ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ – Kannada News | Gadag: Anna Bhagya Rice Smuggling Foiled, 32 Tonnes Seized En Route to Maharashtra
ಗದಗ, ಜುಲೈ 16: ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಅನ್ಮಭಾಗ್ಯ ಅಕ್ಕಿಯನ್ನು ಕಾರ್ಯಾಚರಣೆ ನಡೆಸಿ ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಗದಗ ತಾಲೂಕಿನ ಬಿಂಕದಟ್ಟಿ ಗ್ರಾಮದ ಬಳಿ ನಡೆದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 32 ಟನ್ ತೂಕದ 608 ಚೀಲ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿಗಳು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಸಾಗಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ನ ವಶಕ್ಕೆ ಪಡೆಯಲಾಗಿದ್ದು, ಗದಗ ಗ್ರಾಮೀಣ ಪೊಲೀಸ್…