ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ: ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ, ದಲಿತರಿಗೆ ಜಾಗ ಇಲ್ಲ ಎಂದು ಖರ್ಗೆ ಕಿಡಿ – Kannada News | Mallikarjuna Kharge raises Haldwani Shuddhikaran incident in parliament, accuses BJP of untouchability
ನವದೆಹಲಿ, ಆಗಸ್ಟ್ 13: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ರೀತಿಯ ಕೃತ್ಯವು ಹಿಂದೂ ಧರ್ಮಕ್ಕೇ ವಿರುದ್ಧವಾದದ್ದು. ಈ ದೇಶದಲ್ಲಿ ದಲಿತರಿಗೆ ಸ್ಥಾನ ಇಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಅವರು ಕಿಡಿಕಾರಿದ್ದಾರೆ. ಆದರೆ, ಬಿಜೆಪಿ ನಾಯಕರು ಇದನ್ನು ತಳ್ಳಿಹಾಕಿದ್ದು, ಶುದ್ಧೀಕರಣ ಮಾಡಿದವರು ತಮ್ಮ ಪಕ್ಷಕ್ಕೆ ಸೇರಿದವರಲ್ಲ ಎಂದಿದ್ದಾರೆ. ಹಲ್ದ್ವಾನಿಯ ರಾಮಲೀಲಾ…