ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ
ಬೆಂಗಳೂರು, ಮೇ 29: ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿದ್ದರು. ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ. Published On…