ಮಹಾರಾಷ್ಟ್ರದಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ; ಆಸ್ಪತ್ರೆಗೆ ದಾಖಲು – Kannada News | Former Punjab Deputy CM Sukhbir Singh Badal Attacked In Nanded hospitalised

ನಾಂದೇಡ್, ಆಗಸ್ಟ್ 13: ಶಿರೋಮಣಿ ಅಕಾಲಿದಳದ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ (Sukhbir Singh Badal) ಅವರ ಮೇಲೆ ಇಂದು (ಆಗಸ್ಟ್ 13) ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರವೊಂದರಲ್ಲಿ ದಿಢೀರ್ ದಾಳಿ ನಡೆದಿದೆ. ಇದರಿಂದ ಅವರು ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ರಾಜ್ಯ ಸಚಿವರೂ ಆಗಿರುವ ಬಾದಲ್ ಅವರು ಮುದ್ಖೇಡ್ ತಾಲೂಕಿನ ಮುಗಾಟ್‌ನಲ್ಲಿರುವ ‘ಗುರುದ್ವಾರ ಮಾತಾ ಸಾಹಿಬ್ ದೇವಾಜಿ’ಗೆ ಭೇಟಿ ನೀಡಿದ್ದಾಗ ಈ ಘಟನೆ ಸಂಭವಿಸಿದೆ.

64 ವರ್ಷದ ಬಾದಲ್ ಅವರ ಕೈಗೆ ತಲ್ವಾರ್​​ನಿಂದ ಇರಿದ ಪರಿಣಾಮವಾಗಿ ತೀವ್ರ ಗಾಯಗಳಾಗಿದ್ದು, ರಕ್ತ ಸೋರುತ್ತಿದ್ದ ಎಡಕೈಗೆ ಬಟ್ಟೆ ಕಟ್ಟಿಕೊಂಡು ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಬಿಜೆಪಿಯಿಂದ ಮಾತ್ರ ಪಂಜಾಬ್​​ನಲ್ಲಿ ಅಭಿವೃದ್ಧಿ ಸಾಧ್ಯ; ಆಪ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪ್ರಧಾನಿ ಮೋದಿ ಭೇಟಿಯ ಬೆನ್ನಲ್ಲೇ ದಾಳಿ:

ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಶಿರೋಮಣಿ ಅಕಾಲಿದಳ ಮತ್ತು ಭಾರತೀಯ ಜನತಾ ಪಾರ್ಟಿ (BJP) ಮತ್ತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳ ನಡುವೆ, ಕಳೆದ ವಾರ ದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಬಾದಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿ ನಡೆದ ಕೆಲವೇ ದಿನಗಳಲ್ಲಿ ಅವರ ಮೇಲೆ ದಾಳಿ ನಡೆದಿದೆ. ಪ್ರಧಾನಿ ಭೇಟಿಯ ಮರುದಿನವೇ, ಮಹಿಳಾ ಮೀಸಲಾತಿ ವಿಧೇಯಕ ಮತ್ತು ಕ್ಷೇತ್ರ ಮರುವಿಂಗಡಣೆ ವಿಧೇಯಕವನ್ನು ತಕ್ಷಣವೇ ಜಾರಿಗೆ ತರಬೇಕೆಂದು ಬಾದಲ್ ಅವರ ಪಕ್ಷ ಒತ್ತಾಯಿಸಿತ್ತು.

ದಾಳಿ ನಡೆಸಿದವರ ಬಂಧನ:

ಇಂದು ಮಧ್ಯಾಹ್ನ ಸುಮಾರು 1.50ರ ಸುಮಾರಿಗೆ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ, ಸಿಖ್ ಸ್ವಯಂಸೇವಕನೊಬ್ಬ ಬಾದಲ್ ಅವರ ಕೈಗೆ ತಲ್ವಾರ್​​ನಿಂದ ದಾಳಿ ನಡೆಸಿದನು. ಈ ವೇಳೆ ಬಾದಲ್ ಅವರನ್ನು ರಕ್ಷಿಸಲು ಯತ್ನಿಸಿದ ವಿಶೇಷ ರಕ್ಷಣಾ ಪಡೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಕೇಂಗ್ರೆ ಅವರ ಕೈಗೂ ಗಾಯಗಳಾಗಿವೆ. ಇಬ್ಬರನ್ನೂ ನಾಂದೇಡ್‌ನ ಯಶೋಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಇದನ್ನೂ ಓದಿ: ಪಂಜಾಬ್‌ನ ಸಂಗ್ರೂರ್​​ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಜಸ್ಪಾಲ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ನಿಹಾಂಗ್ ಸಿಖ್ ಆಗಿದ್ದು ಕಳೆದ 2 ವರ್ಷಗಳಿಂದ ಗುರುದ್ವಾರದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಾದಲ್ ಮೇಲಿನ ಎರಡನೇ ಬಾರಿ ದಾಳಿ:

ಕಳೆದ 2 ವರ್ಷಗಳಲ್ಲಿ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿಯವರ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಈ ಹಿಂದೆ 2024ರ ಡಿಸೆಂಬರ್‌ನಲ್ಲಿ ಅಮೃತಸರದ ಸ್ವರ್ಣ ಮಂದಿರದ ಪ್ರವೇಶದ್ವಾರದಲ್ಲಿ ಬಾದಲ್ ಅವರ ಮೇಲೆ ದಾಳಿ ನಡೆಸಲಾಗಿತ್ತು. ಆ ದಾಳಿಕೋರನನ್ನು ಡೇರಾಬಾಬಾ ನಿವಾಸಿ ಹಾಗೂ ದಳ ಖಾಲ್ಸಾ ಸಂಘಟನೆಯ ಸದಸ್ಯ ನಾರಾಯಣ್ ಸಿಂಗ್ ಚೌರಾ ಎಂದು ಗುರುತಿಸಲಾಗಿತ್ತು. 2007ರ ಗುರು ಗ್ರಂಥ ಸಾಹಿಬ್ ಅಪಚಾರ ಪ್ರಕರಣದಲ್ಲಿ ಗುರ್ಮೀತ್ ರಾಮ್ ರಹೀಮ್ ಅವರನ್ನು ಬೆಂಬಲಿಸಿದ ಆರೋಪದ ಮೇಲೆ ಅಕಾಲ ತಖ್ತ್ ಬಾದಲ್ ಅವರಿಗೆ ಧಾರ್ಮಿಕ ಶಿಕ್ಷೆ ವಿಧಿಸಿದ ನಂತರ ಆ ದಾಳಿ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ 15ರಂದು ವಿಧಾನಸೌಧ ಮುಂದೆ ಫ್ರೀಡಂ ಹಬ್ಬ: ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ – Kannada News | Independence Day 2026: Vidhana Soudha Traffic Alert for August 15, Road Closures and Alternate Routes

ಬೆಂಗಳೂರು, ಆಗಸ್ಟ್​​ 13: ಸ್ವಾತಂತ್ರ್ಯ ದಿನಾಚರಣೆಯಂದು (Independence Day) ವಿಧಾನಸೌಧದ ಮುಂಭಾಗದಲ್ಲಿ ‘ಫ್ರೀಡಂ ಹಬ್ಬ’ ಕಾರ್ಯಕ್ರಮ ಆಯೋಜನೆಯಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ. ಈ ಹಬ್ಬಕ್ಕೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿರುವುದರಿಂದ ವಿಧಾನಸೌಧದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ವಾಹನ ಸಂಚಾರ ಮಾರ್ಗಗಳನ್ನು (traffic diversions) ಮಾರ್ಪಾಡು ಮಾಡಿದ್ದಾರೆ.

ಸಂಚಾರ ನಿರ್ಬಂಧ

ಫ್ರೀಡಂ ಹಬ್ಬ ಕಾರ್ಯಕ್ರಮ ಹಿನ್ನೆಲೆ ಅಂಬೇಡ್ಕರ್ ರಸ್ತೆಯ ಮೂಲಕ ಕೆ.ಆರ್. ಸರ್ಕಲ್ ಕಡೆಗೆ ಹೋಗುವ ಹಾಗೂ ಕೆ.ಆರ್. ಸರ್ಕಲ್‌ನಿಂದ ಅಂಬೇಡ್ಕರ್ ರಸ್ತೆಯ ಮೂಲಕ ಶಿವಾಜಿನಗರ ಮತ್ತು ವಸಂತನಗರ ಕಡೆಗೆ ತೆರಳುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. (ವಿಧಾನಸೌಧ ಮುಂಭಾಗದ ಎರಡು ಬದಿಯ ರಸ್ತೆಗಳನ್ನು ಬಂದ್ ಮಾಡಲಾಗುವುದು).

ಪರ್ಯಾಯ ಮಾರ್ಗಗಳು ಹೀಗಿವೆ

  • ಅಂಬೇಡ್ಕರ್ ರಸ್ತೆಯಿಂದ ಕೆ.ಆರ್. ಸರ್ಕಲ್ ಕಡೆಗೆ ಹೋಗುವ ವಾಹನಗಳು ಬಾಳೆಕುಂದ್ರಿ ಜಂಕ್ಷನ್‌ನಿಂದ ಕನ್ನಿಂಗ್‌ಹ್ಯಾಮ್ ರಸ್ತೆಯ ಮೂಲಕ ಚಂದ್ರಿಕಾ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬಸವೇಶ್ವರ ಜಂಕ್ಷನ್ ಹಾಗೂ ಪ್ಯಾಲೇಸ್ ರಸ್ತೆಯ ಮುಖಾಂತರ ಕೆ.ಆರ್. ಸರ್ಕಲ್ ಕಡೆಗೆ ಸಂಚರಿಸಬಹುದು.
  • ಅಥವಾ ಬಾಳೆಕುಂದ್ರಿ ಜಂಕ್ಷನ್‌ನಿಂದ ಸಿಟಿಒ, ಕ್ವೀನ್ಸ್ ಜಂಕ್ಷನ್, ಸಿದ್ದಲಿಂಗಯ್ಯ ಜಂಕ್ಷನ್, ಆರ್.ಆರ್.ಎಂ.ಆರ್ ರಸ್ತೆ ಹಾಗೂ ಕಾರ್ಪೊರೇಷನ್ ಸರ್ಕಲ್ ಮುಖಾಂತರ ತೆರಳಬಹುದು.
  • ಬಿಆರ್‌ವಿ ಕಡೆಯಿಂದ ಬರುವ ವಾಹನಗಳು ಬಿಆರ್‌ವಿ – ಅನಿಲ್ ಕುಂಬ್ಳೆ ಸರ್ಕಲ್ ಬಳಿ ಬಲತಿರುವು ಪಡೆದು ಕ್ವೀನ್ಸ್ ಜಂಕ್ಷನ್, ಸಿದ್ದಲಿಂಗಯ್ಯ ಜಂಕ್ಷನ್, ಆರ್.ಆರ್.ಎಂ.ಆರ್ ರಸ್ತೆ ಹಾಗೂ ಕಾರ್ಪೊರೇಷನ್ ಸರ್ಕಲ್ ಮುಖಾಂತರ ಸಂಚರಿಸಬಹುದು.

ಇದನ್ನೂ ಓದಿ: Video: ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ

  • ಬಿಆರ್‌ವಿ ಕಡೆಯಿಂದ ಬರುವ ವಾಹನಗಳು ರಾಜಭವನ ರಸ್ತೆಯ ಮೂಲಕ ಚಾಲುಕ್ಯ ಸರ್ಕಲ್‌ನಲ್ಲಿ ಎಡತಿರುವು ಪಡೆದು ಪ್ಯಾಲೇಸ್ ರಸ್ತೆಯ ಮುಖಾಂತರ ಕೆ.ಆರ್. ಸರ್ಕಲ್ ಕಡೆಗೆ ಸಂಚರಿಸಲು ಸೂಚಿಸಲಾಗಿದೆ.
  • ಅಂಬೇಡ್ಕರ್ ರಸ್ತೆಯ ಮೂಲಕ ಶಿವಾಜಿನಗರ ಕಡೆಗೆ ತೆರಳುವ ವಾಹನಗಳು ಮಹಾರಾಣಿ ಮೇಲ್ಸೇತುವೆ ಬಳಿ ಎಡತಿರುವು ಪಡೆದು ಪ್ಯಾಲೇಸ್ ರಸ್ತೆಯ ಬಸವೇಶ್ವರ ಸರ್ಕಲ್ ಮುಖಾಂತರ ವಸಂತನಗರ ಹಾಗೂ ಶಿವಾಜಿನಗರ ಕಡೆಗೆ ಸಂಚರಿಸಬಹುದು.
  • ಅಥವಾ ಕೆ.ಆರ್. ಸರ್ಕಲ್‌ನಿಂದ ನೃಪತುಂಗ ರಸ್ತೆಯ ಮುಖಾಂತರ ಕಾರ್ಪೊರೇಷನ್ ಸರ್ಕಲ್ ಮತ್ತು ಕೆ.ಬಿ. ರಸ್ತೆ (ಖಾಸಾ ಸುಬಾರಾವ್ ರಸ್ತೆ) ಮುಖಾಂತರ ಶಿವಾಜಿನಗರ ಕಡೆಗೆ ತೆರಳಬಹುದು.

ಫ್ರೀಡಂ ಹಬ್ಬ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಸೀಮಂತ್ ಕುಮಾರ್ ಸಿಂಗ್

ಇನ್ನು ಫ್ರೀಡಂ ಹಬ್ಬ ಕಾರ್ಯಕ್ರಮ ವಿಚಾರವಾಗಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘12 ವರ್ಷದ ಮಕ್ಕಳಿದ್ದರೆ ನೋಂದಣಿ‌ ಇರಲಿದೆ. ಇದುವರೆಗೂ 18 ಸಾವಿರ ಜನರು ಆನ್​​ಲೈನ್​​ನಲ್ಲಿ​​ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ಮೂರು ಭಾಗಗಳಾಗಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ರಿಂದ 3 ಗಂಟೆ ಒಂದು ಭಾಗ, ಮಧ್ಯಾಹ್ನ 3 ರಿಂದ ಸಂಜೆ 6 ಗಂಟೆವರೆಗೂ ಎರಡನೇ ಭಾಗ ಮತ್ತು ಸಂಜೆ 6ರ ನಂತರ ಮೂರನೇ ಭಾಗ ಎಂದು ವಿಂಗಡನೆ ಮಾಡಲಾಗಿದ್ದು, ಒಂದೊಂದು ಭಾಗದಲ್ಲೂ ಒಂದೊಂದು ಬಗೆಯ ಕಾರ್ಯಕ್ರಮ‌ ಇರಲಿದೆ’ ಎಂದು ಮಾಹಿತಿ ನೀಡಿದರು.

ಐಪಿಎಲ್ ಪಂದ್ಯ, ಹೊಸ ವರ್ಷದ ಸಂಭ್ರಮಾಚರಣೆ ರೀತಿ ಬಂದೋಬಸ್ತ್ 

ಇನ್ನು ‘ಭದ್ರತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ವಿಧಾನಸೌಧದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿನ ಸಂಖ್ಯೆ ಇರಲಿದೆ. ಐಪಿಎಲ್ ಪಂದ್ಯ, ಹೊಸ ವರ್ಷದ ಸಂಭ್ರಮಾಚರಣೆ ರೀತಿ ಬಿಗಿ ಬಂದೋಬಸ್ತ್ ಭದ್ರತೆ ಇರಲಿದೆ. ಕ್ಯೂಆರ್ ಕೋಡ್​ನಲ್ಲಿ ಇಂತಿಷ್ಟೇ ಸಮಯ ಎಂದು ನಮೂದಿಸಲಾಗಿರುತ್ತೆ. ಆ ಸಮಯದಲ್ಲಿ ಮಾತ್ರ ಅವರಿಗೆ ಅವಕಾಶ ನೀಡಲಾಗುವುದು. 3000ಕ್ಕೂ ಹೆಚ್ಚಿನ‌ ಸಂಖ್ಯೆಯಲ್ಲಿ ಭದ್ರತೆಗೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಆಗಸ್ಟ್ 15 ರಂದು ಬೆಳಗ್ಗೆ ಕೆ.ಆರ್. ವೃತ್ತದಿಂದ ತಿಮ್ಮಯ್ಯ ವೃತ್ತದವರೆಗೂ ಟ್ರಾಫಿಕ್ ನಿರ್ಬಂಧ ಇರಲಿದೆ. ಸಾರ್ವಜನಿಕರು ಪೊಲೀಸರು ಸೂಚಿಸಿದ ನಿಯಮ ಪಾಲಿಸುವಂತೆ ಮನವಿ’ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:34 pm, Thu, 13 August 26

Source link

Independence Day 2026: ಭಾರತದಂತೆಯೇ ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುವ ದೇಶಗಳಿವು – Kannada News | These are the countries that celebrate Independence Day on August 15, like India

ಪ್ರತಿ ವರ್ಷ, ಭಾರತವು ಆಗಸ್ಟ್ 15 ರಂದು ತನ್ನ ಸ್ವಾತಂತ್ರ್ಯ ದಿನವನ್ನು (Independence Day) ಆಚರಿಸುತ್ತದೆ. 1947 ರ ಈ ದಿನ ನಮ್ಮ ದೇಶವು ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ ಸಂಪೂರ್ಣ ಸ್ವಾತಂತ್ರ್ಯವನ್ನು ಗಳಿಸಿತು. ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಹೋರಾಟಗಳು ಬ್ರಿಟಿಷರನ್ನು ಭಾರತ ಬಿಟ್ಟು ತೊಲಗುವಂತೆ ಮಾಡಿತು. ಹಾಗಾಗಿ ಈ ದಿನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನವಾಗಿದೆ. ಅಲ್ಲದೆ ಪ್ರತಿವರ್ಷವೂ ಸಾತಂತ್ರ್ಯ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮ ದೇಶದಲ್ಲಿ ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುವಂತೆ ಈ ಕೆಲವು ದೇಶಗಳೂ ಸಹ ಇದೇ ದಿನ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತವೆ. ಆ ದೇಶಗಳು ಯಾವುವು ಎಂಬ ಸಂಪೂರ್ಣ ವಿವರ ಇಲ್ಲಿದೆ.

ಭಾರತದಂತೆ ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುವ ದೇಶಗಳು:

ದಕ್ಷಿಣ ಕೊರಿಯಾ: ಭಾರತದಂತೆಯೇ, ದಕ್ಷಿಣ ಕೊರಿಯಾ ಕೂಡ ಆಗಸ್ಟ್ 15 ರಂದು ಸ್ವಾತಂತ್ರ್ಯ ಗಳಿಸಿತು. ಈ ದೇಶ ಆಗಸ್ಟ್ 15, 1945 ರಂದು ಜಪಾನ್‌ನಿಂದ ಸ್ವಾತಂತ್ರ್ಯ ಗಳಿಸಿತು. ಅಮೆರಿಕ ಮತ್ತು ಸೋವಿಯತ್ ಪಡೆಗಳು ಕೊರಿಯಾವನ್ನು ಜಪಾನಿನ ಆಕ್ರಮಣದಿಂದ ಮುಕ್ತಗೊಳಿಸಿದವು. ಈ ದಿನವನ್ನು ದಕ್ಷಿಣ ಕೊರಿಯಾದಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ.

ಉತ್ತರ ಕೊರಿಯಾ: ದಕ್ಷಿಣ ಕೊರಿಯಾದಂತೆ, ಉತ್ತರ ಕೊರಿಯಾ ಕೂಡ ಆಗಸ್ಟ್ 15 ರಂದು ಸ್ವಾತಂತ್ರ್ಯ ಗಳಿಸಿತು. ಇದು 1945 ರ ಈ ದಿನದಂದು ಜಪಾನಿನ ಆಕ್ರಮಣದಿಂದ ಮುಕ್ತಗೊಂಡಿತು. ವಾಸ್ತವವಾಗಿ, ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ಎರಡೂ ಒಂದೇ ದೇಶವಾಗಿತ್ತು. ಆದರೆ ಸ್ವಾತಂತ್ರ್ಯ ಗಳಿಸಿದ ಮೂರು ವರ್ಷಗಳ ನಂತರ, ಅವು ವಿಭಜನೆಯಾಗಿ ಪ್ರತ್ಯೇಕ ದೇಶಗಳಾದವು.

ಬಹ್ರೇನ್: ಬಹ್ರೇನ್ ಪರ್ಷಿಯನ್ ಕೊಲ್ಲಿಯಲ್ಲಿರುವ ಒಂದು ಸಣ್ಣ ದೇಶ. ಆಗಸ್ಟ್ 15 ರಂದು ಬಹ್ರೇನ್ ಬ್ರಿಟಿಷರ ದಾಸ್ಯದಿಂದ ಮುಕ್ತವಾಯಿತು. ಈ ದೇಶ ಆಗಸ್ಟ್ 15, 1971 ರಂದು ಸ್ವಾತಂತ್ರ್ಯ ಪಡೆಯಿತು. 1960 ರ ದಶಕದಿಂದಲೂ ಬ್ರಿಟಿಷ್ ಪಡೆಗಳು ಬಹ್ರೇನ್ ಅನ್ನು ತೊರೆಯಲು ಪ್ರಾರಂಭಿಸಿದ್ದವು. ಆಗಸ್ಟ್ 15 ರಂದು ಎರಡೂ ದೇಶಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು, ಅದರ ನಂತರ ಬಹ್ರೇನ್ ಸಂಪೂರ್ಣ ಸ್ವತಂತ್ರ ರಾಷ್ಟ್ರವಾಯಿತು. ಆದರೆ ಬಹ್ರೇನ್‌ನಲ್ಲಿ ಡಿಸೆಂಬರ್ 16 ರಂದು ರಾಷ್ಟ್ರೀಯ ದಿನವನ್ನು ಅಧಿಕೃತವಾಗಿ ಆಚರಿಸಲಾಗುತ್ತದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಯಂದು ಸುಲಭವಾಗಿ ‘ತ್ರಿವರ್ಣ’ ಖಾದ್ಯ ತಯಾರಿಸಿ; ರೆಸಿಪಿ ಇಲ್ಲಿದೆ

ಲಿಚ್ಟೆನ್‌ಸ್ಟೈನ್: ಲೀಚ್ಟೆನ್‌ಸ್ಟೈನ್ ಎಂಬ ಯುರೋಪಿನ ಪುಟ್ಟ ರಾಷ್ಟ್ರ ಕೂಡ ಆಗಸ್ಟ್‌ 15 ರಂದೇ ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ. ಈ ದೇಶವು ಆಗಸ್ಟ್ 15, 1866 ರಂದು ಜರ್ಮನ್ ಆಕ್ರಮಣದಿಂದ ಮುಕ್ತವಾಯಿತು. 1940 ರಿಂದ, ವಿಶ್ವದ ಅತ್ಯಂತ ಚಿಕ್ಕ ದೇಶಗಳಲ್ಲಿ ಒಂದಾದ ಲೀಚ್ಟೆನ್‌ಸ್ಟೈನ್, ಭಾರತದಂತೆಯೇ ಈ ದಿನದಂದು ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಾ ಬರುತ್ತಿದೆ.

ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ: ಆಫ್ರಿಕಾದ ಕಾಂಗೋ ದೇಶವು ಆಗಸ್ಟ್ 15, 1960 ರಂದು ಫ್ರಾನ್ಸ್‌ನ ದಾಸ್ಯದಿಂದ ಮುಕ್ತವಾಗಿ  ಸ್ವಾತಂತ್ರ್ಯ ಪಡೆಯಿತು. ನಂತರ ಅದು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವಾಯಿತು. ಫ್ರೆಂಚ್ ಆಕ್ರಮಣದಲ್ಲಿದ್ದಾಗ ಈ ರಾಷ್ಟ್ರವನ್ನು ಫ್ರೆಂಚ್ ಕಾಂಗೋ ಎಂದು ಕರೆಯಲಾಗುತ್ತಿತ್ತು. ಕಾಂಗೋ ಈ ದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತದೆ. ಈ ದಿನದಂದು ಮೆರವಣಿಗೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಭಾರತೀಯ ಮಜ್ದೂರ್ ಸಂಘ ಆಗ್ರಹ; ಆಗಸ್ಟ್ 17ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ – Kannada News | Bharatiya Mazdoor Sangh, the wokers wing of RSS, calls for nationwide demonstrations on August 17th

ಭಾರತೀಯ ಮಜ್ದೂರ್ ಸಂಘದ ವತಿಯಿಂದ ಎರಡು ವರ್ಷದ ಹಿಂದೆ ನಡೆದ ಕಾರ್ಮಿಕರ ಪ್ರತಿಭಟನೆಯ ಸಾಂದರ್ಭಿಕ ಚಿತ್ರImage Credit source: PTI

ನವದೆಹಲಿ, ಆಗಸ್ಟ್ 13: ಕಾರ್ಮಿಕರ ದೀರ್ಘಕಾಲದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ದೇಶಾದ್ಯಂತ ಆಗಸ್ಟ್ 17, ಸೋಮವಾರದಂದು ಬೃಹತ್ ಪ್ರತಿಭಟನೆ ನಡೆಸಲು ಆರೆಸ್ಸೆಸ್​ನ ಕಾರ್ಮಿಕ ವಿಭಾಗವಾದ ಭಾರತೀಯ ಮಜ್ದೂರ್ ಸಂಘ (BMS) ಕರೆ ನೀಡಿದೆ. ಬಿಎಂಎಸ್ ಕೇಂದ್ರ ಕಾರ್ಯಕಾರಿ ಸಮಿತಿ (KKS) ನಿರ್ಧಾರದಂತೆ, ದೇಶದ 28 ರಾಜ್ಯ ಘಟಕಗಳು ಹಾಗೂ 42 ಕೈಗಾರಿಕಾ ಫೆಡರೇಶನ್‌ಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮತ್ತು ರ‍್ಯಾಲಿಗಳನ್ನು ಆಯೋಜಿಸಲಿವೆ. ಈ ಮೂಲಕ ಪ್ರಧಾನಮಂತ್ರಿ, ಹಣಕಾಸು ಸಚಿವರು ಹಾಗೂ ಕಾರ್ಮಿಕ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಬಿಎಂಎಸ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಮಜ್ದೂರ್ ಸಂಘ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು

  1. ಪಿಂಚಣಿ ಹಾಗೂ ಇಎಸ್‍ಐ ಸೌಲಭ್ಯ: EPS-95 ಅಡಿಯಲ್ಲಿ ಕನಿಷ್ಠ ಮಾಸಿಕ ಪಿಂಚಣಿಯನ್ನು ₹7,500 ಕ್ಕೆ ಏರಿಕೆ ಮಾಡಬೇಕು ಮತ್ತು ಆಯುಷ್ಮಾನ್ ಭಾರತ್ ಯೋಜನೆಗೆ ಜೋಡಿಸಬೇಕು. ESI ಗರಿಷ್ಠ ವೇತನ ಮಿತಿಯನ್ನು ₹21,000 ರಿಂದ ₹42,000 ಕ್ಕೆ ಹಾಗೂ EPF ಮಿತಿಯನ್ನು ₹15,000 ರಿಂದ ₹30,000 ಕ್ಕೆ ಹೆಚ್ಚಿಸಬೇಕು.
  2. ವೇತನ ಮತ್ತು ಗ್ರಾಚ್ಯುಟಿ: ಗ್ರಾಚ್ಯುಟಿ ಲೆಕ್ಕಾಚಾರವನ್ನು 15 ದಿನಗಳ ವೇತನದಿಂದ 30 ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸಬೇಕು.
  3. ಸ್ಕೀಮ್ ವರ್ಕರ್ಸ್‌ಗೆ ಗೌರವಧನ: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ನೌಕರರ ಮಾಸಿಕ ಗೌರವಧನವನ್ನು ಹೆಚ್ಚಿಸಬೇಕು.
  4. ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ: ಹಳೆಯ ಪಿಂಚಣಿ ಯೋಜನೆಯನ್ನು (OPS) ತಕ್ಷಣವೇ ಮರುಸ್ಥಾಪಿಸಬೇಕು ಮತ್ತು ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು.
  5. ಬ್ಯಾಂಕಿಂಗ್ ವ್ಯವಸ್ಥೆ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರಕ್ಕೆ 5 ದಿನಗಳ ಕೆಲಸದ ಅವಧಿಯನ್ನು ಜಾರಿಗೊಳಿಸಬೇಕು.
  6. ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಹಾಗೂ ವೇತನ ವಂಚನೆ ಮಾಡುವ ಗುತ್ತಿಗೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: ಸರ್ಕಾರದ ಈ ಸೌಲಭ್ಯ ಪಡೆಯಲು ಹಿರಿಯ ನಾಗರಿಕರ ಕಾರ್ಡ್ ಅಗತ್ಯ, ಹೀಗೆ ಅರ್ಜಿ ಸಲ್ಲಿಸಿ

ಕಾರ್ಮಿಕ ಕಾಯ್ದೆಗಳಿಗೆ ವಿರೋಧ

ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳಲ್ಲಿರುವ (IR Code ಮತ್ತು OSH&WC Code) ಕಾರ್ಮಿಕ ವಿರೋಧಿ ಅಂಶಗಳನ್ನು ಬಿಎಂಎಸ್ ತೀವ್ರವಾಗಿ ವಿರೋಧಿಸಿದೆ. ಕೇಂದ್ರ ಸರ್ಕಾರವು ತಕ್ಷಣವೇ ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ಈ ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತರಬೇಕು ಹಾಗೂ ಶೀಘ್ರವೇ ‘ಭಾರತೀಯ ಕಾರ್ಮಿಕ ಸಮ್ಮೇಳನ’ (Indian Labour Conference) ಕರೆಯಬೇಕು ಎಂದು ಆಗ್ರಹಿಸಿದೆ.

ದೇಶದಲ್ಲಿ 1 ಕೋಟಿಗೂ ಹೆಚ್ಚು ಸಂಖ್ಯೆಯಲ್ಲಿರುವ ಸ್ಕೀಮ್ ವರ್ಕರ್ಸ್‌ಗಳನ್ನು ಕಾರ್ಮಿಕರೆಂದು ಗುರುತಿಸಿ, ಅವರಿಗಾಗಿ ಪ್ರತ್ಯೇಕ ಸಮಗ್ರ ನೀತಿಯನ್ನು ರೂಪಿಸುವಂತೆ ಸರ್ಕಾರವನ್ನು ಬಿಎಂಎಸ್ ಒತ್ತಾಯಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಹೌದು, ನಾನು ಔಟ್ ಆಗಿದ್ದೆ’; ಔಟೆಂದು ಗೊತ್ತಿದ್ದರೂ ಬ್ಯಾಟಿಂಗ್‌ ಮುಂದುವರೆಸಿದ ಸ್ಟೀವ್ ಸ್ಮೀತ್ – Kannada News | Steve Smith Confesses Bat Edge, UltraEdge Fails: Cricket’s Sportsmanship Debate Ignites

ಡಾರ್ವಿನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ (australia vs bangladesh) ನಡುವಿನ ಮೊದಲ ಟೆಸ್ಟ್‌ನ ಮೊದಲ ದಿನದಂದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಕೇವಲ 198 ರನ್‌ಗಳಿಗೆ ಆಲೌಟ್ ಆಯಿತು. ಆಸೀಸ್ ಪರ ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ (steve smith) 109 ಎಸೆತಗಳಲ್ಲಿ 71 ರನ್ ಬಾರಿಸಿ ತಂಡವನ್ನು 150 ರನ್​ಗಳ ಗಡಿ ದಾಟಿಸಿದರು. ಇಲ್ಲದಿದ್ದರೆ ಆಸೀಸ್ ಪಡೆ 150 ರನ್​ಗಳನ್ನು ದಾಟುತ್ತಿರಲಿಲ್ಲ. ಆದರೆ ಪಂದ್ಯದ ಮೊದಲ ದಿನದಾಟ ಮುಗಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಟೀವ್ ಸ್ಮಿತ್ ನೀಡಿದ ಹೇಳಿಕೆ ಅವರ ನೈತಿಕತೆ ಮತ್ತು ಪ್ರಾಮಾಣಿಕತೆಯ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಚೆಂಡು ಬ್ಯಾಟಿಗೆ ತಾಗಿತ್ತು

ವಾಸ್ತವವಾಗಿ ಸ್ಟೀವ್ ಸ್ಮಿತ್ ಇಂದಿನ ಪಂದ್ಯದಲ್ಲಿ ಪ್ರಾಮಾಣಿಕತೆ ಮೆರೆದಿದ್ದರೆ ಅವರು ಕೂಡ ಒಂದಂಕಿ ಮೊತ್ತ ದಾಟಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಚೆಂಡು ಬ್ಯಾಟಿಗೆ ತಾಗಿರುವುದು ಗೊತ್ತಿದ್ದರೂ, ತಂತ್ರಜ್ಞಾನದ ಲೋಪದೋಷದ ಲಾಭ ಪಡೆದ ಸ್ಮಿತ್ ಬ್ಯಾಟಿಂಗ್‌ ಮುಂದುವರೆಸಿ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಪಂದ್ಯದ ಮೊದಲ ದಿನದಾಟ ಮುಗಿದ ಬಳಿಕ ಪತ್ರಕರ್ತರು ಈ ಬಗ್ಗೆ ಕೇಳಿದಕ್ಕೆ ಯಾವುದೇ ಅಂಜಿಕೆ ಇಲ್ಲದೆ ಉತ್ತರಿಸಿದ ಸ್ಮಿತ್, ಹೌದು, ಚೆಂಡು ಬ್ಯಾಟಿಗೆ ತಾಗಿತ್ತು. ಆದರೆ ಅಲ್ಟ್ರಾ ಎಡ್ಜ್ ತಂತ್ರಜ್ಞಾನ ಬಳಿಸಿದಾಗ ಚೆಂಡು ತಾಗಿರುವುದು ಖಚಿತವಾಗಲಿಲ್ಲ. ಹೀಗಾಗಿ ನನಗೆ ತಂತ್ರಜ್ಞಾನದ ಲೋಪದೋಷದಿಂದ ಲಾಭವಾಗಿ ಬದುಕುಳಿದೆ ಎಂದಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು ಎಂಬುದನ್ನು ನೋಡುವುದಾದರೆ..

ಬಾಂಗ್ಲಾ ವಿರುದ್ಧ ಅತ್ಯಲ್ಪ ಮೊತ್ತಕ್ಕೆ ಆಲೌಟ್; ಅವಮಾನಕರ ದಾಖಲೆ ಬರೆದ ಆಸ್ಟ್ರೇಲಿಯಾ

ಸ್ಮಿತ್ ವಿಕೆಟ್​ಗಾಗಿ ಮೇಲ್ಮನವಿ

ಆಸ್ಟ್ರೇಲಿಯಾ ಇನ್ನಿಂಗ್ಸ್​ನ 21 ನೇ ಓವರ್‌ನಲ್ಲಿ ಸ್ಟೀವ್ ಸ್ಮಿತ್ ಸ್ಟ್ರೈಕ್​ನಲ್ಲಿದ್ದರು. ಇತ್ತ ಬಾಂಗ್ಲಾದೇಶ ಪರ ಇಬಾದತ್ ಹೊಸೈನ್ ಬೌಲಿಂಗ್ ಮಾಡುತ್ತಿದ್ದರು. ಈ ಓವರ್​ನ ನಾಲ್ಕನೇ ಎಸೆತವನ್ನು ಸ್ಮಿತ್ ಡಿಫೆಂಡ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ಸ್ಮಿತ್ ಅವರ ಬ್ಯಾಟಿನ ಅಂಚಿಗೆ ತಾಗಿ ಸೀಧಾ ವಿಕೆಟ್ ಕೀಪರ್​ ಕೈಗೆ ಹೋಯಿತು. ಕೂಡಲೇ ಬಾಂಗ್ಲಾದೇಶ ಆಟಗಾರರು ಸಂಭ್ರಮಿಸಲು ಶುರು ಮಾಡಿದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಹೀಗಾಗಿ ಬಾಂಗ್ಲಾ ನಾಯಕ ಸ್ಮಿತ್ ವಿಕೆಟ್​ಗಾಗಿ ಮೇಲ್ಮನವಿ ಸಲ್ಲಿಸಿದರು.

ಅಲ್ಟ್ರಾ ಎಡ್ಜ್ ತಂತ್ರಜ್ಞಾನದಲ್ಲಿ ಲೋಪ

ಮೂರನೇ ಅಂಪೈರ್ ಅಲ್ಟ್ರಾ ಎಡ್ಜ್ ತಂತ್ರಜ್ಞಾನವನ್ನು ಬಳಸಿ ಪರಿಶೀಲಿಸಿದಾಗ ಚೆಂಡು ಸ್ಮಿತ್ ಅವರ ಬ್ಯಾಟ್‌ಗೆ ತಾಗಿರುವುದು ಪತ್ತೆಯಾಗಲಿಲ್ಲ. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಅಲ್ಟ್ರಾ ಎಡ್ಜ್ ತಂತ್ರಜ್ಞಾನವನ್ನು ಬಳಸಿದಾಗ ಚೆಂಡು ಬ್ಯಾಟ್ ಸಮೀಪ ಬರುವುದಕ್ಕೂ ಮುನ್ನವೇ ಫ್ಲಾಟ್ ಲೈನ್‌ನಲ್ಲಿ ಏರಿಳಿತ ಕಾಣುತ್ತಿತ್ತು. ಆದ್ದರಿಂದ, ಚೆಂಡು ಸ್ಮಿತ್ ಅವರ ಬ್ಯಾಟ್‌ಗೆ ತಗುಲಿದೆ ಎಂಬುದು ಮೂರನೇ ಅಂಪೈರ್‌ಗೆ ಖಚಿತವಾಗಲಿಲ್ಲ. ಹೀಗಾಗಿ ಮೂರನೇ ಅಂಪೈರ್ ಸ್ಮಿತ್ ನಾಟೌಟ್ ಎಂದು ತೀರ್ಪು ನೀಡಿದರು.

ಕ್ರೀಡಾ ಸ್ಫೂರ್ತಿ ಮರೆತ ಸ್ಮಿತ್

ಪತ್ರಿಕಾಗೋಷ್ಠಿಯಲ್ಲಿ ವರದಿಗಾರರೊಬ್ಬರು ಈ ಬಗ್ಗೆ ಸ್ಮಿತ್ ಬಳಿ ಆ ಘಟನೆಯ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸ್ಮಿತ್, ‘ಹೌದು, ನಾನು ಔಟ್ ಆಗಿದ್ದೆ. ಬ್ಯಾಟಿಗೆ ಚೆಂಡು ತಾಗಿರುವುದು ನನಗೆ ಗೊತ್ತಿತ್ತು. ಆದರೆ ತಂತ್ರಜ್ಞಾನ ನನ್ನನ್ನು ಔಟಾಗುವುದರಿಂದ ಪಾರು ಮಾಡಿತು. ಕೆಲಮೊಮ್ಮೆ ಈ ರೀತಿಯ ಲಾಭವನ್ನು ಬಳಸಿಕೊಳ್ಳಬೇಕು’ ಎಂದು ಸ್ಮಿತ್ ಯಾವುದೇ ಅಂಜಿಕೆ ಇಲ್ಲದೆ ಹೇಳಿದರು. ಎಷ್ಟೋ ಬಾರಿ ಅಂಪೈರ್ ನಾಟೌಟ್ ನೀಡಿದಾಗಲೂ ಸಚಿನ್ ತೆಂಡೂಲ್ಕರ್ ತಾನು ಔಟಾಗಿದ್ದೇನೆ ಎಂದು ಪೆವಿಲಿಯನ್ ಸೇರಿಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಕ್ರಿಕೆಟ್ ದೇವರು ಎನ್ನುತ್ತಾರೆ. ಆದರೆ ತಾನು ಔಟಾಗಿರುವುದು ಗೊತ್ತಿದ್ದರೂ ಬ್ಯಾಟಿಂಗ್‌ ಮುಂದುವರೆಸಿದ ಸ್ಟೀವ್ ಸ್ಮಿತ್ ಅವರ ಕ್ರೀಡಾ ಸ್ಫೂರ್ತಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:07 pm, Thu, 13 August 26

Source link

‘ಜಂತರ್ ಮಂತರ್ ಪ್ರತಿಭಟನೆಯಲ್ಲಿ ಇದ್ದ ಬಹುತೇಕರು ಜೆನ್ ಜಿ ಅಲ್ಲ’ ಎಂದ ಕಂಗನಾ ರಣಾವತ್ – Kannada News | Kangana Ranaut clarifies Generation Gutter remark Shabana Azmi Jantar Mantar protest

ಪ್ರತಿಭಟನಾ ನಿರತರನ್ನು ‘ಜನರೇಷನ್ ಗಟರ್’ (Gen Gutter) ಎಂದು ಕರೆದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut), ಇದೀಗ ತಮ್ಮ ಹೇಳಿಕೆಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಬಗ್ಗೆ ಕಂಗನಾ ಅವರು ಮೊದಲಿನಿಂದಲೂ ಒಂದಲ್ಲಾ ಒಂದು ರೀತಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಈಗ ಅವರು ತಮ್ಮ ಮೊದಲಿನ ಹೇಳಿಕೆಗಳಿಗೆ ಸಮರ್ಥನೆ ನೀಡಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕಂಗನಾ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಈ ದೇಶದ ಯುವಕರ ಬಗ್ಗೆ ಮಾತನಾಡುತ್ತಿದ್ದೀರಾ? ಜೆನ್ ಜಿ (Gen Z) ಜನಸಂಖ್ಯೆ ಸುಮಾರು 30ರಿಂದ 35 ಕೋಟಿ ಇದೆ. ಆದರೆ ದೆಹಲಿಯ ಜಂತರ್ ಮಂತರ್‌ನಲ್ಲಿ ನೆರೆದಿದ್ದ 10 ಸಾವಿರ ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಶಬಾನಾ ಆಜ್ಮಿ ವಯಸ್ಸಿನವರಾಗಿದ್ದರು. ಅಲ್ಲಿ ವಿವಿಧ ವಯೋಮಾನದ ಜನರಿದ್ದರು. ಕೇವಲ 2 ಸಾವಿರದಷ್ಟು ಮಾತ್ರ ಜೆನ್ ಜಿ ಯುವಕರಿದ್ದರು. ಹಾಗಿರುವಾಗ ಇದನ್ನು ಇಡೀ ದೇಶದ ಜೆನ್ ಜಿ ನಡೆಸಿದ ಪ್ರತಿಭಟನೆ ಎಂದು ಹೇಗೆ ಕರೆಯುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಯುವ ಜನರ ವಿರೋಧಿ ಅಲ್ಲ’

ಮುಂದುವರಿದು ಮಾತನಾಡಿದ ಕಂಗನಾ ರಣಾವತ್ ಅವರು, ‘ನಾನು ಅಲ್ಲಿ ನೆರೆದಿದ್ದ ನಿರ್ದಿಷ್ಟ ಗುಂಪನ್ನು ಉದ್ದೇಶಿಸಿ ಮಾತ್ರ ಹೇಳಿಕೆ ನೀಡಿದ್ದೆ. ಇಡೀ ಯುವ ಪೀಳಿಗೆಯನ್ನು ನಿಂದಿಸಿರುವ ಒಂದೇ ಒಂದು ಸಾಲನ್ನು ತೋರಿಸಿ ಎಂದು ನಿಮಗೆ ಬಹಿರಂಗ ಸವಾಲು ಹಾಕುತ್ತೇನೆ. ನನ್ನ ವಿರುದ್ಧ ಅನಗತ್ಯ ಅಜೆಂಡಾ ಚಲಾಯಿಸಬೇಡಿ, ನಾನು ಕೂಡ ಯುವತಿಯಾಗಿದ್ದು, ಯುವಕರ ವಿರುದ್ಧವಿಲ್ಲ’ ಎಂದು ಹೇಳಿದ್ದಾರೆ.

ಜುಲೈ 20 ರಂದು ಜಂತರ್ ಮಂತರ್‌ನಿಂದ ಸಂಸತ್ತಿನತ್ತ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ 75 ವರ್ಷದ ಹಿರಿಯ ನಟಿ ಶಬಾನಾ ಆಜ್ಮಿ ಭಾಗವಹಿಸಿದ್ದರು. ಪ್ರತಿಭಟನಾಕಾರರೊಂದಿಗೆ ಟ್ರಕ್‌ನಲ್ಲಿ ಪ್ರಯಾಣಿಸುತ್ತಿರುವ ಹಾಗೂ ಬ್ಯಾರಿಕೇಡ್‌ಗಳನ್ನು ದಾಟುತ್ತಿರುವ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ನಟ ಪ್ರಕಾಶ್ ರಾಜ್ ಕೂಡ ಅವರೊಂದಿಗಿದ್ದರು.

ಇದನ್ನೂ ಓದಿ: ‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು

ಕಂಗನಾ ನೀಡಿದ್ದ ಹೇಳಿಕೆ ಏನು?

ಕಳೆದ ತಿಂಗಳು ಜೆನ್ ಜಿ ಪ್ರತಿಭಟನೆಯ ವಿಡಿಯೋಗಳನ್ನು ಟೀಕಿಸಿದ್ದ ಕಂಗನಾ, “ನನ್ನ ಜೀವನದಲ್ಲಿ ಇಷ್ಟೊಂದು ಅಸಹ್ಯಕರ ವಾತಾವರಣವನ್ನು ಎಲ್ಲೂ ನೋಡಿರಲಿಲ್ಲ. ಪ್ರತಿಭಟನೆಯ ರೀಲ್ಸ್‌ಗಳು ವಾಂತಿ ಬರುವಂತಿವೆ. ಅವರು ಬಳಸುತ್ತಿರುವ ಭಾಷೆ ತೀರಾ ಅಸಭ್ಯವಾಗಿದೆ. ನಾನು ಅವರನ್ನು ಜನರೇಷನ್ ಗಟಾರ ಎಂದು ಕರೆಯುತ್ತೇನೆ. ವ್ಯವಸ್ಥೆಗೆ ಕೊಡುಗೆ ನೀಡಲು ಅವರ ಬಳಿ ಏನೂ ಇಲ್ಲ. ಅವರು ಓದಿನಲ್ಲೂ ಮುಂದಿಲ್ಲ’ ಎಂದು ಕಟುವಾಗಿ ವಾಗ್ದಾಳಿ ನಡೆಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ:ಸಿಎಂ ಭೇಟಿಯಾದ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ – Kannada News | CBJP MLA Araga Jnanendra opposes to Karnataka Govt Ordered about gutkha And pan masala ban

ಬೆಂಗಳೂರು, (ಆಗಸ್ಟ್ 13): ಕರ್ನಾಟಕದಲ್ಲಿ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್‌ ಮಸಾಲಾ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ನಿಷೇಧ (Gutkha, Pan masala Ban) ಹೇರಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾರ್ವಜನಿಕರು ಸೇರಿ ಹಲವು ರಾಜಕಾರಣಿಗಳು ಸ್ವಾಗತಿಸಿದ್ದಾರೆ. ಆದರೆ, ಮತ್ತೊಂದೆಡೆ ಇದಕ್ಕೆ ಅಡಿಕೆ ಬೆಳೆಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga jnanendra) ನೇತೃತ್ವದ ನಿಯೋಗ ಇಂದು (ಆಗಸ್ಟ್ 13) ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಬ್ಯಾನ್ ಆದೇಶ ವಾಪಸ್ ಪಡೆಯುವಂತೆ ಮನವಿ ಮಾಡಿದೆ.

ಈ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಜಾರಿಗೊಳಿಸಿರುವುದರಿಂದ ಅಡಿಕೆ ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ರಾಜ್ಯದ ಸುಮಾರು 12 ಜಿಲ್ಲೆಗಳ ಲಕ್ಷಾಂತರ ರೈತರು ಅಡಿಕೆ ಬೆಳೆಯನ್ನೇ ತಮ್ಮ ಜೀವನೋಪಾಯದ ಆಧಾರವಾಗಿಸಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಅಡಿಕೆಗೆ ಬೇಡಿಕೆ ಕುಸಿಯುವ ಆತಂಕ ಎದುರಾಗಿದ್ದು, ರೈತರ ಆರ್ಥಿಕ ಸ್ಥಿತಿಗೆ ತೀವ್ರ ಹೊಡೆತ ಬೀಳಲಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿಷೇಧದ ಕುರಿತು ಮರುಪರಿಶೀಲನೆ ನಡೆಸಿ, ಅಡಿಕೆ ಬೆಳೆಗಾರರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

Source link

Renuka Swamy case: ಹೆಡ್​​ಫೋನ್ ಧರಿಸಿ ಬಂದ ಪವಿತ್ರಾ ಗೌಡ, ಜಡ್ಜ್ ತರಾಟೆ – Kannada News | Renuka Swamy case: Pavithra Gowda used Headphones during court trail

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ಭರದಿಂದ ಸಾಗಿದೆ. ಪ್ರತಿದಿನ ಮಹತ್ವದ ಸಾಕ್ಷಿಗಳ ವಿಚಾರಣೆ ಮಾಡುವ ಜೊತೆಗೆ, ಹೊಸ-ಹೊಸ ಅರ್ಜಿಗಳ ಕುರಿತಾಗಿಯೂ ವಿಚಾರಣೆ ನಡೆಯುತ್ತಿದೆ. ಆರೋಪಿಗಳೆಲ್ಲ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು, ವಿಚಾರಣೆ ವೇಳೆ ಪ್ರತಿಯೊಬ್ಬ ಆರೋಪಿಯೂ ತಾವಿರುವ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಇಂದೂ ಸಹ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು. ಆದರೆ ಪವಿತ್ರಾ ಗೌಡ ಮಾಡಿದ ಕಾರ್ಯಕ್ಕೆ ಜಡ್ಜ್ ಸಿಟ್ಟಾದರು.

ಎಲ್ಲರೂ ಸಮಯಕ್ಕೆ ಸರಿಯಾಗಿ ವಿಚಾರಣೆಗೆ ಹಾಜರಾದರು. ಆದರೆ ಪವಿತ್ರಾ ಗೌಡ ಮಾತ್ರ ತುಸು ತಡವಾಗಿ ವಿಚಾರಣೆಗೆ ಬಂದರು. ಆದರೆ ಈ ವೇಳೆ ಅವರು ಹೆಡ್​ಫೋನ್ ಧರಿಸಿದ್ದನ್ನು ಜಡ್ಜ್ ಗಮನಿಸಿದರು. ಇದು ಅವರ ಸಿಟ್ಟಿಗೆ ಕಾರಣವಾಯ್ತು? ‘ಯಾಕೆ ತಡವಾಗಿ ಬಂದಿರಿ? ಹೆಡ್​ಫೋನ್ಸ್ ಕೊಟ್ಟವರು ಯಾರು?, ಕಾನ್ಫರೆನ್ಸ್ ಸಮಯದಲ್ಲಿ ಹೆಡ್​​ಫೋನ್ಸ್ ಬಳಕೆಗೆ ಅವಕಾಶ ಇಲ್ಲ ಎಂಬುದು ಗೊತ್ತಿಲ್ಲವೆ?’ ಎಂದು ಸಿಟ್ಟಾದರು. ಆದರೆ ಪವಿತ್ರಾ ಗೌಡ, ತಾವು ಹೆಡ್​​ಫೋನ್ಸ್ ಬಳಸಿಲ್ಲ ಎಂದರು ಆದರೆ ಜಡ್ಜ್, ತಾವು ಖುದ್ದು, ಪವಿತ್ರಾ, ಹೆಡ್​​ಫೋನ್ಸ್ ಬಳಸಿದ್ದನ್ನು ಗಮನಿಸಿದ್ದೇನೆ’ ಎಂದರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಡ್ಜ್, ‘ಹೆಡ್​​ಫೋನ್ಸ್ ಕೊಟ್ಟವರು ಯಾರು? ಮಹಿಳಾ ಸೆಲ್​​ನಲ್ಲಿ ಆರೋಪಿಗಳಿಗೆ ಅಧಿಕಾರಿಗಳು ಹೆಡ್​​ಫೋನ್ಸ್ ಕೊಡುತ್ತಿದ್ದಾರೆಯೇ?’ ಎಂದು ಪ್ರಶ್ನಿಸಿದ ಜಡ್ಜ್, ಈ ಬಗ್ಗೆ ವಿವರಣೆ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ

ಬಳಿಕ ನಡೆದ ವಿಚಾರಣೆಯಲ್ಲಿ ದರ್ಶನ್ ಪರ ವಕೀಲರು ಇದನ್ನೇ ತಮ್ಮ ವಾದಕ್ಕೆ ಬಳಸಿಕೊಂಡರು. ದರ್ಶನ್, ಖುದ್ದು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ವಾದ ಮಂಡಿಸಿದ ದರ್ಶನ್ ಪರ ವಕೀಲರು, ‘ಸಾಕ್ಷಿಗಳ ವಿಚಾರಣೆ ವೇಳೆ ಮಾಹಿತಿ ಪಡೆಯಲು, ಚರ್ಚಿಸಲು ದರ್ಶನ್​​ರ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ವಿಡಿಯೋ ಕಾನ್ಫರೆನ್ಸ್​​ನಲ್ಲಿ ಹೆಡ್ ಫೋನ್ಸ್​​ಗೆ ಅವಕಾಶ ಇಲ್ಲದೇ ಇರುವ ಕಾರಣ, ಚರ್ಚೆ ನಡೆಸಲು ಸಾಧ್ಯವಾಗುವುದಿಲ್ಲ’ ಎಂದು ವಾದಿಸಿದರು. ಆದೇಶವನ್ನು ನ್ಯಾಯಾಲಯವು ಆಗಸ್ಟ್ 17ಕ್ಕೆ ಕಾಯ್ದಿರಿಸಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದೆ. 14ನೇ ಆರೋಪಿ ಆಗಿರುವ ಪ್ರದೋಶ್, ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ಆದರೆ ಅವರ ಸಾಕ್ಷ್ಯವನ್ನು ಪರಿಗಣನೆ ಮಾಡದಂತೆ ದರ್ಶನ್ ಪರ ವಕೀಲರು ಮನವಿ ಸಲ್ಲಿಸಿದ್ದು, ಇದೀಗ ಹೈಕೋರ್ಟ್​​ಗೆ ಸಹ ಅರ್ಜಿ ಹಾಕಿದ್ದಾರೆ. ಪ್ರದೋಶ್, ಹೇಳಿಕೆ ಈ ಪ್ರಕರಣದಲ್ಲಿ ಭಾರಿ ಮಹತ್ವವನ್ನು ಪಡೆದುಕೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:50 pm, Thu, 13 August 26

Source link

Vastu Tips: ಮನೆಯಲ್ಲಿ ಕನ್ನಡಿ ಎಲ್ಲಿರಬೇಕು? ವಾಸ್ತು ಪ್ರಕಾರ ಈ ಸಣ್ಣ ತಪ್ಪುಗಳೇ ದಾರಿದ್ರ್ಯಕ್ಕೆ ಕಾರಣ! – Kannada News | Vastu Tips for Mirror Placement: Attract Positive Energy and Wealth to Your Home

ಮನೆಯಲ್ಲಿ ಕನ್ನಡಿ ಎಲ್ಲಿರಬೇಕು?Image Credit source: Getty Images

ಪ್ರತಿಯೊಬ್ಬರ ಮನೆಯಲ್ಲೂ ಕನ್ನಡಿ ಇರುವುದು ಅತ್ಯಗತ್ಯ. ಬೆಳಿಗ್ಗೆ ಎದ್ದ ತಕ್ಷಣದಿಂದ ಹಿಡಿದು ಎಲ್ಲೇ ಹೊರಡುವಾಗಲೂ ಮುಖ ನೋಡಿಕೊಳ್ಳಲು ಕನ್ನಡಿ ಬೇಕೇ ಬೇಕು. ಆದರೆ, ಕನ್ನಡಿ ಕೇವಲ ಅಲಂಕಾರದ ಅಥವಾ ಪ್ರತಿಬಿಂಬ ನೋಡುವ ವಸ್ತುವಷ್ಟೇ ಅಲ್ಲ ಎಂಬುದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಕನ್ನಡಿಯು ಮನೆಯ ಶಕ್ತಿ (Energy) ಮತ್ತು ಸಕಾರಾತ್ಮಕ ವಾತಾವರಣದ ಮೇಲೆ ನೇರ ಪರಿಣಾಮ ಬೀರುತ್ತದೆ. ಮನೆಯಲ್ಲಿ ಎಲ್ಲೆಂದರಲ್ಲಿ ಕನ್ನಡಿ ತೂಗಾಕುವುದರಿಂದ ವಾಸ್ತು ದೋಷ ಉಂಟಾಗಬಹುದು. ಹಾಗಾದರೆ ಮನೆಗೆ ಎಷ್ಟು ಕನ್ನಡಿಗಳು ಸೂಕ್ತ? ಅವುಗಳನ್ನು ಯಾವ ದಿಕ್ಕಿನಲ್ಲಿಡಬೇಕು? ಸಂಪೂರ್ಣ ವಿವರ ಇಲ್ಲಿದೆ.

ಮನೆಗೆ ಎಷ್ಟು ಕನ್ನಡಿಗಳು ಬೇಕು ಮತ್ತು ಯಾವ ದಿಕ್ಕು ಸೂಕ್ತ?

ಮನೆಯಲ್ಲಿ ಅತಿಯಾಗಿ ಕನ್ನಡಿಗಳನ್ನು ಬಳಸುವುದು ವಾಸ್ತು ಪ್ರಕಾರ ಸೂಕ್ತವಲ್ಲ. ಸಾಮಾನ್ಯ ನಂಬಿಕೆಯ ಪ್ರಕಾರ, ಮನೆಗೆ ಎರಡು ಕನ್ನಡಿಗಳು ಸಾಕು ಎಂದು ಪರಿಗಣಿಸಲಾಗುತ್ತದೆ. ಇವುಗಳನ್ನು ಇಡಲು ಉತ್ತರ ಮತ್ತು ಪೂರ್ವ ದಿಕ್ಕುಗಳು ಅತ್ಯಂತ ಶ್ರೇಷ್ಠವಾಗಿವೆ. ಉತ್ತರ ದಿಕ್ಕು ಸಂಪತ್ತು ಮತ್ತು ಸಮೃದ್ಧಿಯ ಅಧಿಪತಿಯಾದ ಕುಬೇರನಿಗೆ ಸಂಬಂಧಿಸಿದ್ದರಿಂದ, ಇಲ್ಲಿ ಕನ್ನಡಿ ಇಡುವುದರಿಂದ ಆರ್ಥಿಕ ಪ್ರಗತಿಯಾಗುತ್ತದೆ. ಇನ್ನು ಪೂರ್ವ ದಿಕ್ಕು ಸಕಾರಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸುವ ದಿಕ್ಕಾಗಿದೆ. ಆದರೆ, ಎರಡು ಕನ್ನಡಿಗಳನ್ನು ಒಂದೇ ದಿಕ್ಕಿನಲ್ಲಿ ಪರಸ್ಪರ ಮುಖಾಮುಖಿಯಾಗಿ ಅಥವಾ ತೀರಾ ಹತ್ತಿರದಲ್ಲಿ ಇಡುವುದನ್ನು ತಪ್ಪಿಸಬೇಕು. ಇಂತಹ ಪ್ರತಿಬಿಂಬಗಳು ಮನೆಯ ಶಕ್ತಿಯಲ್ಲಿ ಅಸಮತೋಲನವನ್ನು ಉಂಟುಮಾಡುತ್ತವೆ.

ಮಲಗುವ ಕೋಣೆಯಲ್ಲಿ ಕನ್ನಡಿ ಇಡುವಾಗ ವಹಿಸಬೇಕಾದ ಎಚ್ಚರಿಕೆಗಳು:

ಮಲಗುವ ಕೋಣೆಯಲ್ಲಿ (Bedroom) ಕನ್ನಡಿಯನ್ನು ಇಡುವಾಗ ಅತ್ಯಂತ ಜಾಗರೂಕರಾಗಿರಬೇಕು. ನೀವು ಮಲಗುವಾಗ ನಿಮ್ಮ ದೇಹ ಅಥವಾ ಹಾಸಿಗೆಯು ಕನ್ನಡಿಯಲ್ಲಿ ಪ್ರತಿಫಲಿಸಬಾರದು. ವಾಸ್ತು ಶಾಸ್ತ್ರದ ಪ್ರಕಾರ, ಹಾಸಿಗೆಯ ಪ್ರತಿಬಿಂಬವು ಕನ್ನಡಿಯಲ್ಲಿದ್ದರೆ ಅದು ನಿದ್ರಾಹೀನತೆ ಮತ್ತು ದಂಪತಿಗಳ ನಡುವಿನ ವೈವಾಹಿಕ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಬಹುದು. ಒಂದು ವೇಳೆ ನಿಮ್ಮ ರೂಮ್‌ನಲ್ಲಿ ಕನ್ನಡಿಯ ಸ್ಥಾನವನ್ನು ಬದಲಾಯಿಸಲು ಸಾಧ್ಯವಾಗದಿದ್ದರೆ, ರಾತ್ರಿ ಮಲಗುವ ಮುನ್ನ ಅದರ ಮೇಲೆ ಒಂದು ದಪ್ಪನೆಯ ಬಟ್ಟೆಯನ್ನು ಮುಚ್ಚುವುದು ಉತ್ತಮ ಪರಿಹಾರವಾಗಿದೆ.

ಇದನ್ನೂ ಓದಿ: ತಪ್ಪಿಯೂ ಈ ದಿನ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಡಿ; ಸರಿಯಾದ ನಿಯಮ ಇಲ್ಲಿದೆ

ಮುಖ್ಯ ದ್ವಾರದ ಬಳಿ ಕನ್ನಡಿ ಇಡುವ ಸರಿಯಾದ ನಿಯಮ:

ಮನೆಯ ಮುಖ್ಯ ಬಾಗಿಲಿಗೆ (Main Door) ತೀರಾ ನೇರವಾಗಿ ಕನ್ನಡಿಯನ್ನು ತೂಗಾಕಬಾರದು. ಏಕೆಂದರೆ, ಹೊರಗಿನಿಂದ ಮನೆಗೆ ಪ್ರವೇಶಿಸುವ ಸಕಾರಾತ್ಮಕ ಶಕ್ತಿಯನ್ನು ಈ ಕನ್ನಡಿಯು ಮತ್ತೆ ಹೊರಗೆ ಪ್ರತಿಫಲಿಸಿ ಕಳುಹಿಸುತ್ತದೆ ಎಂದು ನಂಬಲಾಗಿದೆ. ಆದರೆ, ಮುಖ್ಯ ಬಾಗಿಲಿನ ನೇರಕ್ಕೆ ಇಡುವ ಬದಲು, ಬಾಗಿಲಿನ ಪಕ್ಕದ ಗೋಡೆಯ ಮೇಲೆ ಕನ್ನಡಿಯನ್ನು ಇಡಬಹುದು. ಇದನ್ನು ವಾಸ್ತುನಲ್ಲಿ ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ ಮತ್ತು ಇದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸಲು ನೆರವಾಗುತ್ತದೆ.

ಸ್ನಾನಗೃಹದ ಕನ್ನಡಿ ಮತ್ತು ಕನ್ನಡಿಗಳ ಸರಿಯಾದ ನಿರ್ವಹಣೆ:

ಸ್ನಾನಗೃಹದಲ್ಲೂ (Bathroom) ಸಹ ಹೆಚ್ಚು ಕನ್ನಡಿಗಳನ್ನು ಹಾಕುವುದನ್ನು ತಪ್ಪಿಸಬೇಕು, ಅಲ್ಲಿಗೆ ಒಂದು ಕನ್ನಡಿ ಸಾಕು. ಇದರ ಜೊತೆಗೆ ಮನೆಯಲ್ಲಿರುವ ಪ್ರತಿಯೊಂದು ಕನ್ನಡಿಯೂ ಯಾವಾಗಲೂ ಸ್ವಚ್ಛವಾಗಿರಬೇಕು. ಯಾವುದೇ ಕಾರಣಕ್ಕೂ ಬಿರುಕು ಬಿಟ್ಟ ಅಥವಾ ಒಡೆದುಹೋದ ಕನ್ನಡಿಗಳನ್ನು ಮನೆಯಲ್ಲಿ ಇಡಲೇಬಾರದು. ಇಂತಹ ಒಡೆದ ಕನ್ನಡಿಗಳು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ. ಸರಿಯಾದ ದಿಕ್ಕಿನಲ್ಲಿ ಮತ್ತು ಸರಿಯಾದ ಜಾಗದಲ್ಲಿ ಇರಿಸಲಾದ ಸ್ವಚ್ಛವಾದ ಕನ್ನಡಿ ಮಾತ್ರ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ, ಕ್ಯಾಂಟೀನ್ ಸೀಜ್! – Kannada News | Vikas Soudha Canteen Sealed After Food Department Raid Finds Cockroaches, Fungus and Expired Items

ಬೆಂಗಳೂರು, ಆಗಸ್ಟ್​​ 13: ನಗರದಲ್ಲಿ ಕೆಲ ದಿನಗಳಿಂದ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು ಇಂದು ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ತಟ್ಟೆಗಳನ್ನು ಶೇಖರಿಸಿಡುವ ಜಾಗದಲ್ಲಿ ಜಿರಳೆಗಳು ಮತ್ತು ಗ್ರಾಹಕರಿಗೆ ಆಹಾರ ನೀಡುವ ಅಡಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾಗಿದ್ದು, ಕ್ಯಾಂಟೀನ್ ಅನ್ನು ಸೀಜ್ ಮಾಡಲಾಗಿದೆ. ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪ, ಸ್ವಚ್ಛತೆಯ ಕೊರತೆ, ಅವಧಿ ಮುಗಿದ ಪದಾರ್ಥಗಳ ಬಳಕೆ ಹಾಗೂ ನಿಯಮಿತವಾಗಿ ಪೆಸ್ಟ್ ಕಂಟ್ರೋಲ್ ಮಾಡದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳು ಕಂಡುಬಂದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಕ್ಯಾಂಟೀನ್‌ಗೆ ಬೀಗ ಜಡಿದಿದ್ದು, ಸ್ಥಳದಲ್ಲಿ ‘ತಾತ್ಕಾಲಿಕವಾಗಿ ಕ್ಯಾಂಟೀನ್ ಬಂದ್’ ಎಂಬ ನಾಮಫಲಕವನ್ನು ಅಳವಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version