‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಅದ್ಭುತವಾದ ವೃತ್ತಿ ಜೀವನ ನೋಡಿರುವ, ನೋಡುತ್ತಿರುವ ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮಾತ್ರ ಸಾಕಷ್ಟು ಏರು-ಪೇರುಗಳಿಂದ ಕೂಡಿತ್ತು. ಅಪಘಾತ ಪ್ರಕರಣ, ಸಹ ನಟನಿಗೆ ಬೆದರಿಕೆ, ಹಲ್ಲೆ ಪ್ರಕರಣ, ಕೃಷ್ಣಮೃಗ ಭೇಟೆ ಪ್ರಕರಣ, ಇನ್ನೂ ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಭೇಟೆ ಪ್ರಕರಣದ ಬಗ್ಗೆ ಸಿನಿಮಾ ಒಂದು ಬಾಲಿವುಡ್​​ನಲ್ಲಿ ನಿರ್ಮಾಣ ಆಗುತ್ತಿದೆ.

ವಿವಾದಾತ್ಮಕ ಸಿನಿಮಾಗಳ ನಿರ್ಮಾಣದಿಂದಲೇ ಹೆಸರಾಗುತ್ತಿರುವ ಅಮಿತ್ ಜಾನಿ ನಿರ್ಮಾಣದಲ್ಲಿ ‘ಕಾಲಾ ಹಿರನ್: ದಿ ಬ್ಯಾಟಲ್ ಆಫ್ ಲೆಗಸಿ’ ಹೆಸರಿನ ಸಿನಿಮಾ ತಯಾರಾಗುತ್ತಿದ್ದು, ಈ ಸಿನಿಮಾ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದ ಕತೆಯನ್ನು ಒಳಗೊಂಡಿದೆ. ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದ್ದು, ಸಲ್ಮಾನ್ ಖಾನ್ ಅವರನ್ನು ಹೋಲುವ ವ್ಯಕ್ತಿಯೊಬ್ಬ ಕೈಯಲ್ಲಿ ರೈಫಲ್ ಹಿಡಿದು ಗುರಿ ನೋಡುತ್ತಿದ್ದಾರೆ. ಸಲ್ಮಾನ್ ಖಾನ್ ಕೈಗೆ ಧರಿಸುವ ಚೈನ್ ಮಾದರಿಯ ಚೈನ್ ಪೋಸ್ಟರ್​​ನಲ್ಲಿರುವ ವ್ಯಕ್ತಿಯ ಕೈಯಲ್ಲೂ ಇದೆ.

ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ಅಮಿತ್ ಜಾನಿ, ‘ಇದು ನಿಜ ಘಟನೆ ಮತ್ತು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಕತೆಯನ್ನು ಒಳಗೊಂಡಿದೆ’ ಎಂದಿದ್ದಾರೆ. ಅಲ್ಲದೆ ಈ ಸಿನಿಮಾ ಭಾರತದ ಅತಿ ದೊಡ್ಡ ವಿವಾದಾತ್ಮಕ ಸಿನಿಮಾ ಆಗಲಿದೆ ಎಂದು ಸಹ ಅವರು ಹೇಳಿದ್ದಾರೆ. ಕೃಷ್ಣಮೃಗ ಭೇಟೆ ಕುರಿತ ಈ ಸಿನಿಮಾ ಸಲ್ಮಾನ್ ಖಾನ್ ಜೊತೆಗೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಕತೆಯನ್ನೂ ಒಳಗೊಂಡಿರಲಿದೆ.

‘ಉದಯಪುರ ಫೈಲ್ಸ್’ ಸಿನಿಮಾ ನಿರ್ಮಾಣ ಮಾಡಿದ್ದ ಅಮಿತ್ ಜಾನಿ ಇದೀಗ ‘ಕಾಲಾ ಹಿರನ್’ ಸಿನಿಮಾಕ್ಕೆ ಕೈ ಹಾಕಿದ್ದು, ಈ ಸಿನಿಮಾವನ್ನು ಭರತ್ ಎಸ್ ಶ್ರೀನಾಥ್ ಎಂಬುವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಜಾನಿ ಫೈರ್ ಫಾಕ್ಸ್ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣಗೊಳ್ಳುತ್ತಿದೆ. ಸಿನಿಮಾದ ಟೀಸರ್ ಜೂನ್ 20 ರಂದು ಬಿಡುಗಡೆ ಆಗಲಿದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಬೆಂಗಳೂರು, ಮೇ,31: ಕಾನೂನು ಸುವ್ಯವಸ್ಥೆಗೆ ಹೆಸರಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಪುಂಡರ ಅಡ್ಡೆಯಾಗುತ್ತಿದೆಯೇ ಎಂಬ ಅನುಮಾನ ಮೂಡಲಾರಂಭಿಸಿದೆ. ನಗರದ ಡೇನಿಸ್ ರಸ್ತೆಯ (Davis Road) ಸೆಂಟ್ ಅಲ್ಫೋನ್ಸಸ್ ಶಾಲೆಯ (St. Alphonsus School) ಜಂಕ್ಷನ್ ಬಳಿ, ಸಾರ್ವಜನಿಕವಾಗಿ ಯುವಕರ ಗುಂಪೊಂದು ಮಾರಕಾಸ್ತ್ರ ಪ್ರದರ್ಶಿಸಿ ದಾದಾಗಿರಿ ನಡೆಸಿರುವ ಬೆಚ್ಚಿಬೀಳಿಸುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಈ ಕುರಿತಾದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿ ನಾಗರಿಕರು ಆತಂಕಗೊಂಡಿದ್ದಾರೆ.

ಲಕ್ಕಿ ಜಂಕ್ಷನ್‌ನ ಗೌಸಿಯಾ ಟೀ ಹೋಟೆಲ್ ಎದುರು ಶನಿವಾರ ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಸ್ಥಳೀಯ ನಿವಾಸಿಯೊಬ್ಬರು ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಎರಡು ಸ್ಕೂಟರ್‌ಗಳಲ್ಲಿ ಹೆಲ್ಮೆಟ್ ಧರಿಸದೆ, ಟ್ರಾಫಿಕ್ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿ ಒಂದೊಂದು ದ್ವಿಚಕ್ರ ವಾಹನದಲ್ಲಿ ತಲಾ ನಾಲ್ಕು ಜನರಂತೆ ಒಟ್ಟು ಎಂಟು ಜನ ಯುವಕರು ಬಂದಿದ್ದರು. ಅಲ್ಲಿ ಸಣ್ಣ ವಿಷಯಕ್ಕೆ ಪರಸ್ಪರ ತೀವ್ರ ಜಗಳ ಆರಂಭಿಸಿದ್ದಾರೆ.

ಇಲ್ಲಿದೆ ನೋಡಿ ಎಕ್ಸ್​​ ವಿಡಿಯೋ:

ಯುವಕರ ನಡುವಿನ ಮಾತಿನ ಚಕಮಕಿ ತೀವ್ರಗೊಳ್ಳುತ್ತಿದ್ದಂತೆ, ಆ ಗುಂಪಿನಲ್ಲಿದ್ದ ಒಬ್ಬ ಪುಂಡ ಸಾರ್ವಜನಿಕ ರಸ್ತೆಯಲ್ಲೇ ದೊಡ್ಡ ಲಾಂಗ್ ಹೊರತೆಗೆದು ಬೀಸುತ್ತಾ ಎದುರಾಳಿಗಳಿಗೆ ಮತ್ತು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲೇ ಶಾಲೆ, ಟೀ ಸ್ಟಾಲ್ ಹಾಗೂ ಸಿಗರೇಟ್ ಅಂಗಡಿಗಳಿರುವುದರಿಂದ, ಮುಂಜಾನೆ ಶಾಲೆಗೆ ತೆರಳುತ್ತಿದ್ದ ಸಣ್ಣ ಸಣ್ಣ ಮಕ್ಕಳು, ಪೋಷಕರು ಹಾಗೂ ಸವಾರರು ಈ ರೌಡಿಸಂ ನೋಡಿ ತೀವ್ರ ಭಯಭೀತರಾಗಿದ್ದಾರೆ. ಇತ್ತೀಚೆಗೆ ಈ ಭಾಗದಲ್ಲಿ ಇಂತಹ ಗಾಂಜಾ ಪುಂಡರ ಮತ್ತು ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಘಟನೆ ನಡೆದ ಜಂಕ್ಷನ್‌ನಲ್ಲಿ ಬೆಂಗಳೂರು ನಗರ ಪೊಲೀಸರ ಅಧಿಕೃತ ಸಿಸಿಟಿವಿ (CCTV) ಕ್ಯಾಮೆರಾಗಳು ಹಾಗೂ ಖಾಸಗಿ ಅಂಗಡಿಗಳ ಕಣ್ಗಾವಲು ಕ್ಯಾಮೆರಾಗಳಿದ್ದು, ಇಡೀ ಕೃತ್ಯದ ದೃಶ್ಯಾವಳಿಗಳು ಅದರಲ್ಲಿ ಸೆರೆಯಾಗಿವೆ. “ಇಂತಹ ರೌಡಿಸಂ ಮತ್ತು ಮಾರಕಾಸ್ತ್ರ ಪ್ರದರ್ಶನವನ್ನು ಸಣ್ಣ ಗಲಾಟೆ ಎಂದು ನಿರ್ಲಕ್ಷಿಸದೆ, ಪೊಲೀಸರು ತಕ್ಷಣವೇ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಬೇಕು” ಎಂದು ಸಾರ್ವಜನಿಕರು ಸಿಟಿ ಪೊಲೀಸ್ ಕಮಿಷನರ್‌ಗೆ ಜಾಲತಾಣಗಳ ಮೂಲಕ ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

ನವದೆಹಲಿ, ಮೇ 31: ಜನರಲ್ ಅನಿಲ್ ಚೌಹಾಣ್ ಅವರ ನಿವೃತ್ತಿಯ ನಂತರ ತೆರವಾಗಿದ್ದ ಸಿಡಿಎಸ್ ಸ್ಥಾನಕ್ಕೆ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ತರಲಾಗಿದೆ. ದೇಶದ ನೂತನ ಮತ್ತು ಮೂರನೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ರಾಜಾ ಸುಬ್ರಮಣಿ (General NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇಂದು ಭಾನುವಾರ ರಾಷ್ಟ್ರರಾಜಧಾನಿ ನಗರಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸೂತ್ರಗಳನ್ನು ಕೈಗೆತ್ತಿಕೊಂಡರು. ಇದಕ್ಕೂ ಮುನ್ನ ಅವರು ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರಾಗಿ (Vice Chief of Army Staff) ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಸಿಡಿಎಸ್ ಹುದ್ದೆ ಭಾರತದ ಸೇನಾ ವ್ಯವಸ್ಥೆಯಲ್ಲಿ ಅತ್ಯುಚ್ಚ ಮತ್ತು ಅತ್ಯಂತ ಮಹತ್ತರವಾದುದು. ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗಳ ನಡುವೆ ಸಮನ್ವಯ ತರುವ ಜವಾಬ್ದಾರಿ ಸಿಡಿಎಸ್​ಗೆ ಇರುತ್ತದೆ. ಆರೇಳು ವರ್ಷದ ಹಿಂದಷ್ಟೇ ಭಾರತೀಯ ಸೇನೆಯಲ್ಲಿ ಸಿಡಿಎಸ್ ಹುದ್ದೆ ಸೃಷ್ಟಿಯಾಗಿದ್ದು. ಹಿಂದಿನ ಸಿಡಿಎಸ್ ಅನಿಲ್ ಚೌಹಾಣ್​ಗಿಂತ ಮೊದಲು ಜನರಲ್ ಬಿಪಿನ್ ರಾವತ್ ಆ ಸ್ಥಾನ ಅಲಂಕರಿಸಿದ್ದರು.

ಇದೀಗ ಈ ಮಹತ್ತರ ಸ್ಥಾನದ ಅಧಿಕಾರ ವಹಿಸಿಕೊಂಡ ತಕ್ಷಣ ಸಶಸ್ತ್ರ ಪಡೆಗಳ ಆಧುನೀಕರಣ ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸುವ ಕುರಿತು ಜನರಲ್ ರಾಜಾ ಸುಬ್ರಮಣಿ ಅವರು ತಮ್ಮ ಪ್ರಮುಖ ಆದ್ಯತೆಗಳನ್ನು ಹಂಚಿಕೊಂಡಿದ್ದಾರೆ. ಥಿಯೇಟರ್ ಕಮಾಂಡ್​ಗಳ ಸ್ಥಾಪನೆ, ಆತ್ಮನಿರ್ಭರತೆ ಮತ್ತು ಆಧುನೀಕರಣ, ಹಾಗೂ ತಂತ್ರಜ್ಞಾನ ಆಧಾರಿತ ರಕ್ಷಣೆ, ಈ ಮೂರು ಪ್ರಮುಖ ಆದ್ಯತೆಗಳ ಬಗ್ಗೆ ಅವರು ವಿಚಾರ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣದಲ್ಲಿ ಟ್ವಿಸ್ಟ್; ಬಂಧಿತ ಆರೋಪಿಗಳಿಗೆ ಮಾಜಿ ಶಾಸಕಿ ಲವ್ಲಿ ಮೈತ್ರಾರೊಂದಿಗೆ ನಿಕಟ ಸಂಪರ್ಕ

ನೂತನ ಸಿಡಿಎಸ್​ಗೆ ಮೂರು ಆದ್ಯತೆಗಳು

ಭಾರತೀಯ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಗಳನ್ನು ಒಟ್ಟುಗೂಡಿಸಿ ಜಂಟಿ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುವ ‘ಥಿಯೇಟರ್ ಕಮಾಂಡ್’ (Theaterisation) ಪ್ರಕ್ರಿಯೆಯನ್ನು ವೇಗಗೊಳಿಸುವುದು ಇವರ ಮೊದಲ ಆದ್ಯತೆಯಾಗಿದೆ. ಮೂರೂ ಪಡೆಗಳ ನಡುವೆ ಹೆಚ್ಚಿನ ಸಮನ್ವಯ ತರುವುದು ಇದರ ಮುಖ್ಯ ಉದ್ದೇಶವಾಗಿದೆ.

ರಕ್ಷಣಾ ವಲಯದಲ್ಲಿ ವಿದೇಶಿ ಅವಲಂಬನೆಯನ್ನು ಕಡಿಮೆ ಮಾಡಿ, ಭಾರತದಲ್ಲೇ ತಯಾರಾಗುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ತಂತ್ರಜ್ಞಾನಗಳನ್ನು (Make in India) ಸಶಸ್ತ್ರ ಪಡೆಗಳಿಗೆ ಅಳವಡಿಸಲು ಅವರು ಒತ್ತು ನೀಡಲಿದ್ದಾರೆ.

ಕೃತಕ ಬುದ್ಧಿಮತ್ತೆ (AI), ಸೈಬರ್ ಯುದ್ಧ ತಂತ್ರಗಳು ಮತ್ತು ಬಾಹ್ಯಾಕಾಶ ರಕ್ಷಣಾ ವ್ಯವಸ್ಥೆಗಳನ್ನು ಬಲಪಡಿಸುವ ಮೂಲಕ ಭಾರತೀಯ ಸೇನೆಯನ್ನು ಭವಿಷ್ಯದ ಯುದ್ಧಗಳಿಗೆ ಸಜ್ಜುಗೊಳಿಸುವುದು ಇವರ ಪ್ರಮುಖ ಗುರಿಯಾಗಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರ ಹಿನ್ನೆಲೆ

ಜನರಲ್ ರಾಜಾ ಸುಬ್ರಮಣಿ ಅವರು ಭಾರತೀಯ ಸೇನೆಯಲ್ಲಿ 37 ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಹಾಗೂ ಅತ್ಯಂತ ಗೌರವಾನ್ವಿತ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು ಚೀನಾ ಗಡಿಯ ಸವಾಲುಗಳನ್ನು ಒಳಗೊಂಡಿರುವ ‘ಸೆಂಟ್ರಲ್ ಕಮಾಂಡ್’ ಸೇರಿದಂತೆ ಸೇನೆಯ ಹಲವು ಆಯಕಟ್ಟಿನ ವಿಭಾಗಗಳನ್ನು ಯಶಸ್ವಿಯಾಗಿ ಮುನ್ನಡೆಸಿದ ಅಪಾರ ಅನುಭವ ಹೊಂದಿದ್ದಾರೆ. ಅವರ ಅತ್ಯುತ್ತಮ ಸೇವೆಗಾಗಿ ಅವರಿಗೆ ಪರಮ ವಿಶಿಷ್ಟ ಸೇವಾ ಪದಕ (PVSM) ಮತ್ತು ಅತಿ ವಿಶಿಷ್ಟ ಸೇವಾ ಪದಕ (AVSM) ಸೇರಿದಂತೆ ಹಲವು ದೇಶದ ಉನ್ನತ ಮಿಲಿಟರಿ ಗೌರವಗಳನ್ನು ನೀಡಿ ಗೌರವಿಸಲಾಗಿದೆ.

ಜಾಗತಿಕ ಮಟ್ಟದಲ್ಲಿ ಮತ್ತು ಭಾರತದ ಗಡಿಗಳಲ್ಲಿ ರಕ್ಷಣಾ ಸವಾಲುಗಳು ಹೆಚ್ಚುತ್ತಿರುವ ಈ ನಿರ್ಣಾಯಕ ಸಮಯದಲ್ಲಿ, ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರ ನಾಯಕತ್ವವು ಭಾರತದ ಮೂರೂ ರಕ್ಷಣಾ ಪಡೆಗಳಿಗೆ ಹೆಚ್ಚಿನ ಶಕ್ತಿ ತುಂಬಲಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ ನೋಡಿ

ಸಿದ್ ಶ್ರೀರಾಮ್ (Sid Sriram) ದಕ್ಷಿಣ ಭಾರತದ ಅದ್ಭುತ ಗಾಯಕ (Singer). ಅವರ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇರುವುದಿಲ್ಲ ಅಷ್ಟು ಅದ್ಭುತವಾಗಿ, ತಾಳ-ಲಯಬದ್ಧವಾಗಿ ಹಾಡುತ್ತಾರೆ ಸಿದ್ ಶ್ರೀರಾಮ್. ತಮ್ಮ ಗಾಯನದ ವಿಡಿಯೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಲೇ ಇರುತ್ತಾರೆ ಸಿದ್ ಶ್ರೀರಾಮ್. ಆ ವಿಡಿಯೋಗಳಲ್ಲಿ ಹಿನ್ನೆಲೆ ಸಂಗೀತದ ಹೊರತಾಗಿ ಹಾಡಿರುತ್ತಾರೆ ಆದರೂ ಅವರ ಹಾಡು ಅದ್ಭುತವಾಗಿ ಕೇಳುತ್ತದೆ. ಇಲ್ಲಿ ಅಂಥಹುದೇ ಒಂದು ವಿಡಿಯೋ ಇದೆ. ರಶ್ಮಿಕಾ-ವಿಜಯ್ ದೇವರಕೊಂಡ ನಟಿಸಿರುವ ಸಿನಿಮಾದ ಹಾಡೊಂದನ್ನು ಅದ್ಭುತವಾಗಿ ಹಾಡಿದ್ದಾರೆ ಸಿದ್ ಶ್ರೀರಾಮ್. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಬೆಂಗಳೂರು ಆರ್​​ಸಿಬಿ ಫ್ಯಾನ್ಸ್​​​ಗೆ ಬಿಗ್​ ಶಾಕ್ ನೀಡಿದ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್!

ಬೆಂಗಳೂರ, ಮೇ,31: ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಹಣಾಹಣಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು ಸಾರ್ವಜನಿಕ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಡಿಸಿಪಿಗಳಿಗೆ ವಿಶೇಷ ಸೂಚನೆಗಳನ್ನು ನೀಡಿದ್ದಾರೆ. ಕಳೆದ ವರ್ಷದ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ರಸ್ತೆಗಳಲ್ಲಿ ಮೆರವಣಿಗೆ, ಪಟಾಕಿ ಸಿಡಿಸುವುದು, ವಾಹನಗಳ ಮೇಲೆ ಹತ್ತಿ ಕುಣಿಯುವುದು ಮತ್ತು ವೀಲಿಂಗ್ ಮಾಡುವಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಳನ್ನು ರಾತ್ರಿಪೂರ್ತಿ ನಡೆಸಲು ಸಂಚಾರಿ ಪೊಲೀಸರಿಗೆ ಸೂಚಿಸಲಾಗಿದೆ. ಸಾರ್ವಜನಿಕವಾಗಿ ಎಲ್ಇಡಿ ಸ್ಕ್ರೀನ್‌ಗಳನ್ನು ಹಾಕಿ ಪಂದ್ಯವನ್ನು ಪ್ರದರ್ಶಿಸುವಂತಿಲ್ಲ. ಮನೆಗಳು, ಕ್ಲಬ್‌ಗಳು ಮತ್ತು ಗೆಸ್ಟ್ ಹೌಸ್‌ಗಳಂತಹ ಖಾಸಗಿ ಒಳಾಂಗಣಗಳಲ್ಲಿ ಸಂಭ್ರಮಾಚರಣೆಗೆ ಅವಕಾಶವಿದೆ, ಆದರೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs GT, IPL 2026 Final Live Score: ಆರ್​​ಸಿಬಿ- ಗುಜರಾತ್ ನಡುವೆ ಫೈನಲ್ ಫೈಟ್

ಐಪಿಎಲ್ 2026 ರ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಕಳೆದ ಮೂರು ಪಂದ್ಯಗಳಲ್ಲಿ ಆರ್‌ಸಿಬಿ ಎರಡು ಬಾರಿ ಗೆದ್ದಿದ್ದರೆ, ಗುಜರಾತ್ ಒಂದು ಪಂದ್ಯವನ್ನು ಗೆದ್ದಿದೆ.

Source link

ಡಿಕೆಶಿ ಸಂಪುಟದಲ್ಲಿ ಯಾರ್ಯಾರು ಸಚಿವರಾಗುತ್ತಾರೆ?: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ನಿಯೋಜಿತ ಸಿಎಂ

ಬೆಂಗಳೂರು, ಮೇ.31: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ, ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರ್ಯಾರು ಸಚಿವ ಸ್ಥಾನಗಳನ್ನು ಪಡೆಯಲಿದ್ದಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಯಾರ್ಯಾರು ಸಚಿವರಾಗುತ್ತಾರೆ ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಗ್ಗೆ ನನಗೆ ಇನ್ನು ಮಾಹಿತಿ ಇಲ್ಲ” ಎಂದು ಪುನರುಚ್ಚರಿಸಿದ್ದಾರೆ. ಸಚಿವ ಸ್ಥಾನಗಳ ಬಗ್ಗೆ ಮಾತನಾಡುವಾಗ, “ನನಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದು ಜಾರಿಗೆ ಬರಲಿದೆ. ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ” ಎಂದಿದ್ದಾರೆ. ತಮ್ಮೊಂದಿಗೆ ಸಚಿವರಾಗಿ ಯಾರಾದರೂ ಪ್ರಮಾಣ ವಚನ ಸ್ವೀಕರಿಸುತ್ತಾರೆಯೇ ಎಂಬ ಪ್ರಶ್ನೆಗೂ, “ನನಗೆ ಗೊತ್ತಿಲ್ಲ” ಎಂದು ಅವರು ಉತ್ತರಿಸಿದ್ದಾರೆ. ಈ ಹೇಳಿಕೆಗಳು ಸಚಿವ ಸಂಪುಟ ರಚನೆಯ ಕುರಿತು ಅಂತಿಮ ತೀರ್ಮಾನದ ಹಕ್ಕು ಪಕ್ಷದ ಕೇಂದ್ರ ನಾಯಕತ್ವದಲ್ಲಿದೆ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್ 2026 ರ ಸಮಾರೋಪ ಸಮಾರಂಭಕ್ಕೆ ಬಿಸಿಸಿಐ ಭರ್ಜರಿ ತಯಾರಿ

2026 ರ ಮೇ 31 ರಂದು ನಡೆಯಲಿರುವ ಫೈನಲ್ (IPL 2026) ಪಂದ್ಯದೊಂದಿಗೆ 19ನೇ ಆವೃತ್ತಿಯ ಐಪಿಎಲ್​ಗೆ ತೆರೆ ಬೀಳಲಿದೆ. ಈ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹೈ-ವೋಲ್ಟೇಜ್ ಫೈನಲ್ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಬಿಸಿಸಿಐ ಕೂಡ ಸಮಾರೋಪ ಸಮಾರಂಭವನ್ನು (IPL 2026 Closing Ceremony) ಪ್ರತಿ ಬಾರಿಯಂತೆ ಈ ಬಾರಿಯೂ ಆಯೋಜಿಸಲಿದೆ ಎಂದು ವರದಿಯಾಗಿದೆ. ಈ ಬಗ್ಗೆ ಬಿಸಿಸಿಐ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬರದಿದ್ದರು. ಕಳೆದ ಕೆಲವು ದಿನಗಳಿಂದ ಕ್ರೀಡಾಂಗಣದಲ್ಲಿ ನೃತ್ಯ ಗುಂಪುಗಳು ಅಭ್ಯಾಸ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸಮಾರೋಪ ಸಮಾರಂಭ ನಡೆಯುತ್ತಾ?

ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಬಿಸಿಸಿಐ ಈ ಬಾರಿ ಪಂದ್ಯ ಪೂರ್ವ ಆಚರಣೆಗಳನ್ನು ಸ್ವಲ್ಪ ಹೆಚ್ಚು ರಹಸ್ಯವಾಗಿಡುತ್ತಿದೆ. ಪಂದ್ಯಾವಳಿಯ ಆರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಅಧಿಕೃತ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಂಡಿರಲಿಲ್ಲ. ಇದೀಗ ಬಿಸಿಸಿಐ, ಸಮಾರೋಪ ಸಮಾರಂಭಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆಯನ್ನು ಮಾಡಿಲ್ಲ. ಆದಾಗ್ಯೂ, ಮೇ 31 ರಂದು ಸಂಜೆ 6:00 ಗಂಟೆಗೆ ಸಮಾರೋಪ ಸಮಾರಂಭಗಳು ಪ್ರಾರಂಭವಾಗಲಿವೆ ಎಂದು ವರದಿಯಾಗಿದೆ.

IPL 2026 Final: ಮೋದಿ ಮೈದಾನದಲ್ಲಿ ಕೊಹ್ಲಿ- ಗಿಲ್ ದಾಖಲೆ ಹೇಗಿದೆ?

ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ?

ಅಧಿಕೃತ ಘೋಷಣೆ ಇಲ್ಲದಿದ್ದರೂ, ಅಹಮದಾಬಾದ್ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನೃತ್ಯ ಪ್ರದರ್ಶನಗಳು ನಡೆಯಲಿವೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ, ಕ್ರೀಡಾಂಗಣದಲ್ಲಿ ನೃತ್ಯ ಗುಂಪುಗಳು ಅಭ್ಯಾಸ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪ್ರಸಿದ್ಧ ಗಾಯಕ ಕೈಲಾಶ್ ಖೇರ್ ತಮ್ಮ ಮಧುರ ಧ್ವನಿಯಿಂದ ಪ್ರೇಕ್ಷಕರನ್ನು ರಂಜಿಸಲಿದ್ದಾರೆ ಎಂದು ವರದಿಯಾಗಿದೆ. ಇವರಲ್ಲದೆ, ಬಾಲಿವುಡ್ ನಟ ವರುಣ್ ಧವನ್, ನಟಿಯರಾದ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ಮೇ 31 ರಂದು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವುದರಿಂದ ಈ ಸಿನಿಮಾ ತಾರೆಯಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಮಿಡ್-ಇನ್ನಿಂಗ್ಸ್​ನಲ್ಲೂ ವಿವಿಧ ಕಾರ್ಯಕ್ರಮಗಳು ನಡೆಯುವುದಾಗಿ ವರದಿಯಾಗಿದೆ.

  • ಇನ್ನಿಂಗ್ಸ್ ವಿರಾಮದ ಸಮಯದಲ್ಲಿ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.
  • ಲೇಸರ್ ಮತ್ತು ಬೆಳಕಿನ ಪ್ರದರ್ಶನ ಇರಲಿದೆ.
  • ವಿಶುವಲ್ ಎಫೆಕ್ಟ್ ಜೊತೆಗೆ ಐಪಿಎಲ್ ಮುಕ್ತಾಯದ ಬಳಿಕ ಸಿಡಿಮದ್ದು ಪ್ರದರ್ಶನವೂ ಇರಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ಫೈನಲ್ ಮ್ಯಾಚ್: ಇಂದು ರಾತ್ರಿಯಿಂದಲೇ ಬೆಂಗಳೂರಿನ ಈ ಪ್ರಮುಖ ಫ್ಲೈಓವರ್‌ಗಳು ಬಂದ್!

ಬೆಂಗಳೂರು, ಮೇ 31: ಐಪಿಎಲ್​ನ (IPL) ಮಹಾಯುದ್ಧ ಫೈನಲ್ ಹಂತ ತಲುಪಿದೆ. ಇಂದು ಗುಜರಾತ್​ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವೆ 2ನೇ ಟ್ರೋಫಿಗಾಗಿ ಜಿದ್ದಾಜಿದ್ದಿನ ಕಾದಾಟ ನಡೆಯಲಿದೆ. ಸದ್ಯ ನಗರದಲ್ಲಿ ಜನರ ಕ್ರೇಜ್​ ಜೋರಾಗಿದೆ. ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಫೈನಲ್ ಪಂದ್ಯಾವಳಿ ಹಿನ್ನೆಲೆ ಸಂಭ್ರಮಾಚರಣೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರು ಸಂಚಾರ ಪೊಲೀಸರು ನಗರದ ಕೆಲ ಫ್ಲೈಓವರ್​ಗಳಲ್ಲಿ ವಾಹನ ಸಂಚಾರ (Traffic advisory) ನಿರ್ಬಂಧಿಸಿದ್ದಾರೆ.

ಮುಖ್ಯಾಂಶಗಳು

  • ಐಪಿಎಲ್ ಫೈನಲ್ ಪಂದ್ಯ ಹಿನ್ನೆಲೆ ಬೆಂಗಳೂರಿನಲ್ಲಿ ವಾಹನ ಸಂಚಾರ ನಿರ್ಬಂಧ
  • ನಗರದ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ನಿಷೇಧ
  • ಬೆಂಗಳೂರು ಸಂಚಾರ ಪೊಲೀಸರಿಂದ ಸೂಚನೆ

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

“ಸಂಚಾರ ಸಲಹೆ / Traffic advisory” pic.twitter.com/dkcuEvJOfr

— DCP SOUTH TRAFFIC (@DCPSouthTrBCP) May 31, 2026

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದು, ಇಂದು ನಡೆಯಲಿರುವ ಐಪಿಎಲ್​​​ 19ನೇ ಆವೃತ್ತಿಯ ಫೈನಲ್​ ಪಂದ್ಯದ ಸಮಯದಲ್ಲಿ ಹಾಗೂ ಪಂದ್ಯದ ನಂತರ ಬೆಂಗಳೂರು ನಗರದೆಲ್ಲೆಡೆ ವಿಜಯೋತ್ಸವ ಆಚರಣೆ ಮಾಡುವ ಸಾಧ್ಯತೆಗಳಿರುವುದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ದಕ್ಷಿಣ ವಿಭಾಗ ವ್ಯಾಪ್ತಿಯ ಎಲಿವೇಟೆಡ್ ಫ್ಲೈಓವರ್​ ಮತ್ತು ಡಬಲ್ ಡೆಕ್ಕರ್​ ಫ್ಲೈಓವರ್​ಗಳಲ್ಲಿ ಇಂದು ರಾತ್ರಿ 11 ಗಂಟೆಯಿಂದ ಜೂನ್​​ 01ರ ಬೆಳಿಗ್ಗೆ 5 ಗಂಟೆವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

ಯಾವೆಲ್ಲಾ ಫ್ಲೈಓವರ್​ನಲ್ಲಿ ಸಂಚಾರ ನಿಷೇಧ?

ಎಲಿವೇಟೆಡ್ ಫ್ಲೈಓವರ್​: ರೂಪೇನ ಆಗ್ರಹಾರದಿಂದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಎಲೆಕ್ಟ್ರಾನಿಕ್ ಸಿಟಿಯಿಂದ ರೂಪೇನ ಅಗ್ರಹಾರವರೆಗೆ ಎರಡೂ ಕಡೆ ಮಾರ್ಗದಲ್ಲಿ ಸಂಚಾರ ನಿಷೇಧಿಸಲಾಗಿದೆ.

ಡಬಲ್​ ಡೆಕ್ಕರ್​​ ಫ್ಲೈಓವರ್​: ರಾಗಿಗುಡ್ಡ ಕಡೆಯಿಂದ 5ನೇ ಮೈನ್ ಹೊರವರ್ತುಲ ರಸ್ತೆ ಹಾಗೂ ಹೊಸೂರು ರಸ್ತೆ ಕಡೆಗೆ ತೆರಳುವ ಮತ್ತು 5ನೇ ಮೈನ್ ಹೊರವರ್ತುಲ ರಸ್ತೆಯಿಂದ ರಾಗಿಗುಡ್ಡ ಕಡೆಗೆ ಹೋಗುವ ಎರಡೂ ಕಡೆ ಮಾರ್ಗದಲ್ಲಿ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್​​ ಎಚ್ಚರಿಕೆ

ಇನ್ನು ಫ್ಲೈಓವರ್ ಕೆಳಗಿನ ಮುಖ್ಯರಸ್ತೆಗಳು ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು, ಉಪಯೋಗಿಸಿಕೊಳ್ಳುವಂತೆ ಕೊರಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ನಮಗೆ ಬೇಕಾದ್ದು ದಕ್ಕದೇ ಹೋದರೆ ಬೇರೆ ಮಾರ್ಗದಲ್ಲಿ ಕೊನೆಗಾಣಿಸಬೇಕಾಗುತ್ತದೆ’- ಇರಾನ್​ಗೆ ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್, ಮೇ 31: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. ಪಶ್ಚಿಮ ಏಷ್ಯಾ ಬಿಕ್ಕಟ್ಟು ತೀವ್ರಗೊಂಡಿರುವ ಈ ಸಂದರ್ಭದಲ್ಲಿ, ಶಾಂತಿ ಒಪ್ಪಂದದ ನಿಯಮಗಳನ್ನು ಕಠಿಣಗೊಳಿಸಿರುವ ಟ್ರಂಪ್, “ನಾವು ಅಂದುಕೊಂಡಿದ್ದು ನಮಗೆ ಸಿಗದಿದ್ದರೆ, ನಾವು ಬೇರೆ ಮಾರ್ಗದಲ್ಲೇ ಇದನ್ನು ಕೊನೆಗಾಣಿಸುತ್ತೇವೆ” ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವೆ ಮಧ್ಯವರ್ತಿಗಳ ಮೂಲಕ ನಡೆಯುತ್ತಿರುವ ಶಾಂತಿ ಒಪ್ಪಂದದ ಕರಡು ಪ್ರತಿಯನ್ನು (Draft MoU) ಶ್ವೇತಭವನದ ಸಿಚುಯೇಷನ್ ರೂಮ್‌ನಲ್ಲಿ ಪರಾಮರ್ಶಿಸಿದ ನಂತರ ಡೊನಾಲ್ಡ್ ಟ್ರಂಪ್ ಈ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಫಾಕ್ಸ್ ನ್ಯೂಸ್‌ನೊಂದಿಗೆ ಮಾತನಾಡಿದ ಅವರು, ಸಂಧಾನದ ಮಾತುಕತೆಗಳು ನಡೆಯುತ್ತಿವೆಯಾದರೂ ಅಮೆರಿಕದ ನಿಯಮಗಳಿಗೆ ಇರಾನ್ ಒಪ್ಪಲೇಬೇಕು ಎಂದು ಒತ್ತಾಯಿಸಿದ್ದಾರೆ.

ಬೇರೆ ಮಾರ್ಗದ ಎಚ್ಚರಿಕೆ ಇತ್ತ ಟ್ರಂಪ್

ಶಾಂತಿ ಮಾತುಕತೆಯಲ್ಲಿ ಅತಿ ಹೆಚ್ಚು ಆತುರಪಡುವುದು ಒಳ್ಳೆಯದಲ್ಲ ಎಂದು ಹೇಳಿದ ಟ್ರಂಪ್, “ಒಂದು ವೇಳೆ ನಾವು ಬಯಸಿದ ಫಲಿತಾಂಶ ನಮಗೆ ಸಿಗದಿದ್ದರೆ, ನಾವು ಈ ಬಿಕ್ಕಟ್ಟನ್ನು ಸಂಪೂರ್ಣವಾಗಿ ಬೇರೆ ರೀತಿಯಲ್ಲಿ ಕೊನೆಗೊಳಿಸಬೇಕಾಗುತ್ತದೆ. ಇಲ್ಲದಿದ್ದರೆ ನಾವು ಕೇವಲ ‘ಯುದ್ಧ ಇಲಾಖೆ’ಯನ್ನು (Department of War) ಕಣಕ್ಕಿಳಿಸಬೇಕಾಗುತ್ತದೆ” ಎಂದು ಪರೋಕ್ಷವಾಗಿ ಸೇನಾ ಕಾರ್ಯಾಚರಣೆಯ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಇರಾನ್​ನ ಮಿಲಿಟರಿಯನ್ನು ಗುರಿ ಮಾಡಿಕೊಂಡಿಲ್ಲವಂತೆ ಟ್ರಂಪ್

ಡೊನಾಲ್ಡ್ ಟ್ರಂಪ್ ಇದೇ ವೇಳೆ ಕುತೂಹಲಕಾರಿ ಸಂಗತಿಯೊಂದನ್ನು ಪ್ರಸ್ತಾಪಿಸಿದ್ದಾರೆ. ಅವರ ಪ್ರಕಾರ, ಅಮೆರಿಕವು ಇರಾನ್​ನ ನೌಕಾಪಡೆ ಮತ್ತು ವಾಯುಪಡೆಯನ್ನು ನೂರಕ್ಕೆ ನೂರು ಧ್ವಂಸ ಮಾಡಿದೆಯಂತೆ. ಆದರೆ, ಮಿಲಿಟರಿ ಉದಾರ ಧೋರಣೆ ಹೊಂದಿರುವುದರಿಂದ ಅದನ್ನು (ಇರಾನ್ ಭೂಸೇನೆ) ಅಷ್ಟೇನೂ ಮುಟ್ಟಿಲ್ಲ ಎನ್ನುತ್ತಾರೆ ಟ್ರಂಪ್.

ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, ಟ್ರಂಪ್ ಅವರು ಇರಾನ್ ಮುಂದಿಟ್ಟಿದ್ದ ಶಾಂತಿ ಪ್ರಸ್ತಾವನೆಯ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿ ಟೆಹ್ರಾನ್‌ಗೆ (ಇರಾನ್ ರಾಜಧಾನಿ) ವಾಪಸ್ ಕಳುಹಿಸಿದ್ದಾರೆ. ಇರಾನ್‌ನ ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ಹಣವನ್ನು ಬಿಡುಗಡೆ ಮಾಡುವ (Unfreeze Funds) ಯಾವುದೇ ನಿಯಮಕ್ಕೆ ಟ್ರಂಪ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬರಾಕ್ ಒಬಾಮಾ ಅವರ ಅವಧಿಯಲ್ಲಿ ಇರಾನ್‌ಗೆ ಶತಕೋಟಿ ಡಾಲರ್ ಹಣ ನೀಡಿದ್ದನ್ನು ಟ್ರಂಪ್ ಈ ಸಂದರ್ಭದಲ್ಲಿ ತೀವ್ರವಾಗಿ ಟೀಕಿಸಿದ್ದಾರೆ.

ಇರಾನ್ ತನ್ನ ಬಳಿ ಇರುವ ಸಮೃದ್ಧ ಯುರೇನಿಯಂ ದಾಸ್ತಾನನ್ನು (Enriched Uranium Stockpile) ಯಾವಾಗ ಮತ್ತು ಹೇಗೆ ಅಮೆರಿಕಕ್ಕೆ ಹಸ್ತಾಂತರಿಸಬೇಕು ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಟ್ರಂಪ್ ಸೂಚಿಸಿದ್ದಾರೆ. ಇದರೊಂದಿಗೆ, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ (Strait of Hormuz) ಜಲಸಂಧಿಯನ್ನು ಮುಕ್ತವಾಗಿಡುವ ಕುರಿತಾದ ನಿಯಮಗಳನ್ನು ಕರಡಿನಲ್ಲಿ ಬದಲಾಯಿಸಲು ಅವರು ತಮ್ಮ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಜರ್ಮನಿಯಲ್ಲಿ ಭಾರತೀಯ ಸಂಘಟನೆಗಳ ಹೊಸ ಒಕ್ಕೂಟ; ಎರಡು ದೇಶಗಳ ಬಾಂಧವ್ಯ ಹೆಚ್ಚಿಸಲು ಒಗ್ಗೂಡಿದ ಭಾರತೀಯರು

“ಅವರು ಇನ್ನು ಮುಂದೆ ನಗಲು ಸಾಧ್ಯವಿಲ್ಲ”

ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣವಾದ ‘ಟ್ರುತ್ ಸೋಷಿಯಲ್’ (Truth Social) ಪೋಸ್ಟ್‌ನಲ್ಲಿ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ಕಳೆದ 47 ವರ್ಷಗಳಿಂದ ಇರಾನಿಯನ್ನರು ನಮ್ಮನ್ನು ಕಾಯುವಂತೆ ಮಾಡುತ್ತಾ, ನಮ್ಮ ಜನರನ್ನು ರಸ್ತೆಬದಿಯ ಬಾಂಬ್‌ಗಳ ಮೂಲಕ ಕೊಲ್ಲುತ್ತಾ, ನಮ್ಮ ದೇಶವನ್ನು ನೋಡಿ ನಗುತ್ತಿದ್ದರು. ಆದರೆ ಅವರು ಇನ್ನು ಮುಂದೆ ನಗಲು ಸಾಧ್ಯವಿಲ್ಲ! ಶಾಂತಿ ಒಪ್ಪಂದಕ್ಕೆ ಇರಾನ್ ತಕ್ಷಣವೇ ಒಪ್ಪಿಗೆ ಸೂಚಿಸಬೇಕು, ಇಲ್ಲದಿದ್ದರೆ ಅವರಿಗೆ ಸಮಯ ಮುಗಿಯುತ್ತಾ ಬರುತ್ತದೆ” ಎಂದು ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ.

ಪ್ರಸ್ತುತ ಪಾಕಿಸ್ತಾನ ಸೇರಿದಂತೆ ಕೆಲವು ಮಧ್ಯವರ್ತಿ ದೇಶಗಳ ಮೂಲಕ ಅಮೆರಿಕ ಮತ್ತು ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ನಡುವೆ ಮಾತುಕತೆಗಳು ನಡೆಯುತ್ತಿವೆ. ಆದರೆ ಟ್ರಂಪ್ ಅವರ ಈ ಕಠಿಣ ನಿಲುವು ಮತ್ತು ಯುದ್ಧದ ಎಚ್ಚರಿಕೆಯು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version