ಉತ್ತರ ಪ್ರದೇಶ: ಚಲಿಸುತ್ತಿದ್ದ ಟ್ರಕ್ ಟೈರ್ ಸ್ಫೋಟ, ಮನೆಯೊಳಗೆ ನುಗ್ಗಿದ ಲಾರಿಗೆ, ಒಂದೇ ಕುಟುಂಬದ ಮೂವರು ಬಲಿ – Kannada News | Mirzapur Fatal Accident: Truck Tire Burst Kills Three Family Members in House Crash
ಮಿರ್ಜಾಪುರ, ಜುಲೈ 16: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತ(Accident)ದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸಿಮೆಂಟ್ ತುಂಬಿದ ಲಾರಿಯೊಂದು ಚಲಿಸುತ್ತಿರುವಾಗಲೇ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದರಿಂದ ಈ ಘೋರ ದುರಂತ ಸಂಭವಿಸಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಸಿಮೆಂಟ್ ಚೀಲಗಳನ್ನು ಹೊತ್ತ ಟ್ರಕ್ ವಾರಾಣಸಿಯಿಂದ ಸೋನಭದ್ರಕ್ಕೆ ವೇಗವಾಗಿ…