ಪ್ರವಾಸಿಗರ ಜೀವದ ಜೊತೆ ಚೆಲ್ಲಾಟ: ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರ – Kannada News | Negligence at Abbey Falls: Rusted View Tower Puts Tourist Lives at Risk
ಕೊಡಗು, ಜುಲೈ 16: ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿರುವ ಪ್ರಸಿದ್ಧ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರವು ಸಂಪೂರ್ಣ ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿದೆ. ಕಬ್ಬಿಣದ ತಡೆಬೇಲಿಗಳು ಕುಸಿದಿದ್ದು, ಕೆಲವೆಡೆ ಹಗ್ಗದಿಂದ ಕಟ್ಟಿರುವುದು ಕಂಡುಬಂದಿವೆ. ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ತಡೆಬೇಲಿಗೆ ಒರಗುವಾಗ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಬ್ಬಿ ಫಾಲ್ಸ್‌ನಿಂದ ವರ್ಷಕ್ಕೆ 2 ಕೋಟಿಗೂ ಅಧಿಕ ಆದಾಯ ಬರುತ್ತದೆ. ಆದರೂ, ಬರುವ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಪಂಚಾಯತಿ ಅಥವಾ ಪ್ರವಾಸೋದ್ಯಮ ಇಲಾಖೆ…