ಬುಲೆಟ್ ರೈಲು ಕಾರಿಡಾರ್ ವೇಗದ ಪ್ರಗತಿ; ಜಪಾನ್ನಿಂದ ಇ10 ಬರುವಷ್ಟರಲ್ಲೇ ಭಾರತ ನಿರ್ಮಿತ ಟ್ರೈನ್ ಬಳಕೆಗೆ ನಿರ್ಧಾರ – Kannada News | Mumbai Ahmedabad bullet train may start fast, as India and Japan agree to begin with Indian made trainsets
ನವದೆಹಲಿ, ಜುಲೈ 17: ಭಾರತದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು (MAHSR) ಯೋಜನೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಜಂಟಿ ನಿರ್ಧಾರವೊಂದನ್ನು ಭಾರತ ಮತ್ತು ಜಪಾನ್ ಸರ್ಕಾರಗಳು ಕೈಗೊಂಡಿವೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಜಪಾನ್‌ನೊಂದಿಗಿನ ದ್ವಿಪಕ್ಷೀಯ ಮಾತುಕತೆಗಳು ಅತ್ಯಂತ ಯಶಸ್ವಿಯಾಗಿ ಮುನ್ನಡೆದಿದ್ದು, ದೇಶದ ಮೊದಲ ಬುಲೆಟ್ ರೈಲನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಓಡಿಸಲು ಇತ್ತೀಚಿನ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿವೆ. ಮೊದಲ ಹಂತದ ಕಾರಿಡಾರ್ 2027 ರಲ್ಲೇ ಮುಕ್ತಾಯ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್…