ಕೊಲೆಯ ಭೀತಿಯಿದೆ, ತಾಯ್ನಾಡಲ್ಲೇ ಸಾಯುತ್ತೇನೆ; ಬಾಂಗ್ಲಾದೇಶಕ್ಕೆ ಹೋಗುತ್ತೇನೆಂದ ಶೇಖ್ ಹಸೀನಾ – Kannada News | They might kill me Former PM Sheikh Hasina says she will return to Bangladesh in December

ನವದೆಹಲಿ, ಜುಲೈ 10: ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿಯಿಂದ ಮರಣದಂಡನೆ ಶಿಕ್ಷೆಗೆ ಒಳಗಾಗಿ ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಮುಂಬರುವ ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಿ ನ್ಯಾಯಾಲಯದ ಮುಂದೆ ಶರಣಾಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ‘ರಾಯಿಟರ್ಸ್’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ 78 ವರ್ಷದ ಶೇಖ್ ಹಸೀನಾ, “ನಾನು ಬಾಂಗ್ಲಾದೇಶಕ್ಕೆ ಮರಳಿದ ತಕ್ಷಣ ಅವರು ನನ್ನನ್ನು ಬಂಧಿಸಬಹುದು, ಅಥವಾ ಕೊಲ್ಲಲೂಬಹುದು. ಆದರೂ ನಾನು ಹೋಗಲೇಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: “ನಾನು ಈ ವರ್ಷವೇ ನನ್ನ ದೇಶಕ್ಕೆ ಮರಳುತ್ತೇನೆ”; ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ

ಕಾರ್ಯಕರ್ತರ ಮೇಲಿನ ದೌರ್ಜನ್ಯ:

ನಮ್ಮ ‘ಅವಾಮಿ ಲೀಗ್’ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ತಾಯ್ನಾಡಿನಲ್ಲಿ ತೀವ್ರ ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ. ಅವರ ಪರವಾಗಿ ನಿಲ್ಲಲು ನಾನೂ ಶರಣಾಗುತ್ತೇನೆ ಎಂದು ಅವರು ಹೇಳಿದ್ದಾರೆ. “ಸಾವು ಬರುವುದಾದರೆ ಅದು ನನ್ನ ಸ್ವಂತ ಮಣ್ಣಿನಲ್ಲೇ ಬರಲಿ. ಎಲ್ಲಿ ನನ್ನ ಪೋಷಕರಾದ ಬಾಂಗ್ಲಾದೇಶದ ಸಂಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರನ್ನು ದಫನ ಮಾಡಲಾಗಿದೆಯೋ, ಎಲ್ಲಿ ಅವರ ರಕ್ತ ಹರಿದಿದೆಯೋ ಅಲ್ಲೇ ನನಗೂ ಸಾವು ಬರಲಿ” ಎಂದು ಅವರು ಭಾವುಕರಾಗಿದ್ದಾರೆ.

ತಮ್ಮ ಮೇಲಿನ ಪ್ರಕರಣಗಳು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿವೆ ಎಂದು ಶೇಖ್ ಹಸೀನಾ ಹೇಳಿದ್ದಾರೆ. ಒಮ್ಮೆ ಕಾನೂನು ಪ್ರಕ್ರಿಯೆ ಆರಂಭವಾದರೆ, ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ನ್ಯಾಯಾಲಯಗಳು ಎಷ್ಟು ಏಕಪಕ್ಷೀಯವಾಗಿ ಕೆಲಸ ಮಾಡುತ್ತಿವೆ ಎಂಬುದು ಜಗತ್ತಿಗೆ ತಿಳಿಯಲಿದೆ. ಅದನ್ನು ಸಾಬೀತುಪಡಿಸುವುದಕ್ಕಾಗಿಯೇ ನಾನು ಸ್ವಯಂಪ್ರೇರಿತರಾಗಿ ನ್ಯಾಯಾಲಯದ ಮುಂದೆ ಹಾಜರಾಗುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದ ಚುನಾವಣೆಯನ್ನು ರದ್ದುಗೊಳಿಸಿ; ಮಾಜಿ ಪ್ರಧಾನಿ ಶೇಖ್ ಹಸೀನಾ ಒತ್ತಾಯ

ಇದೇ ವೇಳೆ ತಮ್ಮ 20 ವರ್ಷಗಳ ಸುದೀರ್ಘ ಆಡಳಿತಾವಧಿಯನ್ನು ಸ್ಮರಿಸಿದ ಶೇಖ್ ಹಸೀನಾ, “ದೀರ್ಘಕಾಲದಿಂದ ಸರ್ಕಾರ ನಡೆಸಿದಾಗ ತಪ್ಪುಗಳು ಆಗುವುದು ಸಹಜ. ಯಾವುದೇ ಸರ್ಕಾರವೂ ತಪ್ಪಿನಿಂದ ಹೊರತಾಗಿಲ್ಲ. ಆದರೆ, ಸರ್ಕಾರದ ಒಳ್ಳೆಯದು ಮತ್ತು ಕೆಟ್ಟದ್ದನ್ನು ನಿರ್ಣಯಿಸುವ ಹಕ್ಕು ಜನರಿಗಿದೆ. ಆ ತೀರ್ಪನ್ನು ನಾನು ಬಾಂಗ್ಲಾದೇಶದ ಜನರಿಗೇ ಬಿಡುತ್ತೇನೆ” ಎಂದಿದ್ದಾರೆ.

ಭಾರತಕ್ಕೆ ಪಲಾಯನ ಮಾಡಿದ್ದ ಶೇಖ್ ಹಸೀನಾ:

2024ರಲ್ಲಿ ನಡೆದ ಭೀಕರ ವಿದ್ಯಾರ್ಥಿ ದಂಗೆಯ ಬಳಿಕ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದರು. ಅಂದಿನಿಂದ ಅವರಿಗೆ ಭಾರತ ಸರ್ಕಾರ ಆಶ್ರಯ ನೀಡಿದೆ. ಬಾಂಗ್ಲಾದೇಶದ ಪ್ರಸ್ತುತ ಸರ್ಕಾರವು ಶೇಖ್ ಹಸೀನಾ ಅವರನ್ನು ತಮಗೆ ಹಸ್ತಾಂತರಿಸುವಂತೆ ಭಾರತಕ್ಕೆ ಪದೇ ಪದೇ ಪತ್ರ ಬರೆಯುತ್ತಿದೆ. ನವೆಂಬರ್ 2025ರಲ್ಲಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು (ICT) ಶೇಖ್ ಹಸೀನಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಮೊದಲು ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಮತ್ತು ಈಗ ತಾರಿಕ್ ರೆಹಮಾನ್ ನೇತೃತ್ವದ ಬಿಎನ್‌ಪಿ (BNP) ಸರ್ಕಾರವು ಹಸೀನಾ ಅವರನ್ನು ತಮಗೆ ಹಸ್ತಾಂತರಿಸುವಂತೆ ಭಾರತಕ್ಕೆ ನಿರಂತರವಾಗಿ ಪತ್ರಗಳನ್ನು ಬರೆಯುತ್ತಿವೆ. “ಅವರು ಪತ್ರ ಬರೆಯುತ್ತಿರಲಿ, ನಾನೇ ಸ್ವತಃ ಅಲ್ಲಿಗೆ ಹೋಗುತ್ತೇನೆ, ನನ್ನನ್ನು ಯಾರೂ ಕಳುಹಿಸಬೇಕಾಗಿಲ್ಲ” ಎಂದು ಶೇಖ್ ಹಸೀನಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇ20 ಪೆಟ್ರೋಲ್, ಭಯಪಡುವ ವಿಚಾರವಾ? ಜನರಿಗೆ ಇರುವ ಸಂದೇಹಗಳೇನು? ಸರ್ಕಾರ ಹೇಳುವುದೇನು? ಇಲ್ಲಿದೆ ಡೀಟೇಲ್ಸ್ – Kannada News | Ethanol blended E20 petrol, is that good or bad, govt provides answers

ನವದೆಹಲಿ, ಜುಲೈ 10: ದೇಶದಲ್ಲಿ ಜಾರಿಯಲ್ಲಿರುವ ಎಥೆನಾಲ್ ಮಿಶ್ರಿತ ಪೆಟ್ರೋಲ್ (EBP) ಕಾರ್ಯಕ್ರಮ, ವಿಶೇಷವಾಗಿ E20 ಇಂಧನ (ಶೇ. 20 ಎಥೆನಾಲ್ ಮಿಶ್ರಿತ ಪೆಟ್ರೋಲ್) ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳು ಮತ್ತು ತಪ್ಪು ಮಾಹಿತಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕಾರ್ಯಕ್ರಮವು ವೈಜ್ಞಾನಿಕವಾಗಿ ಪರೀಕ್ಷಿಸಲ್ಪಟ್ಟಿದ್ದು, ಗ್ರಾಹಕರಿಗೆ ಮತ್ತು ವಾಹನಗಳಿಗೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಸರ್ಕಾರ ಭರವಸೆ ನೀಡಿದೆ. ಜನಸಾಮಾನ್ಯರ ಕೆಲ ಅತಂಕ, ಸಂದೇಹ ಮತ್ತು ಪ್ರಶ್ನೆಗಳಿಗೆ ಇಲ್ಲಿದೆ ಸರ್ಕಾರದ ಉತ್ತರ (FAQs):

  1. ಹಳೆಯ ವಾಹನಗಳಿಗೂ ಸುರಕ್ಷಿತ: E20 ಇಂಧನ ಬಳಕೆಯಿಂದ ಹಳೆಯ ವಾಹನಗಳ ಎಂಜಿನ್ ಅಥವಾ ರಬ್ಬರ್ ಭಾಗಗಳಿಗೆ ಹಾನಿಯಾಗುತ್ತದೆ ಎಂಬ ಆತಂಕ ನಿರಾಧಾರವಾಗಿದೆ. ಪ್ರಮುಖ ವಾಹನ ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿ ಕಳೆದ ಆರ್ಥಿಕ ವರ್ಷದಲ್ಲಿ 2.84 ಕೋಟಿ ವಾಹನಗಳಿಗೆ ಸರ್ವಿಸ್ ಮಾಡಿದ್ದು, ಇದರಲ್ಲಿ 1.5 ಕೋಟಿಗೂ ಹೆಚ್ಚು ಹಳೆಯ ವಾಹನಗಳಾಗಿದ್ದರೂ ಎಥೆನಾಲ್‌ನಿಂದ ಯಾವುದೇ ತುಕ್ಕು ಅಥವಾ ಹಾನಿ ಸಂಭವಿಸಿದ ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
  2. ವಾಹನ ವಿಮೆ ಮತ್ತು ವಾರಂಟಿ ಸಿಂಧು: E20 ಇಂಧನ ಬಳಕೆಯಿಂದ ವಾಹನಗಳ ವಾರಂಟಿ ಅಥವಾ ಮೋಟಾರ್ ಇನ್ಶೂರೆನ್ಸ್ ಕ್ಲೈಮ್‌ಗಳ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ. ವಾಹನ ತಯಾರಕರ ಒಕ್ಕೂಟವಾದ ‘ಸಿಯಾಮ್’ (SIAM) ಸಹ ವಾರಂಟಿ ನಿಯಮಗಳು ಎಂದಿನಂತೆ ಮುಂದುವರಿಯಲಿವೆ ಎಂದು ಖಚಿತಪಡಿಸಿದೆ.
  3. ಇಂಧನ ದಕ್ಷತೆ ಮತ್ತು ಪರಿಸರ ಸೂಕ್ತತೆ: ಎಥೆನಾಲ್ ಮಿಶ್ರಣದಿಂದ ಮೈಲೇಜ್‌ನಲ್ಲಿ ಶೇ. 3 ರಿಂದ 5 ರಷ್ಟು ಮಾತ್ರ ಅತ್ಯಲ್ಪ ವ್ಯತ್ಯಾಸವಾಗಬಹುದು. ಆದರೆ, ಇದು ಹೆಚ್ಚಿನ ಆಕ್ಟೇನ್ ರೇಟಿಂಗ್ ಹೊಂದಿದ್ದು, ವಾಹನಕ್ಕೆ ಉತ್ತಮ ಪಿಕಪ್ ನೀಡುತ್ತದೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಶೇ. 40 ರಷ್ಟು ಕಡಿಮೆ ಮಾಡುವ ಮೂಲಕ ಪರಿಸರ ಮಾಲಿನ್ಯ ನಿಯಂತ್ರಿಸುತ್ತದೆ.
  4. ರೈತರಿಗೆ ಮತ್ತು ದೇಶದ ಆರ್ಥಿಕತೆಗೆ ಲಾಭ: ಭಾರತವು ತನ್ನ ಕಚ್ಚಾ ತೈಲದ ಅವಶ್ಯಕತೆಯ ಶೇ. 88.5 ರಷ್ಟು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಎಥೆನಾಲ್ ಆಮದು ಅವಲಂಬನೆಯನ್ನು ತಗ್ಗಿಸಿ, ದೇಶಕ್ಕೆ ₹1.97 ಲಕ್ಷ ಕೋಟಿಗೂ ಅಧಿಕ ವಿದೇಶಿ ವಿನಿಮಯವನ್ನು ಉಳಿಸಿದೆ. ಅಷ್ಟೇ ಅಲ್ಲದೆ, ಕಬ್ಬು ಮತ್ತು ಜೋಳ ಬೆಳೆಯುವ ಭಾರತೀಯ ರೈತರಿಗೆ ನೇರವಾಗಿ ₹1.66 ಲಕ್ಷ ಕೋಟಿಗೂ ಹೆಚ್ಚು ಹಣ ವರ್ಗಾವಣೆಯಾಗಿದ್ದು, ಅನ್ನದಾತರು ಈಗ ‘ಊರ್ಜಾದಾತ’ರಾಗಿದ್ದಾರೆ.

ಇದನ್ನೂ ಓದಿ: ವಿಶ್ವದ ಹಲವು ದೇಶಗಳಿಗಿಂತ ಭಾರತದಲ್ಲಿ ಪೆಟ್ರೋಲ್ ಅಗ್ಗ; ಇದು ಹೇಗೆ ಸಾಧ್ಯವಾಯಿತು? ಸಚಿವ ಹರ್ದೀಪ್ ಸಿಂಗ್ ಪುರಿ ಬಿಚ್ಚಿಟ್ಟ ಸತ್ಯ

ಎಥನಾಲ್ ಮಿಶ್ರಣವಾದರೂ ಬೆಲೆ ಕಡಿಮೆ ಇಲ್ಲ ಯಾಕೆ?

ಇ20 ಇಂಧನದಲ್ಲಿ ಶೇ. 20ರಷ್ಟು ಎಥನಾಲ್ ಮಿಶ್ರಣ ಇರುತ್ತದೆ. ಇ10 ನಲ್ಲಿ ಶೇ. 10 ಎಥನಾಲ್ ಇರುತ್ತದೆ. ಆದರೂ ಯಾಕೆ ಪೆಟ್ರೋಲ್​ಗಿಂತ ಎಥನಾಲ್ ಮಿಶ್ರಿತ ಇಂಧನದ ಬೆಲೆ ಕಡಿಮೆ ಇರುವುದಿಲ್ಲ? ಇದಕ್ಕೆ ಕಾರಣ, ಎಥನಾಲ್ ಉತ್ಪಾದಿಸಲು ಪಡೆಯಲಾಗುವ ಕಾಕಂಬಿ, ಕಬ್ಬಿನ ರಸ ಇತ್ಯಾದಿ ಕಚ್ಚಾ ವಸ್ತುಗಳ ಬೆಲೆ. ರೈತರಿಂದ ಇವುಗಳನ್ನು ಹೆಚ್ಚಿನ ಬೆಲೆಗೆ ಪಡೆಯಲಾಗುತ್ತಿದೆ. ಇದರಿಂದಾಗಿ, ಶುದ್ಧ ಪೆಟ್ರೋಲ್​ಗಿಂತ ಇದರ ಬೆಲೆ ಕಡಿಮೆ ಆಗಲಾಗುತ್ತಿಲ್ಲ.

ಆದರೆ, ಎಥನಾಲ್ ಇಂಧನದ ಬೆಲೆ ಕಡಿಮೆ ಇರದೇ ಹೋದರೂ, ಅದರಿಂದ ಬಹಳಷ್ಟು ಅನುಕೂಲಗಳಿವೆ. ಪೆಟ್ರೋಲ್ ಆಮದು ಹೊರೆ ತಗ್ಗುತ್ತದೆ. ಇದರಿಂದ ವಿದೇಶೀ ವಿನಿಮಯದ ಒತ್ತಡ ಕಡಿಮೆ ಆಗುತ್ತದೆ. ಪರಿಸರ ಮಾಲಿನ್ಯ ಬಹಳಷ್ಟು ಕಡಿಮೆ ಆಗುತ್ತದೆ. ರೈತರಿಗೆ ಹೆಚ್ಚುವರಿ ಆದಾಯ ಮೂಲ ಸಿಗುತ್ತದೆ.

ವದಂತಿಗಳಿಗೆ ಕಿವಿಗೊಡದಿರಿ ಎಂದ ಸರ್ಕಾರ

“ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಭಾರತದ ಎಥೆನಾಲ್ ಮಿಶ್ರಣ ಪ್ರಕ್ರಿಯೆಯು ಕಠಿಣ ಗುಣಮಟ್ಟದ ಪರಿಶೀಲನೆಗೆ ಒಳಪಟ್ಟಿರುತ್ತದೆ ಮತ್ತು ತೈಲ ಕಂಪನಿಗಳು ಬಿಐಎಸ್ (BIS) ಮಾನದಂಡಗಳ ಅಡಿಯಲ್ಲೇ ಇಂಧನ ಪೂರೈಸುತ್ತಿವೆ” ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಎಸ್‌ಐಆರ್‌ ದುರುಪಯೋಗ ಮಾಡಿಕೊಳ್ಳೋಕೆ ಸಿಎಂ ಡಿಕೆ ಶಿವಕುಮಾರ್​ ಪ್ರವಾಸ ಮಾಡುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ – Kannada News | CM DK Shivakumar Is Touring to Misuse SIR: HD Kumaraswamy Makes Serious Allegation

ಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ Image Credit source: tv9 kannada

ಬೆಂಗಳೂರು, ಜುಲೈ 10: ಉತ್ತರ ಕರ್ನಾಟದ ಜಿಲ್ಲೆಗಳ ಅಭಿವೃದ್ಧಿಯತ್ತ ಗಮನಹರಿಸಿರುವ ಸಿಎಂ ಡಿಕೆ ಶಿವಕುಮಾರ್ (DK Shivakumar)​ ಸಿಎಂ ಆದ ಮೊದಲ ಬಾರಿಗೆ ಜಿಲ್ಲೆ ಜಿಲ್ಲೆಗೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy), ಸಿಎಂ ಪ್ರವಾಸ ಮಾಡುತ್ತಿರುವುದು ಎಸ್​ಐಆರ್​ ದುರುಪಯೋಗ ಮಾಡಿಕೊಳ್ಳಲು. ಅಧಿಕಾರಿಗಳಿಗೆ ಸೂಚನೆ ನೀಡಲು ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

SIR ದುರುಪಯೋಗ ಮಾಡಿಕೊಳ್ಳುವುದಕ್ಕೆ ಸಿಎಂ ಪ್ರವಾಸ ಎಂದ ಹೆಚ್​ಡಿ ಕುಮಾರಸ್ವಾಮಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ‘‘ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ನಮ್ಮ ಸಂಪೂರ್ಣ ಸಹಮತವಿದೆ. ನಿಜವಾದ ಮತದಾರರನ್ನು ಉಳಿಸೋಕೆ ಎಸ್‌ಐಆರ್ ಮಾಡಲಾಗುತ್ತಿದೆ. ಚುನಾವಣಾ ಆಯೋಗ ಗೊಂದಲಗಳನ್ನ ಸರಿಪಡಿಸಬೇಕು ಅನ್ನೋದು ನಮ್ಮ ಒತ್ತಾಯ’’ ಎಂದು ಹೇಳಿದರು.

ಇದನ್ನೂ ಓದಿ: ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಮುಂದುವರಿದು ಮಾತನಾಡಿದ ಅವರು, ‘‘ಡಿಕೆ ಶಿವಕುಮಾರ್​ ಪ್ರಸ್ತುತ ಮಾಡುತ್ತಿರುವ ವಿಭಾಗವಾರು ಸಭೆಗಳು ಹಾಗೂ ಜಿಲ್ಲಾ ಪ್ರವಾಸಗಳು ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗಾಗಲಿ ಅಥವಾ ಅಭಿವೃದ್ಧಿ ಕೆಲಸಗಳಿಗಾಗಲಿ ಅಲ್ಲವೇ ಅಲ್ಲ. ಅಧಿಕಾರಿಗಳಿಗೆ ಎಸ್‌ಐಆರ್ ದುರುಪಯೋಗದ ಕುರಿತು ಅಗತ್ಯ ಸೂಚನೆ ಹಾಗೂ ಮಾರ್ಗದರ್ಶನ ನೀಡುವ ಏಕೈಕ ಉದ್ದೇಶದಿಂದಲೇ ಈ ಪ್ರವಾಸಗಳನ್ನ ಹಮ್ಮಿಕೊಂಡಿದ್ದಾರೆ’’ ಎಂದು ನೇರವಾಗಿ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಹೆಚ್​ಡಿ ಕುಮಾರಸ್ವಾಮಿ, ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ಏನು ಕ್ರಮಕೈಗೊಂಡಿದ್ದೀರಿ. ಯಾರಿಗೆ ಹೂವು ಮುಡಿಸುತ್ತೀರಿ. ನಮ್ಮ ರಾಜ್ಯದ ಜನರಿಗೆ ಹೂವು ಮುಡಿಸುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಣೆ ಮಾಡಿ ಹೇಳಿದ್ದೇನು ನೋಡಿ

ಪ್ರವಾಹ, ಬರದ ಬಗ್ಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರಾ? ಸಾಲಮನ್ನಾ ಬಗ್ಗೆ ಮಾತಾಡ್ತೀರಿ ಈ ಕ್ಷಣದವರೆಗೆ ಆ ಕೆಲಸ ಆಗಿಲ್ಲ. ಉತ್ತರ ಕರ್ನಾಟಕ ಭಾಗದ ಹಲವು ಹಳ್ಳಿಗಳು ಸಂಕಷ್ಟದಲ್ಲಿವೆ. ಮುಖ್ಯಮಂತ್ರಿಗಳ ಬೆಳಗಾವಿ ಜಿಲ್ಲೆಯ ಪ್ರವಾಸ ಸಹ ನೋಡಿದ್ದೇನೆ, ರಾತ್ರಿ 20 ಶಾಸಕರ ಜೊತೆಗೆ ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ಹಿಂದಿನ ಸಿಎಂ ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷ ಮಾಡಿದರು. ಈಗಿನ ಸಿಎಂ ಕಾವೇರಿ, ಗೋದಾವರಿ-ಕೃಷ್ಣಾ ಜೊಡಣೆ ಬಗ್ಗೆ ಮಾತಾಡಿದ್ದಾರೆ. ಪಕ್ಕದ ಸಿಎಂಗಳನ್ನು ಕರೆಸಿ ನಮ್ಮ ಸಿಎಂ ಫೋಟೋ ತೆಗೆಸಿಕೊಂಡರು. ತುಂಗಭದ್ರಾ ಡ್ಯಾಂನಲ್ಲಿ ಹೂಳು ತುಂಬಿದ ಬಗ್ಗೆ ಚರ್ಚೆ ಮಾಡಿದ್ರಾ? ಎಂದು ಪ್ರಶ್ನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ – Kannada News | Devi movie title release, writer Masthi Upparahalli talks about actor

ದೇವಿ’ (Devi) ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಯುವ ರೈತ ಚೇತನ್ ಗೌಡ ಅವರು ಈ ಸಿನಿಮಾನಲ್ಲಿ ನಾಯಕನಾಗಿ ನಟಿಸಿ, ನಿರ್ಮಾಣವೂ ಮಾಡಿದ್ದಾರೆ. ಸಿನಿಮಾದ ಟೈಟಲ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾವನ್ನು ಪ್ರಕಾಶ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆರ್​​​ಸಿಬಿ’ ಹೆಸರಿನ ಸಿನಿಮಾವನ್ನು ಅವರು ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ, ಚಿತ್ರಕತೆಗಾರ ಮಾಸ್ತಿ ಉಪ್ಪಾರಹಳ್ಳಿ ಅವರು ಸಿನಿಮಾದ ಟೈಟಲ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚೇತನ್ ಗೌಡ ಅವರ ಪ್ರಯತ್ನವನ್ನು ಕೊಂಡಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ಲಾರ್ಡ್ಸ್‌ ಮೈದಾನದಲ್ಲಿ ಮೊದಲ ಮಹಿಳಾ ಟೆಸ್ಟ್ ಪಂದ್ಯ; ಭಾರತ ಮೊದಲು ಬ್ಯಾಟಿಂಗ್‌ – Kannada News | India Women’s Cricket Faces England in Historic Lord’s Test; Unbeaten Record at Stake

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದ್ದ ಭಾರತ ವನಿತಾ ಪಡೆ ಇದೀಗ ಇಂಗ್ಲೆಂಡ್‌ ಮಹಿಳಾ ತಂಡದ (India Women vs England Women) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಉಭಯ ತಂಡಗಳ ನಡುವೆ ಇಂದಿನಿಂದ ಅಂದರೆ ಜುಲೈ 10 ರಿಂದ ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಟೆಸ್ಟ್ ಪಂದ್ಯ (Lord’s Women’s Test) ಆರಂಭವಾಗಿದೆ. 142 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲಾರ್ಡ್ಸ್‌ ಮೈದಾನದಲ್ಲಿ ಮಹಿಳಾ ಟೆಸ್ಟ್​ ಪಂದ್ಯವೊಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಭಾರತ ಮಹಿಳಾ ತಂಡ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಈ ಪಂದ್ಯಕ್ಕೆ ಉಭಯ ತಂಡಗಳು ಬಲಿಷ್ಠ ಪಡೆಯನ್ನು ಕಟ್ಟಿಕೊಂಡು ಅಖಾಡಕ್ಕಿಳಿದಿವೆ.

ಇಂಗ್ಲೆಂಡ್ ವಿರುದ್ಧ ಭಾರತದ ಮೇಲುಗೈ

ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉತ್ತಮ ದಾಖಲೆಯನ್ನು ಹೊಂದಿದೆ. ಕಳೆದ 31 ವರ್ಷಗಳಲ್ಲಿ ಭಾರತ ತಂಡ, ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಭಾರತ ಕೊನೆಯ ಬಾರಿಗೆ 1995 ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಸೋತಿತ್ತು. ಇದಾದ ನಂತರ ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ 15 ಟೆಸ್ಟ್ ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ ತಂಡ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ಒಂದರಲ್ಲಿ ಸೋತಿದೆ. ಉಳಿದಂತೆ 11 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇಂಗ್ಲೆಂಡ್ ವಿರುದ್ಧದ ಕೊನೆಯ ನಾಲ್ಕು ಟೆಸ್ಟ್‌ಗಳಲ್ಲಿ ಭಾರತ ಮೂರರಲ್ಲಿ ಗೆದ್ದಿದ್ದು, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಉಭಯ ತಂಡಗಳು

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸಯಾಲಿ ಸತ್ಘರೆ, ಶ್ರೀ ಚರಣಿ (ಟೆಸ್ಟ್‌ಗೆ ಪಾದಾರ್ಪಣೆ) ಮತ್ತು ಕ್ರಾಂತಿ ಗೌಡ್.

ಇಂಗ್ಲೆಂಡ್‌ ತಂಡ: ಟ್ಯಾಮಿ ಬ್ಯೂಮಾಂಟ್, ಮಾಯಾ ಬೌಚಿಯರ್, ಹೀದರ್ ನೈಟ್, ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಆಲಿಸ್ ಕ್ಯಾಪ್ಸೆ (ಚೊಚ್ಚಲ ಟೆಸ್ಟ್ ಪಂದ್ಯ), ಆಮಿ ಜೋನ್ಸ್ (ವಿಕೆಟ್ ಕೀಪರ್), ಮ್ಯಾಡಿ ವಿಲಿಯರ್ಸ್ (ಚೊಚ್ಚಲ ಟೆಸ್ಟ್ ಪಂದ್ಯ), ಸೋಫಿ ಎಕ್ಲೆಸ್ಟೋನ್, ಇಸ್ಸಿ ವಾಂಗ್, ಲಾರೆನ್ ಬೆಲ್ ಮತ್ತು ಲಾರೆನ್ ಫೈಲರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:56 pm, Fri, 10 July 26

Source link

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಳಿಮುಖ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ – Kannada News | 2.12 Lakh Students Left Govt Schools: Prahlad Joshi Slams Karnataka Govt Over Shocking UDISE+ Report

ಕೇಂದ್ರ ಸಚಿವ ಪ್ರಲ್ಹಾದ ಜೋಶಿImage Credit source: PTI

ಬೆಂಗಳೂರು, ಜುಲೈ 10: ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿದ್ದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕ ದಿವಾಳಿತನ ಪ್ರದರ್ಶಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದಲೂ ಅಧಿಕಾರ, ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆದಿದೆ. ಪರಿಣಾಮ ಆಡಳಿತಯಂತ್ರ ಸಂಪೂರ್ಣ ಸ್ತಬ್ಧಗೊಂಡಂತಿದ್ದು, ಶಿಕ್ಷಣ ಕ್ಷೇತ್ರದ ಮೇಲೂ ನೇರ ದುಷ್ಪರಿಣಾಮ ಬೀರಿದೆ ಎಂದವರು ದೂರಿದ್ದಾರೆ.

UDISE+ ವರದಿಯಿಂದ ಅಂಕಿ-ಅಂಶ ಬಹಿರಂಗ

ರಾಜ್ಯದ ಸಹಸ್ರಾರು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಭಾರೀ ಕುಸಿತ ಕಂಡಿರುವ ಬಗ್ಗೆ UDISE+ ವರದಿಯೇ ಬಹಿರಂಗಪಡಿಸಿದೆ. ಕಳೆದ ಮೂರು ವರ್ಷದಲ್ಲಿ 2.12 ಲಕ್ಷ ಮಕ್ಕಳು ಸರ್ಕಾರಿ ಶಾಲೆ ತೊರೆದಿರುವುದು ಕಾಂಗ್ರೆಸ್‌ ಸರ್ಕಾರದ ನಿಷ್ಕ್ರಿಯತೆಗೆ ಕೈಗನ್ನಡಿ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬದಲು ಮುಚ್ಚುವಂಥ ಸ್ಥಿತಿಗೆ ತಂದಿರುವುದೇ ಈ ಸರ್ಕಾರದ ಮಹತ್ಸಾಧನೆ ಎಂದು ಜೋಶಿ ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಹ್ಲಾದ್​​ ಜೋಶಿ ಭೇಟಿಯಾದ ಕೆ.ಹೆಚ್​. ಮುನಿಯಪ್ಪ; ಎಂಎಸ್​​ಪಿ ಅನುದಾನದ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರ ಸಚಿವರಿಗೆ ಮನವಿ

ವಿದ್ಯಾರ್ಥಿಗಳ ಸಂಖ್ಯೆ ಯಾವಾಗೆಷ್ಟು ಕುಸಿತ?

ಶೈಕ್ಷಣಿಕ ವರ್ಷ ದಾಖಲಾತಿ ಸಂಖ್ಯೆ
2023-24 11926303
2024-25 11780251
2025-26 11714214

2023-24ರಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ 1,19,26,303 ಇದ್ದರೆ, 2024-25ರಲ್ಲಿ ಅದು 1,17,80,251ಕ್ಕೆ ಇಳಿದು 1,46,052 ವಿದ್ಯಾರ್ಥಿಗಳ ಕುಸಿತ ದಾಖಲಾಗಿದೆ. 2025-26ರಲ್ಲಿ ಮತ್ತಷ್ಟು 66,037 ವಿದ್ಯಾರ್ಥಿಗಳು ಕಡಿಮೆಯಾಗಿದ್ದು, ಒಟ್ಟು ದಾಖಲಾತಿ 1,17,14,214ಕ್ಕೆ ತಲುಪಿದೆ. ಶಾಲೆಗಳ ಸಬಲೀಕರಣ ಮಾಡಬೇಕಾದ ಸರ್ಕಾರ, ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

‘ಡ್ರಗ್ಸ್ ಹಬ್ ಆಗುತ್ತಿರುವ ಕರ್ನಾಟಕ’

ಒಂದೆಡೆ ಸರ್ಕಾರಿ ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕ ʼಡ್ರಗ್ಸ್ ಹಬ್’ ಆಗಿ ಮಾರ್ಪಡುತ್ತಿರುವುದು ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ. ಅಮಾಯಕ ಯುವ ಪೀಳಿಗೆ ಇಂದು ದಾರಿ ತಪ್ಪುತ್ತಿದ್ದು, ಡ್ರಗ್ಸ್ ಜಾಲ ಹಾಗೂ ಸಮಾಜವಿರೋಧಿ ಚಟುವಟಿಕೆಯತ್ತ ಮುಖ ಮಾಡುತ್ತಿದ್ದಾರೆ. ಸಮಾಜದ, ವಿದ್ಯಾರ್ಥಿಗಳ ಹಿತ ಕಾಪಾಡಬೇಕಿದ್ದ ಸರ್ಕಾರ ಅದನ್ನೆಲ್ಲ ಮರೆತು ಒಳಜಗಳ, ಕುರ್ಚಿ ಕಿತ್ತಾಟ ಮತ್ತು ಅಧಿಕಾರದ ಅಮಲಿನಲ್ಲಿ ಮುಳುಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಕರಾವಳಿ’ ಕಿರಿಕ್: ಪ್ರಜ್ವಲ್​ಗೆ ಸಂಭಾವನೆ ಬಾಕಿ ಉಳಿಸಿಕೊಂಡಿದ್ದೇಕೆ? ವಿವರಿಸಿದ ಚಿತ್ರತಂಡ – Kannada News | Karavali movie team clarification about Prajwal Devaraj’s payment settlement

ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ನಾಯಕ ನಟ ಪ್ರಜ್ವಲ್ ದೇವರಾಜ್ ಮತ್ತು ಸಿನಿಮಾ ನಿರ್ದೇಶಕರ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಪ್ರಜ್ವಲ್ ದೇವರಾಜ್ ಹೊರತಾಗಿಯೇ ಸಿನಿಮಾದ ಟ್ರೈಲರ್ ಬಿಡುಗಡೆ ಸಹ ಮಾಡಲಾಗಿದೆ. ಟ್ರೈಲರ್ ಬಿಡುಗಡೆ ವೇಳೆ ಪ್ರಜ್ವಲ್ ಅಭಿಮಾನಿಗಳು ಕಾರ್ಯಕ್ರಮಕ್ಕೆ ನುಗ್ಗಿ ಗಲಾಟೆ ಸಹ ಮಾಡಿದ್ದರು. ಘಟನೆಯ ಬಳಿಕ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಅಭಿಮಾನಿಗಳ ವಿರುದ್ಧ ದೂರು ಸಹ ದಾಖಲಾಗಿದೆ. ಇದರ ಜೊತೆಗೆ ಚಿತ್ರತಂಡವು ಪ್ರಜ್ವಲ್ ದೇವರಾಜ್ ಅವರ ಅಭಿಮಾನಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದೆ. ಪ್ರಜ್ವಲ್​​ ಅವರಿಗೆ ಬಾಕಿ ಹಣ ಉಳಿಸಿಕೊಳ್ಳಲು ಕಾರಣ ಏನೆಂಬುದನ್ನು ಸಹ ವಿವರಿಸಿದೆ.

ನಟ ಪ್ರಜ್ವಲ್ ದೇವರಾಜ್ ಅವರಿಗೆ ಕೊಡಲು ಬಾಕಿ ಇದ್ದ ಹಣವನ್ನು ಘಟನೆ ನಡೆದ (ಟ್ರೈಲರ್ ಬಿಡುಡಗೆ ಕಾರ್ಯಕ್ರಮ ಗಲಾಟೆ) ಮರುದಿನವೇ ಅಧಿಕೃತವಾಗಿ ಪಾವತಿಸಲಾಗಿದೆ. ನಟ ಪ್ರಜ್ವಲ್ ದೇವರಾಜ್ ಅವರು ‘ಕರಾವಳಿ’ ಚಿತ್ರದಲ್ಲಿನ ಪಾತ್ರಕ್ಕಾಗಿ ಜಿಮ್ ಮಾಡಿ ಸಿಕ್ಸ್ ಪ್ಯಾಕ್ (Physical Transformation/6 packs) ಮಾಡುವುದಾಗಿ ಒಪ್ಪಿಕೊಂಡಿದ್ದರು ಮತ್ತು ಅದು ಕಥೆಗೆ ಬಹುಮುಖ್ಯ ಅಂಶವಾಗಿತ್ತು. ಅದೇ ಕಾರಣಕ್ಕಾಗಿ ಅಷ್ಟು ದೊಡ್ಡ ಮೊತ್ತವನ್ನು ಸಂಭಾವನೆಯಾಗಿ ಕೊಡಲು ನಿರ್ಮಾಣ ಸಂಸ್ಥೆ ಒಪ್ಪಿಕೊಂಡಿತ್ತು. ಆದರೆ ಮೇಲ್ನೋಟಕ್ಕೆ ದೈಹಿಕ ರೂಪಾಂತರ ಸಾಧ್ಯವಾಗದೇ ಇದ್ದಿದ್ದರಿಂದ ಉಳಿದ ಹಣವನ್ನು ಬಾಕಿಯಾಗಿ ಉಳಿಸಿಕೊಳ್ಳಲಾಗಿತ್ತು ಎಂದು ಚಿತ್ರತಂಡ ಇದೀಗ ಹೊರಡಿಸಿರುವ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ:‘ನಾವು ರೌಡಿಗಳಲ್ಲ, ಎಲ್ಲರಂತೆ ಮನುಷ್ಯರು’; ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಅಳಲು

ನಟ ಪ್ರಜ್ವಲ್ ದೇವರಾಜ್, ಬಾಕಿ ಹಣವನ್ನು ಕೊಡದಿದ್ದರೆ ಡಬ್ಬಿಂಗ್ ಮಾಡುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದರಿಂದ, ಅವರಿಗಾಗಿ ಎರಡು ತಿಂಗಳು ಕಾದ ನಂತರ, ಅನಿವಾರ್ಯವಾಗಿ ಬೇರೆಯವರಿಂದ ಡಬ್ಬಿಂಗ್ ಮಾಡಿಸಲಾಯಿತು. ಈ ಬಗ್ಗೆ ನಟ ಪ್ರಜ್ವಲ್ ದೇವರಾಜ್ ಅವರನ್ನು ಹಲವಾರು ಬಾರಿ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ ಹಾಗೂ ಸಿನಿ ರಂಗದ ಪ್ರಮುಖರು ಮತ್ತು ನಿರ್ಮಾಪಕರಾದ ಕೆ ವಿ ಎನ್ ಸಂಸ್ಥೆಯ ಸುಪ್ರೀತ್ ರವರು, ನಿರ್ಮಾಪಕರಾದ ಜಾಕ್ ಮಂಜು ರವರು ಮತ್ತು ನಿರ್ಮಾಪಕರಾದ ಲೋಹಿತ್ (ಚಕ್ರವ್ಯೂಹ) ರವರೆಲ್ಲರೂ ಪ್ರತ್ಯೇಕವಾಗಿ ಅವರನ್ನು ಸಂಪರ್ಕಿಸಿ ಮಧ್ಯಸ್ಥಿಕೆಗೆ ಪ್ರಯತ್ನಿಸಿದರಾದರು ಅದು ವಿಫಲವಾಗಿ, ಬಾಕಿ ಹಣ ಪಾವತಿಯಾಗದೆ ‘ಕರಾವಳಿ’ ಚಿತ್ರದ ಯಾವುದೇ ಕೆಲಸಗಳನ್ನು ಭಾಗಿಯಾಗುವುದಿಲ್ಲವೆಂದು ಖಡಾಖಂಡಿತವಾಗಿ ತಿರಸ್ಕರಿಸಿದ್ದರು ಎಂದು ಚಿತ್ರತಂಡ ಹೇಳಿದೆ.

ಟ್ರೈಲರ್ ನಲ್ಲಿ ಅವರ ಧ್ವನಿ ಇಲ್ಲವೆನ್ನುವುದು ನಟ ಪ್ರಜ್ವಲ್ ದೇವರಾಜ್ ರವರಿಗೆ ತಿಳಿದಿತ್ತು ಮತ್ತು ಬೇರೆಯವರಿಂದ ಡಬ್ಬಿಂಗ್ ಮಾಡಿಸಿರುವ ವಿಚಾರವನ್ನು ಅವರ ಮ್ಯಾನೇಜರ್ ಮೂಲಕ ತಲುಪಿಸಲಾಗಿತ್ತು. ಇಷ್ಟಾಗಿಯೂ ಬಾಕಿ ಇರುವ ಹಣ ತಲುಪಿದ ಮೇಲೂ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ಖಾತೆಗಳಿಂದ ಇಲ್ಲ-ಸಲ್ಲದನ್ನೆಲ್ಲಾ ಆರೋಪ ಮಾಡುತ್ತಾ ‘ಕರಾವಳಿ’ ಸಿನಿಮಾ, ನಿರ್ದೇಶಕರು ಮತ್ತು ನಿರ್ಮಾಣ ಸಂಸ್ಥೆಯ ಮೇಲೆ ಅಪಪ್ರಚಾರ ಮಾಡುತ್ತಿರುವವರ ಮೇಲೆ ತನಿಖೆ ನಡೆಸುವಂತೆ ಮೇಲ್ಕಂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:35 pm, Fri, 10 July 26

Source link

Karnataka Jobs: ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗವಕಾಶ; 17 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka Jobs: Belagavi ZP Announces Recruitment for District Manager and Cluster Supervisor Roles

ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗವಕಾಶImage Credit source: Getty Images

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ (Belagavi Zilla Panchayat) ವತಿಯಿಂದ ಉತ್ತಮ ಅವಕಾಶ ದೊರೆತಿದೆ. 2026ನೇ ಸಾಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ಒಟ್ಟು 17 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 17 ಹುದ್ದೆಗಳು ಭರ್ತಿಯಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಾನುಸಾರ ನೇಮಕಾತಿ ಮಾಡಲಾಗುತ್ತದೆ.

ವಿದ್ಯಾರ್ಹತೆ ಏನು?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ದೊರೆಯಲಿದೆ.

ವೇತನ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಆಧಾರದ ಮೇಲೆ ತಿಂಗಳಿಗೆ 18,000 ರಿಂದ 30,000 ರೂ. ವರೆಗೆ ವೇತನ ನೀಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, 2A, 2B, 3A, 3B, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ಆಯ್ಕೆಯನ್ನು ಇಲಾಖೆಯ ನಿಯಮಾನುಸಾರ ಸಂದರ್ಶನದ ಮೂಲಕ ನಡೆಸಲಾಗುತ್ತದೆ. ಅಂತಿಮ ಆಯ್ಕೆ ಸಂದರ್ಶನದಲ್ಲಿ ಅಭ್ಯರ್ಥಿಗಳ ಸಾಧನೆ ಮತ್ತು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ಪಂಚಾಯತ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 01-07-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2026

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ:

ಅರ್ಜಿ ಸಲ್ಲಿಸುವ ವೇಳೆ ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್‌ಲೋಡ್ ಮಾಡಬೇಕು ಹಾಗೂ ನೀಡುವ ಮಾಹಿತಿಯು ನಿಖರವಾಗಿರಬೇಕು. ಅಪೂರ್ಣ ಅಥವಾ ತಪ್ಪಾದ ಮಾಹಿತಿಯಿರುವ ಅರ್ಜಿಗಳನ್ನು ಇಲಾಖೆಯು ತಿರಸ್ಕರಿಸಬಹುದು. ಆದ್ದರಿಂದ ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಒಳಿತು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

ರಾಜ್ಯದಲ್ಲಿ ಮತ್ತೆ ಅಕ್ರಮ ವಲಸಿಗರ ಸದ್ದು: ಮಂಗಳೂರಲ್ಲಿ 6 ಮಂದಿ ವಶಕ್ಕೆ; ಮಂಡ್ಯಕ್ಕೂ ಎಂಟ್ರಿ ಕೊಟ್ರಾ ಬಾಂಗ್ಲಾ ಪ್ರಜೆಗಳು? – Kannada News | Illegal Immigrants Crackdown in Karnataka: 6 Bangladeshi Nationals Detained in Mangaluru; Suspicion Rises in Mandya

ಮಂಡ್ಯ ರೈಲ್ವೇ ನಿಲ್ದಾಣದ ಬಳಿ ವಲಸಿಗರ ವಿಚಾರಣೆImage Credit source: Tv9 Kannada

ಮಂಗಳೂರು/ ಮಂಡ್ಯ, ಜುಲೈ 10: ಕರ್ನಾಟಕಕ್ಕೆ ಬಾಂಗ್ಲಾದಿಂದ ಅಕ್ರಮ ವಲಸಿಗರ ಆಗಮನ ಮುಂದುವರಿದಿದ್ದು, ಕೂಲಿ ಕಾರ್ಮಿಕರಾಗಿ ಬಂದಿದ್ದ ಆರು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಮುಕ್ಕದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡದ ಕಾಮಗಾರಿಗೆಂದು ಇವರು ಜಿಲ್ಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ಮೂಲಕ ಆಗಮಿಸಿದ್ದ ಬಾಂಗ್ಲಾದೇಶ ಪ್ರಜೆಗಳು ಕಟ್ಟಡ ಕಾಮಗಾರಿಯಲ್ಲಿ ಭಾಗಿಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ವರದಿಯನ್ನು ಎಫ್‌ಆರ್‌ಆರ್‌ಒ (FRRO)ಗೆ ಪೊಲೀಸರು ಕಳುಹಿಸಿದ್ದು, ಬಂಧನ ಕುರಿತು ಆದೇಶ ಹೊರಡಿಸಿ ಭಾರತದಿಂದ ಗಡೀಪಾರು ಮಾಡಲು ಕ್ರಮಕ್ಕಾಗಿ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ಕಳುಹಿಸಿದ್ದಾರೆ.

ಮಂಡ್ಯಕ್ಕೂ ಅಕ್ರಮ ವಲಸಿಗರ ಎಂಟ್ರಿ?

ಗಂಟು ಮೂಟೆ ಸಮೇತ ಬಂದ 50ಕ್ಕೂ ಹೆಚ್ಚು ಜನರ ಮೇಲೆ ಅನುಮಾನ ಬಂದ ಹಿನ್ನೆಲೆ ಮಂಡ್ಯ ರೈಲ್ವೆ ನಿಲ್ದಾಣ ಬಳಿ ಅವರನ್ನುತಡೆದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿರುವ ಘಟನೆ ನಡೆದಿದೆ. ಐಡಿ ಕಾರ್ಡ್, ಆಧಾರ್ ಕಾರ್ಡ್ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಹಲವರು ಪಶ್ಚಿಮ ಬಂಗಾಳ ಮೂಲದ ಆಧಾರ್ ಕಾರ್ಡ್ ಹೊಂದಿರೋದು ಕಂಡುಬಂದಿದೆ. ಬಿಜೆಪಿಗರು ವಿಚಾರಣೆ ನಡೆಸುತ್ತಿದ್ದಂತೆ ಕೆಲವು ವಲಸಿಗರು ರೈಲ್ವೆ ನಿಲ್ದಾಣದಿಂದ ಕಾಲ್ಕಿತ್ತಿದ್ದಾರೆ. ಹೀಗಾಗಿ ನಗರಕ್ಕೆ ಅಕ್ರಮ ವಲಸಿಗರು ಬಂದಿರುವ ಬಗ್ಗೆ ಅನುಮಾನ ಹೆಚ್ಚಿದೆ.

ಇದನ್ನೂ ಓದಿ: ‘ಅಕ್ರಮ ವಲಸಿಗರಿಗೆ ಮಣೆ, ಭದ್ರತೆಗೆ ಧಕ್ಕೆ’; ಕರ್ನಾಟಕ ಶಾಶ್ವತ ನಿವಾಸಿ ಪ್ರಮಾಣ ಪತ್ರಕ್ಕೆ ತಡೆನೀಡಲು ಅಮಿತ್ ಶಾಗೆ ಶೋಭಾ ಪತ್ರ

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿಗರ ಕಿಡಿ

ಮತ್ತೊಂದೆಡೆ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆ ಸಂಬಂಧ ರಾಜ್ಯ ಸರ್ಕಾರದ ನಿರ್ಧಾರ ವಿವಾದವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಬಿಜೆಪಿಗರು ಕಿಡಿ ಕಾರಿದ್ದು, ಪೌರತ್ವ ನೀಡಲು ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಆಂತರಿಕ ಭದ್ರತೆ ಆಧಾರದಲ್ಲಿ ಇದನ್ನು ಕೇಂದ್ರ ನಿರ್ಧಾರ ಮಾಡುತ್ತೆ. ಕರ್ನಾಟಕದಲ್ಲಿ ಪ್ರಮಾಣ ಪತ್ರ ನೀಡುವ ಸರ್ಕಾರದ ಷಡ್ಯಂತ್ರ ಏನು? ರಾಜ್ಯದಲ್ಲಿ ಎಸ್ಐಆರ್ ಹಳ್ಳ ಹಿಡಿಸುವ ಪ್ರಯತ್ನ ನಡೆಸಿದ್ದಾರೆ. ಇದು ದೇಶದ ಆಂತರಿಕ ಭದ್ರತೆಗೆ ಸವಾಲು ಎಂದವರು ಆರೋಪಿಸಿದ್ದಾರೆ. ಅಕ್ರಮ ವಲಸಿಗರು ಶಾಶ್ವತವಾಗಿ ನೆಲೆಸಲು ರಾಜ್ಯ ಸರ್ಕಾರ ಕುತಂತ್ರ ಮಾಡುತ್ತಿದ್ದು, ದೇಶದ ಹಿತದೃಷ್ಟಿಗೆ ಧಕ್ಕೆ ತರುವ ನಿರ್ಧಾರ ಕೈಗೊಳ್ಳಬೇಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:03 pm, Fri, 10 July 26

Source link

3 ತಿಂಗಳು ಜೈಲು ಶಿಕ್ಷೆ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್ – Kannada News | Rajpal Yadav Sentenced to 3 months Jail by Delhi High Court in Cheque Bounce Case

ನವದೆಹಲಿ: ಬಾಲಿವುಡ್​ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಹಲವು ಚೆಕ್ ಬೌನ್ಸ್ (Cheque Bounce) ಪ್ರಕರಣಗಳಿಗೆ ಸಂಬಂಧಿಸಿದಂತೆ ನಟನಿಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು (Jail) ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಪೀಠವು ಈ ತೀರ್ಪು ನೀಡಿದ್ದು, ರಾಜ್‌ಪಾಲ್ ಯಾದವ್ (Rajpal Yadav) ವಿರುದ್ಧದ 7 ಪ್ರಕರಣಗಳಲ್ಲಿ ತಲಾ 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ವಿಧಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಚಾಲ್ತಿಯಲ್ಲಿರಲಿವೆ ಎಂದು ಕೋರ್ಟ್ ತಿಳಿಸಿದೆ. ಇದರೊಂದಿಗೆ, ಪ್ರತಿ ಪ್ರಕರಣದಲ್ಲೂ ದೂರುದಾರರಿಗೆ ತಲಾ 1.05 ಕೋಟಿ ರೂಪಾಯಿ ಪಾವತಿಸುವಂತೆ ನಟನಿಗೆ ಆದೇಶಿಸಲಾಗಿದೆ.

ಪತ್ನಿಗೂ ದಂಡದ ಬಿಸಿ:

ಕೇವಲ ರಾಜ್‌ಪಾಲ್ ಯಾದವ್ ಮಾತ್ರವಲ್ಲದೆ, ಅವರ ಪತ್ನಿ ರಾಧಾ ಯಾದವ್ ಅವರಿಗೂ ಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಪ್ರತಿ ಪ್ರಕರಣದಲ್ಲೂ ದೂರುದಾರರಿಗೆ ತಲಾ 5 ಕೋಟಿ 51 ಲಕ್ಷದ 380 ರೂಪಾಯಿಗಳನ್ನು ಪಾವತಿಸುವಂತೆ ರಾಧಾ ಯಾದವ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿಂದೆ ರಾಜ್‌ಪಾಲ್ ಯಾದವ್ ಪಾವತಿಸಿದ್ದ 2.25 ಕೋಟಿ ರೂಪಾಯಿಗಳನ್ನು ಬಾಕಿ ಮೊತ್ತದಲ್ಲಿ ಕಡಿತಗೊಳಿಸಿ ಹೊಂದಾಣಿಕೆ ಮಾಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಜೈಲಿಗೆ ಹೋಗಲು ಸಿದ್ಧ ಎಂದಿದ್ದ ನಟ

ಸಂಧಾನದ ಮೂಲಕ ಹಣ ಪಾವತಿಸುವುದಾಗಿ ರಾಜ್‌ಪಾಲ್ ಯಾದವ್ ಕೋರ್ಟ್‌ಗೆ ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರು. ಸೆಟಲ್‌ಮೆಂಟ್ ಮಾಡಿಕೊಳ್ಳಲು ನ್ಯಾಯಾಲಯವು ಅವರಿಗೆ ಹತ್ತಾರು ಬಾರಿ ಅವಕಾಶಗಳನ್ನು ನೀಡಿತ್ತಾದರೂ, ಅವರು ತಮ್ಮ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ವಿಚಾರಣೆಯ ಕೊನೆಯ ಹಂತದಲ್ಲಿ, ದೂರುದಾರ ಕಂಪನಿಯಾದ ‘ಮೆಸರ್ಸ್ ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್’ಗೆ ಇನ್ನು ಮುಂದೆ ಯಾವುದೇ ಹಣ ಪಾವತಿಸಲು ಸಾಧ್ಯವಿಲ್ಲ, ಬದಲಿಗೆ ತಾವು ಜೈಲಿಗೆ ಹೋಗಲು ಸಿದ್ಧ ಎಂದು ರಾಜ್‌ಪಾಲ್ ಯಾದವ್ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ಮೆಟ್ಟಿಲೇರಲು 2 ತಿಂಗಳ ಕಾಲಾವಕಾಶ:

ಸದ್ಯ ದೆಹಲಿ ಹೈಕೋರ್ಟ್ ನೀಡಿರುವ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್‌ಪಾಲ್ ಯಾದವ್ ಅವರಿಗೆ ನ್ಯಾಯಾಲಯವು 2 ತಿಂಗಳ ಕಾಲಾವಕಾಶ ನೀಡಿದೆ. ಅಲ್ಲಿಯವರೆಗೆ ಅವರ ಶಿಕ್ಷೆ ಜಾರಿಗೆ ತಡೆ ಇರಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಅವರಿಗೆ ಪರಿಹಾರ ಸಿಗಲಿದೆಯೇ ಅಥವಾ ಜೈಲು ಪಾಲಾಗಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ

‘ಯಾವುದೇ ವ್ಯಕ್ತಿ ಒಂದು ನಿರ್ದಿಷ್ಟ ರಂಗ ಅಥವಾ ಸಿನಿಮಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕೆ ನ್ಯಾಯಾಲಯವು ಅವರಿಗಾಗಿ ವಿಶೇಷ ರಿಯಾಯಿತಿ ಅಥವಾ ನಿಯಮಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ’ ಎಂದು ಈ ಹಿಂದೆ ಕೋರ್ಟ್ ಕಠಿಣವಾಗಿ ಹೇಳಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:25 pm, Fri, 10 July 26

Source link

Exit mobile version