Headlines

ಮಳೆಗಾಲದಲ್ಲಿ ಈ ತರಕಾರಿಗಳನ್ನು ತಿನ್ನುವುದನ್ನು ಆದಷ್ಟು ತಪ್ಪಿಸಿ – Kannada News | These are the vegetables that should not be eaten during the rainy season

ಮಾನ್ಸೂನ್ ಆಗಮನದೊಂದಿಗೆ, ಹವಾಮಾನವು ಆಹ್ಲಾದಕರವಾಗಿರುತ್ತದೆ. ಈ ಶೀತ ಮತ್ತು ತೇವಯುಕ್ತ ವಾತಾವರಣವು ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಬೆಳೆಯಲು ಅವಕಾಶ ಮಾಡಿಕೊಡುತ್ತದೆ. ಈ ಕಾರಣದಿಂದಾಗಿ ಮಳೆಗಾಲದಲ್ಲಿ ಶೀತ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅಲ್ಲದೆ ಕೆಲವೊಂದು ತರಕಾರಿಗಳನ್ನು (vegetables) ತಿನ್ನುವುದರಿಂದಲೂ ಸೋಂಕು ತಗುಲುವ ಅಪಾಯ ಇದೆ. ಹೌದು ಮಳೆಗಾಲದಲ್ಲಿ ಕೆಲವು ತರಕಾರಿಗಳಲ್ಲಿ ಅತೀ ಹೆಚ್ಚು ಅಗೋಚರವಾಗಿರುವ ಕೀಟಗಳು, ಸೂಕ್ಷ್ಮಾಣು ಜೀವಿಗಳು ಇರುವ ಕಾರಣ ಅವುಗಳ ಸೇವನೆಯಿಂದಲೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಮಳೆಗಾಲದಲ್ಲಿ ಈ ಕೆಲವು ತರಕಾರಿಗಳನ್ನು ಸೇವನೆ…

Read More

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್ – Kannada News | Residents Trapped Inside Home After Tree Uproots On A House At Pulkeshinagar In Bengaluru

ಬೆಂಗಳೂರು, (ಮೇ 19):  ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA…

Read More

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ. 19…

Read More

ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್

ಲಾಹೋರ್, ಏ.17: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಹತ್ಯೆಯಾಗಿದ್ದಾನೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಹಮ್ಜಾನನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಲಾಹೋರ್‌ನ ಲಖ್ಪತ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ. ಹಮ್ಜಾ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಧಾಭಿಮಾನಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ…

Read More

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ಒಟ್ಟು…

Read More

ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಹುಬ್ಬಳ್ಳಿ, ಏಪ್ರಿಲ್​​ 10: ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿಬರುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಮ್ ಮಾಲೀಕರು ಮತ್ತು ಟ್ರೈನರ್​​ಗಳ ಜೊತೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಕೆಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸೂಚನೆ ನೀಡಿದ್ದಾರೆ. ಮತ್ತೊಂದಡೆ ಯಾರಾದರೂ ಜಿಮ್​​ಗಳಲ್ಲಿ ಬೇರೆ ಕೆಲಸ ಮಾಡಿದ್ರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಮಾಲೀಕರಿಂದಲೂ ವ್ಯಕ್ತವಾಗಿದೆ. ಲವ್ ಜಿಹಾದ್ ಆರೋಪ ಹೊಂದಿರೋ ಸಮೀರ್ ಮುಲ್ಲಾಜಿಮ್ ಟ್ರೈನರ್…

Read More

ಭಾರತಕ್ಕೆ 2ನೇ ಅತಿದೊಡ್ಡ ರಫ್ತು ಮಾರುಕಟ್ಟೆ ಈಗ ಯುಎಇ ಅಲ್ಲ, ಸಿಂಗಾಪುರ – Kannada News | India’s big export markets, Singapore replaces UAE for second position

ನವದೆಹಲಿ, ಮೇ 17: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ (west asia conflict) ಭಾರತದ ವಿದೇಶಿ ವ್ಯಾಪಾರ ವಲಯದಲ್ಲಿ ಮಹತ್ವದ ಬದಲಾವಣೆಯಾಗಿದೆ. ಮಾಧ್ಯಮ ವರದಿಯ ಪ್ರಕಾರ, ಯುಎಇ (UAE) ದೇಶವನ್ನು ಹಿಂದಿಕ್ಕಿ ಸಿಂಗಾಪುರವು ಈಗ ಭಾರತದ ಎರಡನೇ ಅತಿ ದೊಡ್ಡ ರಫ್ತು ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಯುದ್ಧದ ಪರಿಸ್ಥಿತಿ ಮತ್ತು ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿ (Strait of Hormuz) ಬಹುತೇಕ ಮುಚ್ಚಿರುವುದು ಜಾಗತಿಕ ಇಂಧನ ಮತ್ತು ಸರಕು ಸಾಗಣೆಗೆ ಭಾರಿ ಹೊಡೆತ ನೀಡಿದೆ. ಇರಾನ್…

Read More

ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ – Kannada News | Kyle Jamieson Shaken by 15 Year Old Vaibhav Sooryavanshi

ವಯಸ್ಸು ಜಸ್ಟ್​ ನಂಬರ್ ಅಷ್ಟೇ… ಎಂಬುದನ್ನು ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನ ಆಕ್ರಮಣಕಾರಿ ಆಟಕ್ಕೆ ಬೆಚ್ಚಿಬಿದ್ದಿರುವ ಕೈಲ್ ಜೇಮಿಸನ್, ವೈಭವ್‌ರನ್ನು ನೋಡಿ ತಾನು ಭಯಭೀತನಾಗಿದ್ದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯ ವಿಕೆಟ್ ಅನ್ನು ಜೇಮಿಸನ್ ಅವರೇ ಪಡೆದಿದ್ದರು. ಇದೀಗ ವಿಕೆಟ್ ಪಡೆದಿದ್ದಕ್ಕಿಂತ ಹೆಚ್ಚಾಗಿ, ವೈಭವ್ ಸೂರ್ಯವಂಶಿ ಬಗ್ಗೆ ನೀಡಿದ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗಿದೆ….

Read More

‘ಎಲ್ಲವನ್ನು ಸರಿಪಡಿಸಿಕೊಳ್ಳೋಣ’; ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾ ಕ್ರಿಕೆಟ್ ಮಂಡಳಿ

ಬಿಸಿಸಿಐ (BCCI) ಎದುರು ತೊಡೆ ತಟ್ಟಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇದೀಗ ಸೋತು ಶರಣಾದಂತೆ ತೋರುತ್ತಿದೆ. ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇದರ ಪರಿಣಾಮವಾಗಿ ತನ್ನ ತಂಡದ ಆಟಗಾರರು ಐಪಿಎಲ್ ಆಡದಂತ್ತಾಯಿತು. ಇದರ ಜೊತೆಗೆ ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸದಂತ್ತಾಯಿತು. ಇದೀಗ ಮುಂಬರುವ ಉಭಯ ದೇಶಗಳ ಸರಣಿಯೂ ರದ್ದಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಆವೃತ್ತಿಯ ಏಷ್ಯಾಕಪ್ ಕೂಡ ಕೈಜಾರುವ ಸ್ಥಿತಿಯಲ್ಲಿದೆ. ಈಗಾಗಲೇ ನಷ್ಟದ ಸುಳಿಯಲ್ಲಿ ಸಿಲುಕಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ,…

Read More

Video: ನೀಚ ಕೃತ್ಯ: ಸೂಪರ್​ ಮಾರ್ಕೆಟ್​ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ

ಲಾಸ್ ಏಂಜಲೀಸ್, ಮಾರ್ಚ್​ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಪರ್ ಮಾರ್ಕೆಟ್​​ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್…

Read More