ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ದೈಹಿಕ ಶಿಕ್ಷಕನನ್ನು ಸಾಯಿಸುವವರೆಗೂ ಬಿಡಲ್ಲ ಎನ್ನುತ್ತಿರುವ ಪೋಷಕರು – Kannada News | 12 Year Old Student Suspected Death In Bengaluru Residential School

ಬೆಂಗಳೂರು, (ಜುಲೈ 08): ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ (Student)  ಅನುಮಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಗುರು ಕಿರಣ್​ ಎಂಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹುಷಾರಿಲ್ಲ ಎಂದು ಆಸ್ಪತ್ರೆಗೆ ಸೇರಿಸಿರೋದಾಗಿ ವಿದ್ಯಾರ್ಥಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದ್ರೆ, ಪೋಷಕರು ಬರುವಷ್ಟರಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೈಹಿಕ ಶಿಕ್ಷಕ ನಾರಾಯಣ ಹಲ್ಲೆ ಮಾಡಿದ್ದಕ್ಕೆ ಗುರುಕಿರಣ್​ ಸಾವನ್ನಪ್ಪಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡಿರುವ ಪೋಷಕರು, ಶಿಕ್ಷಕ ನಾರಾಯಣ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ನಾರಾಯಣನನ್ನು ಸುಟ್ಟು ಹಾಕುವುದಾಗಿ ಪೆಟ್ರೋಲ್ ತಂದಿದ್ದಾರೆ. ಇದರಿಂದ ಸ್ಥಳಕ್ಕೆ ಉದ್ವಿಗ್ನಗೊಂಡಿದೆ.

ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಸಹಪಾಠಿ

ಇನ್ನು ಈ ಬಗ್ಗೆ ಟಿವಿ9ಗೆ ಇದೇ ವಸತಿ ಶಾಲೆಯ ವಿದ್ಯಾರ್ಥಿಯೋರ್ವ ಮಾತನಾಡಿದ್ದು, ಇಂದು (ಜುಲೈ 08) ಬೆಳಗ್ಗೆ ಎಂದಿನಂತೆ 5 ಗಂಟೆಗೆ ನಿದ್ದೆಯಿಂದ ಎದ್ದಿದ್ದ. ಗ್ರೌಂಡ್ಗೆ ಬರುವ ಮುನ್ನ ಶೌಚಾಲಯಕ್ಕೆ ಅಂತ ಗುರು ಕಿರಣ್ ಹೋಗಿದ್ದ. ಶೌಚಾಲಯಕ್ಕೆ ಹೋಗಿದ್ದಕ್ಕೆ ದೈಹಿಕ ಶಿಕ್ಷಕ ನಾರಾಯಣ್ ಅವರು ಹೊಡೆದಿದ್ದಾರೆ. ಗುರುಕಿರಣ್ ಕುತ್ತಿಗೆ ಮೇಲೆ ತಲ್ಲೆ ಬಗ್ಗಿಸಿ ಹೊಡೆದರು. ಹೊಡೆದ ನಂತರ ಗ್ರೌಂಡ್ಗೆ ಕರೆಸಿ ಎರಡು ರೌಂಡ್ ಓಡುವಂತೆ ಹೇಳಿದ್ದರು. ಅದರಂಯೆ ಓಡುವ ವೇಳೆ ಗುರುಕಿರಣ್ ಕುಸಿದು ಬಿದ್ದ ಎಂದು ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಯಾವಾಗಲೂ ಸಣ್ಣ ವಿಚಾರಕ್ಕೂ ದೈಹಿಕ ಶಿಕ್ಷಕರು ಮಕ್ಕಳನ್ನ ಹೊಡೆಯುತ್ತಾರೆ. ರಾಡ್ ಮತ್ತು ಬಿದರಿನಿಂದ ಹೊಡೆಯುತ್ತಾರೆ. ರೂಂ ನಲ್ಲಿ ಕೂಡಿಹಾಕಿ ಹೊಡೆದು ಟಾರ್ಚರ್ ಮಾಡುತ್ತಾರೆ. ಊಟದಲ್ಲಿ ಕಲ್ಲು ಕೂದಲು ಎಲ್ಲಾ‌ ಸಿಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಮೃತ ವಿದ್ಯಾರ್ಥಿ ಗುರುಕಿರಣ್ ಕುಟುಂಬಸ್ಥರು, ದೈಹಿಕ ಶಿಕ್ಷಕ ನಾರಾಯಣನ ಮೇಲೆ ಹಲ್ಲೆ ಮಾಡಿದ್ದಾರೆ.

ಶಾಲೆ ಬಳಿ ಉದ್ವಿಗ್ನಗೊಂಡ ಪರಿಸ್ಥಿತಿ

ಆಕ್ರೋಶಗೊಂಡಿರು ಪೋಷಕರು ದೈಹಿಕ ಶಿಕ್ಷಕ ನಾರಾಯಣನನ್ನು ಹಿಡಿದು ಥಳಿಸಿದ್ದಾರೆ.  ನಾರಾಯಣಗೌಡ ತಪ್ಪಿಸಿಕೊಂಡು ಓಡಿದರೂ ಸಹ ಬಿಡದೇ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಬಳಿಕ ಮಧ್ಯೆ ಪ್ರವೇಶಿಸಿದ ಬಾಗಲೂರು  ಪೊಲೀಸರು, ನಾರಾಯಣನ್ನು ರಕ್ಷಿಸಿ ಜೀಪ್​​​ನಲ್ಲಿ ಕೂರಿಸಿದ್ದಾರೆ. ಆದರೂ ಬಿಡದ ಪೋಷಕರು, ತಮ್ಮ ವಶಕ್ಕೆ ಕೊಡಿ ಎಂದು ಮತ್ತೆ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೇ ದೈಹಿಕ ಶಿಕ್ಷಕನ್ನು ಸುಟ್ಟು ಹಾಕುತ್ತೇವೆಂದು ಪೆಟ್ರೋಲ್ ಹಿಡಿದುಕೊಂಡು ಬಂದಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡು

ಲಾಠಿ ಚಾರ್ಜ್ ಮಾಡಿದರೂ  ಪಟ್ಟು ಬಿಡದ ಆಕ್ರೋಶ ಭರಿತ ಪೋಷಕರು, ಹೊಯ್ಸಳ ಜೀಪ್ಗೆ ಅಡ್ಡಲಾಗಿ  ಕುಳಿತು ಧರಣಿ ನಡೆಸಿದ್ದು, ನಾರಾಯಣನನ್ನು ತಮ್ಮ ವಶಕ್ಕೆ ನೀಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ.  ಅಲ್ಲದೇ ದೈಹಿಕ ಶಿಕ್ಷಕನನ್ನ ಸಾಯಿಸುವ ವರೆಗೂ ಇಲ್ಲಿಂದ ಹೋಗಲ್ಲ ಅಂತ ಪಟ್ಟು ಹಿಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಸ್ಥಳಕ್ಕೆ ದೇವನಹಳ್ಳಿ ಎಸಿಪಿ ಶ್ರೀ ಹರ್ಷ ಹಾಗು ಡಿಸಿಪಿ ಮಿಥುನ್ ಕುಮಾರ್ ದೌಡಾಯಿಸಿದ್ದು, ಧರಣಿ ನಿರತ ಪೋಷಕರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 2:31 pm, Wed, 8 July 26

Source link

ಎಸ್​ಐಆರ್​ ವೇಳೆ ಬಿಎಲ್​ಒಗೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ: ಅಟ್ರಾಸಿಟಿ ಕೇಸ್ ದಾಖಲು – Kannada News | Atrocity case Booked In venur Station Over casteist abusing against BLO During SIR at Mangaluru

ಮಂಗಳೂರು, (ಜುಲೈ 08): ಎಸ್ಐಆರ್  (SIR)ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು(BLO) ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಅದರಂತೆ ಶಿರ್ಲಾಲು ಗ್ರಾಮದ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎಸ್​​ಐಆರ್ ಪ್ರಕ್ರಿಯೆಗೆಂದು ತೆರಳಿದ್ದರು. ಆದ್ರೆ, ಈ ವೇಳೆ ನಿಮ್ಮ ಜಾತಿಯವರು ಒಳಗೆ ಬರಬಾರದು ಎಂದು ಅಂಗಳದಲ್ಲೇ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ SC/ST act-2015(u/s-3(1)(r),3(2)(va) ಅಡಿಯಲ್ಲಿ ದೂರು ದಾಖಲಾಗಿದೆ.

ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ ಮಾಧವ ಎಂಬರೊಂದಿಗೆ ತೆರಳಿದ್ದರು. ಈ ವೇಳೆ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿದ ಮನೆಯ ಯಜಮಾನಿ ಯಶೋಧ ಆಚಾರಿ ಮನೆಯ ಸಿಟ್ ಔಟ್ ಗೆ ಪ್ರವೇಶಿಸದಂತೆ ಮೆಟ್ಟಿಲ ಬಳಿ ತಡೆದು ನಿಲ್ಲಿಸಿದ್ದಾರೆ. ಈ ರೀತಿ ಯಶೋಧ ಆಚಾರಿ ಅಪಮಾನ ಮಾಡಿ, ಜಾತಿ ನಿಂದನೆ ಮಾಡಿರುವುದಾಗಿ ಬಿಎಲ್.ಒ. ಜು.7 ರಂದು ಪೊಲೀಸ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ: ಆರ್. ಅಶೋಕ್ ಗಂಭೀರ ಆರೋಪ

ಬಿ.ಎಲ್.ಒ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಯಶೋಧ ಆಚಾರಿ ವಿರುದ್ಧ SC/ST act-2015(u/s-3(1)(r),3(2)(va)) ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.  ಕರ್ನಾಟಕದಲ್ಲಿ ಈ ರೀತಿ ಎಸ್​​​ಐಆರ್ ವೇಳೆ ಜಾತ ನಿಂದನೆ ಮಾಡಿದ ಆರೋಪ ವರದಿಯಾಗಿದ್ದು, ಇದೇ ಮೊದಲ ಪ್ರಕರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತ vs ಇಂಗ್ಲೆಂಡ್ 4ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | India vs England 4th T20I Date, When And Where?

ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್​ಗಳು ಮುಗಿದಿದೆ. ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾದರೆ, ದ್ವಿತೀಯ ಮತ್ತು ತೃತೀಯ ಪಂದ್ಯಗಳನ್ನು ಇಂಗ್ಲೆಂಡ್ ತಂಡ ಗೆದ್ದುಕೊಂಡಿದೆ. ಈ ಗೆಲುವುಗಳೊಂದಿಗೆ ಆಂಗ್ಲರ ಪಡೆ 5 ಮ್ಯಾಚ್​ಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇತ್ತ ಈ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ಮುಂದಿನ ಎರಡು ಪಂದ್ಯಗಳಲ್ಲೂ ಜಯ ಸಾಧಿಸಲೇಬೇಕು.

ಅದರಲ್ಲೂ ಟೀಮ್ ಇಂಡಿಯಾ ಪಾಲಿಗೆ ನಾಲ್ಕನೇ ಮ್ಯಾಚ್ ನಿರ್ನಾಯಕ. ಜುಲೈ 9 ರಂದು ನಡೆಯಲಿರುವ ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಭಾರತ ಮತ್ತು ಇಂಗ್ಲೆಂಡ್​ ನಡುವಣ 4ನೇ ಟಿ20 ಪಂದ್ಯ ಗುರುವಾರ (ಜು.9) ನಡೆಯಲಿದೆ.
  • ಬ್ರಿಸ್ಟಲ್​ನ ಸೀಟ್ ಯುನಿಕ್ ಸ್ಟೇಡಿಯಂ ನಲ್ಲಿ ಈ ಮ್ಯಾಚ್ ಜರುಗಲಿದೆ.
  • ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10:00 ಗಂಟೆಗೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಬ್ರಿಸ್ಟಲ್​ ಪಿಚ್ ರಿಪೋರ್ಟ್:

ಬ್ರಿಸ್ಟಲ್‌ನ ಸೀಟ್ ಯುನಿಕ್ ಸ್ಟೇಡಿಯಂ ಪಿಚ್ ಪ್ರಮುಖವಾಗಿ ಬ್ಯಾಟಿಂಗ್‌ಗೆ ಸಹಕಾರಿ. ಈ ಮೈದಾನದ ಪಿಚ್ ಸಾಮಾನ್ಯವಾಗಿ ಫ್ಲಾಟ್ ಆಗಿರುತ್ತದೆ. ಅಂದರೆ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟರ್‌ಗಳು ಸುಲಭವಾಗಿ ದೊಡ್ಡ ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಬಹುದು.

ಹಾಗೆಯೇ ಪಂದ್ಯದ ಆರಂಭಿಕ ಓವರ್‌ಗಳಲ್ಲಿ ಹೊಸ ಚೆಂಡಿನಲ್ಲಿ ವೇಗದ ಬೌಲರ್‌ಗಳಿಗೆ ಉತ್ತಮ ಬೌನ್ಸ್ ಮತ್ತು ಸ್ವಿಂಗ್ ಸಿಗುವ ಸಾಧ್ಯತೆ ಇರುತ್ತದೆ.

ಇನ್ನು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಇಲ್ಲಿನ ಸಣ್ಣ ಬೌಂಡರಿಗಳು ಮತ್ತು ಫ್ಲಾಟ್ ಪಿಚ್‌ನಿಂದಾಗಿ ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಸಾಕಷ್ಟು ಕಷ್ಟಪಡಬೇಕಾಗುತ್ತದೆ. ಹೀಗಾಗಿ ನಾಲ್ಕನೇ ಮ್ಯಾಚ್​ನಲ್ಲೂ ರನ್​ ಮಳೆಯನ್ನು ನಿರೀಕ್ಷಿಸಬಹುದು.

ಉಭಯ ತಂಡಗಳು:

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಅರ್ಜೆಂಟೀನಾ ಪರ ‘ಆಡುತ್ತಿರುವ’ ರೆಫರಿ… ಗಂಭೀರ ಆರೋಪ!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Source link

ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಆತಂಕದಲ್ಲಿ 200 ಕುಟುಂಬಗಳು – Kannada News | Mangaluru NH 169 Landslide: Wayanad Disaster Companys Unscientific Work Raises Safety Concerns

ಮಂಗಳೂರು, ಜುಲೈ 08: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕಾರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ 169 ವಿಸ್ತರಣೆ ಕಾಮಗಾರಿ ವೇಳೆ ನಡೆದ ಅವೈಜ್ಞಾನಿಕ ನಿರ್ಮಾಣವು ಭೂಕುಸಿತಕ್ಕೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡವನ್ನು ಲಂಬಾಕೃತಿಯಲ್ಲಿ ಅಗೆದಿರುವುದು ಪ್ರತಿ ಮಳೆಗಾಲದಲ್ಲೂ ಭೂಕುಸಿತಕ್ಕೆ ದಾರಿ ಮಾಡಿಕೊಡುತ್ತಿದೆ. ಕೇರಳದ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸುವಾಗ ದುರಂತಕ್ಕೆ ಕಾರಣವಾದ DBL ಕಂಪನಿಯೇ ಈ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ ಎನ್ನಲಾಗಿದೆ. ಕಂಪನಿಯ ಅವೈಜ್ಞಾನಿಕ ವಿಧಾನಗಳಿಂದಾಗಿ ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಗುಡ್ಡ ಕುಸಿತ ಸಾಮಾನ್ಯವಾಗಿದೆ. ಈ ಬಾರಿ ಮಣ್ಣು ರಸ್ತೆಗೆ ಕುಸಿದು ಒಂದು ಬದಿಯ ಸಂಚಾರವನ್ನು ಬಂದ್ ಮಾಡಲಾಗಿದೆ. ಕೇವಲ ಒಂದು ಪಥದಲ್ಲಿ ದ್ವಿಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ ಮಾಡಿದ ಸಾಯಿಲ್ ನೇಲಿಂಗ್ ವಿಧಾನವೂ ವಿಫಲವಾಗಿದ್ದು, ಪ್ರಸ್ತುತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆತ್ತಿಕಲ್ ಮಾತ್ರವಲ್ಲದೆ, ಹೆದ್ದಾರಿಯ ಇತರ ಭಾಗಗಳಲ್ಲೂ ಇದೇ ರೀತಿಯ ಅವೈಜ್ಞಾನಿಕ ಅಗೆತ ನಡೆಸಲಾಗಿದೆ. ಒಂದು ವೇಳೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದರೆ, ಕೆಳಭಾಗದ 200ಕ್ಕೂ ಹೆಚ್ಚು ಮನೆಗಳು ಮತ್ತು ಗ್ರಾಮಗಳಿಗೆ ಅಪಾಯವಿದೆ. ಕಳೆದ ವರ್ಷ 12 ಮನೆಗಳನ್ನು ಸ್ಥಳಾಂತರಿಸಲಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು! – Kannada News | Wayanad Landslide: Karnataka Registered Water Tanker Caught in Terrifying Mudslide Video

ವಯನಾಡ್, ಜುಲೈ 8: ಕೇರಳದ ವಯನಾಡು ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ಎನ್​​ಡಿಆರ್​​ಎಫ್ ತಂಡವು ಕಳೆದ 25 ಗಂಟೆಗಳಿಂದ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ದುರಂತದ ಸಂದರ್ಭ ಸ್ಥಳದಲ್ಲಿ ಕಾಣಿಸಿದ, ವೈರಲ್ ಆದ ವಿಡಿಯೋಗಳಲ್ಲಿದ್ದ ಟ್ಯಾಂಕರ್ ಕರ್ನಾಟಕ ನೋಂದಣಿಯದ್ದು ಎಂಬುದು ಗೊತ್ತಾಗಿದೆ. ರಾಮನಗರ ಜಿಲ್ಲೆಯ ಆರ್​ಟಿಒ (KA 42, B 9671) ನೋಂದಣಿಯ ದಿಲೀಪ್ ಬಿಲ್ಡ್‌ಕಾನ್ ಲಿಮಿಟೆಡ್‌ಗೆ ಸೇರಿದ ಈ ನೀರಿನ ಟ್ಯಾಂಕರ್, ಸುರಂಗ ಕಾಮಗಾರಿ ಸ್ಥಳಕ್ಕೆ ನೀರು ಪೂರೈಸಲು ಹೋಗುತ್ತಿತ್ತು. ಚಾಲಕ ಪರಿಸ್ಥಿತಿಯ ಬಗ್ಗೆ ಗೊಂದಲದಲ್ಲಿದ್ದಾಗ, ರಭಸವಾಗಿ ಬಂದ ಮಳೆ ನೀರು ಮತ್ತು ಭೂಕುಸಿತದ ಕೆಸರು ಮಿಶ್ರಿತ ಪ್ರವಾಹಕ್ಕೆ ಟ್ಯಾಂಕರ್ ಕೊಚ್ಚಿಕೊಂಡು ಬಂದು, ಅದೃಷ್ಟವಶಾತ್ ಅಪಾಯದಿಂದ ಬಚಾವಾಗಿದೆ. ಟ್ಯಾಂಕರ್‌ನಲ್ಲಿದ್ದ ಚಾಲಕ ಸುರಕ್ಷಿತವಾಗಿದ್ದು, ಘಟನೆಗೆ ಮುನ್ನ ಟ್ಯಾಂಕರ್ ಮುಂಭಾಗದಲ್ಲಿ ಸಿಲುಕಿದ್ದ ದಂಪತಿಗಳು ಸಹ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಯಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೆರೆಗೆ ಬರುತ್ತಿದೆ ‘ದಾದಾ’ನ ದಾದಾಗಿರಿ, ಬಿಡುಗಡೆ ದಿನಾಂಕ ಘೋಷಣೆ – Kannada News | Dada The Saurav Ganguly story movie poster released

ಸೌರವ್ ಗಂಗೂಲಿ (Saurav Ganguly), ಭಾರತ ಕ್ರಿಕೆಟ್​​ನ ನಂಬರ್ 1 ನಾಯಕ. ಭಾರತ ಕ್ರಿಕೆಟ್ ಚಹರೆಯನ್ನೇ ಬದಲಾಯಿಸಿದ ವ್ಯಕ್ತಿ. ಅದ್ಭುತ ಬ್ಯಾಟ್ಸ್​​ಮನ್ ಆಗಿದ್ದ ಜೊತೆಗೆ ಭಾರತ ಕ್ರಿಕೆಟ್ ತಂಡಕ್ಕೆ ‘ವಿನ್ನಿಂಗ್ ಮೈಂಡ್​​ಸೆಟ್’ ತೋರಿಸಿಕೊಟ್ಟ ನಾಯಕ. ವಿಶ್ವಕಪ್ ಗೆದ್ದಿಲ್ಲವಾದರೂ ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಮೊದಲಿಗರು ಎನ್ನಬಹುದು ಸೌರವ್ ಗಂಗೂಲಿ ಅವರನ್ನು. ಇದೀಗ ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕನ ಜೀವನ ಕುರಿತಾದ ಕತೆ ಸಿನಿಮಾ ಆಗಿದೆ. ಮಾತ್ರವಲ್ಲದೆ ಇಂದು (ಜುಲೈ 8) ಸೌರವ್ ಗಂಗೂಲಿ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.

ಸೌರವ್ ಗಂಗೂಲಿ ಅವರನ್ನು ಅವರ ಗೆಳೆಯರು, ಕ್ರಿಕೆಟ್ ಸಹವರ್ತಿಗಳು ‘ದಾದಾ’ ಎಂದು ಕರೆಯುತ್ತಿದ್ದರು. ಹಾಗಾಗಿ ಸೌರವ್ ಜೀವನ ಆಧರಿಸಿದ ಸಿನಿಮಾಕ್ಕೆ ಸಹ ಅದೇ ಹೆಸರು ಇಡಲಾಗಿದೆ. ‘ದಾದಾ – ದಿ ಸೌರವ್ ಗಂಗೂಲಿ ಸ್ಟೋರಿ’ ಸಿನಿಮಾನಲ್ಲಿ ಸೌರವ್ ಗಂಗೂಲಿ ಪಾತ್ರದಲ್ಲಿ ಬಾಲಿವುಡ್ ನಟ ರಾಜ್​​ಕುಮಾರ್ ರಾವ್ ನಟಿಸಿದ್ದಾರೆ. ಚಿತ್ರದ ಫಸ್ಟ್-ಲುಕ್ ಪೋಸ್ಟರ್ ಇಂದು ಬಿಡುಗಡೆ ಆಗಿದ್ದು, ಚಿತ್ರವು 2027ರ ಮೇ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ .

ಈಗ ಬಿಡುಗಡೆ ಆಗಿರುವ ಪೋಸ್ಟರ್‌ನಲ್ಲಿ 2002ರಲ್ಲಿ ಇಂಗ್ಲೆಂಡ್ ವಿರುದ್ಧದ ನಾಟ್‌ವೆಸ್ಟ್ ಟ್ರೋಫಿ ಗೆದ್ದ ನಂತರ ಲಾರ್ಡ್ಸ್ ಬಾಲ್ಕನಿಯಲ್ಲಿ ಗಂಗೂಲಿ ಅವರು ಶರ್ಟ್ ಬಿಚ್ಚಿ ಸಂಭ್ರಮಿಸಿದ ಆ ಸುಪ್ರಸಿದ್ಧ ಕ್ಷಣವನ್ನು ಮರುಸೃಷ್ಟಿಸಲಾಗಿದೆ. ಈ ಸಿನಿಮಾನಲ್ಲಿ ಗಂಗೂಲಿ ಅವರ ಯುವ ಕ್ರಿಕೆಟಿಗನಾಗಿದ್ದ ದಿನಗಳಿಂದ ಹಿಡಿದು ಭಾರತದ ಅತ್ಯಂತ ಪ್ರಭಾವಶಾಲಿ ನಾಯಕನಾಗಿ ಬೆಳೆದ ಪ್ರಯಾಣದ ಕತೆ ಇರಲಿದೆ. ಭಾರತ ಕ್ರಿಕೆಟ್ ಮೇಲೆ ಸೌರವ್ ಅವರ ಪ್ರಭಾವ, ತಂದ ಬದಲಾವಣೆಗಳ ಮೇಲೆ ಸಿನಿಮಾದ ಕತೆ ಕೇಂದ್ರೀಕೃತವಾಗಿರಲಿದೆ.

ಇದನ್ನೂ ಓದಿ:ಕೋಲ್ಕತ್ತಾದಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಶೂಟಿಂಗ್ ಶುರು; ‘ದಾದಾ’ ಆಟಕ್ಕೆ ಮೈದಾನ ಸಜ್ಜು

‘ದಾದಾ – ದಿ ಸೌರವ್ ಗಂಗೂಲಿ ಸ್ಟೋರಿ’ ಚಿತ್ರವನ್ನು ವಿಕ್ರಮಾದಿತ್ಯ ಮೊಟ್ವಾನಿ ನಿರ್ದೇಶಿಸುತ್ತಿದ್ದು, ಲವ್ ರಂಜನ್ ಮತ್ತು ಅಂಕೂರ್ ಗಾರ್ಗ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗುಲ್ಶನ್ ಕುಮಾರ್, ಭೂಷಣ್ ಕುಮಾರ್, ಟಿ-ಸೀರೀಸ್ ಮತ್ತು ಡಿಬಿಎಲ್ ಪ್ರಸ್ತುತಪಡಿಸುತ್ತಿದ್ದು, ಇದು ಲವ್ ಫಿಲ್ಮ್ಸ್ ನಿರ್ಮಾಣದ ಅಡಿಯಲ್ಲಿ ಬರುತ್ತಿದೆ. ಸಿನಿಮಾನಲ್ಲಿ ರಾಜ್​​ಕುಮಾರ್ ರಾವ್ ಸೌರವ್ ಗಂಗೂಲಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಖುದ್ದು ಗಂಗೂಲಿ ಅವರೇ ಇಂದು ಸಿನಿಮಾದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ವಿಶ್ವ ದಾಖಲೆ… 5 ಪಂದ್ಯಗಳಲ್ಲೂ ‘ಸೋಲದ’ ಶ್ರೇಯಸ್ ಅಯ್ಯರ್!

Source link

ಕೊಡಗು: 24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ – Kannada News | Kodagu: Elephant Rescue Delayed, Villagers Outraged as Wild Tusker Struggles in Kannambadi Lake

ಕೊಡಗು, ಜು.8: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕನ್ನಂಬಾಡಿ ಗ್ರಾಮದಲ್ಲಿ ಕಾಡಾನೆಯೊಂದು ಕೆರೆಯಲ್ಲಿ ಸಿಲುಕಿ 24 ಗಂಟೆಗೂ ಹೆಚ್ಚು ಕಾಲ ನರಳಾಡುತ್ತಿದೆ. ಖಾಸಗಿ ತೋಟದ ಕೆರೆಯಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದೆ. ಆನೆಯು ಹೊರಬರಲು ಪ್ರಯತ್ನಿಸಿ ವಿಫಲವಾಗಿದ್ದು, ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ, ಸುಮಾರು 24 ಗಂಟೆ ಕಳೆದರೂ ಯಾವುದೇ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಧಾವಿಸಿಲ್ಲ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಸರಿನಲ್ಲಿ ಹೆಚ್ಚು ಸಮಯವಿದ್ದರೆ ಆನೆಯ ಕಾಲಿಗೆ ಸೋಂಕು ತಗುಲಿ ಕೊಳೆಯುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅನ್ನಾಹಾರವಿಲ್ಲದೆ ಬಳಲುತ್ತಿರುವ ಆನೆಯನ್ನು ಕೂಡಲೇ ರಕ್ಷಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ಕನಿಷ್ಠ ಸಾಕಾನೆಗಳನ್ನಾದರೂ ಕರೆತಂದು ಕಾಡಾನೆಯನ್ನು ರಕ್ಷಿಸುವ ಪ್ರಯತ್ನ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿನ ರೊಮ್ಯಾನ್ಸ್ ಝಲಕ್; ಯಶ್-ಕಿಯಾರಾ ಬೋಲ್ಡ್ ದೃಶ್ಯದ ಗ್ಯಾಲರಿ

Source link

ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು: 40 ನಿಮಿಷ ವಾಹನ ಸಂಚಾರ ಸ್ಥಗಿತ

ಬೆಂಗಳೂರು, ಜು.8: ಸಿಲಿಕಾನ್ ಸಿಟಿಯ ಬಿಡುವಿಲ್ಲದ ರಸ್ತೆಗಳಲ್ಲಿ ಒಂದಾದ ಪ್ಯಾಲೇಸ್ ರಸ್ತೆಯಲ್ಲಿ ನಿನ್ನೆ ಸಂಜೆ ಭೀತಿ ಹಾಗೂ ಆಶ್ಚರ್ಯದ ವಾತಾವರಣ ಸೃಷ್ಟಿಯಾಗಿತ್ತು. ರಸ್ತೆಯ ಮಧ್ಯಭಾಗದಲ್ಲೇ ಬೃಹತ್ ನಾಗರಹಾವೊಂದು ಪ್ರತ್ಯಕ್ಷವಾಗಿ, ಹೆಡೆಬಿಚ್ಚಿ ಕುಳಿತಿದ್ದರಿಂದ ವಾಹನ ಸವಾರರು ಹಾಗೂ ಸ್ಥಳೀಯರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ನಿನ್ನೆ ಸಂಜೆ ಸುಮಾರಿಗೆ ಪ್ಯಾಲೇಸ್ ರಸ್ತೆಯ ಮುಖ್ಯ ರಸ್ತೆಗೆ ಬಂದ ನಾಗರಹಾವು, ರಸ್ತೆಯ ಮಧ್ಯದಲ್ಲೇ ಹೆಡೆಬಿಚ್ಚಿ ಕೆಲಕಾಲ ಅಲ್ಲೇ ಇತ್ತು. ಇದನ್ನು ನೋಡಿದ ಬೈಕ್ ಹಾಗೂ ಕಾರು ಸವಾರರು ಹಾವಿಗೆ ಮತ್ತು ತಮಗೂ ಅಪಾಯವಾಗದಂತೆ ವಾಹನಗಳನ್ನು ಕೆಲ ಹೊತ್ತು ಅಲ್ಲೇ ನಿಲ್ಲಿಸಿದರು. ರಸ್ತೆ ಮಧ್ಯೆ ಹಾವು ಪ್ರತ್ಯಕ್ಷವಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಹಾದಿಹೋಕರು ಹಾವನ್ನು ನೋಡಲು ಮುಗಿಬಿದ್ದರು. ವಿಪರೀತ ವಾಹನ ಸಂಚಾರವಿರುವ ಪ್ಯಾಲೇಸ್ ರಸ್ತೆಯಲ್ಲಿ ಹಾವು ಹೆಡೆಬಿಚ್ಚಿ ಕುಳಿತಿದ್ದರಿಂದ ಸುಮಾರು 30 ರಿಂದ 40 ನಿಮಿಷಗಳ ಕಾಲ ಸಂಚಾರಕ್ಕೆ ಕೊಂಚ ಅಡಚಣೆ ಉಂಟಾಯಿತು. ಮುಖ್ಯವಾಗಿ ಬಿಎಂಟಿಸಿ ಬಸ್ ಸೇರಿದಂತೆ ದೊಡ್ಡ ವಾಹನಗಳ ಸಂಚಾರಕ್ಕೆ ಸಮಸ್ಯೆ ಎದುರಾಯಿತು. ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ವಾಹನಗಳನ್ನು ನಿಯಂತ್ರಣ ಮಾಡಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ನಾಗರಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version