ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಆನೇಕಲ್, ಮಾರ್ಚ್ 16: ಬೆಂಗಳೂರಿನ ಸಮೀಪದ ಬನ್ನೇರುಘಟ್ಟ ಮೃಗಾಲಯದಲ್ಲಿ (Bannerghatta Biological Park) ಹೊಸ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉದ್ಯಾನವನದಲ್ಲಿರುವ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತೋಷ ಮೂಡಿಸಿದೆ. ಉದ್ಯಾನವನದಲ್ಲಿರುವ ಕೋಕಿಲ ಎಂಬ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಕಾವೇರಿ ಎಂಬ ಮತ್ತೊಂದು ಜೀಬ್ರಾ ಕೂಡ ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಜೀಬ್ರಾಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಉದ್ಯಾನವನದಲ್ಲಿರುವ…