ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Monsoon Crisis: Weather Experts Warn of Dry Spell for Another Week; Advise Karnataka Farmers to Delay Sowing
ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರ ಹಿನ್ನಡೆ ನಡುವೆ ತಜ್ಞರು ಮತ್ತೊಂದು ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗೋದಿಲ್ಲ. ಜುಲೈ ಕೊನೆಯ ವಾರದಲ್ಲಿ ಮಳೆಯಾದರೂ ಕೂಡ ಅದು ಸಾಧಾರಣವಾಗಿ ಆಗಲಿದೆ. ಹೀಗಾಗಿ ಮಳೆ ನಂಬಿ ಬಿತ್ತನೆ ಬೀಜ ಹಾಕುವ ಅನ್ನದಾತರು ಕಾಯಬೇಕಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬೆಂಗಳೂರು ಸೇರಿ ಸುತ್ತಮುತ್ತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಶೇ. 50ಕ್ಕಿಂತ ಹೆಚ್ಚು…