ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್: ಕೈಗೆ ಸಿಗದ ರಾಜೀವ್ ಗೌಡನನ್ನು ಖಾಕಿ ಖೆಡ್ಡಾಕ್ಕೆ ಕೆಡವಿದ್ದೇಗೆ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ – Kannada News | Threat to Woman Officer: Inside Story Behind Police Arrest of Absconding Rajeev Gowda
ಬೆದರಿಕೆ ಕೇಸ್ನಲ್ಲಿ ರಾಜೀವ್ ಗೌಡ ಬಂಧನ ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡ ಕೊನೆಗೂ ಲಾಕ್ ಆಗಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡು ಊರೂರು ಅಲೆಯತ್ತಿದ್ದ ಆರೋಪಿಯನ್ನು ಕೇರಳ ಗಡಿಯಲ್ಲಿ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. ಅಷ್ಟಕ್ಕೂ ರಾಜೀವ್ ಗೌಡ ಎಲ್ಲಿದ್ದಾನೆ ಎಂಬ ಬಗ್ಗೆ ಖಾಕಿ ಮಾಹಿತಿ ಕಲೆ ಹಾಕಿರೋದೇ ಬಹಳ ಇಂಟರೆಸ್ಟಿಂಗ್ ಆಗಿದೆ. ಆರೋಪಿ ರಾಜೀವ್ ಗೌಡ ತನ್ನ ಸಹೋದರಿಗೆ ಕರೆ ಮಾಡಿದ್ದ ಎಂಬ…