ಭಾರತದಲ್ಲಿ ಈ ವರ್ಷ ದಾಖಲೆಯ 1.37 ಲಕ್ಷ ಎಂಬಿಬಿಎಸ್ ಸೀಟುಗಳಿಗೆ ಅನುಮೋದನೆ; ಕರ್ನಾಟಕಕ್ಕೆ ಹೆಚ್ಚು ಲಾಭ! – Kannada News | Record MBBS Seats Approved this Year Karnataka tops the list with 15,395 seats
ನವದೆಹಲಿ, ಜುಲೈ 16: ಭಾರತದಲ್ಲಿ ಈ ಬಾರಿ ವೈದ್ಯರ ಸಂಖ್ಯೆ ಹೆಚ್ಚಾಗಲಿದೆ. ಏಕೆಂದರೆ, ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 1.37 ಲಕ್ಷ ಎಂಬಿಬಿಎಸ್ (MBBS) ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮೋದನೆ ನೀಡಿದೆ. ಇನ್ನೊಂದು ಮುಖ್ಯವಾದ ಸಂಗತಿಯೆಂದರೆ, ರಾಜ್ಯವಾರು ಎಂಬಿಬಿಎಸ್ ಸೀಟು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಸೀಟುಗಳನ್ನು ನೀಡಲಾಗಿದೆ. ದೇಶದಲ್ಲೇ ಅತಿಹೆಚ್ಚು ಎಂಬಿಬಿಎಸ್ ಸೀಟುಗಳನ್ನು ಪಡೆಯುವ ಮೂಲಕ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ. ನೀಟ್-ಯುಜಿ…