ಸೋಪಿನ ಪೌಡರ್ ಬಳಸಿ 2.3 ಕೋಟಿ ಲೀಟರ್ ನಕಲಿ ಹಾಲು ತಯಾರಿ; ಮಹಾರಾಷ್ಟ್ರದಲ್ಲಿ ಬಯಲಾಯ್ತು ಹಗರಣ – Kannada News | Nirma Detergent and palm oil used to make 2.3 crore litres of fake milk in Maharashtra FDA probe reveals big scam
ಮುಂಬೈ, ಜುಲೈ 14: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಕೃತಕ ಅಥವಾ ನಕಲಿ ಹಾಲಿನ ಜಾಲವನ್ನು ಪೊಲೀಸರು ಹಾಗೂ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಪತ್ತೆಹಚ್ಚಿದೆ. ಕಳೆದ 6 ತಿಂಗಳಲ್ಲಿ ಬರೋಬ್ಬರಿ 2.3 ಕೋಟಿ ಲೀಟರ್‌ಗೂ ಹೆಚ್ಚು ಕೃತಕ ಹಾಲನ್ನು ಇಡೀ ರಾಜ್ಯಾದ್ಯಂತ ಸರಬರಾಜು ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ಧಾರಾಶಿವ್ ಜಿಲ್ಲೆಯ ಭೂಮ್ ತಾಲೂಕಿನಲ್ಲಿ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ವಶಪಡಿಸಿಕೊಂಡ ದಾಖಲೆಗಳು ಮತ್ತು ವಸ್ತುಗಳು ತನಿಖಾಧಿಕಾರಿಗಳನ್ನೇ ಬೆಚ್ಚಿಬೀಳಿಸಿವೆ….