Headlines

IPL 2026: ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರೇ ‘ಚಾಂಪಿಯನ್ಸ್​’!

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು? ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರು. ಅಂದರೆ ಐಪಿಎಲ್ ಪ್ರಿ-ಸೀಸನ್ ಫೋಟೋಶೂಟ್‌ನಲ್ಲಿ ಯಾರು ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಲ್ಲುತ್ತಾರೋ, ಅವರೇ ಆ ವರ್ಷದ ಐಪಿಎಲ್ ಚಾಂಪಿಯನ್ ಆಗ್ತಾರೆ!” ಇದಕ್ಕೆ ಸಾಕ್ಷಿಯೇ ಈ ಫೋಟೋಗಳು… (PC: IPL) ಐಪಿಎಲ್ 2023: ಆ ವರ್ಷ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಪಕ್ಕದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್…

Read More

ಪಂಚಕುಲದಲ್ಲಿ ಡಿಆರ್‌ಡಿಒ ಹೈ-ಪವರ್ ಬಾಂಬ್ ಪರೀಕ್ಷೆ: ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚನೆ

ಪಂಚಕುಲ, ಮೇ 30: ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮೇ 31 ರಂದು ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಿಗೆ ಪರೀಕ್ಷಾ ಅವಧಿಯಲ್ಲಿ ಮನೆಯೊಳಗೇ ಇರುವಂತೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಗಳ ಪರೀಕ್ಷೆಯಲ್ಲಿ ಪರಿಣತಿ ಹೊಂದಿರುವ ಡಿಆರ್‌ಡಿಒದ ಪ್ರಮುಖ ಪ್ರಯೋಗಾಲಯವಾದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯ (TBRL)…

Read More

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!

ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ…

Read More

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್

ತೆಲುಗು ನಟ ರಾಮ್ ಚರಣ್ ಮತ್ತು ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ, ಬುಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದೆ. ಸ್ಪೋರ್ಟ್ಸ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಜಗಪತಿ ಬಾಬು ಹಾಗೂ ಕನ್ನಡದ ಹಿರಿಯ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಯೂಟ್ಯೂಬ್‌ನಲ್ಲಿ ವೈರಲ್ ಆಗಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಜೂನ್ 4 ರಂದು ಸಿನಿಮಾ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು…

Read More

ರವಿಚಂದ್ರನ್ ಮೇಲೆ ಅತ್ಯಾ*ರ ಆರೋಪ ಹೊರಿಸಿದ್ದ ನಟಿ ಬಿಂದ್ಯಾ; 3 ದಶಕಗಳ ಬಳಿಕ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ನಡುವೆ ದೊಡ್ಡ ಕಂದಕ ಸೃಷ್ಟಿಸಿತ್ತು. ಹಲವು ವರ್ಷಗಳ ನಂತರ ಆ ಕಹಿ ಘಟನೆಯನ್ನು ನೆನೆದು ನಟಿ ಬಿಂದಿಯಾ ಭಾವುಕರಾಗಿದ್ದಾರೆ. ಅಲ್ಲದೆ ರವಿಚಂದ್ರನ್ ಅವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚೆಗೆ ರಘುರಾಮ್ ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ…

Read More

Lucky Birth Dates: ಈ 4 ಜನ್ಮ ದಿನಾಂಕವರು ಹುಟ್ಟುತ್ತಲೇ ಕೋಟ್ಯಾಧಿಪತಿಗಳಾಗುವ ಅದೃಷ್ಟ ತಂದಿರುತ್ತಾರೆ!

ಹುಟ್ಟುತ್ತಲೇ ಕೋಟ್ಯಾಧಿಪತಿಗಳಾಗುವ ಅದೃಷ್ಟImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ಜನ್ಮ ದಿನಾಂಕಗಳನ್ನು ಹೊಂದಿರುವ ಜನರು ಬಾಲ್ಯದಿಂದಲೇ ಹಣ, ಯಶಸ್ಸು ಮತ್ತು ಸುಖ-ಸಂತೋಷಗಳನ್ನು ಪಡೆಯುವ ವಿಶೇಷ ಸಾಮರ್ಥ್ಯವನ್ನು ಹೊಂದಿರುತ್ತಾರೆ ಎಂದು ನಂಬಲಾಗಿದೆ. ಇಂತಹ ವ್ಯಕ್ತಿಗಳು ತಮ್ಮ ಕಠಿಣ ಪರಿಶ್ರಮ, ಬುದ್ಧಿವಂತಿಕೆ ಮತ್ತು ಸರಿಯಾದ ನಿರ್ಧಾರಗಳ ಆಧಾರದ ಮೇಲೆ ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸುತ್ತಾರೆ. ಇವರಲ್ಲಿ ನಾಯಕತ್ವದ ಗುಣ, ವ್ಯವಹಾರದ ಜಾಣ್ಮೆ ಮತ್ತು ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾದ ಅವಕಾಶ ಮತ್ತು…

Read More

RCB ಪಾಲಿಗೆ ಅಭಿಶಾಪವಾಗಲಿದೆಯಾ ಬಿಸಿಸಿಐನ ಈ ಒಂದು ನಿರ್ಧಾರ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮೇ 31) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಫೈನಲ್ ಪಂದ್ಯ ನಡೆಯುತ್ತಿರುವುದು ಗುಜರಾತ್ ಟೈಟಾನ್ಸ್ ತಂಡದ ತವರು ಮೈದಾನದಲ್ಲಿ. ಇದುವೇ ಗುಜರಾತ್ ಟೈಟಾನ್ಸ್ ಪಾಲಿಗೆ ಪ್ಲಸ್ ಪಾಯಿಂಟ್. ಗುಜರಾತ್ ಟೈಟಾನ್ಸ್ ತಂಡಕ್ಕೆ ಹೀಗೊಂದು ಅನುಕೂಲಕರ ವಾತಾವರಣ ಸೃಷ್ಟಿಯಾಗಲು ಮುಖ್ಯ ಕಾರಣ ಬಿಸಿಸಿಐ ತೆಗೆದುಕೊಂಡ ಒಂದು…

Read More

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ಪಲ್ಟಿ: ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ

ಕಾರವಾರ/ಅಂಕೋಲಾ, ಮೇ 30: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಸೀಬರ್ಡ್ (Seabird) ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು (ಅಡ್ಲೂರು) ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ…

Read More

ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಜ್ಞೆ ತಪ್ಪಿದ್ದ ತಾಯಿ-ಮಗುವನ್ನು ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ಕಂಡಕ್ಟರ್

ಮಂಗಳೂರು, ಮೇ,30 : ಕರಾವಳಿಯ ಜನರ ರಕ್ತದಲ್ಲೇ ಮಾನವೀಯತೆ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇದು. ಮಂಗಳೂರು ನಗರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ಅದೇ ಬಸ್ಸಿನಲ್ಲಿ ಗಾಯಾಳುಗಳನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ರಿಯಲ್ ಹೀರೊಗಳಾಗಿದ್ದಾರೆ. ಇದೀಗ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಶುಕ್ರವಾರ ಮಂಗಳೂರಿನ ಕಾವೂರು ಕಡೆಯಿಂದ ಕುಂಜತ್ತಬೈಲ್…

Read More