ಶಾರುಖ್ ಖಾನ್‌ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court dismisses petition against Shah Rukh Khan Mannat renovation

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಹಾಗೂ ಪತ್ನಿ ಗೌರಿ ಖಾನ್ ಅವರಿಗೆ ಸೇರಿದ ಮುಂಬೈನ ಬಾಂದ್ರಾದಲ್ಲಿರುವ ಪ್ರಸಿದ್ಧ ‘ಮನ್ನತ್’ (Mannat) ಬಂಗಲೆಯ ನವೀಕರಣಕ್ಕೆ ಎದುರಾಗಿದ್ದ ಕಾನೂನು ಸಂಕಷ್ಟ ದೂರಾಗಿದೆ. ಬಂಗಲೆಯ ನವೀಕರಣ ಮತ್ತು ವಿಸ್ತರಣೆಗೆ ನೀಡಲಾದ ಅನುಮತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಾನೂನಿನ ಚೌಕಟ್ಟಿನಲ್ಲಿದ್ದುಕೊಂಡು ತಮ್ಮ ಮನೆಗಳನ್ನು ನವೀಕರಿಸುವ ಸಂಪೂರ್ಣ ಸ್ವಾತಂತ್ರ್ಯವು ಮನೆಯ ಮಾಲೀಕರಿಗೆ ಇರುತ್ತದೆ ಎಂದು ಕೋರ್ಟ್ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ.

ಈ ಪ್ರಕರಣವನ್ನು ‘ರಾಷ್ಟ್ರೀಯ ಹಸಿರು ನ್ಯಾಯಮಂಡಳಿ’ಗೆ ಮರುಹಸ್ತಾಂತರಿಸಬೇಕು ಎಂಬ ಅರ್ಜಿದಾರರ ವಕೀಲರ ವಿನಂತಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಅಲ್ಲದೆ, ವ್ಯಕ್ತಿಯ ಜನಪ್ರಿಯತೆ ಅಥವಾ ಸೆಲೆಬ್ರಿಟಿ ಸ್ಟೇಟಸ್ ಈ ಪ್ರಕರಣದ ವಿಚಾರಣೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂಬುದನ್ನು ನ್ಯಾಯಪೀಠವು ಸ್ಪಷ್ಟಪಡಿಸಿತು.

ಅರ್ಜಿದಾರರ ವಾದವೇನಿತ್ತು?

ಮುಂಬೈ ನಿವಾಸಿಯೊಬ್ಬರು ಸಲ್ಲಿಸಿದ್ದ ಈ ಅರ್ಜಿಯಲ್ಲಿ, ಮನ್ನತ್ ಬಂಗಲೆಯ ನವೀಕರಣ ಯೋಜನೆಗೆ ಅಗತ್ಯವಿರುವ ಅನುಮತಿಗಳನ್ನು ಹಾಗೂ ಪರಿಸರ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಆರೋಪಿಸಲಾಗಿತ್ತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶೋಯೆಬ್ ಆಲಂ, ‘ಈ ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯದ ಒಪ್ಪಿಗೆ ಅತ್ಯಗತ್ಯವಾಗಿತ್ತು. ನಿಯಮ ಉಲ್ಲಂಘನೆಗಳು ಇನ್ನು ಮುಂದುವರಿಯುತ್ತಲೇ ಇವೆ. 5 ಕೋಟಿ ರೂಪಾಯಿಗಿಂತ ಹೆಚ್ಚಿನ ವೆಚ್ಚದ ಯೋಜನೆಗಳಿಗೆ ಇಂತಹ ಪರಿಸರ ಇಲಾಖೆಯ ಅನುಮತಿ ಕಡ್ಡಾಯವಾಗಿದೆ’ ಎಂದು ವಾದಿಸಿದ್ದರು.

‘ಸೆಲೆಬ್ರಿಟಿ ಎಂಬ ಕಾರಣಕ್ಕೆ ನಿಯಮ ಬದಲಾಗಲ್ಲ’

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠವು ಈ ಅರ್ಜಿಯ ಹಿಂದಿನ ಉದ್ದೇಶವನ್ನು ಪ್ರಶ್ನಿಸಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ‘ಈ ಬಂಗಲೆಯು ಒಂದು ಖಾಸಗಿ ನಿವಾಸವಾಗಿದೆ. ಇದರ ನಿವಾಸಿಗಳು ಕಾನೂನಿನ ಮಿತಿಯಲ್ಲಿ ಇದ್ದುಕೊಂಡು ಬದಲಾವಣೆಗಳನ್ನು ಅಥವಾ ನವೀಕರಣಗಳನ್ನು ಮಾಡಲು ಸಂಪೂರ್ಣ ಹಕ್ಕು ಹೊಂದಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ

ಈ ಹಿಂದೆಯೇ ಅರ್ಜಿ ತಿರಸ್ಕರಿಸಿದ್ದ ಎನ್‌ಜಿಟಿ

ಬಂಗಲೆಯ ನವೀಕರಣ ಮತ್ತು ವಿಸ್ತರಣೆಗೆ ನೀಡಲಾದ ಪರಿಸರ ಹಾಗೂ ಕರಾವಳಿ ವಲಯದ ಅನುಮತಿಗಳ ವಿರುದ್ಧ ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ಈ ಹಿಂದೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಿರಸ್ಕರಿಸಿತ್ತು. ಈ ಯೋಜನೆಯು ಪರಿಸರ ನಿಯಮಗಳಿಗೆ ಅನುಗುಣವಾಗಿಯೇ ಇದೆ ಎಂದು ಎನ್‌ಜಿಟಿ ತೀರ್ಪು ನೀಡಿತ್ತು. ಸಾಮಾಜಿಕ ಕಾರ್ಯಕರ್ತ ಸಂತೋಷ್ ದೌಂಡ್ಕರ್ ಅವರು 2025ರ ಮಾರ್ಚ್‌ನಲ್ಲಿ ಈ ಮೇಲ್ಮನವಿಯನ್ನು ಎನ್‌ಜಿಟಿ ಮುಂದೆ ಸಲ್ಲಿಸಿದ್ದರು. ಆದರೆ ನಿಯಮಗಳ ಪ್ರಕಾರವೇ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆಯಲಾಗಿದೆ ಎಂದು ಶಾರುಖ್ ಖಾನ್ ಪರ ವಕೀಲರು ಸ್ಪಷ್ಟಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:37 pm, Tue, 14 July 26

Source link

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ – Kannada News | Lokayuktas Plea Rejected: Governor Refuses Sanction for Zameer Ahmeds Prosecution

ಬೆಂಗಳೂರು, ಜು.14: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಆದರೆ, ಈ ಮನವಿಯನ್ನು ಪರಿಶೀಲಿಸಿದ ರಾಜ್ಯಪಾಲರು, ಪ್ರಾಸಿಕ್ಯೂಷನ್ ಅನುಮತಿ ನೀಡಲು ನಿರಾಕರಿಸಿದ್ದಾರೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಜಮೀರ್ ಅಹ್ಮದ್ ಖಾನ್ ಅವರಿಗೆ ಈ ತಾತ್ಕಾಲಿಕ ರಿಲೀಫ್ ಸಿಕ್ಕಿರುವುದು ಮಹತ್ವ ಪಡೆದುಕೊಂಡಿದೆ. ಲೋಕಾಯುಕ್ತದ ಕಡತ ವಾಪಸ್ ಪಡೆದಿರುವ ರಾಜ್ಯಪಾಲರ ನಿರ್ಧಾರದಿಂದಾಗಿ, ಜಮೀರ್ ಅಹ್ಮದ್ ಖಾನ್ ವಿರುದ್ಧದ ಕಾನೂನು ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: 12 ಎಸೆತಗಳಲ್ಲಿ 13 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ ಅಕ್ಷರ್ ಪಟೇಲ್

Source link

‘ನ್ಯಾಯಾಲಯದ ದಾರಿ ತಪ್ಪಿಸಬೇಡಿ’; ಕಾಮಿಡಿಯನ್ ಸಮಯ್ ರೈನಾಗೆ 3 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್! – Kannada News | Supreme Court Imposes Rs 3 Lakh fine On Samay Raina Over False Statements India’s Got Latent controversy

ನವದೆಹಲಿ, ಜುಲೈ 14: ತಮ್ಮ ಜನಪ್ರಿಯ ಯೂಟ್ಯೂಬ್ ಶೋ ‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದಕ್ಕೆ (India’s Got Latent controversy) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ ಹಾಗೂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಪ್ರಸಿದ್ಧ ಕಾಮಿಡಿಯನ್ ಸಮಯ್ ರೈನಾ (Samay Raina) ಅವರಿಗೆ ಸುಪ್ರೀಂ ಕೋರ್ಟ್ 3 ಲಕ್ಷ ರೂ. ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ಜೆ.ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. “ನೀವು ನ್ಯಾಯಾಲಯದ ದಾರಿತಪ್ಪಿಸಿದ್ದೀರಿ” ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಏನಿದು ವಿವಾದ?:

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನ ಮೊದಲ ಸೀಸನ್‌ನಲ್ಲಿ ಸ್ಪೈನಲ್ ಮಸ್ಕುಲರ್ ಅಟ್ರೋಫಿ (SMA) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವವರ ಕುರಿತು ಲೇವಡಿ ಮಾಡಲಾಗಿತ್ತು. ಇದರ ವಿರುದ್ಧ ‘ಕ್ಯೂರ್ ಎಸ್‌ಎಂಎ ಇಂಡಿಯಾ ಫೌಂಡೇಶನ್’ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಹಿಂದೆ ನ್ಯಾಯಾಲಯವು ಸಮಯ್ ರೈನಾ ಅವರಿಗೆ ಎಸ್‌ಎಂಎ ಫೌಂಡೇಶನ್ ಹಾಗೂ ಆ ಕಾಯಿಲೆಯಿಂದ ಬಳಲುತ್ತಿರುವವರನ್ನು ಸಂಪರ್ಕಿಸಿ, ಅವರಿಗೆ ನೆರವಾಗುವಂತೆ ಆದೇಶಿಸಿತ್ತು. ತಿಂಗಳಿಗೆ ಕನಿಷ್ಠ ಎರಡು ಕಾರ್ಯಕ್ರಮಗಳನ್ನು ನಡೆಸಿ ಅಂಗವಿಕಲರ ಚಿಕಿತ್ಸಾ ನಿಧಿಗೆ ಹಣ ಸಂಗ್ರಹಿಸಬೇಕು. ವಿಶೇಷ ಚೇತನರನ್ನು ಗೌರವಯುತವಾಗಿ ತಮ್ಮ ಶೋಗಳಿಗೆ ಆಹ್ವಾನಿಸಿ ಪ್ರೋತ್ಸಾಹಿಸಬೇಕು ಎಂದು ಆದೇಶಿಸಿತ್ತು. ಆದರೆ, ಸಮಯ್ ರೈನಾ ಆ ಕೆಲಸ ಮಾಡಿರಲಿಲ್ಲ.

ಕೋರ್ಟ್ ಆದೇಶ ಉಲ್ಲಂಘನೆ:

ವಿಚಾರಣೆಯ ವೇಳೆ ದೂರುದಾರ ಸಂಸ್ಥೆಯ ಪರ ವಾದ ಮಂಡಿಸಿದ ಹಿರಿಯ ವಕೀಲೆ ಅಪರಾಜಿತಾ ಸಿಂಗ್, “ಸಮಯ್ ರೈನಾ ಅವರು ಸರಣಿ ಶೋಗಳನ್ನು ನಡೆಸುತ್ತಿದ್ದಾರೆ. ಆದರೆ ನ್ಯಾಯಾಲಯದ ಆದೇಶದಂತೆ ಅವರು ಇದುವರೆಗೆ ಎಸ್‌ಎಂಎ ಫೌಂಡೇಶನ್ ಅಥವಾ ಆ ಕಾಯಿಲೆಯಿಂದ ಬಳಲುತ್ತಿರುವ ಯಾರನ್ನೂ ಸಂಪರ್ಕಿಸಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ವಿವಾದದಲ್ಲಿ ‘ಇಂಡಿಯಾಸ್ ಗಾಟ್ ಲೇಟೆಂಟ್ 2’; ಮತ್ತೆ ಬ್ಯಾನ್ ಭೀತಿ

ಕೋರ್ಟ್ ಪ್ರಕ್ರಿಯೆಗೆ ಲೇವಡಿ:

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಮಯ್ ರೈನಾ ನಡವಳಿಕೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದರು. “ಸಮಯ್ ರೈನಾ ಇತ್ತೀಚೆಗೆ ಹೊಸ ಶೋ ಒಂದನ್ನು ಆರಂಭಿಸಿದ್ದಾರೆ. ಅದರ ಮೊದಲ ಎಪಿಸೋಡ್​​ನಲ್ಲಿಯೇ ಮೊದಲ ಸರಣಿಯಲ್ಲಿ ಮಾಡದ ಕೆಲಸವನ್ನು ಈಗ ಮಾಡುತ್ತಿದ್ದೇನೆ ಎಂದು ಹೇಳುತ್ತಾ ಶೋನಲ್ಲಿ ‘ನಿಂಬೆಹಣ್ಣು-ಮೆಣಸಿನಕಾಯಿ’ ನೇತುಹಾಕಿದ್ದಾರೆ. ಅವರು ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದಿದ್ದರೂ, ಅವರ ನಡವಳಿಕೆ ನ್ಯಾಯಾಲಯದ ಕಾನೂನು ಪ್ರಕ್ರಿಯೆಯನ್ನು ಅಣಕಿಸುವಂತಿತ್ತು ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ” ಎಂದು ಮೆಹ್ತಾ ಕೋರ್ಟ್‌ಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಮಯ್ ರೈನಾ ಪರ ವಕೀಲರು, “ಫೌಂಡೇಶನ್ ಅನ್ನು ಸಂಪರ್ಕಿಸದಿರುವುದು ಯಾವುದೇ ಅಹಂಕಾರದಿಂದ ಮಾಡಿದ್ದಲ್ಲ. ನ್ಯಾಯಾಲಯದ ಅಧಿಕಾರಿಗಳಾಗಿ ನಮ್ಮ ಕಕ್ಷಿದಾರರಿಗೆ ಕೋರ್ಟ್ ಆದೇಶ ಪಾಲಿಸುವಂತೆ ನಾವು ಮನವರಿಕೆ ಮಾಡಿಕೊಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಸಿಜೆಐ ಸೂರ್ಯ ಕಾಂತ್ ಖಡಕ್ ಎಚ್ಚರಿಕೆ:

ಸಮಯ್ ರೈನಾ ಅವರ ಈ ಧೋರಣೆಯಿಂದ ತೀವ್ರ ಆಕ್ರೋಶಗೊಂಡ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ತರಾಟೆಗೆ ತೆಗೆದುಕೊಂಡಿದ್ದಾರೆ. “ಕೆಲವರು ದೇಶದ ಹೊರಗೆ ಕುಳಿತುಕೊಂಡು, ತಾವು ಭಾರತೀಯ ಕಾನೂನು ಮತ್ತು ನ್ಯಾಯಾಲಯದ ವ್ಯಾಪ್ತಿಯಿಂದ ಆಚೆಗಿದ್ದೇವೆ ಎಂದು ಭಾವಿಸಿದ್ದಾರೆ. ಈಗ ಅವರು ಇದರ ಪರಿಣಾಮವನ್ನು ಅನುಭವಿಸಲಿ. ಸಮಯ್ ರೈನಾ ಅವರ ಈ ವರ್ತನೆ ಅಹಂಕಾರವಲ್ಲದಿದ್ದರೆ ನಾವು ಆಕ್ಸ್‌ಫರ್ಡ್ ಡಿಕ್ಷನರಿಯನ್ನೇ ಬದಲಾಯಿಸಬೇಕಾಗುತ್ತದೆ!” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮತ್ತೆ ಬರುತ್ತಿದೆ ವಿವಾದಾತ್ಮಕ ಶೋ, ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ ಸಮಯ್ ರೈನಾ

ಸುಪ್ರೀಂ ಕೋರ್ಟ್ ಸಮಯ್ ರೈನಾ ಅವರಿಗೆ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಈ ಮೊತ್ತವನ್ನು 2 ವಾರಗಳ ಒಳಗೆ ಜಮಾ ಮಾಡುವಂತೆ ಆದೇಶಿಸಿದೆ. ಮೊದಲು ತಲಾ 10 ಲಕ್ಷ ರೂ. ದಂಡ ವಿಧಿಸಲು ಕೋರ್ಟ್ ಯೋಚಿಸಿತ್ತಾದರೂ, ನಂತರ ಅದನ್ನು 3 ಲಕ್ಷಕ್ಕೆ ಇಳಿಸಲಾಗಿದೆ. ಆದರೆ, ಒಂದು ವೇಳೆ ನೀವು ಕೋರ್ಟ್ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ, ಈ ದಂಡದ ಮೊತ್ತ 30 ಲಕ್ಷ ರೂ. ಆಗಲಿದೆ ಎಂದು ಸುಪ್ರೀಂ ಕೋರ್ಟ್ ಅಂತಿಮ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು – Kannada News | Tumakuru Rail Boost: Madhugiri, Sira, Pavagada Connectivity by 2027

ತುಮಕೂರು, ಜು.14: ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ ಮತ್ತು ಪಾವಗಡ ಭಾಗದ ಜನರ ದಶಕಗಳ ಕಾಲದ ರೈಲು ಸಂಪರ್ಕದ ಕನಸು ಕೊನೆಗೂ ನನಸಾಗುವ ಹಂತಕ್ಕೆ ತಲುಪಿದೆ. ಒಂದೆಡೆ ದಾವಣಗೆರೆ-ತುಮಕೂರು ರೈಲು ಮಾರ್ಗ ಹಾಗೂ ಮತ್ತೊಂದೆಡೆ ತುಮಕೂರು-ಕಲ್ಯಾಣದುರ್ಗ ನಡುವಿನ ನೂತನ ರೈಲು ಮಾರ್ಗದ ಕಾಮಗಾರಿಗಳು ಅತ್ಯಂತ ಭರದಿಂದ ಸಾಗುತ್ತಿವೆ. ಈ ಎರಡೂ ಮಹತ್ವಾಕಾಂಕ್ಷೆಯ ಯೋಜನೆಗಳನ್ನು 2027ರ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ಮಹತ್ತರ ಗುರಿಯನ್ನು ಹೊಂದಲಾಗಿದೆ.

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಹೊಸ ಭರವಸೆಯ ಮಾತುಗಳು ಈಗ ಈ ಭಾಗದ ಗಡಿಭಾಗದ ಜನರಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಪಾವಗಡ ಸಂಪರ್ಕ ಪೂರ್ಣಗೊಂಡಿದೆ. ಈ ಮಾರ್ಗದಲ್ಲಿ ರಾಯದುರ್ಗದಿಂದ ಪಾವಗಡ ಪಟ್ಟಣದವರೆಗಿನ ರೈಲ್ವೆ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ತುಮಕೂರಿನಿಂದ ಊರುಕೆರೆ ಜಂಕ್ಷನ್‌ವರೆಗಿನ ಕಾಮಗಾರಿಯೂ ಮುಗಿದಿದ್ದು, ಪಾವಗಡ, ಮಧುಗಿರಿ, ಕೊರಟಗೆರೆ ಹಾಗೂ ತುಮಕೂರು ನಡುವಿನ ಮಾರ್ಗದ ಕೆಲಸಗಳು ಪ್ರಸ್ತುತ ವೇಗವಾಗಿ ಸಾಗುತ್ತಿವೆ.

ಇತ್ತೀಚೆಗಷ್ಟೇ ಮಧುಗಿರಿ ರೈಲ್ವೆ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಸಚಿವ ಕೆ.ಎನ್. ರಾಜಣ್ಣ ಅವರು ಜಂಟಿಯಾಗಿ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ದಾವಣಗೆರೆ – ತುಮಕೂರು ನೇರ ರೈಲು ಮಾರ್ಗದ ಕಾಮಗಾರಿಯೂ ವೇಗ ಪಡೆದುಕೊಂಡಿದ್ದು, ತುಮಕೂರು ಮತ್ತು ಶಿರಾ ನಡುವಿನ ಹಳಿ ಜೋಡಣೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಉಳಿದ ಭಾಗಗಳಲ್ಲೂ ಕೆಲಸ ಅತ್ಯಂತ ತ್ವರಿತಗತಿಯಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಮಳೆ ವೇಳೆ ಗೋಕರ್ಣ ದೇಗುಲದ ಗರ್ಭಗುಡಿಗೆ ನುಗ್ಗುತ್ತಿರುವ ಕೊಳಚೆ ನೀರು: ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ

2027ರ ಡಿಸೆಂಬರ್ ಗಡುವು; ಪ್ರಧಾನಿ ಮೋದಿಯಿಂದ ಉದ್ಘಾಟನೆ

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ, ಈ ಹಿಂದೆ ಭೂಸ್ವಾಧೀನದ ಅಡಚಣೆಯಿಂದಾಗಿ ನನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಈಗ ಮರುಜೀವ ಬಂದಿದೆ.

“2027ರ ಡಿಸೆಂಬರ್ ಒಳಗಾಗಿ ಈ ಎರಡೂ ಮಾರ್ಗಗಳ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಲು ಗಡುವು ವಿಧಿಸಲಾಗಿದೆ. ಕಾಮಗಾರಿ ಮುಕ್ತಾಯಗೊಂಡ ತಕ್ಷಣ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ಈ ಐತಿಹಾಸಿಕ ರೈಲು ಮಾರ್ಗಗಳಿಗೆ ಚಾಲನೆ ಕೊಡಿಸುವುದು ನಮ್ಮ ಉದ್ದೇಶವಾಗಿದೆ,” ಎಂದು ಕೇಂದ್ರ ಸಚಿವ ವಿ. ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ರೈಲು ಯೋಜನೆಗಳು ಸಂಪೂರ್ಣವಾಗಿ ಲೋಕಾರ್ಪಣೆಗೊಂಡರೆ ಮಧುಗಿರಿ, ಶಿರಾ, ಪಾವಗಡ ಮಾತ್ರವಲ್ಲದೆ ಆಂಧ್ರಪ್ರದೇಶದ ಗಡಿಭಾಗದ ಜನರ ಸಂಚಾರಕ್ಕೆ ಅತ್ಯಂತ ಸುಲಭವಾದ ಸಂಪರ್ಕ ಸಿಗಲಿದೆ. ಜೊತೆಗೆ, ಈ ಭಾಗದಲ್ಲಿ ವ್ಯಾಪಾರ-ವಹಿವಾಟು ವಿಸ್ತರಣೆಯಾಗಲಿದ್ದು, ಕೈಗಾರಿಕಾ ಕ್ಷೇತ್ರ ಹಾಗೂ ಆರ್ಥಿಕ ಪ್ರಗತಿಗೆ ಭಾರಿ ಕೊಡುಗೆ ಸಿಗಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಯಾವಾಗ?: ಆಕಾಂಕ್ಷಿಗಳದ್ದೂ ಇದೇ ಪ್ರಶ್ನೆ! – Kannada News | Karnataka Cabinet Expansion: Delay Triggers Intense Lobbying Among Aspirants

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಯಾವಾಗ?Image Credit source: Tv9 Kannada

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದು ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ಕೂಡಿಬಂದಿಲ್ಲ. ರಾಜ್ಯದಲ್ಲಿ ಉಳಿದಿರುವ 20 ಸಚಿವ ಸ್ಥಾನಗಳಿಗೆ 60ಕ್ಕೂ ಹೆಚ್ಚು ಶಾಸಕರು ತೀವ್ರವಾಗಿ ಲಾಬಿ ನಡೆಸುತ್ತಿದ್ದು, ಇದು ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಚಿವರ ಮೊದಲ ಪಟ್ಟಿ ರಿಲೀಸ್ ಆಗಿ ಅವರ ಪ್ರಮಾಣವಚನ ನಡೆದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪೈಪೋಟಿ ಜೋರಾಗಿದ್ದು, ಎರಡನೇ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಹಿರಿಯ ಮತ್ತು ಕಿರಿಯ ಶಾಸಕರು ಸತತ ಪ್ರಯತ್ನ ಪಡುತ್ತಿದ್ದಾರೆ.

ಪ್ರಾದೇಶಿಕ ಮತ್ತು ಸಮುದಾಯವಾರು ಪೈಪೋಟಿ

ಬೆಳಗಾವಿ ಭಾಗದಿಂದ ಆರು ಶಾಸಕರು ಸಚಿವ ಸ್ಥಾನಕ್ಕಾಗಿ ಟವೆಲ್ ಹಾಕಿದ್ದಾರೆ. ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಲಕ್ಷ್ಮಣ್ ಸವದಿ, ಅಶೋಕ್ ಪಟ್ಟಣ್, ಆಸಿಫ್ ಸೇಠ್ ಸೇರಿದಂತೆ ಪ್ರಮುಖರು ನೇರವಾಗಿ ಮಂತ್ರಿಗಿರಿಗೆ ಬೇಡಿಕೆ ಇಟ್ಟಿದ್ದಾರೆ. ಶಾಸಕ ಆಸಿಫ್ ಸೇಠ್ ಅವರು ಟಿವಿ9 ಜೊತೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ತಾನೊಬ್ಬನೇ ಅಲ್ಪಸಂಖ್ಯಾತ ಶಾಸಕನಾಗಿದ್ದು, ತನಗೆ ಅವಕಾಶ ನೀಡಿದರೆ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ; ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಡಿಕೆ ಸಂಪುಟ ಸೇರೋಕೆ ಹಲವರಿಂದ ಲಾಬಿ ಜೋರಾಗಿಯೇ ನಡೀತಿದೆ. ಯಾವ ಕ್ಷಣದಲ್ಲಿ ಬೇಕಾದರೂ ದೆಹಲಿಯಿಂದ ಕರೆ ಬರಬಹುದು ಎಂಬುದು ಹಲವರ ನಿರೀಕ್ಷೆ, ಅಪೇಕ್ಷೆ. ಆದ್ರೆ ಸಂಪುಟ ವಿಸ್ತರಣೆ ಯಾವಾಗ ಎಂಬುದಕ್ಕೆ ದೆಹಲಿಯಲ್ಲೂ ಉತ್ತರ ಸಿಕ್ತಿಲ್ಲ, ಬೆಂಗಳೂರಲ್ಲೂ ಆ ವಾತಾವರಣದ ಮುನ್ಸೂಚನೆ ಇಲ್ಲ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ವಾಪಸ್ಸಾಗಿದ್ದಾರೆ. ವಿದೇಶದಿಂದ ರಾಹುಲ್ ಗಾಂಧಿ ಕೂಡ ಬಂದಾಗಿದೆ. ಇವರಿಬ್ಬರೂ ಕೂತು ಚರ್ಚೆ ಮಾಡಿದರೆ ಕ್ಯಾಬಿನೆಟ್ ವಿಸ್ತರಣೆ ಫಿಕ್ಸ್. ಆದರೆ ಕ್ಯಾಬಿನೆಟ್ ವಿಸ್ತರಣೆಗೆ ಯಾವ ಶಕ್ತಿಗಳು ಅಡ್ಡಿಪಡಿಸುತ್ತಿವೆ? ಎಂಬುದೇ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತಿಳಿಯುತ್ತಿಲ್ಲ. ನಾಯಕತ್ವ ಬದಲಾವಣೆಗೆ ಹೈಕಮಾಂಡ್ ತೋರಿಸಿದ ಆತುರವನ್ನು ಈಗ ಯಾಕೆ ತೋರಿಸುತ್ತಿಲ್ಲ ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಸರ್ಕಾರದ ಮೇಲೆ ಮುಗಿಬಿದ್ದಿರುವ ವಿಪಕ್ಷ

ಮತ್ತೊಂದೆಡೆ ಸಚಿವರಿಲ್ಲದೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದೆ. ಬರ ಇರೋದ್ರಿಂದ ಕನಿಷ್ಠ ಆದ್ರೂ ಕೃಷಿ ಸಚಿವರನ್ನ ನೇಮಕ ಮಾಡಿ ಅಂತಾ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಒತ್ತಾಯ ಮಾಡಿದ್ದರೆ. ಮತ್ತೊಂದೆಡೆ ಕಾಂಗ್ರೆಸ್​​ ವಿರುದ್ಧ ಕಿಡಿ ಕಾರಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು ಕಂಡು ಹೊಗಳಿರುವ ಯೋಗರಾಜ್ ಭಟ್ ಅವರು, ‘ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ. ದೊಡ್ಡ ಸ್ಟುಡಿಯೋದಲ್ಲಿ ಕನ್ನಡಿಗರನ್ನು ನೋಡಿ ನನಗೆ ಸಂತೋಷ ಆಯಿತು. ಇಡೀ ಕರ್ನಾಟಕವನ್ನು ಇಲ್ಲಿಗೆ ಶಿಫ್ಟ್ ಮಾಡಿಕೊಂಡಿದ್ದಾನೆ. ನಾನು ನೋಡಿರುವ ಆತನ ಹಠ ಇಂದು-ನಿನ್ನೆಯದಲ್ಲ’ ಎಂದು ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಕ್ರೇನ್ ಮೇಲೆ ರಷ್ಯಾ ಪರಮಾಣು ಬಾಂಬ್ ಹಾಕದಂತೆ ಮೋದಿ ತಡೆದಿದ್ದರು; ಪೋಲೆಂಡ್ ಸಚಿವರಿಂದ ಮಹತ್ವದ ಬಹಿರಂಗ – Kannada News | PM Narendra Modi Stopped Putin From attacking Ukraine with nuclear bomb In 2022 Polish Minister said

ನವದೆಹಲಿ, ಜುಲೈ 14: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮಾತುಗಳಿಗೆ ಬಹಳ ಗೌರವ ನೀಡುತ್ತಾರೆ. ಅಲ್ಲದೆ, ರಷ್ಯಾದ ಮೇಲೆ ಪ್ರಭಾವ ಬೀರಬಲ್ಲ ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಪ್ರಮುಖವಾದುದಾಗಿದೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಶೆವ್ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದ ಪೋಲೆಂಡ್ ಸಚಿವ, 2022ರ ಕೊನೆಯಲ್ಲಿ ನಡೆದ ಒಂದು ಪ್ರಮುಖ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಉಕ್ರೇನ್ ವಿರುದ್ಧ ‘ಟ್ಯಾಕ್ಟಿಕಲ್’ ಪರಮಾಣು ಅಸ್ತ್ರಗಳನ್ನು ಬಳಸದಂತೆ ರಷ್ಯಾವನ್ನು ಒಪ್ಪಿಸುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದರು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಅತ್ಯಂತ ಗೌರವಾನ್ವಿತ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ ಬಾರ್ಟೋಶೆವ್ಸ್ಕಿ, “ಪ್ರಧಾನಿ ನರೇಂದ್ರ ಮೋದಿ ಜಗತ್ತಿಗೆ ಪರಿಚಿತವಿರುವ ಅತ್ಯಂತ ಪ್ರಭಾವಿ ರಾಜತಾಂತ್ರಿಕರಾಗಿದ್ದಾರೆ. ಭಾರತವು ರಷ್ಯಾದೊಂದಿಗೆ ಸುದೀರ್ಘ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ರಷ್ಯಾದ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿ ತಮಗೆ ಹೇಳುವ ಮಾತುಗಳನ್ನು ಅತ್ಯಂತ ಸೂಕ್ಷ್ಮವಾಗಿ ಆಲಿಸುತ್ತಾರೆ ಮತ್ತು ಅದಕ್ಕೆ ಮನ್ನಣೆ ನೀಡುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: ರಷ್ಯಾಗೆ ಭಾರತವೇ ಆಸರೆ, ಡ್ರೋನ್ ದಾಳಿಯಿಂದ ತತ್ತರಿಸಿ ಪೆಟ್ರೋಲ್ ಖರೀದಿಗೆ ಮುಂದಾದ ಪುಟಿನ್ ಸರ್ಕಾರ

ರಷ್ಯಾ ಅಧ್ಯಕ್ಷ ಪುಟಿನ್ ಅವರ ಮೇಲೆ ನಿಜವಾದ ಪ್ರಭಾವ ಬೀರಬಲ್ಲ ಮತ್ತು ಒತ್ತಡ ಹೇರಬಲ್ಲ ವಿಶ್ವದ ಕೆಲವೇ ಕೆಲವು ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರಾಗಿದ್ದಾರೆ. ಉಕ್ರೇನ್ ಮೇಲಿನ ಯುದ್ಧ ನಿಲ್ಲಿಸುವಂತೆ ಅಮೆರಿಕ ಅಥವಾ ಯುರೋಪಿಯನ್ ಒಕ್ಕೂಟ ಹೇಳುವುದಕ್ಕಿಂತಲೂ ರಷ್ಯಾವನ್ನು ವಿರೋಧಿಸದ ದೇಶಗಳು ಹೇಳುವ ಮಾತುಗಳಿಗೆ ಮಾಸ್ಕೋದಲ್ಲಿ ಹೆಚ್ಚಿನ ತೂಕ ಇರುತ್ತದೆ ಎಂದು ಬಾರ್ಟೋಶೆವ್ಸ್ಕಿ ಅಭಿಪ್ರಾಯಪಟ್ಟಿದ್ದಾರೆ.

“ಯುದ್ಧದ ಉಲ್ಬಣವನ್ನು ತಡೆಯಲು ಕೇವಲ ಭಾರತದ ಪ್ರಧಾನಿ ಮೋದಿ ಮಾತ್ರವಲ್ಲದೆ, ಚೀನಾದ ಕ್ಸಿ ಜಿನ್‌ಪಿಂಗ್ ಕೂಡ ಬಯಸುತ್ತಿದ್ದಾರೆ. ರಷ್ಯಾಗೆ ಶತ್ರುಗಳಂತೆ ಕಾಣದ ದೇಶಗಳಿಂದ ಇಂತಹ ಶಾಂತಿಯ ಕರೆಗಳು ಬಂದಾಗ ಅದರ ಪ್ರಭಾವ ಹೆಚ್ಚಿರುತ್ತದೆ. ಈ ವಿಷಯದಲ್ಲಿ ಭಾರತದ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದಿದ್ದಾರೆ.

“ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಯಾವುದೇ ದೇಶ ಪ್ರಯತ್ನಿಸಿದರೂ ಅದು ವ್ಯರ್ಥ ಎಂಬುದನ್ನು ಜಗತ್ತು ಈಗಾಗಲೇ ಅರ್ಥಮಾಡಿಕೊಂಡಿದೆ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗಾಗಿ ಎಲ್ಲಾ ದೇಶಗಳೊಂದಿಗೆ ಸಂಬಂಧವನ್ನು ವೃದ್ಧಿಸಿಕೊಳ್ಳುತ್ತಿರುವುದಕ್ಕೆ ನಮಗೆ ಸಂತೋಷವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಷ್ಯಾಗೆ ಭಾರತವೇ ಆಸರೆ, ಡ್ರೋನ್ ದಾಳಿಯಿಂದ ತತ್ತರಿಸಿ ಪೆಟ್ರೋಲ್ ಖರೀದಿಗೆ ಮುಂದಾದ ಪುಟಿನ್ ಸರ್ಕಾರ

“ಆರಂಭದಲ್ಲಿ ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಾವು ಟೀಕಿಸಿದ್ದೆವು. ಮಾರುಕಟ್ಟೆ ಬೆಲೆಗಿಂತ ಶೇ. 40ರಷ್ಟು ರಿಯಾಯಿತಿಯಲ್ಲಿ ತೈಲ ಸಿಗುತ್ತಿರುವುದರಿಂದ ಭಾರತ ಅದನ್ನು ಖರೀದಿಸುತ್ತಿದೆ ಎಂಬ ಆರ್ಥಿಕ ಕಾರಣ ನಮಗೆ ಅರ್ಥವಾಗಿತ್ತು. ಆದರೆ, ಆ ಹಣವು ರಷ್ಯಾದ ಯುದ್ಧದ ಆರ್ಥಿಕತೆಗೆ ನೆರವಾಗುತ್ತಿದೆ ಎಂಬ ಆತಂಕ ನಮಗಿತ್ತು. ಈಗ ಎರಡೂ ದೇಶಗಳು ಪರಸ್ಪರರ ಪರಿಸ್ಥಿತಿ ಮತ್ತು ನಿಲುವುಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿವೆ. ಹಾಗಾಗಿ ಈ ವಿಷಯವು ಈಗ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಮೂಡಿಸಿಲ್ಲ” ಎಂದು ಪೋಲೆಂಡ್ ನಾಯಕ ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 8:48 pm, Tue, 14 July 26

Source link

IND vs ENG: 5 ರನ್​​ಗಳ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ರೋಹಿತ್, ಕೊಹ್ಲಿ

Source link

ಮಳೆ ವೇಳೆ ಗೋಕರ್ಣ ದೇಗುಲದ ಗರ್ಭಗುಡಿಗೆ ನುಗ್ಗುತ್ತಿರುವ ಕೊಳಚೆ ನೀರು: ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ – Kannada News | Sewage Water Enters Gokarna Mahabaleshwara Temple Sanctum; CM DK Shivakumar Orders Immediate Action

ಬೆಂಗಳೂರು/ಕುಮಟಾ, ಜುಲೈ 14: ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ದೇವಾಲಯದ ಅಭಿಷೇಕದ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ಮಳೆಗಾಲದಲ್ಲಿ ಹೊರಗಿನ ಕೊಳಚೆ ನೀರು ದೇವಾಲಯದ ಒಳಭಾಗಕ್ಕೆ ಪ್ರವೇಶಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

‘ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ’

ಈ ಸಂಬಂಧ ಪರಿವರ್ತನ ಗೋಕರ್ಣ ಸಂಸ್ಥೆ ಸಲ್ಲಿಸಿದ್ದ ಮನವಿ ಪತ್ರ ಹಾಗೂ ದೇವಾಲಯದೊಳಗೆ ಕೊಳಚೆ ನೀರು ನಿಂತಿರುವ ಚಿತ್ರಗಳನ್ನು ಪರಿಶೀಲಿಸಿರುವ ಸಿಎಂ, ಈ ಕಾಮಗಾರಿಯನ್ನು ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ ಕೂಡಲೇ ಕೈಗೆತ್ತಿಕೊಳ್ಳಿ ಎಂದು ಮನವಿ ಪತ್ರದ ಮೇಲೆಯೇ ಸೂಚನೆ ಬರೆದಿದ್ದಾರೆ. ಮಳೆಗಾಲ ಆರಂಭವಾದ ಬಳಿಕ ಎರಡು ಬಾರಿ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ನೀರು ನುಗ್ಗಿ ಭಕ್ತರು ಹಾಗೂ ದೇವಾಲಯ ಆಡಳಿತಕ್ಕೆ ತೊಂದರೆಯಾದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮಳೆ ಆರ್ಭ; ಗೋಕರ್ಣ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನುಗ್ಗಿದ ನೀರು, ಹಲವೆಡೆ ಸಂಚಾರ ವ್ಯತ್ಯಯ

ಈ ವೇಳೆ ಉಪಸ್ಥಿತರಿದ್ದ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ, ದೇವಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದ್ದಾರೆ. ಇದೇ ವೇಳೆ ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ, ಗೋಕರ್ಣದ ರಸ್ತೆ ಅಭಿವೃದ್ಧಿ ಹಾಗೂ ಕೋಟಿತೀರ್ಥ ಅಭಿವೃದ್ಧಿ ಯೋಜನೆಗಳ ವಿಷಯವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ, ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರಂಭದಿಂದಲೂ ವಿಶೇಷ ಕಾಳಜಿ ಇದ್ದು, ಮೊದಲ ಹಂತವಾಗಿ ದೇವಾಲಯಕ್ಕೆ ಎದುರಾಗಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಮಾತನಾಡಿ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಲಿದ್ದು, ಮುಂದಿನ ದಿನಗಳಲ್ಲಿ ಗೋಕರ್ಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ಈ ಅಭಿವೃದ್ಧಿ ಕಾರ್ಯಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version