ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ಸಹಾಯಕ ಕೋಚ್ ರಾಜೀನಾಮೆ – Kannada News | Ryan ten Doeschate to Quit as India’s Assistant Coach: Personal Reasons Cited

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಹೀನಾಯವಾಗಿ ಸೋತ ಬಳಿಕ ಭಾರತ ತಂಡದ ಕೋಚಿಂಗ್ ಸಿಬ್ಬಂದಿಗಳ ತಲೆದಂಡವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಒಬ್ಬರನ್ನು ಬಿಟ್ಟು ಉಳಿದವರನ್ನು ತೆಗೆದುಹಾಕಬಹುದು ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಸ್ವತಃ ಡೋಸ್ಚೇಟ್ ಅವರೇ ಈ ಹುದ್ದೆಯನ್ನು ತೊರೆಯಲು ಮುಂದಾಗಿದ್ದು ಬಿಸಿಸಿಐ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಂದ ಅನುಮತಿಗಾಗಿ ಕಾಯುತ್ತಿದ್ದಾರೆ. ಅನುಮತಿ ದೊರೆತ ನಂತರ, ಜುಲೈ 19 ರ ಏಕದಿನ ಪಂದ್ಯವು ಸಹಾಯಕ ಕೋಚ್ ಆಗಿ ಟೀಂ ಇಂಡಿಯಾದೊಂದಿಗೆ ಅವರ ಕೊನೆಯ ಪಂದ್ಯವಾಗುವ ಸಾಧ್ಯತೆಗಳಿವೆ.

ಡೋಸ್ಚೇಟ್ ಹುದ್ದೆ ತೊರೆಯಲು ಕಾರಣವೇನು?

ಕ್ರಿಕ್‌ಬಜ್ ವರದಿಯ ಪ್ರಕಾರ, ಡೋಸ್ಚೇಟ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ. ವರದಿ ಪ್ರಕಾರ, ಡೋಸ್ಚೇಟ್ ಟೀಂ ಇಂಡಿಯಾದೊಳಗಿನ ವಾತಾವರಣದಿಂದ ಸಂತೋಷವಾಗಿದ್ದಾರೆ ಮತ್ತು ಅವರ ಕೆಲಸದಲ್ಲಿ ತೃಪ್ತರಾಗಿದ್ದಾರೆ, ಆದರೆ ವೈಯಕ್ತಿಕ ಕಾರಣಗಳಿಂದಾಗಿ ಅವರು ತಂಡವನ್ನು ತೊರೆಯಲು ಬಯಸಿರುವುದಾಗಿ ವರದಿಯಾಗಿದೆ. ಡೋಸ್ಚೇಟ್ ಅವರಿಗೆ ಮೂವರು ಚಿಕ್ಕ ಗಂಡು ಮಕ್ಕಳು ಮತ್ತು ಪತ್ನಿ ಇದ್ದಾರೆ. ಪತ್ನಿ ಕೆಲಸಕ್ಕೆ ಹೋಗುತ್ತಿದ್ದು ಅವರ ಕುಟುಂಬವು ಲಂಡನ್‌ನಲ್ಲಿ ವಾಸಿಸುತ್ತಿದೆ. ಹೀಗಾಗಿ ಡೋಸ್ಚೇಟ್ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ಕಡಿಮೆ ಪ್ರಯಾಣವನ್ನು ಒಳಗೊಂಡಿರುವ ಮತ್ತು ಅವರ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಅನುವು ಮಾಡಿಕೊಡುವ ಕೆಲಸವನ್ನು ಹುಡುಕುತ್ತಿದ್ದಾರೆ ಎಂದು ವರದಿಯಾಗಿದೆ.

ಡೋಸ್ಚೇಟ್ ಅವರ ಒಪ್ಪಂದವೂ ಅಂತ್ಯ

ಡೋಸ್ಚೇಟ್ ಎರಡು ವರ್ಷಗಳ ಹಿಂದೆ ಭಾರತ ತಂಡಕ್ಕೆ ಸಹಾಯಕ ಕೋಚ್ ಆಗಿ ಸೇರಿಕೊಂಡರು. ಅವರ ಎರಡು ವರ್ಷಗಳ ಒಪ್ಪಂದವು ಜುಲೈ 12 ಮತ್ತು 14 ರ ಸುಮಾರಿಗೆ ಕೊನೆಗೊಳ್ಳುತ್ತದೆ ಎಂದು ವರದಿಯಾಗಿದೆ. ಆದ್ದರಿಂದ, ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯದ ನಂತರ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆಯಿದೆ.

ಡೋಸ್ಚೇಟ್ ತರಬೇತಿ ವೃತ್ತಿಜೀವನ

ರಯಾನ್ ಟೆನ್ ಡೋಸ್ಚೇಟ್ ಅದ್ಭುತ ಕೋಚಿಂಗ್ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು 2021 ರಿಂದ ಕೋಚಿಂಗ್ ಮಾಡುತ್ತಿದ್ದು, ಮೊದಲಿಗೆ ಕೆಂಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದರು. ಒಂದು ವರ್ಷದ ನಂತರ, ಅವರು ಕೆಕೆಆರ್ ಸೇರಿ 2024 ರವರೆಗೆ ಫೀಲ್ಡಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದರು. 2024 ರ ನಂತರ, ಅವರು ಟೀಂ ಇಂಡಿಯಾದ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಈಗ, ಟೀಂ ಇಂಡಿಯಾವನ್ನು ತೊರೆದ ನಂತರ, ಡೋಸ್ಚೇಟ್ ಮತ್ತೆ ಕೌಂಟಿ ತಂಡವನ್ನು ಸೇರಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು – Kannada News | 65 Year Old Woman Arrested for Performing Black Magic on Judge’s Chair Inside Court Hall

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: ಮಹಿಳೆ ಅರೆಸ್ಟ್​Image Credit source: ANI

ಚಿಕ್ಕಬಳ್ಳಾಪುರ, ಜುಲೈ 14: ನ್ಯಾಯಾಧೀಶರ ಕುರ್ಚಿಯ ಮೇಲೆ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಕೋರ್ಟ್‌ ಹಾಲ್‌ಗೆ ಪ್ರವೇಶಿಸಿದ್ದ ಈಕೆ, ನ್ಯಾಯಾಧೀಶರ ಕುರ್ಚಿಯ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದಾಳೆ ಎನ್ನಲಾಗಿದೆ.

ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ ಬಂಧನ

ಎರಡು ದಿನಗಳ ಹಿಂದೆ ಮಹಿಳೆ ವಾಮಾಚಾರ ನಡೆಸಿದ್ದಾಳೆ ಎನ್ನಲಾಗಿರುವ ಘಟನೆ ನ್ಯಾಯಾಲಯದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದರಲ್ಲಿ ಮಹಿಳೆ ನ್ಯಾಯಾಧೀಶರ ಕುರ್ಚಿಯ ಮೇಲೆ ಬಿಳಿ ಸಾಸಿವೆ ಕಾಳುಗಳನ್ನು ಎರಚುತ್ತಿರುವುದು ಕಂಡುಬಂದಿದೆ. ಈ ಕುರಿತು ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನೇತ್ರಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ವಿರುದ್ಧ ಕರ್ನಾಟಕ ಅಮಾನವೀಯ ದುಷ್ಟ ಆಚರಣೆಗಳು ಮತ್ತು ಮಾಟ-ಮಂತ್ರಗಳ ತಡೆ ಹಾಗೂ ನಿರ್ಮೂಲನೆ ಕಾಯ್ದೆ, 2017ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯವು ಆರೋಪಿ ಮಹಿಳೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರನ ಬಂಧಿಸಿದ ಬಾಗೇಪಲ್ಲಿ ಪೊಲೀಸರು

ಇಷ್ಟು ದಿನ ಅಲ್ಲಲ್ಲಿ ವರದಿಯಾಗುತ್ತಿದ್ದ ಮಾಟ-ಮಂತ್ರ ಪ್ರಕರಣಗಳು ಈಗ ಕೋರ್ಟ್​​ ವರೆಗೂ ತಲುಪಿರುವುದು ಆತಂಕಕ್ಕೆ ಕಾರಣವಾಗಿದೆ. ಆರೋಪಿ ಮಹಿಳೆ ಯಾವ ಕಾರಣಕ್ಕಾಗಿ ವಾಮಾಚಾರ ನಡೆಸಲು ಮುಂದಾಗಿದ್ದಳು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸತ್ಯಾಸತ್ಯತೆ ಆ ಬಳಿಕವೇ ಬಹಿರಂಗಗೊಳ್ಳಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Teacher Recruitment 2026: ಕರ್ನಾಟಕ ವಸತಿ ಶಾಲೆಗಳಲ್ಲಿ 767 ಶಿಕ್ಷಕರ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಪ್ರಕಟ! – Kannada News | KEA KREIS Teacher Recruitment 2026: 767 Posts Open in Karnataka Residential Schools

ಶಿಕ್ಷಕ ಹುದ್ದೆಗೆ ನೇಮಕಾತಿImage Credit source: Getty Images

ಕರ್ನಾಟಕದಲ್ಲಿ ಶಿಕ್ಷಕ ಹುದ್ದೆಯನ್ನು ಅಲಂಕರಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿ ಬರುವ ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು ಮತ್ತು ಲಭ್ಯವಿರುವ ಭಾಷಾ ಶಿಕ್ಷಕರ ವಿವರ:

ಈ ಬೃಹತ್ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 767 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ 725 ಸಾಮಾನ್ಯ ಹುದ್ದೆಗಳು ಹಾಗೂ 42 ಹಿಂದಿನ ನೇಮಕಾತಿಯಲ್ಲಿ ಭರ್ತಿಯಾಗದೆ ಉಳಿದಿರುವ ಹಿಂಬಾಕಿ (Backlog) ಹುದ್ದೆಗಳು ಸೇರಿವೆ. ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ, ಒಟ್ಟು 103 ಕನ್ನಡ ಭಾಷಾ ಶಿಕ್ಷಕರು (100 ಸಾಮಾನ್ಯ + 3 ಹಿಂಬಾಕಿ), 108 ಆಂಗ್ಲ ಭಾಷಾ ಶಿಕ್ಷಕರು (100 ಸಾಮಾನ್ಯ + 8 ಹಿಂಬಾಕಿ) ಮತ್ತು 55 ಹಿಂದಿ ಭಾಷಾ ಶಿಕ್ಷಕರ (50 ಸಾಮಾನ್ಯ + 5 ಹಿಂಬಾಕಿ) ಹುದ್ದೆಗಳನ್ನು ಈ ಅಧಿಸೂಚನೆ ಅಡಿಯಲ್ಲಿ ಭರ್ತಿ ಮಾಡಲಾಗುತ್ತಿದೆ.

ಇತರ ವಿಷಯವಾರು ಶಿಕ್ಷಕರ ಹುದ್ದೆಗಳ ವಿವರಗಳು:

ಭಾಷಾ ವಿಷಯಗಳ ಹೊರತಾಗಿ ಇತರ ಪ್ರಮುಖ ವಿಷಯಗಳ ಶಿಕ್ಷಕರ ಹುದ್ದೆಗಳೂ ದೊಡ್ಡ ಮಟ್ಟದಲ್ಲಿ ಖಾಲಿ ಇವೆ. ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಒಟ್ಟು 103 ಹುದ್ದೆಗಳು (100+3), ವಿಜ್ಞಾನ ವಿಷಯಕ್ಕೆ 106 ಹುದ್ದೆಗಳು (100+6) ಹಾಗೂ ಅತಿ ಹೆಚ್ಚು ಎಂದರೆ ಸಮಾಜ ವಿಜ್ಞಾನ ವಿಷಯಕ್ಕೆ ಒಟ್ಟು 154 ಶಿಕ್ಷಕರ ಹುದ್ದೆಗಳನ್ನು (150+4) ಭರ್ತಿ ಮಾಡಲಾಗುತ್ತಿದೆ. ಇದರೊಂದಿಗೆ ತಾಂತ್ರಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾಗಿ 57 ಗಣಕಯಂತ್ರ (Computer) ಶಿಕ್ಷಕರ (50+7) ಹಾಗೂ 81 ದೈಹಿಕ ಶಿಕ್ಷಣ ಶಿಕ್ಷಕರ (75+6) ನೇಮಕಾತಿಯೂ ಈ ಪ್ರಕ್ರಿಯೆಯ ಭಾಗವಾಗಿದೆ.

ಆಕರ್ಷಕ ವೇತನ ಶ್ರೇಣಿಯ ಸೌಲಭ್ಯ:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಆಯ್ಕೆಯಾಗುವ ಶಿಕ್ಷಕ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಅತ್ಯುತ್ತಮ ವೇತನದ ಸೌಲಭ್ಯವಿರಲಿದೆ. ಈ ಎಲ್ಲಾ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗಳಿಗೆ 2024 ರ ಪರಿಷ್ಕೃತ ರಾಜ್ಯ ವೇತನ ಶ್ರೇಣಿಯ ಅನ್ವಯ ಮಾಸಿಕ ಕನಿಷ್ಠ ರೂ. 54,175 ರಿಂದ ಗರಿಷ್ಠ ರೂ. 99,400 ರವರೆಗಿನ ಅತ್ಯಂತ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಕನ್ನಡ ಭಾಷಾ ಶಿಕ್ಷಕರ ಹುದ್ದೆಗೆ ನಿಗದಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆ:

ಕನ್ನಡ ಭಾಷಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯನ್ನು ಒಂದು ಐಚ್ಛಿಕ ವಿಷಯವನ್ನಾಗಿ ಓದಿ ಕಲಾ ವಿಭಾಗದಲ್ಲಿ ಸ್ನಾತಕ (BA) ಪದವಿ ಪಡೆದಿರಬೇಕು ಮತ್ತು ಕನ್ನಡ ಬಿ.ಎಡ್ (B.Ed) ಪದವಿ ಪಡೆದಿರಬೇಕು. ಇದರ ಬದಲಾಗಿ, ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ನಾಲ್ಕು ವರ್ಷಗಳ “ಕನ್ನಡ ಪಂಡಿತ್” ಕೋರ್ಸ್‌ನಲ್ಲಿ ಉತ್ತೀರ್ಣರಾಗಿದ್ದು, ಕನ್ನಡ ಬಿ.ಎಡ್ ಪದವಿ ಹೊಂದಿರುವವರೂ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಅಭ್ಯರ್ಥಿಗಳು ತಮ್ಮ ಸ್ನಾತಕ (Degree) ಪದವಿಯಲ್ಲಿ ಕನ್ನಡವನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸದಿದ್ದಲ್ಲಿ, ಅವರು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ (MA) ಪದವಿ ಪಡೆದಿರಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ:

ಈ ಶಿಕ್ಷಕರ ಹುದ್ದೆಗಳ ನೇಮಕಾತಿಯು ಯಾವುದೇ ಶಿಫಾರಸ್ಸುಗಳಿಲ್ಲದೆ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸುವ ಅಂಕಗಳ ಅರ್ಹತೆ (Merit) ಹಾಗೂ ಸರ್ಕಾರದ ಮೀಸಲಾತಿ ನಿಯಮಾವಳಿಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

ಕೊಪ್ಪಳ: ಕಲ್ಯಾಣಿ ಸ್ಟೀಲ್ ಕಾರ್ಖಾನೆ ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ – Kannada News | Koppal Pollution Crackdown: Kalyani Steels Shut Down by CPCB Order

ಕೊಪ್ಪಳ, ಜು.14: ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದ ಕೈಗಾರಿಕೆಗಳಿಗೆ ಜಿಲ್ಲಾಡಳಿತ ಮತ್ತು ಪರಿಸರ ಸಂರಕ್ಷಣಾ ಇಲಾಖೆ ಶಾಕ್ ನೀಡಿದೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್’ (Kalyani Steels) ಕಾರ್ಖಾನೆಯನ್ನು ತಕ್ಷಣವೇ ಸೀಜ್ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಡಕ್ ಆದೇಶ ಹೊರಡಿಸಿದೆ.

ಕೇಂದ್ರ ಮಂಡಳಿಯ ಈ ಗಂಭೀರ ಆದೇಶ ಹೊರಬೀಳುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿರುವ ಕೊಪ್ಪಳ ಜಿಲ್ಲಾಧಿಕಾರಿ (DC) ಸುರೇಶ್ ಇಟ್ನಾಳ್ ಅವರು, ಕಾರ್ಖಾನೆಗೆ ನೀಡಲಾಗಿರುವ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಕಲ್ಯಾಣಿ ಸ್ಟೀಲ್ಸ್ ಸಂಸ್ಥೆಯು ನಿರಂತರವಾಗಿ ಉಲ್ಲಂಘಿಸುತ್ತಾ ಬಂದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಇಡೀ ಪ್ಲಾಂಟ್‌ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಮೊದಲ ಹಂತವಾಗಿ ಪವರ್ ಕಟ್ ಮಾಡಲು ಆದೇಶಿಸಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದ ಬೆನ್ನಲ್ಲೇ ಗಿಣಿಗೇರಾ ವ್ಯಾಪ್ತಿಯ ಜೆಸ್ಕಾಂ ಅಧಿಕಾರಿಗಳ ತಂಡ ಕಲ್ಯಾಣಿ ಸ್ಟೀಲ್ ಕಾರ್ಖಾನೆಯ ಆವರಣಕ್ಕೆ ಧಾವಿಸಿದ್ದು, ಕಾರ್ಖಾನೆಗೆ ಸರಬರಾಜಾಗುತ್ತಿದ್ದ ಉನ್ನತ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್

ಕೊಪ್ಪಳದಲ್ಲಿ ಸೀಜ್ ಆಗುತ್ತಿರುವ 4ನೇ ಕಾರ್ಖಾನೆ:

ಕೊಪ್ಪಳ ಜಿಲ್ಲೆಯಲ್ಲಿ ಪರಿಸರ ಮಾಲಿನ್ಯ ಉಂಟುಮಾಡುವ ಮತ್ತು ನಿಯಮಗಳನ್ನು ಪಾಲಿಸದ ಉದ್ಯಮಗಳ ವಿರುದ್ಧ ಜಿಲ್ಲಾಡಳಿತ ಹಮ್ಮಿಕೊಂಡಿರುವ ಬೃಹತ್ ಆಪರೇಷನ್‌ನಲ್ಲಿ ಸೀಜ್ ಆಗುತ್ತಿರುವ ನಾಲ್ಕನೇ ಪ್ರಮುಖ ಕಾರ್ಖಾನೆ ಇದಾಗಿದೆ. ಈ ಹಿಂದೆ ಜಿಲ್ಲಾಡಳಿತವು ಪರಿಸರ ಮಲಿನಗೊಳಿಸಿದ ಆರೋಪದ ಮೇಲೆ ಹೊಸಪೇಟೆ ಇಸ್ಪಾತ್ ಮತ್ತು ಪಿಬಿಎಸ್ 1 (PBS 1) ಸೇರಿದಂತೆ ಪ್ರಮುಖ ಕಾರ್ಖಾನೆಗಳಿಗೆ ಬೀಗ ಜಡಿದು ಬಂದ್ ಮಾಡಿಸಿತ್ತು. ಇದೀಗ ಅದೇ ದಾರಿಯಲ್ಲಿ ಪರಿಸರ ನಿಯಮಗಳನ್ನು ಗಾಳಿಗೆ ತೂರಿ ದರ್ಬಾರ್ ನಡೆಸುತ್ತಿದ್ದ ಕಲ್ಯಾಣಿ ಸ್ಟೀಲ್ಸ್ ಸರದಿಯಾಗಿದ್ದು, ಕಾರ್ಖಾನೆಗೆ ಕಂಪ್ಲೀಟ್ ಬೀಗ ಬೀಳುವುದು ಖಚಿತವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಎಂದು ಹೀಗೆ ಕಂಡು ಹಿಡಿಯಿರಿ – Kannada News | Here is how to find out how many SIM cards are registered in your name.

ಸಿಮ್‌ ಕಾರ್ಡ್‌
Image Credit source: Jobalou/DigitalVision Vectors/Getty Images

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರು ನಕಲಿ ಸಿಮ್ ಕಾರ್ಡ್‌ಗಳನ್ನು (SIM Swap Fraud) ಬಳಸಿ ಆನ್‌ಲೈನ್ ವಂಚನೆ ಮಾಡುತ್ತಿದ್ದಾರೆ. ಇಂತಹ ಸಾಕಷ್ಟು ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ನೀವು ಹೆಸರಿನಲ್ಲಿ ಬೇರೆಯವರು ಸಿಮ್‌ ಕಾರ್ಡ್‌ ಪಡೆದಿರುವುದರ ಬಗ್ಗೆ ನಿಮಗೆ ಸಂದೇಹವಿರಬಹುದು. ಹೀಗಾಗಿ ನಿಮ್ಮ  ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳಿವೆ ಎಂದು ಸುಲಭವಾಗಿ ಪತ್ತೆ ಹಚ್ಚಬಹುದು. ದೂರಸಂಪರ್ಕ ಇಲಾಖೆಯ ಭಾರತ ಸರ್ಕಾರದ ಅಧಿಕೃತ ವೆಬ್ ಸೈಟ್ ಆದ ಸಂಚಾರ್ ಸಾಥಿಗೆ (Sanchar Saathi) ಭೇಟಿ ನೀಡಿದ್ರೆ ಎಲ್ಲಾ ಮಾಹಿತಿಗಳು ನಿಮ್ಮ ಕೈ ಸೇರುತ್ತದೆ.

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಹೊಂದಬಹುದು?

ಭಾರತದಲ್ಲಿ, ದೂರಸಂಪರ್ಕ ಇಲಾಖೆಯ ನಿಯಮಗಳ ಪ್ರಕಾರವಾಗಿ, ಒಬ್ಬ ವ್ಯಕ್ತಿಯು ತನ್ನ ಹೆಸರಿನಲ್ಲಿ ಅಥವಾ ಆಧಾರ್ ಕಾರ್ಡ್‌ನಲ್ಲಿ ಗರಿಷ್ಠ 9 ಸಿಮ್ ಕಾರ್ಡ್‌ಗಳನ್ನು ಪಡೆಯಲು ಅವಕಾಶವಿದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಪರವಾನಗಿ ಪಡೆದ ಸೇನಾ ಪ್ರದೇಶಗಳಲ್ಲಿ ಒಬ್ಬ ವ್ಯಕ್ತಿ 6 ಸಿಮ್ ಕಾರ್ಡ್‌ಗಳು ಪಡೆಯಲು ಅವಕಾಶ ನೀಡಲಾಗಿದೆ.

ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್‌ಗಳನ್ನು ಪತ್ತೆ ಹಚ್ಚುವುದು ಹೇಗೆ?

ಹಂತ 1: ದೂರಸಂಪರ್ಕ ಇಲಾಖೆಯ ಅಧಿಕೃತ ಸಂಚಾರ್ ಸಾಥಿ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಮುಖಪುಟದಲ್ಲಿ ಕಾಣುವ ಸಿಟಿಜನ್ ಸೆಂಟ್ರಿಂಕ್ ಸರ್ವಿಸಸ್ ಆಯ್ಕೆಯಲ್ಲಿ ನೋ ಯುವರ್ ಮೊಬೈಲ್ ಕನೆಕ್ಷನ್ಸ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಸ್ಕ್ರೀನ್ ಮೇಲೆ ಕಾಣುವ ಕ್ಯಾಪ್ಚಾ ಕೋಡ್ ನಮೂದಿಸಿ.

ಹಂತ 4: ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಅದನ್ನು ಹಾಕಿ ಹಾಕಿ ಲಾಗಿನ್ ಆಗಿ.

ಹಂತ 5: ನಿಮ್ಮ ಆಧಾರ್ ಸಂಖ್ಯೆಯ ಮೂಲಕ ಸಕ್ರಿಯವಾಗಿರುವ ಎಲ್ಲಾ ಮೊಬೈಲ್ ಸಂಖ್ಯೆಗಳ ಪಟ್ಟಿ ಕಾಣಿಸುತ್ತದೆ.

ಹಂತ 6: ಈ ಲಿಸ್ಟ್ ನಲ್ಲಿ ನೀವು ಬಳಸದ ನಂಬರ್‌ಗಳು ಇದ್ದರೆ, ದಿಸ್ ಇಸ್ ನಾಟ್ ಮೈ ನಂಬರ್ ಅಥವಾ ನಾಟ್ ರಿಕ್ವಾಯಿಡ್ ಎಂಬ ಆಯ್ಕೆಗಳನ್ನು ಕ್ಲಿಕ್ ಮಾಡಿ ದೂರನ್ನು ದಾಖಲಿಸಿ.

ಇದನ್ನೂ ಓದಿ: SIM Card: ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲವೇ, ಹಾಗಾದ್ರೆ ಹೀಗೆ ಮಾಡಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆಯಬಹುದು?

ಉತ್ತರ: ನಿಮ್ಮ ಹೆಸರಿನಲ್ಲಿ ಗರಿಷ್ಠ 9 ಸಿಮ್ ಕಾರ್ಡ್‌ಗಳನ್ನು ಪಡೆಯಲು ಅವಕಾಶವಿದೆ. ಕೆಲವು ಪ್ರದೇಶಗಳಲ್ಲಿ 6 ಸಿಮ್ ಕಾರ್ಡ್ ಗಳನ್ನು ಪಡೆಯಬಹುದು.

ಪ್ರಶ್ನೆ: ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳಿವೆ ಎಂದು ಪತ್ತೆ ಹಚ್ಚುವುದು ಹೇಗೆ?

ಉತ್ತರ: ದೂರಸಂಪರ್ಕ ಇಲಾಖೆಯ ಭಾರತ ಸರ್ಕಾರದ ಅಧಿಕೃತ ಸಂಚಾರ್ ಸಾಥಿ ವೆಬ್ ಸೈಟ್ ಗೆ ಭೇಟಿ ಸಿಮ್ ಕಾರ್ಡ್ ಗಳ ಬಗ್ಗೆ ಮಾಹಿತಿ ಪಡೆಯಬಹುದು.

ಪ್ರಶ್ನೆ: ಒಬ್ಬ ವ್ಯಕ್ತಿ ಯಾವ ಪ್ರದೇಶಗಳಲ್ಲಿ ಗರಿಷ್ಠ 6 ಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಸುವಂತಿಲ್ಲ?

ಉತ್ತರ: ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಪರವಾನಗಿ ಪಡೆದ ಸೇನಾ ಪ್ರದೇಶಗಳಲ್ಲಿ ಒಬ್ಬ ವ್ಯಕ್ತಿ 6 ಸಿಮ್ ಕಾರ್ಡ್ ಬಳಸಲು ಮಾತ್ರ ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:18 pm, Tue, 14 July 26

Source link

ಜೂ ಎನ್​​ಟಿಆರ್ ರಾಜಕೀಯ ಪ್ರವೇಶ ಮತ್ತು ‘ರಾ ಎನ್​​ಟಿಆರ್’ ಬಗ್ಗೆ ನಟ ಸ್ಪಷ್ಟನೆ – Kannada News | Jr NTR team clarifies about RAW NTR organization and his political entry

ತೆಲುಗಿನ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಅವರ ರಾಜಕೀಯ ಪ್ರವೇಶದ ಬಗ್ಗೆ ಕೆಲ ವರ್ಷಗಳಿಂದಲೂ ಸುದ್ದಿ ಹರಿದಾಡುತ್ತಲೇ ಇದೆ. ನಂದಮೂರಿ ಕುಟುಂಬ ದಶಕಗಳಿಂದಲೂ ಆಂಧ್ರ ಪ್ರದೇಶ (ಅವಿಭಜಿತ ಮತ್ತು ವಿಭಜನೆ ಬಳಿಕ) ರಾಜಕೀಯದಲ್ಲಿ ಬಲು ಸಕ್ರಿಯವಾಗಿದೆ. ಈಗಲೂ ಸಹ ನಂದಮೂರಿ ಕುಟುಂಬದವೇ ಸ್ಥಾಪಿಸಿದ ಟಿಡಿಪಿ ಪಕ್ಷ ಆಂಧ್ರದಲ್ಲಿ ಅಧಿಕಾರದಲ್ಲಿದೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ನಂದಮೂರಿ ಕುಟುಂಬದಲ್ಲಿ ಆಗಿರುವ ಆಂತರಿಕ ಮನಸ್ಥಾಪಗಳಿಂದ ಜೂ ಎನ್​​ಟಿಆರ್ ಅವರನ್ನು ಪಕ್ಷದಿಂದ ದೂರ ಇಡಲಾಗಿದೆ. ಇದರ ನಡುವೆ ಜೂ ಎನ್​​ಟಿಆರ್ ಅವರು ಸ್ವತಂತ್ರ್ಯವಾಗಿ ಪಕ್ಷ ಕಟ್ಟಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದೀಗ ಜೂ ಎನ್​​ಟಿಆರ್ ಹೆಸರಿನಲ್ಲಿ ಹೊಸ ಸಂಘವೊಂದು ಹುಟ್ಟಿಕೊಂಡಿದ್ದು, ಸಂಘವು ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಿದೆ.

ಜೂ ಎನ್​ಟಿಆರ್ ಅಭಿಮಾನಿಗಳು ಸೇರಿಕೊಂಡು ‘ರಾ ಎನ್​​ಟಿಆರ್’ (RAW NTR) ಹೆಸರಿನ ಸಂಘವೊಂದನ್ನು ಸ್ಥಾಪಿಸಿದ್ದು, ವೆಬ್ ಸೈಟ್ ಲಾಂಚ್ ಮಾಡಿ, ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಿದ್ದಾರೆ. ರಕ್ತದಾನ, ಮಹಿಳೆಯರಿಗೆ ಸಹಾಯ, ಸ್ವಚ್ಛತೆ, ಯುವ ಸಬಲೀಕರಣ, ಗ್ರಾಮ ವಿಕಾಸ ಹೀಗೆ ಹಲವು ವಿಷಯಗಳು ಅವರ ಪ್ರಣಾಳಿಕೆಯಲ್ಲಿವೆ. ಸಂಘದ ಪ್ರಮುಖರು ಕೆಲ ದಿನಗಳ ಹಿಂದಷ್ಟೆ ಸುದ್ದಿಗೋಷ್ಠಿ ಸಹ ನಡೆಸಿದ್ದು, ತಮ್ಮ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಸಹ ಹಂಚಿಕೊಂಡಿದ್ದಾರೆ.

ಜೂ ಎನ್​​ಟಿಆರ್ ಅವರು ರಾಜಕೀಯ ಪ್ರವೇಶಕ್ಕೆ ಯತ್ನಿಸುತ್ತಿದ್ದು, ಅದರ ಭಾಗವಾಗಿಯೇ ಈ ಸಂಘ ಇದೆ ಎಂಬ ಚರ್ಚೆ ಜೋರಾಗಿ ಹರಿದಾಡುತ್ತಿದೆ. ತಮಿಳುನಾಡಿನ ವಿಜಯ್ ಸಹ ತಮ್ಮ ಅಭಿಮಾನಿ ಸಂಘದ ಮೂಲಕ ಸಾಮಾಜಿಕ ಸೇವೆ ನಡೆಸಿ ಬಳಿಕ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಸಿಎಂ ಆದರು. ಅದೇ ಮಾದರಿಯನ್ನು ಜೂ ಎನ್​​ಟಿಆರ್ ಸಹ ಪ್ರಯೋಗಿಸುತ್ತಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಇದನ್ನೂ ಓದಿ:ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ

ಇದರ ನಡುವೆ ನಟ ಜೂ ಎನ್​​ಟಿಆರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಮಗೂ ‘ರಾ ಎನ್​​ಟಿಆರ್’ಗೂ ಯಾವುದೇ ನೇರ ಸಂಬಂಧ ಇಲ್ಲವೆಂದು ಹೇಳಿದ್ದಾರೆ. ಜೂ ಎನ್​​ಟಿಆರ್ ಅವರ ತಂಡ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಜೂ ಎನ್​​ಟಿಆರ್ ಅವರಿಗೆ ರಾಜಕೀಯಕ್ಕೆ ಪ್ರವೇಶಿಸುವ ಆಸಕ್ತಿ ಇಲ್ಲವೆಂದು, ಜೊತೆಗೆ ತಮ್ಮ ಹೆಸರಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ‘ರಾ ಎನ್​​ಟಿಆರ್’ ಜೊತೆಗೆ ಅವರಿಗೆ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದಾರೆ.

ಜೂ ಎನ್​​ಟಿಆರ್ ಅವರು ಪ್ರಸ್ತುತ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಇದಾದ ಬಳಿಕ ಜೂ ಎನ್​​ಟಿಆರ್ ಅವರು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಲಿರುವ ‘ಮುರುಗನ್: ಲಾರ್ಡ್ ಆಫ್ ದಿ ವಾರ್ಸ್’ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಅವರು ‘ದೇವರ 2’ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಭಾರತೀಯ ನಾವಿಕ ಬಲಿ; ಭಾರತದಿಂದ ಇರಾನ್​ಗೆ ಸಮನ್ಸ್ ಜಾರಿ – Kannada News | India Strongly Condemns Hormuz Strikes Killed Indian Sailor Summons Iranian Diplomat

ನವದೆಹಲಿ, ಜುಲೈ 14: ಇರಾನ್ (Iran War) ಮತ್ತು ಅಮೆರಿಕದ ನಡುವಿನ ಸಂಘರ್ಷದ ಫಲವಾಗಿ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೇರೆ ದೇಶಗಳ ಹಡಗುಗಳು ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಓರ್ವ ನಾವಿಕ ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಹಡಡುಗಳ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದೆ. ಹಾಗೇ, ಭಾರತ ಇರಾನಿನ ರಾಯಭಾರಿಗೆ ಸಮನ್ಸ್ ಕೂಡ ನೀಡಿದೆ. ಇರಾನ್ ಜೊತೆ ಉತ್ತಮ ಸಂಬಂಧ ಹೊಂದಿದ್ದರೂ ಭಾರತದ 2 ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿತ್ತು.

ಈ ಮೂಲಕ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ 2 ವಾಣಿಜ್ಯ ಹಡಗುಗಳಾದ ‘ಎಂವಿ ಅಲ್ ಬಾಹಿಯಾ’ (MT Al Bahiyah) ಮತ್ತು ‘ಎಂವಿ ಮೊಂಬಾಸಾ’ (MT Mombasa) ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇದನ್ನು ನಾವಿಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ಹಿಂಸಾತ್ಮಕ ಕೃತ್ಯ ಎಂದು ಅಸಮಾಧಾನ ಹೊರಹಾಕಿರುವ ಭಾರತ, ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸುವ ಇಂತಹ ದಾಳಿಗಳು ತಕ್ಷಣವೇ ನಿಲ್ಲಬೇಕು ಎಂಬ ಕಠಿಣ ಸಂದೇಶ ರವಾನಿಸಿದೆ.

ಮಾತುಕತೆ ನಡೆಸಿ ಎಂದು ಭಾರತ ಸಲಹೆ:

ಹೀಗೆ ಸಿಕ್ಕ ಸಿಕ್ಕ ಹಡಗುಗಳ ಮೇಲೆ ದಾಳಿ ನಡೆಸುವ ಬದಲಾಗಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಯನ್ನು ಮರುಸ್ಥಾಪಿಸಲು ಎಲ್ಲಾ ಕಡೆಯವರು ತಕ್ಷಣವೇ ಹಗೆತನವನ್ನು ಕೊನೆಗೊಳಿಸಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಬೇಕು ಎಂದು ವಿದೇಶಾಂಗ ಸಚಿವಾಲಯವು ಒತ್ತಾಯಿಸಿದೆ. ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಮುಕ್ತ ಸಮುದ್ರ ವ್ಯಾಪಾರ ಮತ್ತು ನೌಕಾಯಾನ ಮುಂದುವರಿಯಲು ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳು ನಿಲ್ಲಲೇಬೇಕು ಎಂದು ಒತ್ತಿಹೇಳಿದೆ.

ಇದನ್ನೂ ಓದಿ: ಇರಾನ್‌ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ

ಇರಾನ್ ರಾಜತಾಂತ್ರಿಕರಿಗೆ ಭಾರತದ ಸಮನ್ಸ್:

ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಒಡೆತನದ 2 ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಘಟನೆಗೆ ನವದೆಹಲಿ ತೀವ್ರವಾಗಿ ಪ್ರತಿಕ್ರಿಯಿಸಿದೆ. ಇಂದು ಬೆಳಿಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಆಫ್ ಮಿಷನ್ ಮೊಹಮ್ಮದ್ ಜವಾದ್ ಹೊಸೇನಿ ಸೇರಿದಂತೆ ಇರಾನ್ ರಾಜತಾಂತ್ರಿಕರಿಗೆ ಸಮನ್ಸ್ ಜಾರಿಗೊಳಿಸಿ ಕಚೇರಿಗೆ ಕರೆಸಿಕೊಂಡಿದೆ. “ಇರಾನ್‌ನ ಉಪ ರಾಯಭಾರಿಯನ್ನು ಕರೆಸಿಕೊಂಡು ಈ ಭೀಕರ ದಾಳಿಗಳ ವಿರುದ್ಧ ಭಾರತದ ಬಲವಾದ ಪ್ರತಿಭಟನೆಯನ್ನು ದಾಖಲಿಸಲಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಭಾರತೀಯ ಸಿಬ್ಬಂದಿಗೆ ಆದ ಹಾನಿಗಳೇನು?:

ಎಂವಿ ಅಲ್ ಬಾಹಿಯಾ ಹಡಗಿನಲ್ಲಿದ್ದ 12 ಭಾರತೀಯ ಸಿಬ್ಬಂದಿ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂವಿ ಮೊಂಬಾಸಾ ಹಡಗಿನಲ್ಲಿದ್ದ 18 ಭಾರತೀಯ ನಾಗರಿಕರ ಪೈಕಿ 9 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟ ನಾವಿಕನ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿರುವ ಭಾರತದ ವಿದೇಶಾಂಗ ಸಚಿವಾಲಯ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ. ಸಂತ್ರಸ್ತ ಭಾರತೀಯ ಸಿಬ್ಬಂದಿಗೆ ಅಗತ್ಯವಿರುವ ಎಲ್ಲಾ ನೆರವು ಮತ್ತು ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ನಿರಂತರವಾಗಿ ಶ್ರಮಿಸುತ್ತಿದೆ. ಅಲ್ಲಿನ ಸ್ಥಳೀಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿರುವ ಭಾರತೀಯ ಮಿಷನ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ಅಬ್ಬರ: ಯುಎಇ ತೈಲ ನೌಕೆಗಳ ಮೇಲೆ ದಾಳಿ, ಓರ್ವ ಭಾರತೀಯ ಸಾವು

ದಾಳಿಯನ್ನು ಸಮರ್ಥಿಸಿಕೊಂಡ ಇರಾನ್:

ಯುಎಇ ಧ್ವಜ ಹೊತ್ತಿದ್ದ ಈ ಎರಡು ವಾಣಿಜ್ಯ ಹಡಗುಗಳ ಮೇಲೆ ತಾನೇ ದಾಳಿ ನಡೆಸಿರುವುದನ್ನು ಇರಾನ್ ಒಪ್ಪಿಕೊಂಡಿದೆ. ” ಈ ಹಡಗುಗಳು ನಮ್ಮ ನೌಕಾಯಾನ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದವು ಮತ್ತು ಜಲಸಂಧಿಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದವು, ಹಾಗಾಗಿ ದಾಳಿ ಮಾಡಿದ್ದೇವೆ” ಎಂದು ಇರಾನ್ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ಯುಎಇ ಖಂಡನೆ:

ಆದರೆ, ಯುಎಇ ರಕ್ಷಣಾ ಸಚಿವಾಲಯವು ಇರಾನ್‌ನ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ಧಕ್ಕೆ ತಂದಿದೆ ಎಂದು ಯುಎಇ ಹೇಳಿದೆ. ಇತ್ತೀಚೆಗೆ ಇರಾನ್ ಮೇಲೆ ಅಮೆರಿಕ ಭಾರಿ ದಾಳಿ ನಡೆಸಿದ ಬೆನ್ನಲ್ಲೇ, ಇರಾನ್ ಈ ರೀತಿಯ ಪ್ರತಿಕಾರ ಕ್ರಮಕ್ಕೆ ಮುಂದಾಗಿರುವುದು ಗಲ್ಫ್ ವಲಯದಲ್ಲಿ ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಹಾರ್ಮುಜ್ ಜಲಸಂಧಿ ಯಾಕೆ ಮುಖ್ಯ?:

ಹಾರ್ಮುಜ್ ಜಲಸಂಧಿಯು ಜಾಗತಿಕವಾಗಿ ಅತ್ಯಂತ ಕಾರ್ಯತಂತ್ರದ ಸಮುದ್ರ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ಒಟ್ಟು ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ (LNG) ರಫ್ತಿನ ಬಹುದೊಡ್ಡ ಪಾಲು ಇದೇ ಜಲಮಾರ್ಗದ ಮೂಲಕ ಸಾಗುತ್ತದೆ. ಹಾರ್ಮುಜ್ ಜಲಸಂಧಿಯು ಜಾಗತಿಕವಾಗಿ ಅತ್ಯಂತ ಪ್ರಮುಖವಾಗಿದ್ದು, ವಿಶ್ವದ ಒಟ್ಟು ತೈಲ ಪೂರೈಕೆಯ ಐದನೇ ಒಂದು ಭಾಗ (ಶೇ. 20) ಇದೇ ಮಾರ್ಗದ ಮೂಲಕ ಸಾಗುತ್ತದೆ. ಈ ಜಲಮಾರ್ಗದಲ್ಲಿ ಉಂಟಾಗುವ ಸಣ್ಣ ಅಡಚಣೆಯೂ ಜಾಗತಿಕ ಇಂಧನ ಪೂರೈಕೆ, ವಾಣಿಜ್ಯ ಹಡಗು ಸಂಚಾರ ಮತ್ತು ಅಂತಾರಾಷ್ಟ್ರೀಯ ವ್ಯಾಪಾರದ ಮೇಲೆ ಭಾರಿ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿಯೇ ವಾಣಿಜ್ಯ ಹಡಗುಗಳ ಮೇಲಿನ ಇಂತಹ ದಾಳಿಗಳು ಇಡೀ ಜಗತ್ತಿಗೆ ತೀವ್ರ ಕಳವಳದ ವಿಷಯವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ – Kannada News | Karnataka Minister Satish Jarkiholi Acknowledges Differences with Ex CM Siddaramaiah

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | IND vs ENG 1st ODI Live: England Wins Toss, Opts to Bat at Edgbaston; India Bowling

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿದೆ. ಟಿ20 ಸರಣಿಯಲ್ಲಿನ ಹೀನಾಯ ಸೋಲನ್ನು ಎದುರಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತಿದೆ. ಹಾಗೆಯೇ 2027 ರ ಏಕದಿನ ವಿಶ್ವಕಪ್​ಗೆ ಭಾರತದ ಸಿದ್ಧತೆಗೂ ಈ ಸರಣಿ ನಿರ್ಣಾಯಕವಾಗಿದೆ. ಈ ಸರಣಿಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇಂಗ್ಲೆಂಡ್‌ ತಂಡ ಒಂದು ದಿನ ಮೊದಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿತ್ತು. ಇದೀಗ ಟೀಂ ಇಂಡಿಯಾದ ಪ್ಲೇಯಿಂಗ್ ಕೂಡ ಹೊರಬಿದ್ದಿದೆ.

ಮುಖಾಮುಖಿ ದಾಖಲೆ ಹೇಗಿದೆ

ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ 110 ಏಕದಿನ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 61 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇಂಗ್ಲೆಂಡ್‌ನಲ್ಲಿ ಭಾರತದ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಭಾರತ ಇದುವರೆಗೆ 86 ಏಕದಿನ ಪಂದ್ಯಗಳನ್ನು ಆಡಿದ್ದು, 45 ಗೆದ್ದಿದ್ದರೆ, 37 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದೆ, ಮತ್ತು ಮೂರು ಡ್ರಾ ಆಗಿದೆ. ಭಾರತ ಇದುವರೆಗೆ ಬರ್ಮಿಂಗ್ಹ್ಯಾಮ್‌ನಲ್ಲಿ 12 ಏಕದಿನ ಪಂದ್ಯಗಳನ್ನು ಆಡಿದ್ದು, ಎಂಟು ಪಂದ್ಯಗಳಲ್ಲಿ ಗೆದ್ದಿದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

ಉಭಯ ತಂಡಗಳ ಪ್ಲೇಯಿಂಗ್

ಇಂಗ್ಲೆಂಡ್‌ ಪ್ಲೇಯಿಂಗ್ 11: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

ಭಾರತದ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:20 pm, Tue, 14 July 26

Source link

BMCRI Recruitment 2026: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ – Kannada News | Vani Vilas Hospital Recruitment 2026: Apply Online for Nursing Officer Jobs at BMCRI

ಶುಶ್ರೂಷಾಧಿಕಾರಿ ಹುದ್ದೆಗಳ ಭರ್ತಿImage Credit source: bmcribengaluru.karnataka.gov.in

ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (BMCRI) ಅಧೀನ ಆಸ್ಪತ್ರೆಯಾದ ಪ್ರಸಿದ್ಧ ವಾಣಿ ವಿಲಾಸ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ನೇಮಕಾತಿಯ ಅಧಿಸೂಚನೆ ಸಂಖ್ಯೆ BMCRI/ROCB/01/2026-27 ಆಗಿದೆ.

ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರವೇ ಪ್ರಕ್ರಿಯೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು 2026 ರ ಜುಲೈ 03 ರಂದು ಪ್ರಕಟವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯು ಜುಲೈ 08 ರಿಂದ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನಾಂಕವಾಗಿದೆ. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ 29 ರಂದು ದಾಖಲೆಗಳ ಪರಿಶೀಲನೆ ಹಾಗೂ ನೇರ ಸಂದರ್ಶನ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಆದ bmcribengaluru.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅದರಲ್ಲಿ ಕೇಳಲಾಗಿರುವ ಅಗತ್ಯ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ನಿಯಮಗಳನ್ನು ಪರಿಶೀಲಿಸಿದ ನಂತರವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಕೊನೆಯ ದಿನದವರೆಗೂ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಯುವ ಸ್ಥಳ:

ಆನ್‌ಲೈನ್‌ನಲ್ಲಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ (Document Verification) ಮತ್ತು ಸಂದರ್ಶನ ಪ್ರಕ್ರಿಯೆಯು 29 ಜುಲೈ 2026 ರಂದು ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ಮೂಲ ದಾಖಲೆಗಳೊಂದಿಗೆ “ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ನಿರ್ದೇಶಕರ ಕಚೇರಿ, ಡೀನ್ ಅವರ ಸಭಾಂಗಣ” ಕ್ಕೆ ಹಾಜರಾಗಬೇಕಾಗುತ್ತದೆ.

ಸಂಪರ್ಕ ಮಾಹಿತಿ ಮತ್ತು ಹೆಚ್ಚಿನ ವಿವರಗಳು:

ಈ ನೇಮಕಾತಿಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಂದೇಹಗಳಿದ್ದಲ್ಲಿ ಅಭ್ಯರ್ಥಿಗಳು ಬಿಎಂಸಿಆರ್‌ಐ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಅವರ ಕಚೇರಿ ಸಂಪರ್ಕ ಸಂಖ್ಯೆ 080-2670 0810 ಅನ್ನು ಸಂಪರ್ಕಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುವ ಯಾವುದೇ ತಿದ್ದುಪಡಿಗಳು ಅಥವಾ ಹೊಸ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸುತ್ತಿರಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On – 3:20 pm, Tue, 14 July 26

Source link

Exit mobile version