Headlines

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’ – Kannada News | Vikash Uthaiah new movie Parthan Parapancha shooting in Bengaluru

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ…

Read More

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs MI WPL 2026: Final Berth or Playoff Hope? Match 16 Stakes, Toss and Playing XIs

ಮಹಿಳಾ ಪ್ರೀಮಿಯರ್ ಲೀಗ್  (Women’s Premier League) 2026 ರ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ (RCB vs MI) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವೂ ವಡೋದರಾದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಗೆಲುವು ನಿರ್ಣಾಯಕವಾಗಿದೆ. ಇತ್ತ ಆರ್​ಸಿಬಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಗೆದ್ದರೆ, ಅದರ ಫ್ಲೇ ಆಫ್ ಕನಸು ಜೀವಂತವಾಗಿರಲಿದೆ. ಮುಂಬೈ…

Read More

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು! – Kannada News | 15 km Traffic Jam in Manali Snowfall Tourists recount harrowing Manali trip

ಮನಾಲಿ, ಜನವರಿ 26: ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು (Snowfall) ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ ಟ್ರಾಫಿಕ್ ಜಾಮ್​ನಿಂದಾಗಿ ಮನಾಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಸ್ಥಗಿತಗೊಂಡಿತು. ರಸ್ತೆ ಸಂಪರ್ಕ ಕಡಿತಗೊಂಡ ಕಾರಣದಿಂದಾಗಿ 15 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿಮಪಾತದಿಂದ ರಸ್ತೆ ಮುಚ್ಚಿದ್ದರಿಂದಾಗಿ ಪ್ರವಾಸಿಗರಿಗೆ ಮುಂದೆ ಸಾಗಲು ಸಾಧ್ಯವಾಗದೆ ಸಿಕ್ಕ ಹೋಟೆಲ್​ಗಳನ್ನೆಲ್ಲ ಬುಕ್ ಮಾಡಿಕೊಂಡರು. ಇದರಿಂದ ಕೆಲವು ಪ್ರವಾಸಿಗರು ಹೋಟೆಲ್ ರೂಂ ಸಿಗದೆ, ಹಿಮಪಾತದಿಂದ ಹೊರಗೂ ಹೋಗಲಾಗದೆ 24…

Read More

Ranji Trophy: ಕರ್ನಾಟಕ ತಂಡಕ್ಕೆ ಪಡಿಕ್ಕಲ್ ನಾಯಕ; ರಾಹುಲ್ ಇನ್, ಕರುಣ್ ಔಟ್ – Kannada News | Devdutt Padikkal to Lead Karnataka Ranji; KL Rahul Returns for Punjab Clash

ಪಂಜಾಬ್ ವಿರುದ್ಧದ ಮುಂದಿನ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದ್ದು, ಅವರ ಬದಲಿಗೆ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇತ್ತೀಚಿಗಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ಇದೀಗ ಪಡಿಕ್ಕಲ್​ಗೆ ತಂಡದ ನಾಯಕತ್ವ ನೀಡಲಾಗಿದೆ. ಇನ್ನೊಂದು ಪ್ರಮುಖ ಸುದ್ದಿಯೆಂದರೆ ಕೆಎಲ್ ರಾಹುಲ್ ಕೂಡ…

Read More

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ – Kannada News | Two Masked Men Rob a Gold Shop in Halasangi, Vijayapur, Using a Country Made Pistol

ವಿಜಯಪುರ, ಜನವರಿ 26: ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದ್ದೇ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆಸಿದ್ದಾರೆ. ಗಾಳಿಯಲ್ಲಿ 2 ಸುತ್ತು…

Read More

ರಿಯಲ್‌ ಲೈಫ್‌ ಸ್ಪೈಡರ್‌ ಮ್ಯಾನ್;‌ ಹಗ್ಗದ ಸಹಾಯವಿಲ್ಲದೆಯೇ 508 ಮೀಟರ್ ಎತ್ತರದ ಕಟ್ಟಡವನ್ನೇರಿದ ಅಮೆರಿಕದ ರಾಕ್‌ ಕ್ಲೈಂಬರ್ – Kannada News | US rock climber Alex Honnold climbs Taipei 101 skyscraper without ropes

ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ ಸ್ಪೈಡರ್‌ ಮ್ಯಾನ್‌ ಸಿನಿಮಾವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಅದೆಷ್ಟೋ ಮಂದಿ ತಾವು ಕೂಡ ಬಂಡೆ, ಎತ್ತರದ ಕಟ್ಟಡಗಳನ್ನು ಏರುವಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ಇಂತಹ ಸಾಹಸಗಳನ್ನು ಮಾಡುವವರು ಕ್ಲೈಂಬಿಂಗ್‌ ರೋಪ್‌ಗಳನ್ನು ಬಳಸುತ್ತಾರೆ. ಆದ್ರೆ ಇದೀಗ ಅಮೆರಿಕದ ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ (Alex Honnold) ಅವರು ಕ್ಲೈಂಬಿಂಗ್‌ ರೋಪ್‌ ಹಾಗೂ ಯಾವುದೇ ಸುರಕ್ಷತಾ ಪರಿಕರಗಳ ಸಹಾಯವಿಲ್ಲದೆಯೇ ತೈವಾನ್‌ನ ರಾಜಧಾನಿ ತೈಪೆಯಲ್ಲಿ ಐಕಾನಿಕ್ ತೈಪೆ 101  ಕಟ್ಟಡವನ್ನು ಏರಿದ್ದಾರೆ.  ಹೊನ್ನಾಲ್ಡ್…

Read More

77th Republic Day: ಅಟ್ಟಾರಿ-ವಾಘಾ ಗಡಿಯಲ್ಲಿ ‘ಬೀಟಿಂಗ್ ರಿಟ್ರೀಟ್’ – Kannada News | 77th Republic Day: Attari Wagah Border Witnessed Spectacular Beating Retreat 2026

ಪಂಜಾಬ್, ಜ.26: ಅಮೃತಸರದ ಅಟ್ಟಾರಿ ವಾಘಾ (Attari-Wagah) ಗಡಿಯಲ್ಲಿ ಇಂದು (ಜನವರಿ 26, 2026) ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ನಡೆದ ‘ಬೀಟಿಂಗ್ ರಿಟ್ರೀಟ್’ (Beating Retreat) ಸಮಾರಂಭವು ಅತ್ಯಂತ ಅದ್ಧೂರಿಯಾಗಿತ್ತು. ಭದ್ರತಾ ಪಡೆಯ (ಯೋಧರು ನಡೆಸಿದ ಸಾಂಪ್ರದಾಯಿಕ ಪಥಸಂಚಲನ ಮತ್ತು ಅವರ ಆಕ್ರಮಣಕಾರಿ ನಡಿಗೆಯನ್ನು ನೋಡಲು ಸಾವಿರಾರು ಪ್ರವಾಸಿಗರು ಗಡಿಯಲ್ಲಿ ಜಮಾಯಿಸಿದ್ದರು. ಲರಿಯಲ್ಲಿ ಕುಳಿತಿದ್ದ ಸಾವಿರಾರು ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂಬ ಘೋಷಣೆಗಳನ್ನು ಕೂಗುತ್ತಾ ಯೋಧರನ್ನು ಹುರಿದುಂಬಿಸಿದರು. ಗಣರಾಜ್ಯೋತ್ಸವದ…

Read More

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata thanks police personnel for support

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ ಅವರು ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿ ತೆರಳುತ್ತಿದ್ದಾರೆ. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಕನಕಪುರದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಭಾಗಿ ಆಗಿದ್ದಾರೆ. ಈ ವೇಳೆ ಅವರು ಭಾವುಕವಾಗಿ ಮಾತನಾಡಿದರು. ತಮಗೆ ಬೆಂಬಲ ನೀಡಿದ ಪೊಲೀಸರಿಗೂ ಅವರು ಧನ್ಯವಾದ ತಿಳಿಸಿದರು. ‘ಇಷ್ಟೊಂದು ಪ್ರೀತಿ ಸಂಪಾದನೆ ಮಾಡುತ್ತೇನೆ ಅಂತ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸತ್ಯವಾಗಲೂ ಅಂದುಕೊಂಡಿರಲಿಲ್ಲ. ನನ್ನ ಹೆಣ ಬೀಳುವವರೆಗೂ…

Read More

ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ: ಮಹಿಳೆ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ – Kannada News | Illicit Affair Tragedy: Man Murders Woman, Then Commits Suicide in Chikkaballapur

ಚಿಕ್ಕಬಳ್ಳಾಪುರ, ಜನವರಿ 26: ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಯಾಕಾಗಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾದರೂ, ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ. ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್! – Kannada News | Shidlaghatta Commissioner Threat Case: Congress Leader Rajeev Gowda Arrested In Kerala Border

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್ ಬೆಂಗಳೂರು, ಜನವರಿ 23: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda Arrest) ಬಂಧಿಸಲಾಗಿದೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) ಕೇರಳ ಗಡಿಯಲ್ಲಿ ಬಂಧಿಸುವಲ್ಲಿ  ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾನರ್ ವಿಚಾರಕ್ಕೆ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ…

Read More