರಿಕ್ಟರ್ ಮಾಪಕದಲ್ಲಿ 7.4ರಷ್ಟು ಭೀಕರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ (Earthquake) ಬೆನ್ನಲ್ಲೇ ಸಮುದ್ರ ತೀರದ ಪ್ರದೇಶಗಳಲ್ಲಿ ಭಾರಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸುನಾಮಿ ಅಲೆಯ ಮುನ್ನೆಚ್ಚರಿಕೆಯನ್ನು ಘೋಷಿಸಿದ್ದಾರೆ. ದಕ್ಷಿಣ ಮೆಕ್ಸಿಕೋದ ಪೆಸಿಫಿಕ್ ಕರಾವಳಿ ಪ್ರದೇಶದಲ್ಲಿ ಈ ಭೂಕಂಪ ದಾಖಲಾಗಿದೆ. ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ ಇದರ ಕೇಂದ್ರಬಿಂದುವಿನಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ಮೆಕ್ಸಿಕೋ ಸಿಟಿಯಲ್ಲೂ ಕಟ್ಟಡಗಳು ಅಲುಗಾಡಿವೆ. ಇದರಿಂದಾಗಿ ಜನರು ಭಯದಿಂದ ರಸ್ತೆಗಳಿಗೆ ಓಡಿ ಹೋಗಿದ್ದಾರೆ.

ಭೂಕಂಪದ ತೀವ್ರತೆಯು 7ಕ್ಕಿಂತ ಹೆಚ್ಚಿರುವುದರಿಂದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಸಮುದ್ರ ತೀರದ ಪ್ರದೇಶಗಳಿಗೆ ತುರ್ತು ಸೂಚನೆ ನೀಡಿದೆ. ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು 1,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಕರಾವಳಿ ತೀರಗಳಿಗೆ ಅಪಾಯಕಾರಿ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ. ಸಮುದ್ರದ ಅಲೆಗಳು ಸಾಮಾನ್ಯಕ್ಕಿಂತ ಹಲವಾರು ಅಡಿಗಳಷ್ಟು ಎತ್ತರಕ್ಕೆ ಏರಬಲ್ಲವು ಎಂದು ಮುನ್ಸೂಚನೆ ನೀಡಲಾಗಿದೆ. ಭೂಕಂಪ ಪೀಡಿತ ದಕ್ಷಿಣದ ಪ್ರಾಂತ್ಯಗಳಲ್ಲಿ ಹಲವು ಹಳೆಯ ಕಟ್ಟಡಗಳು, ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಕೆಲವು ಕಡೆಗಳಲ್ಲಿ ಭೂಕುಸಿತಗಳು ಉಂಟಾಗಿ ಸಂಚಾರ ಕಡಿತಗೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ ಉಪಮುಖ್ಯಮಂತ್ರಿಗಳಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ.

ಹಾಜರಾತಿಯಲ್ಲಿ ವಿನಾಯಿತಿ

ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ಶೇ.15 ರಷ್ಟು ವಿನಾಯಿತಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶೇ.25 ರಷ್ಟು ವಿನಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ಕ್ರೀಡಾಪಟುಗಳು ತಮ್ಮ ಶೈಕ್ಷಣಿಕ ಅನ್ವೇಷಣೆಗಳನ್ನು ತಮ್ಮ ಕ್ರೀಡಾ ಬದ್ಧತೆಗಳೊಂದಿಗೆ ಸಮತೋಲನಗೊಳಿಸಲು ಸಹಾಯ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಈ ನಿರ್ಧಾರವು ಪ್ರತಿಭಾನ್ವಿತ ಕ್ರೀಡಾಪಟುಗಳು ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ರಾಜಿ ಮಾಡಿಕೊಳ್ಳದೆ ಉತ್ತಮ ಸಾಧನೆ ಮಾಡಲು ಅನುವು ಮಾಡಿಕೊಡುತ್ತದೆ.

ಮೀಸಲಾತಿ ಜೊತೆಗೆ ಪ್ರೋತ್ಸಾಹ ಧನ

ಹಾಗೆಯೇ ಸರ್ಕಾರಿ ಸೇವೆಗಳಿಗೆ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿ ಮತ್ತು ಪೊಲೀಸ್ ಮತ್ತು ಅರಣ್ಯ ಇಲಾಖೆಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಸ್ವಾಗತಿಸಿದೆ. ಈ ಕ್ರಮಗಳು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ ಮತ್ತು ಹೆಚ್ಚಿನ ಯುವಕರು ಕ್ರೀಡೆಗಳನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತವೆ. ಇದಲ್ಲದೆ, ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕದ ಪ್ರತಿ ಕ್ರೀಡಾಪಟುವಿಗೆ 5 ಲಕ್ಷ ನಗದು ಪ್ರೋತ್ಸಾಹ ಧನ ಘೋಷಣೆಯು ಪ್ರತಿಷ್ಠಿತ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಶ್ಲಾಘನೀಯ ಮನ್ನಣೆಯಾಗಿದೆ. ಈ ಪ್ರೋತ್ಸಾಹಧನವು ಶ್ರೇಷ್ಠತೆಗಾಗಿ ಶ್ರಮಿಸುವ ಕ್ರೀಡಾಪಟುಗಳಿಗೆ ಬಲವಾದ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತದೆ.

ಕರ್ನಾಟಕದ ಇಡೀ ಕ್ರೀಡಾ ಸಮುದಾಯದ ಪರವಾಗಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉಪಮುಖ್ಯಮಂತ್ರಿಗಳ ದೂರದೃಷ್ಟಿಯ ನಾಯಕತ್ವ ಮತ್ತು ಕ್ರೀಡೆಯ ಅಭಿವೃದ್ಧಿಗೆ ಅಚಲವಾದ ಬದ್ಧತೆಗಾಗಿ ತನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ. ಈ ಮಹತ್ವದ ತೀರ್ಮಾನಗಳು ಕರ್ನಾಟಕದಲ್ಲಿ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಲು ಭವಿಷ್ಯದ ಪೀಳಿಗೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:56 pm, Fri, 17 July 26

Source link

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ ಉಪಮುಖ್ಯಮಂತ್ರಿಗಳಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ.

ಹಾಜರಾತಿಯಲ್ಲಿ ವಿನಾಯಿತಿ

ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ಶೇ.15 ರಷ್ಟು ವಿನಾಯಿತಿ ಮತ್ತು ಕರ್ನಾಟಕದ ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25 ರಷ್ಟು ವಿನಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ಕ್ರೀಡಾಪಟುಗಳು ತಮ್ಮ ಶೈಕ್ಷಣಿಕ ಅನ್ವೇಷಣೆಗಳನ್ನು ತಮ್ಮ ಕ್ರೀಡಾ ಬದ್ಧತೆಗಳೊಂದಿಗೆ ಸಮತೋಲನಗೊಳಿಸಲು ಸಹಾಯ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಈ ನಿರ್ಧಾರವು ಪ್ರತಿಭಾನ್ವಿತ ಕ್ರೀಡಾಪಟುಗಳು ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ರಾಜಿ ಮಾಡಿಕೊಳ್ಳದೆ ಉತ್ತಮ ಸಾಧನೆ ಮಾಡಲು ಅನುವು ಮಾಡಿಕೊಡುತ್ತದೆ.

ಮೀಸಲಾತಿ ಜೊತೆಗೆ ಪ್ರೋತ್ಸಾಹ ಧನ

ಹಾಗೆಯೇ ಸರ್ಕಾರಿ ಸೇವೆಗಳಿಗೆ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿ ಮತ್ತು ಪೊಲೀಸ್ ಮತ್ತು ಅರಣ್ಯ ಇಲಾಖೆಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಸ್ವಾಗತಿಸಿದೆ. ಈ ಕ್ರಮಗಳು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ ಮತ್ತು ಹೆಚ್ಚಿನ ಯುವಕರು ಕ್ರೀಡೆಗಳನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತವೆ. ಇದಲ್ಲದೆ, ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕದ ಪ್ರತಿ ಕ್ರೀಡಾಪಟುವಿಗೆ 5 ಲಕ್ಷ ನಗದು ಪ್ರೋತ್ಸಾಹ ಧನ ಘೋಷಣೆಯು ಪ್ರತಿಷ್ಠಿತ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಶ್ಲಾಘನೀಯ ಮನ್ನಣೆಯಾಗಿದೆ. ಈ ಪ್ರೋತ್ಸಾಹಧನವು ಶ್ರೇಷ್ಠತೆಗಾಗಿ ಶ್ರಮಿಸುವ ಕ್ರೀಡಾಪಟುಗಳಿಗೆ ಬಲವಾದ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತದೆ.

ಕರ್ನಾಟಕದ ಇಡೀ ಕ್ರೀಡಾ ಸಮುದಾಯದ ಪರವಾಗಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉಪಮುಖ್ಯಮಂತ್ರಿಗಳ ದೂರದೃಷ್ಟಿಯ ನಾಯಕತ್ವ ಮತ್ತು ಕ್ರೀಡೆಯ ಅಭಿವೃದ್ಧಿಗೆ ಅಚಲವಾದ ಬದ್ಧತೆಗಾಗಿ ತನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ. ಈ ಮಹತ್ವದ ತೀರ್ಮಾನಗಳು ಕರ್ನಾಟಕದಲ್ಲಿ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಲು ಭವಿಷ್ಯದ ಪೀಳಿಗೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಬಳಿ ಕಣ್ಣೀರು ಹಾಕಿದ ದೇವೇಗೌಡ; ಇನ್ನು ಆ ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ – Kannada News | Deve Gowda’s Wife Chennamma’s Health Critical; Family Prays at Bengaluru Manipal

ದೇವೇಗೌಡರ ಪತ್ನಿ,ಕುಮಾರಸ್ವಾಮಿ ಕಣ್ಣೀರು

ಬೆಂಗಳೂರು, ಜು.17 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿ ಹೊರಬಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಗದ್ಗದಿತರಾಗಿ ಕಣ್ಣೀರು ಹಾಕಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಲೇ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು ತಾಯಿಯ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

“ಮೊನ್ನೆ ದಿನ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ತಾಯಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದೆವು. ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರಿಗೆ ಅತ್ಯಂತ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ವೈದ್ಯರು ತಮ್ಮ ಕೈಮೀರಿ ಪ್ರಯತ್ನ ಮಾಡಿದ್ದಾರೆ. ಈಗ ಆ ದೇವರೇ ಅವರನ್ನು ಕಾಪಾಡಬೇಕು” ಎಂದು ಭಾವುಕರಾಗಿ ಹೇಳಿದರು.

ಇಲ್ಲಿದೆ ನೋಡಿ ವಿಡಿಯೋ:

25 ವರ್ಷಗಳ ಹಿಂದೆ ತಾಯಿಯವರ ಮೇಲೆ ಆ್ಯಸಿಡ್ ದಾಳಿ ಆದಾಗಲೂ ಅವರು ಬದುಕುವುದಿಲ್ಲ ಎಂದಿದ್ದರು. ಆದರೆ ಆಗ ದೇವರ ಪೂಜೆಯಿಂದಾಗಿ ಅವರು ಪಾರಾಗಿದ್ದರು. ಅವರು ಮೊದಲಿನಿಂದಲೂ ಆ ದೇವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಈಗ ವೈದ್ಯಕೀಯ ಚಿಕಿತ್ಸೆಗಿಂತಲೂ ಆ ರಾಜರಾಜೇಶ್ವರಿ ತಾಯಿಯೇ ಅವರನ್ನು ಕಾಪಾಡಬೇಕು. ಹಿಂದೆಯೂ ಕಾಪಾಡಿದ್ದರು, ಈಗಲೂ ಯಾವುದೇ ಸಮಸ್ಯೆ ಇಲ್ಲದೆ ಗುಣಮುಖರಾಗಿ ಮನೆಗೆ ಬರುತ್ತಾರೆ ಎಂಬ ನಂಬಿಕೆ ನಮಗಿದೆ” ಎಂದು ಗದ್ಗದಿತರಾದರು.

ಇದನ್ನೂ ಓದಿ: ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

ಇದೇ ವೇಳೆ ಮಣಿಪಾಲ್ ಆಸ್ಪತ್ರೆಯ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. “ಚೆನ್ನಮ್ಮನಿಗೆ ಬುಧವಾರದಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.””ಉಸಿರಾಟದ ಸಮಸ್ಯೆ ಹೊರತುಪಡಿಸಿ ಸದ್ಯಕ್ಕೆ ಬೇರೆ ಯಾವುದೇ ದೊಡ್ಡ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ, ನೋಡೋಣ. ನನಗೆ ಇಂದು ಡಯಾಲಿಸಿಸ್ ಮಾಡಲಾಗಿದೆ, ಹಾಗಾಗಿ ನಾನು ಈಗ ಮನೆಗೆ ಹೋಗಬೇಕು” ಎಂದು ದೇವೇಗೌಡರು ಹೇಳಿದ್ದಾರೆ. ದೊಡ್ಡಗೌಡರ ಇಡೀ ಕುಟುಂಬವೇ ಸದ್ಯ ಆಸ್ಪತ್ರೆಯ ಬಳಿ ಮೊಕ್ಕಾಂ ಹೂಡಿದ್ದು, ಇಡೀ ನಾಡಿನಾದ್ಯಂತ ಚೆನ್ನಮ್ಮ ಅವರು ಬೇಗ ಗುಣಮುಖರಾಗಲಿ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

China Landslide: ಚೀನಾದಲ್ಲಿ ಭೀಕರ ಭೂಕುಸಿತ; 8 ಜನ ಸಾವು, 34 ಮಂದಿ ನಾಪತ್ತೆ – Kannada News | 8 people dead 34 injured in China’s Chongqing landslide

ಬೀಜಿಂಗ್, ಜುಲೈ 17: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ (Landslide) 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಟ್ಟದ ಒಂದು ದೊಡ್ಡ ಭಾಗ ಕುಸಿದು ಕೆಳಗಿದ್ದ ವಸತಿ ಪ್ರದೇಶಗಳು ಮತ್ತು ಮನೆಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಹಲವು ಮನೆಗಳು ಮಣ್ಣಿನ ಅಡಿಯಲ್ಲಿ ಸಂಪೂರ್ಣವಾಗಿ ಹೂತುಹೋಗಿವೆ.

ಈ ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಚೀನಾ ಸರ್ಕಾರವು ನೂರಾರು ರಕ್ಷಣಾ ಸಿಬ್ಬಂದಿ, ಮಿಲಿಟರಿ ಪಡೆಗಳು ಮತ್ತು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ರವಾನಿಸಿದೆ. ಕುಸಿದು ಬಿದ್ದಿರುವ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಗಳನ್ನು ಸರಿಸಲು ಬುಲ್ಡೋಜರ್‌ಗಳು ಹಾಗೂ ಆಧುನಿಕ ಯಂತ್ರಗಳನ್ನು ಬಳಸಲಾಗುತ್ತಿದೆ. ಮಣ್ಣಿನ ಅಡಿಯಲ್ಲಿ ಇನ್ನೂ ಅನೇಕರು ಸಿಲುಕಿರುವ ಅನುಮಾನ ಇರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ, ರಕ್ಷಣಾ ಕಾರ್ಯಾಚರಣೆ ತೀವ್ರ, ಮೂವರು ಸಾವು, ಐವರು ನಾಪತ್ತೆ

ರಸ್ತೆ ಸಂಪರ್ಕ ಕಡಿತ:

ಈ ದುರಂತ ಸಂಭವಿಸಿದ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮತ್ತಷ್ಟು ಅನಾಹುತಗಳು ಸಂಭವಿಸದಂತೆ ತಡೆಯಲು ನೀರು, ವಿದ್ಯುತ್ ಮತ್ತು ಗ್ಯಾಸ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಹಲವು ವಿದ್ಯುತ್ ಕಂಬಗಳು ಮಣ್ಣಿನಡಿ ಸಿಲುಕಿದ್ದರಿಂದ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮಣ್ಣಿನಡಿ ಸಿಲುಕಿದ್ದ 18 ಜನರನ್ನು ರಕ್ಷಿಸಲಾಗಿದ್ದರೂ, ಅವರಲ್ಲಿ 8 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ 10 ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ.

ನಾಪತ್ತೆಯಾದವರ ಹುಡುಕಾಟ:

ನಾಪತ್ತೆಯಾಗಿರುವ 34ಕ್ಕೂ ಹೆಚ್ಚು ಜನರನ್ನು ಹುಡುಕಲು ಶ್ವಾನ ದಳ ಹಾಗೂ ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಈ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮತ್ತಷ್ಟು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಮಣ್ಣು ಸಡಿಲಗೊಂಡಿರುವುದರಿಂದ ಮತ್ತಷ್ಟು ಭೂಕುಸಿತ ಸಂಭವಿಸುವ ಅಪಾಯವಿದ್ದು, ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಇದನ್ನೂ ಓದಿ: ಜಾಗತಿಕ ರಾಜಕೀಯ ತಲ್ಲಣ: 220 ಮಿಲಿಯನ್ ಅಮೆರಿಕನ್ನರ ವೋಟರ್ ಡೇಟಾ ಚೀನಾ ಪಾಲು, ಶ್ವೇತಭವನದಿಂದ ಟ್ರಂಪ್ ಬಾಂಬ್

ಉಜಿಹಾಂಗ್ ನದಿಯ ಸಮೀಪವಿರುವ ಪರ್ವತ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಕೇವಲ 2 ವಾರಗಳ ಹಿಂದಷ್ಟೇ ಚೀನಾದ ವಾಯುವ್ಯ ಗನ್ಸು ಪ್ರಾಂತ್ಯದಲ್ಲಿ ನಡೆದ ಭೂಕುಸಿತದಲ್ಲಿ 21 ಜನರು ಸಾವನ್ನಪ್ಪಿದ್ದರು. ಈಗ ಚಾಂಗ್‌ಕಿಂಗ್‌ನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿರುವುದು ಅಲ್ಲಿನ ಜನರಲ್ಲಿ ಆತಂಕ ಮೂಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ರೋಹಿತ್ ವಿದಾಯ ಖಚಿತ; ಲಂಡನ್​ಗೆ ಆಗಮನಿಸಿದ ಹಿಟ್​ಮ್ಯಾನ್ ಪೋಷಕರು – Kannada News | Team India Ex Captain Rohit Sharma’s ODI Farewell at Lord’s? Parents Arrive!

ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರುಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ (Rohit Sharma) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಸಿದೆ. ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಪಂದ್ಯವು ರೋಹಿತ್ ಶರ್ಮಾ ಅವರ ಏಕದಿನ ವೃತ್ತಿಜೀವನದ ಕೊನೆಯ ಪಂದ್ಯವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಮಗನ ಕೊನೆಯ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕಣ್ತುಂಬಿಕೊಳ್ಳಲು ರೋಹಿತ್ ಅವರ ಪೋಷಕರಾದ ಗುರುನಾಥ್ ಶರ್ಮಾ ಮತ್ತು ಪೂರ್ಣಿಮಾ ಶರ್ಮಾ ಲಂಡನ್‌ಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್

ಮಾಧ್ಯಮ ವರದಿಗಳ ಪ್ರಕಾರ, ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಕಳೆದ ವಾರ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಿ ಟೀಂ ಇಂಡಿಯಾದ ದೀರ್ಘಕಾಲೀನ ಯೋಜನೆಗಳ ಕುರಿತು ಚರ್ಚಿಸಿದ್ದಾರೆ. ಅದರಂತೆ 2027 ರ ಏಕದಿನ ವಿಶ್ವಕಪ್‌ಗೆ ರೋಹಿತ್ ಅವರನ್ನು ಪರಿಗಣಿಸುತ್ತಿಲ್ಲ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಕೊನೆಯ ಅಂತರರಾಷ್ಟ್ರೀಯ ಸರಣಿಯಾಗಿರಬಹುದು ಎಂದು ಆಯ್ಕೆದಾರರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಆಯ್ಕೆ ಸಮಿತಿಯು ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನು ಭವಿಷ್ಯದ ಆರಂಭಿಕ ಆಟಗಾರನಾಗಿ ಆಡಿಸಲು ಯೋಜನೆ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯವೇ ಎಂಬುದರ ಕುರಿತು ಇನ್ನೂ ಯಾವುದೇ ಘೋಷಣೆಯಾಗಿಲ್ಲ, ಅಥವಾ ಬಿಸಿಸಿಐ ಕೂಡ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಅಫ್ಘನ್ ಸರಣಿಯಲ್ಲೇ ನಿರ್ಧಾರವಾಗಬೇಕಿತ್ತು

ವರದಿಗಳ ಪ್ರಕಾರ, ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿ ರೋಹಿತ್ ಅವರ ಕೊನೆಯ ಪಂದ್ಯವಾಗಬೇಕಿತ್ತು, ಆದರೆ ಆ ಸರಣಿಯಲ್ಲಿ ಅರ್ಧಶತಕ ಬಾರಿಸಿದ್ದರಿಂದ ಆಯ್ಕೆದಾರರು ಈ ನಿರ್ಧಾರವನ್ನು ಮುಂದೂಡಿದರು. ಆದಾಗ್ಯೂ, ಇಂಗ್ಲೆಂಡ್ ವಿರುದ್ಧದ ಪ್ರಸ್ತುತ ಸರಣಿಯಲ್ಲಿ ರೋಹಿತ್ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ 11 ರನ್ ಗಳಿಸಿದ್ದ ರೋಹಿತ್ ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ 47 ಎಸೆತಗಳಲ್ಲಿ ಕೇವಲ 26 ರನ್ ಗಳಿಸಿದ್ದರು. ರೋಹಿತ್ ಅವರ ಈ ಪ್ರದರ್ಶನ ಆಯ್ಕೆದಾರರನ್ನು ಈ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ.

ರೋಹಿತ್ ಶರ್ಮಾ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ?

ಈಗಾಗಲೇ ಎರಡು ಸ್ವರೂಪಗಳಿಗೆ ವಿದಾಯ

ರೋಹಿತ್ ಶರ್ಮಾ ಈಗಾಗಲೇ ಅಂತರರಾಷ್ಟ್ರೀಯ ಕ್ರಿಕೆಟ್‌ನ ಎರಡು ಸ್ವರೂಪಗಳಿಂದ ನಿವೃತ್ತರಾಗಿದ್ದಾರೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಭಾರತವನ್ನು ಟಿ20 ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಬಳಿಕ ಜೂನ್ 29, 2024 ರಂದು ರೋಹಿತ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ತರುವಾಯ, ಮೇ 2025 ರಲ್ಲಿ, ಅವರು ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಈಗ, ಲಾರ್ಡ್ಸ್‌ನಲ್ಲಿ, ಅವರು ತಮ್ಮ 50-ಓವರ್‌ಗಳ ಸ್ವರೂಪದ ವೃತ್ತಿಜೀವನವನ್ನು ಸಹ ಕೊನೆಗೊಳಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್ – Kannada News | Opposition Leader R. Ashok Visits Channamma, HD Kumaraswamys Mother

ಬೆಂಗಳೂರು. ಜು.17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆರ್. ಅಶೋಕ್ ಅವರು ಜೆಡಿ(ಎಸ್) ವರಿಷ್ಠರ ಕುಟುಂಬದ ಹಿರಿಯ ಸದಸ್ಯೆಯಾದ ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಅವರ ಆರೋಗ್ಯ ವಿಚಾರಿಸಲು ತೆರಳಿದರು. ಈ ಸಂದರ್ಭದಲ್ಲಿ ಅವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜಕೀಯ ನಾಯಕರ ನಡುವೆ ಸೌಜನ್ಯಯುತ ಭೇಟಿಗಳು ನಡೆಯುವುದು ಸಹಜ.ಭೇಟಿ ಮಾಡಿದ ನಂತರ ಮಾಧ್ಯಮಗಳ ಮುಂದೆ ಆರ್​​​. ಅಶೋಕ್ ಮಾತನಾಡಿದ್ದಾರೆ. ಚೆನ್ನಮ್ಮನವರ ಆರೋಗ್ಯ ನಿನ್ನೆಗಿಂತ ಇಂದು ಸುಧಾರಿಸಿದೆ.ಚೆನ್ನಮ್ಮನವರ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೇನೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್-ಅಮೆರಿಕ ಯುದ್ಧ: ಬೆಂಗಳೂರಲ್ಲಿ ಚಿನ್ನದ ವ್ಯಾಪಾರ ಕುಸಿತ; ಎಕ್ಸ್‌ಚೇಂಜ್‌ಗೆ ಮುಂದಾದ ಜನರು – Kannada News | Iran US Conflict Hits Bengaluru Gold Trade; More People Opt to Exchange Gold Instead of Buying

ಬೆಂಗಳೂರು, ಜುಲೈ 17: ದೂರದ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ತೀವ್ರ ಪ್ರಭಾವ ಭಾರತದ ಮೇಲೂ ಬೀರಿದೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ತೈಲ ಬಿಕ್ಕಟ್ಟು ಹಾಗೂ ಆರ್ಥಿಕ ಹಿನ್ನಡೆ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಯನ್ನು ಕಾಪಾಡುವ ಮತ್ತು ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಾರ್ವಜನಿಕರು ಮುಂದಿನ ಒಂದು ವರ್ಷಗಳ ಕಾಲ ಹೊಸ ಚಿನ್ನವನ್ನು ಖರೀದಿ (Gold) ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದು, ನಗರದಲ್ಲಿ ಬಂಗಾರದ ವ್ಯಾಪಾರವು ಅರ್ಧದಷ್ಟು ಕುಸಿದಿದೆ ಎಂದು ಜ್ಯುವೆಲರ್ಸ್ ಅಸೋಸಿಯೇಷನ್ ಕಳವಳ ವ್ಯಕ್ತಪಡಿಸಿದೆ.

ಬೆಲೆ ಇಳಿಕೆಯಾದರೂ ಖರೀದಿಗೆ ಹಿಂದೇಟು: ಎಕ್ಸ್‌ಚೇಂಜ್‌ಗೆ ಒಲವು

ಯುದ್ಧದ ಮಾರುಕಟ್ಟೆ ಏರುಪೇರುಗಳಿಂದಾಗಿ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡುಬರುತ್ತಿದ್ದರೂ ಸಹ, ಸಿಟಿ ಜನತೆ ಮಾತ್ರ ಹೊಸ ಚಿನ್ನ ಖರೀದಿಗೆ ಮುಂದಾಗುತ್ತಿಲ್ಲ. ಬಂಗಾರದ ಅಂಗಡಿಗಳಿಗೆ ಬರುವ ಗ್ರಾಹಕರ ಸಂಖ್ಯೆ ಶೇಕಡಾ 40 ರಿಂದ 50 ರಷ್ಟು ಕಮ್ಮಿಯಾಗಿದ್ದು, ವ್ಯಾಪಾರಸ್ಥರು ತೀವ್ರ ನಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು?

ಪ್ರಸ್ತುತ ಸಾರ್ವಜನಿಕರು ಹೊಸ ಚಿನ್ನವನ್ನು ಕೊಳ್ಳುವ ಬದಲು, ತಮ್ಮ ಬಳಿ ಇರುವ ಹಳೆಯ ಆಭರಣಗಳನ್ನು ನೀಡಿ ಹೊಸ ಗೋಲ್ಡ್ ಎಕ್ಸ್‌ಚೇಂಜ್ ಮಾಡಿಕೊಳ್ಳುವತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ರಾಜ್ಯ ಜ್ಯುವೆಲರ್ಸ್ ಅಸೋಸಿಯೇಷನ್ ಖಜಾಂಚಿ ರವಿಕುಮಾರ್​ ಮಾಹಿತಿ ನೀಡಿದ್ದಾರೆ.

ಬಂಗಾರದ ಮೇಲೆ ಹೂಡಿಕೆಯೂ ಕುಸಿತ

ಸಾಮಾನ್ಯವಾಗಿ ಚಿನ್ನದ ಬೆಲೆ ಇಳಿಕೆಯಾದಾಗ ಜನಸಾಮಾನ್ಯರು ಆಭರಣಗಳನ್ನು ಹಾಗೂ ಹೂಡಿಕೆದಾರರು ಇನ್ವೆಸ್ಟ್‌ಮೆಂಟ್ ಹೆಸರಿನಲ್ಲಿ ಚಿನ್ನದ ನಾಣ್ಯ ಹಾಗೂ ಬಿಸ್ಕೆಟ್‌ಗಳನ್ನು ಮುಗಿಬಿದ್ದು ಖರೀದಿಸುತ್ತಿದ್ದರು. ಆದರೆ ಪ್ರಸಕ್ತ ಆರ್ಥಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡುವವರ ಪ್ರಮಾಣದಲ್ಲಿ ಶೇಕಡಾ 80 ರಷ್ಟು ಕುಸಿತ ಕಂಡುಬಂದಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ

ಆರ್ಥಿಕತೆಯನ್ನು ರಕ್ಷಿಸುವ ಕರೆಗೆ ಸಾರ್ವಜನಿಕರು ಕಿವಿಕೊಟ್ಟಿರುವುದು ದೇಶದ ದೃಷ್ಟಿಯಿಂದ ಧನಾತ್ಮಕವಾಗಿದ್ದರೂ, ಇತ್ತ ಚಿನ್ನದ ಆಭರಣ ವ್ಯಾಪಾರಿಗಳಿಗೆ ಮಾತ್ರ ಇದು ದೊಡ್ಡ ಮಟ್ಟದ ಆರ್ಥಿಕ ಹೊಡೆತ ನೀಡುತ್ತಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರೋಹಿತ್ ಶರ್ಮಾ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ? – Kannada News | IND vs ENG Final ODI: Lord’s Showdown and Live Streaming Details

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಏಕೆಂದರೆ ಎರಡೂ ತಂಡಗಳು ಇದುವರೆಗೆ ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಸಿಗಲಿದೆ. ಇದರ ಜೊತೆಗೆ ಈ ಪಂದ್ಯದ ಗೆಲುವು ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಏಕೆಂದರೆ ವರ್ಷಗಳ ಕಾಲ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿ ತಂಡಕ್ಕೆ ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾಗೆ (Rohit Sharma) ಇದು ಕೊನೆಯ ಅಂತರರಾಷ್ಟ್ರೀಯ ಪಂದ್ಯ ಎನ್ನಲಾಗುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್​ಗೆ ವಿದಾಯ ಹೇಳಲು ಟೀಂ ಇಂಡಿಯಾ ತಯಾರಿ ನಡೆಸಿದೆ. ಹೀಗಾಗಿ ಈ ಪಂದ್ಯದ ಪೂರ್ಣ ವಿವರವನ್ನು ನಾವು ನಿಮಗೆ ನೀಡಲಿದ್ದೇವೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಜುಲೈ 18 ರಂದು ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಡಿಜಿಟಲ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಸೌಲಭ್ಯವನ್ನು ನೀಡುತ್ತದೆ.

ಉಭಯ ತಂಡಗಳು

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version