Headlines

ಶಾರುಖ್ ಖಾನ್‌ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court dismisses petition against Shah Rukh Khan Mannat renovation

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಹಾಗೂ ಪತ್ನಿ ಗೌರಿ ಖಾನ್ ಅವರಿಗೆ ಸೇರಿದ ಮುಂಬೈನ ಬಾಂದ್ರಾದಲ್ಲಿರುವ ಪ್ರಸಿದ್ಧ ‘ಮನ್ನತ್’ (Mannat) ಬಂಗಲೆಯ ನವೀಕರಣಕ್ಕೆ ಎದುರಾಗಿದ್ದ ಕಾನೂನು ಸಂಕಷ್ಟ ದೂರಾಗಿದೆ. ಬಂಗಲೆಯ ನವೀಕರಣ ಮತ್ತು ವಿಸ್ತರಣೆಗೆ ನೀಡಲಾದ ಅನುಮತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಾನೂನಿನ ಚೌಕಟ್ಟಿನಲ್ಲಿದ್ದುಕೊಂಡು ತಮ್ಮ ಮನೆಗಳನ್ನು ನವೀಕರಿಸುವ ಸಂಪೂರ್ಣ ಸ್ವಾತಂತ್ರ್ಯವು ಮನೆಯ ಮಾಲೀಕರಿಗೆ ಇರುತ್ತದೆ ಎಂದು ಕೋರ್ಟ್ ಈ…

Read More

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ – Kannada News | Lokayuktas Plea Rejected: Governor Refuses Sanction for Zameer Ahmeds Prosecution

ಬೆಂಗಳೂರು, ಜು.14: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ…

Read More

IND vs ENG: 12 ಎಸೆತಗಳಲ್ಲಿ 13 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ ಅಕ್ಷರ್ ಪಟೇಲ್

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ಅದ್ಭುತವಾಗಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಅಮೋಘ ಆರಂಭ ಪಡೆದುಕೊಂಡರೂ ಅದಾದ ಬಳಿಕ ಟೀಂ ಇಂಡಿಯಾ ಬೌಲರ್​ಗಳು ನಿಯಮಿತ ಅಂತರದಲ್ಲಿ ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್‌ ಬ್ಯಾಟಿಂಗ್‌ ವಿಭಾಗವನ್ನು ಕಟ್ಟಿಹಾಕಿದರು(PC-BCCI X). ಈ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ 10 ಓವರ್​ಗಳ ಖೋಟಾದಲ್ಲಿ ಪ್ರಮುಖ 4 ವಿಕೆಟ್​ಗಳನ್ನು ಕಬಳಿಸಿದರು. ಅದರಲ್ಲೂ ಶತಕದ ಜೊತೆಯಾಟ ನಡೆಸಿದ್ದ ಲಿಯಾಮ್ ಡಾಸನ್…

Read More

‘ನ್ಯಾಯಾಲಯದ ದಾರಿ ತಪ್ಪಿಸಬೇಡಿ’; ಕಾಮಿಡಿಯನ್ ಸಮಯ್ ರೈನಾಗೆ 3 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್! – Kannada News | Supreme Court Imposes Rs 3 Lakh fine On Samay Raina Over False Statements India’s Got Latent controversy

ನವದೆಹಲಿ, ಜುಲೈ 14: ತಮ್ಮ ಜನಪ್ರಿಯ ಯೂಟ್ಯೂಬ್ ಶೋ ‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದಕ್ಕೆ (India’s Got Latent controversy) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ ಹಾಗೂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಪ್ರಸಿದ್ಧ ಕಾಮಿಡಿಯನ್ ಸಮಯ್ ರೈನಾ (Samay Raina) ಅವರಿಗೆ ಸುಪ್ರೀಂ ಕೋರ್ಟ್ 3 ಲಕ್ಷ ರೂ. ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ಜೆ.ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಹೊರಡಿಸಿದೆ….

Read More

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು – Kannada News | Tumakuru Rail Boost: Madhugiri, Sira, Pavagada Connectivity by 2027

ತುಮಕೂರು, ಜು.14: ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ ಮತ್ತು ಪಾವಗಡ ಭಾಗದ ಜನರ ದಶಕಗಳ ಕಾಲದ ರೈಲು ಸಂಪರ್ಕದ ಕನಸು ಕೊನೆಗೂ ನನಸಾಗುವ ಹಂತಕ್ಕೆ ತಲುಪಿದೆ. ಒಂದೆಡೆ ದಾವಣಗೆರೆ-ತುಮಕೂರು ರೈಲು ಮಾರ್ಗ ಹಾಗೂ ಮತ್ತೊಂದೆಡೆ ತುಮಕೂರು-ಕಲ್ಯಾಣದುರ್ಗ ನಡುವಿನ ನೂತನ ರೈಲು ಮಾರ್ಗದ ಕಾಮಗಾರಿಗಳು ಅತ್ಯಂತ ಭರದಿಂದ ಸಾಗುತ್ತಿವೆ. ಈ ಎರಡೂ ಮಹತ್ವಾಕಾಂಕ್ಷೆಯ ಯೋಜನೆಗಳನ್ನು 2027ರ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ಮಹತ್ತರ ಗುರಿಯನ್ನು ಹೊಂದಲಾಗಿದೆ. ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಹೊಸ ಭರವಸೆಯ…

Read More

ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಯಾವಾಗ?: ಆಕಾಂಕ್ಷಿಗಳದ್ದೂ ಇದೇ ಪ್ರಶ್ನೆ! – Kannada News | Karnataka Cabinet Expansion: Delay Triggers Intense Lobbying Among Aspirants

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಯಾವಾಗ?Image Credit source: Tv9 Kannada ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದು ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ಕೂಡಿಬಂದಿಲ್ಲ. ರಾಜ್ಯದಲ್ಲಿ ಉಳಿದಿರುವ 20 ಸಚಿವ ಸ್ಥಾನಗಳಿಗೆ 60ಕ್ಕೂ ಹೆಚ್ಚು ಶಾಸಕರು ತೀವ್ರವಾಗಿ ಲಾಬಿ ನಡೆಸುತ್ತಿದ್ದು, ಇದು ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಚಿವರ ಮೊದಲ ಪಟ್ಟಿ ರಿಲೀಸ್ ಆಗಿ ಅವರ ಪ್ರಮಾಣವಚನ ನಡೆದ ಬೆನ್ನಲ್ಲೇ ಸಚಿವ…

Read More

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು…

Read More

ಉಕ್ರೇನ್ ಮೇಲೆ ರಷ್ಯಾ ಪರಮಾಣು ಬಾಂಬ್ ಹಾಕದಂತೆ ಮೋದಿ ತಡೆದಿದ್ದರು; ಪೋಲೆಂಡ್ ಸಚಿವರಿಂದ ಮಹತ್ವದ ಬಹಿರಂಗ – Kannada News | PM Narendra Modi Stopped Putin From attacking Ukraine with nuclear bomb In 2022 Polish Minister said

ನವದೆಹಲಿ, ಜುಲೈ 14: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮಾತುಗಳಿಗೆ ಬಹಳ ಗೌರವ ನೀಡುತ್ತಾರೆ. ಅಲ್ಲದೆ, ರಷ್ಯಾದ ಮೇಲೆ ಪ್ರಭಾವ ಬೀರಬಲ್ಲ ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಪ್ರಮುಖವಾದುದಾಗಿದೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಶೆವ್ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದ ಪೋಲೆಂಡ್ ಸಚಿವ, 2022ರ ಕೊನೆಯಲ್ಲಿ ನಡೆದ ಒಂದು…

Read More

IND vs ENG: 5 ರನ್​​ಗಳ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ರೋಹಿತ್, ಕೊಹ್ಲಿ

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 47.5 ಓವರ್‌ಗಳಲ್ಲಿ 258 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಪವರ್ ಪ್ಲೇ ಮುಗಿಯುವುದಕ್ಕೂ ಮುನ್ನವೇ ಆಘಾತ ಎದುರಾಯಿತು (PC-Cricbuzz). ಟೀಂ ಇಂಡಿಯಾದ ಇಬ್ಬರು ಅನುಭವಿ ಬ್ಯಾಟ್ಸ್‌ಮನ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ಎಡವಿದ್ದಾರೆ….

Read More

ಮಳೆ ವೇಳೆ ಗೋಕರ್ಣ ದೇಗುಲದ ಗರ್ಭಗುಡಿಗೆ ನುಗ್ಗುತ್ತಿರುವ ಕೊಳಚೆ ನೀರು: ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ – Kannada News | Sewage Water Enters Gokarna Mahabaleshwara Temple Sanctum; CM DK Shivakumar Orders Immediate Action

ಬೆಂಗಳೂರು/ಕುಮಟಾ, ಜುಲೈ 14: ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ದೇವಾಲಯದ ಅಭಿಷೇಕದ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ಮಳೆಗಾಲದಲ್ಲಿ ಹೊರಗಿನ ಕೊಳಚೆ ನೀರು ದೇವಾಲಯದ ಒಳಭಾಗಕ್ಕೆ ಪ್ರವೇಶಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ‘ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ’…

Read More