ವಿಜಯೇಂದ್ರ ಮತ್ತು ಅಶೋಕ್ಗೆ ಹುಷಾರ್ ಆಗಿರಿ ಎಂದಿದ್ದೇಕೆ ಯತ್ನಾಳ್
ವಿಜಯಪುರ, ಮೇ 31: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿದ್ದರಾಮಯ್ಯರ ರಾಜಕೀಯ ಶೈಲಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವೈಯಕ್ತಿಕ ದ್ವೇಷದ ರಾಜಕಾರಣ ಮಾಡಿಲ್ಲ. ನನಗೂ ಅವರ ಬಗ್ಗೆ ಒಂದು ರೀತಿ ಗೌರವ ಇದೆ, ಏಕೆಂದರೆ ಅವರು ಹಿರಿಯ ನಾಯಕರು ಮತ್ತು ಹೆಚ್ಚು ಬಾರಿ ಮುಖ್ಯಮಂತ್ರಿಯಾದವರು. ವಿಧಾನಸಭೆಯಲ್ಲಿ ಎಷ್ಟೇ ಟೀಕೆ ಮತ್ತು ಜಗಳ ಮಾಡಿದರು, ಹೊರಗೆ ಬಂದ ಮೇಲೆ ಯಾರಿಗೂ ವೈಯಕ್ತಿಕವಾಗಿ ಟಾರ್ಗೆಟ್ ಮಾಡುವಂತಹ ವ್ಯಕ್ತಿ ಸಿದ್ದರಾಮಯ್ಯ ಅಲ್ಲ….