ಸೋತು ಸೋತು ಭಾರತದ ಪಾಲಿಗೆ ವಿಶ್ವ ದಾಖಲೆಯಾದ ಪಾಕಿಸ್ತಾನ್
ಬಹುನಿರೀಕ್ಷಿತ ಪಂದ್ಯದಲ್ಲಿ ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಅದು ಕೂಡ ಬರೋಬ್ಬರಿ 61 ರನ್ಗಳ ಅಂತರದಿಂದ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (77) ಸ್ಫೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಆರಂಭದ ನೆರವಿನೊಂದಿಗೆ ಭಾರತ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಮೂಲಕ…