ಮತ್ತೋರ್ವ ಆರೋಪಿ ಎಸ್ಕೇಪ್: ಊಟದ ನೆಪ ಒಡ್ಡಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ತಳ್ಳಿ ಪರಾರಿ – Kannada News | Shivamogga: Accused Escapes While Being Taken to Jail
ಶಿವಮೊಗ್ಗ, ಜುಲೈ 16: ರಾಜ್ಯದಲ್ಲಿ ಇತ್ತೀಚೆಗೆ ಜೈಲಿನಿಂದ ಪರಾರಿಯಾಗುತ್ತಿರುವ ಕೈದಿಗಳ (Prisoners Escape) ಸಂಖ್ಯೆ ಹೆಚ್ಚುತ್ತಿದೆ. ಮೊನ್ನೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದರು. ಇದಕ್ಕೂ ಮುನ್ನ ಅಫಜಲಪುರ ಪೊಲೀಸ್ ಠಾಣೆಯಿಂದ ರಾತ್ರೋರಾತ್ರಿ ಪೋಕ್ಸೋ ಪ್ರಕರಣದ ಆರೋಪಿ ಒಬ್ಬ ಪರಾರಿಯಾಗಿದ್ದ. ಇವೆಲ್ಲಾ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಶಿವಮೊಗ್ಗ (shivamogga) ಸೆಂಟ್ರಲ್ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್ ಆಗಿದ್ದಾನೆ. ನಡೆದಿದ್ದೇನು? ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಅಕ್ರಮ ನಾಟಾ ಪ್ರಕರಣದ…