ತಮಿಳುನಾಡು: ವಾಲ್ಪಾರೈ ಘಾಟ್ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು – Kannada News | Tamil Nadu Valparai Ghat Road Accident: 9 Tourists from Kerala Killed as Van Plunges into Deep Gorge Near Pollachi
ಕೊಯಮತ್ತೂರು, ಏಪ್ರಿಲ್ 18: ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ. ಮೃತರನ್ನು ಅಜಿತಾ (54), ರಮ್ಲಾ (52),…