ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಭಾರತೀಯ ನಾವಿಕ ಬಲಿ; ಭಾರತದಿಂದ ಇರಾನ್​ಗೆ ಸಮನ್ಸ್ ಜಾರಿ – Kannada News | India Strongly Condemns Hormuz Strikes Killed Indian Sailor Summons Iranian Diplomat

ನವದೆಹಲಿ, ಜುಲೈ 14: ಇರಾನ್ (Iran War) ಮತ್ತು ಅಮೆರಿಕದ ನಡುವಿನ ಸಂಘರ್ಷದ ಫಲವಾಗಿ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೇರೆ ದೇಶಗಳ ಹಡಗುಗಳು ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಓರ್ವ ನಾವಿಕ ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಹಡಡುಗಳ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದೆ. ಹಾಗೇ, ಭಾರತ ಇರಾನಿನ ರಾಯಭಾರಿಗೆ ಸಮನ್ಸ್ ಕೂಡ ನೀಡಿದೆ. ಇರಾನ್ ಜೊತೆ ಉತ್ತಮ ಸಂಬಂಧ ಹೊಂದಿದ್ದರೂ ಭಾರತದ 2 ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿತ್ತು.

ಈ ಮೂಲಕ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ 2 ವಾಣಿಜ್ಯ ಹಡಗುಗಳಾದ ‘ಎಂವಿ ಅಲ್ ಬಾಹಿಯಾ’ (MT Al Bahiyah) ಮತ್ತು ‘ಎಂವಿ ಮೊಂಬಾಸಾ’ (MT Mombasa) ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇದನ್ನು ನಾವಿಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ಹಿಂಸಾತ್ಮಕ ಕೃತ್ಯ ಎಂದು ಅಸಮಾಧಾನ ಹೊರಹಾಕಿರುವ ಭಾರತ, ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸುವ ಇಂತಹ ದಾಳಿಗಳು ತಕ್ಷಣವೇ ನಿಲ್ಲಬೇಕು ಎಂಬ ಕಠಿಣ ಸಂದೇಶ ರವಾನಿಸಿದೆ.

ಮಾತುಕತೆ ನಡೆಸಿ ಎಂದು ಭಾರತ ಸಲಹೆ:

ಹೀಗೆ ಸಿಕ್ಕ ಸಿಕ್ಕ ಹಡಗುಗಳ ಮೇಲೆ ದಾಳಿ ನಡೆಸುವ ಬದಲಾಗಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಯನ್ನು ಮರುಸ್ಥಾಪಿಸಲು ಎಲ್ಲಾ ಕಡೆಯವರು ತಕ್ಷಣವೇ ಹಗೆತನವನ್ನು ಕೊನೆಗೊಳಿಸಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಬೇಕು ಎಂದು ವಿದೇಶಾಂಗ ಸಚಿವಾಲಯವು ಒತ್ತಾಯಿಸಿದೆ. ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಮುಕ್ತ ಸಮುದ್ರ ವ್ಯಾಪಾರ ಮತ್ತು ನೌಕಾಯಾನ ಮುಂದುವರಿಯಲು ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳು ನಿಲ್ಲಲೇಬೇಕು ಎಂದು ಒತ್ತಿಹೇಳಿದೆ.

ಇದನ್ನೂ ಓದಿ: ಇರಾನ್‌ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ

ಇರಾನ್ ರಾಜತಾಂತ್ರಿಕರಿಗೆ ಭಾರತದ ಸಮನ್ಸ್:

ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಒಡೆತನದ 2 ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಘಟನೆಗೆ ನವದೆಹಲಿ ತೀವ್ರವಾಗಿ ಪ್ರತಿಕ್ರಿಯಿಸಿದೆ. ಇಂದು ಬೆಳಿಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಆಫ್ ಮಿಷನ್ ಮೊಹಮ್ಮದ್ ಜವಾದ್ ಹೊಸೇನಿ ಸೇರಿದಂತೆ ಇರಾನ್ ರಾಜತಾಂತ್ರಿಕರಿಗೆ ಸಮನ್ಸ್ ಜಾರಿಗೊಳಿಸಿ ಕಚೇರಿಗೆ ಕರೆಸಿಕೊಂಡಿದೆ. “ಇರಾನ್‌ನ ಉಪ ರಾಯಭಾರಿಯನ್ನು ಕರೆಸಿಕೊಂಡು ಈ ಭೀಕರ ದಾಳಿಗಳ ವಿರುದ್ಧ ಭಾರತದ ಬಲವಾದ ಪ್ರತಿಭಟನೆಯನ್ನು ದಾಖಲಿಸಲಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಭಾರತೀಯ ಸಿಬ್ಬಂದಿಗೆ ಆದ ಹಾನಿಗಳೇನು?:

ಎಂವಿ ಅಲ್ ಬಾಹಿಯಾ ಹಡಗಿನಲ್ಲಿದ್ದ 12 ಭಾರತೀಯ ಸಿಬ್ಬಂದಿ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂವಿ ಮೊಂಬಾಸಾ ಹಡಗಿನಲ್ಲಿದ್ದ 18 ಭಾರತೀಯ ನಾಗರಿಕರ ಪೈಕಿ 9 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟ ನಾವಿಕನ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿರುವ ಭಾರತದ ವಿದೇಶಾಂಗ ಸಚಿವಾಲಯ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ. ಸಂತ್ರಸ್ತ ಭಾರತೀಯ ಸಿಬ್ಬಂದಿಗೆ ಅಗತ್ಯವಿರುವ ಎಲ್ಲಾ ನೆರವು ಮತ್ತು ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ನಿರಂತರವಾಗಿ ಶ್ರಮಿಸುತ್ತಿದೆ. ಅಲ್ಲಿನ ಸ್ಥಳೀಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿರುವ ಭಾರತೀಯ ಮಿಷನ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ಅಬ್ಬರ: ಯುಎಇ ತೈಲ ನೌಕೆಗಳ ಮೇಲೆ ದಾಳಿ, ಓರ್ವ ಭಾರತೀಯ ಸಾವು

ದಾಳಿಯನ್ನು ಸಮರ್ಥಿಸಿಕೊಂಡ ಇರಾನ್:

ಯುಎಇ ಧ್ವಜ ಹೊತ್ತಿದ್ದ ಈ ಎರಡು ವಾಣಿಜ್ಯ ಹಡಗುಗಳ ಮೇಲೆ ತಾನೇ ದಾಳಿ ನಡೆಸಿರುವುದನ್ನು ಇರಾನ್ ಒಪ್ಪಿಕೊಂಡಿದೆ. ” ಈ ಹಡಗುಗಳು ನಮ್ಮ ನೌಕಾಯಾನ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದವು ಮತ್ತು ಜಲಸಂಧಿಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದವು, ಹಾಗಾಗಿ ದಾಳಿ ಮಾಡಿದ್ದೇವೆ” ಎಂದು ಇರಾನ್ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ಯುಎಇ ಖಂಡನೆ:

ಆದರೆ, ಯುಎಇ ರಕ್ಷಣಾ ಸಚಿವಾಲಯವು ಇರಾನ್‌ನ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ಧಕ್ಕೆ ತಂದಿದೆ ಎಂದು ಯುಎಇ ಹೇಳಿದೆ. ಇತ್ತೀಚೆಗೆ ಇರಾನ್ ಮೇಲೆ ಅಮೆರಿಕ ಭಾರಿ ದಾಳಿ ನಡೆಸಿದ ಬೆನ್ನಲ್ಲೇ, ಇರಾನ್ ಈ ರೀತಿಯ ಪ್ರತಿಕಾರ ಕ್ರಮಕ್ಕೆ ಮುಂದಾಗಿರುವುದು ಗಲ್ಫ್ ವಲಯದಲ್ಲಿ ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಹಾರ್ಮುಜ್ ಜಲಸಂಧಿ ಯಾಕೆ ಮುಖ್ಯ?:

ಹಾರ್ಮುಜ್ ಜಲಸಂಧಿಯು ಜಾಗತಿಕವಾಗಿ ಅತ್ಯಂತ ಕಾರ್ಯತಂತ್ರದ ಸಮುದ್ರ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ಒಟ್ಟು ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ (LNG) ರಫ್ತಿನ ಬಹುದೊಡ್ಡ ಪಾಲು ಇದೇ ಜಲಮಾರ್ಗದ ಮೂಲಕ ಸಾಗುತ್ತದೆ. ಹಾರ್ಮುಜ್ ಜಲಸಂಧಿಯು ಜಾಗತಿಕವಾಗಿ ಅತ್ಯಂತ ಪ್ರಮುಖವಾಗಿದ್ದು, ವಿಶ್ವದ ಒಟ್ಟು ತೈಲ ಪೂರೈಕೆಯ ಐದನೇ ಒಂದು ಭಾಗ (ಶೇ. 20) ಇದೇ ಮಾರ್ಗದ ಮೂಲಕ ಸಾಗುತ್ತದೆ. ಈ ಜಲಮಾರ್ಗದಲ್ಲಿ ಉಂಟಾಗುವ ಸಣ್ಣ ಅಡಚಣೆಯೂ ಜಾಗತಿಕ ಇಂಧನ ಪೂರೈಕೆ, ವಾಣಿಜ್ಯ ಹಡಗು ಸಂಚಾರ ಮತ್ತು ಅಂತಾರಾಷ್ಟ್ರೀಯ ವ್ಯಾಪಾರದ ಮೇಲೆ ಭಾರಿ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿಯೇ ವಾಣಿಜ್ಯ ಹಡಗುಗಳ ಮೇಲಿನ ಇಂತಹ ದಾಳಿಗಳು ಇಡೀ ಜಗತ್ತಿಗೆ ತೀವ್ರ ಕಳವಳದ ವಿಷಯವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ – Kannada News | Karnataka Minister Satish Jarkiholi Acknowledges Differences with Ex CM Siddaramaiah

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | IND vs ENG 1st ODI Live: England Wins Toss, Opts to Bat at Edgbaston; India Bowling

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿದೆ. ಟಿ20 ಸರಣಿಯಲ್ಲಿನ ಹೀನಾಯ ಸೋಲನ್ನು ಎದುರಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತಿದೆ. ಹಾಗೆಯೇ 2027 ರ ಏಕದಿನ ವಿಶ್ವಕಪ್​ಗೆ ಭಾರತದ ಸಿದ್ಧತೆಗೂ ಈ ಸರಣಿ ನಿರ್ಣಾಯಕವಾಗಿದೆ. ಈ ಸರಣಿಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ನಂತರ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇಂಗ್ಲೆಂಡ್‌ ತಂಡ ಒಂದು ದಿನ ಮೊದಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿತ್ತು. ಇದೀಗ ಟೀಂ ಇಂಡಿಯಾದ ಪ್ಲೇಯಿಂಗ್ ಕೂಡ ಹೊರಬಿದ್ದಿದೆ.

ಮುಖಾಮುಖಿ ದಾಖಲೆ ಹೇಗಿದೆ

ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ 110 ಏಕದಿನ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 61 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇಂಗ್ಲೆಂಡ್‌ನಲ್ಲಿ ಭಾರತದ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಭಾರತ ಇದುವರೆಗೆ 86 ಏಕದಿನ ಪಂದ್ಯಗಳನ್ನು ಆಡಿದ್ದು, 45 ಗೆದ್ದಿದ್ದರೆ, 37 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದೆ, ಮತ್ತು ಮೂರು ಡ್ರಾ ಆಗಿದೆ. ಭಾರತ ಇದುವರೆಗೆ ಬರ್ಮಿಂಗ್ಹ್ಯಾಮ್‌ನಲ್ಲಿ 12 ಏಕದಿನ ಪಂದ್ಯಗಳನ್ನು ಆಡಿದ್ದು, ಎಂಟು ಪಂದ್ಯಗಳಲ್ಲಿ ಗೆದ್ದಿದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

ಉಭಯ ತಂಡಗಳ ಪ್ಲೇಯಿಂಗ್

ಇಂಗ್ಲೆಂಡ್‌ ಪ್ಲೇಯಿಂಗ್ 11: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

ಭಾರತದ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:20 pm, Tue, 14 July 26

Source link

BMCRI Recruitment 2026: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ – Kannada News | Vani Vilas Hospital Recruitment 2026: Apply Online for Nursing Officer Jobs at BMCRI

ಶುಶ್ರೂಷಾಧಿಕಾರಿ ಹುದ್ದೆಗಳ ಭರ್ತಿImage Credit source: bmcribengaluru.karnataka.gov.in

ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (BMCRI) ಅಧೀನ ಆಸ್ಪತ್ರೆಯಾದ ಪ್ರಸಿದ್ಧ ವಾಣಿ ವಿಲಾಸ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ನೇಮಕಾತಿಯ ಅಧಿಸೂಚನೆ ಸಂಖ್ಯೆ BMCRI/ROCB/01/2026-27 ಆಗಿದೆ.

ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರವೇ ಪ್ರಕ್ರಿಯೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು 2026 ರ ಜುಲೈ 03 ರಂದು ಪ್ರಕಟವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯು ಜುಲೈ 08 ರಿಂದ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನಾಂಕವಾಗಿದೆ. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ 29 ರಂದು ದಾಖಲೆಗಳ ಪರಿಶೀಲನೆ ಹಾಗೂ ನೇರ ಸಂದರ್ಶನ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಆದ bmcribengaluru.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅದರಲ್ಲಿ ಕೇಳಲಾಗಿರುವ ಅಗತ್ಯ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ನಿಯಮಗಳನ್ನು ಪರಿಶೀಲಿಸಿದ ನಂತರವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಕೊನೆಯ ದಿನದವರೆಗೂ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಯುವ ಸ್ಥಳ:

ಆನ್‌ಲೈನ್‌ನಲ್ಲಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ (Document Verification) ಮತ್ತು ಸಂದರ್ಶನ ಪ್ರಕ್ರಿಯೆಯು 29 ಜುಲೈ 2026 ರಂದು ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ಮೂಲ ದಾಖಲೆಗಳೊಂದಿಗೆ “ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ನಿರ್ದೇಶಕರ ಕಚೇರಿ, ಡೀನ್ ಅವರ ಸಭಾಂಗಣ” ಕ್ಕೆ ಹಾಜರಾಗಬೇಕಾಗುತ್ತದೆ.

ಸಂಪರ್ಕ ಮಾಹಿತಿ ಮತ್ತು ಹೆಚ್ಚಿನ ವಿವರಗಳು:

ಈ ನೇಮಕಾತಿಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಂದೇಹಗಳಿದ್ದಲ್ಲಿ ಅಭ್ಯರ್ಥಿಗಳು ಬಿಎಂಸಿಆರ್‌ಐ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಅವರ ಕಚೇರಿ ಸಂಪರ್ಕ ಸಂಖ್ಯೆ 080-2670 0810 ಅನ್ನು ಸಂಪರ್ಕಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುವ ಯಾವುದೇ ತಿದ್ದುಪಡಿಗಳು ಅಥವಾ ಹೊಸ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸುತ್ತಿರಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On – 3:20 pm, Tue, 14 July 26

Source link

ಹಾರ್ಮುಜ್ ಸಹವಾಸವೇ ಬೇಡ; ದೂರದಲ್ಲಿ ಬೇರೆಯೇ ಬಂದರು ಕಟ್ಟುತ್ತಿದೆ ಈ ಗಲ್ಫ್ ದೇಶ – Kannada News | UAE plans to build new port at eastern coast to avoid Hormuz Strait

ದುಬೈ, ಜುಲೈ 14: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಸರಣಿ ದಾಳಿಗಳು ಹಾಗೂ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ಪೂರ್ವ ಕರಾವಳಿಯಲ್ಲಿ ಹೊಸದೊಂದು ಬಂದರನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಯುಎಇ ಮೂಲದ ಜಾಗತಿಕ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆಯಾದ ಡಿಪಿ ವರ್ಲ್ಡ್ (DP World), ಯುಎಇಯ ಪೂರ್ವ ಕರಾವಳಿಯಲ್ಲಿರುವ ಫುಜೈರಾ (Fujairah) ಪ್ರಾಂತ್ಯದಲ್ಲಿ ಹೊಸದೊಂದು ಬಹೂಪಯೋಗಿ (multipurpose) ಬಂದರನ್ನು ಅಭಿವೃದ್ಧಿಪಡಿಸಲು ಯೋಜಿಸುತ್ತಿದೆ. ಇದರ ಜೊತೆಗೆ ಪ್ರಸ್ತುತ ಅಲ್ಲಿರುವ ಬಂದರಿನಲ್ಲಿ ಹೊಸ ಕಂಟೈನರ್ ಟರ್ಮಿನಲ್ ನಿರ್ಮಿಸುವ ಕುರಿತೂ ಮಾತುಕತೆ ನಡೆಸುತ್ತಿದೆ.

ಹಾರ್ಮುಜ್ ಜಲಸಂಧಿಯನ್ನು ತಪ್ಪಿಸುವುದು ಹೇಗೆ?

ಪ್ರಸ್ತುತ ದುಬೈನ ಪ್ರಮುಖ ವ್ಯಾಪಾರ ಕೇಂದ್ರವಾಗಿರುವ ‘ಜೆಬೆಲ್ ಅಲಿ’ (Jebel Ali) ಬಂದರಿಗೆ ಬರುವ ಹಡಗುಗಳು ಒಮಾನ್ ಮತ್ತು ಇರಾನ್ ನಡುವಿನ ಕಿರಿದಾದ ಹಾರ್ಮುಜ್ ಜಲಸಂಧಿಯ ಮೂಲಕವೇ ಹಾದುಹೋಗಬೇಕಾಗಿದೆ. ಆದರೆ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಫುಜೈರಾ ಬಂದರು ಒಮಾನ್ ಗಲ್ಫ್ (Gulf of Oman) ಭಾಗದಲ್ಲಿ ಬರಲಿದ್ದು, ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸದೆಯೇ ಯುಎಇ ತಲುಪಬಹುದು.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಟೋಲ್​ಗೆ ಅಮೆರಿಕ-ಇರಾನ್ ಪೈಪೋಟಿ; ಭಾರತಕ್ಕೆ ಏನು ತಲೆನೋವು?

ಯುಎಇಯಲ್ಲಿ ರಸ್ತೆ ಮಾರ್ಗಗಳಲ್ಲಿ ಟ್ರಕ್​ಗಳ ಮೂಲಕ ಸರಕುಗಳ ಸಾಗಣೆ ಮಾಡಬಹುದು. ಹಾರ್ಮುಜ್ ಜಲಸಂಧಿ ತಪ್ಪಿಸಲು ಇತರ ಕೊಲ್ಲಿ ದೇಶಗಳು ಕೂಡ ಈ ರಸ್ತೆ ಮಾರ್ಗಗಳನ್ನು ಬಳಸಲು ಅವಕಾಶ ಇರುತ್ತದೆ. ಫುಜೈರಾ ಬಂದರಿನಿಂದ ಹಡಗುಗಳು ಓಮನ್ ಗಲ್ಫ್ ಮೂಲಕ ಹೊರಗೆ ಸಾಗಬಹುದು. ಓಮನ್ ಗಲ್ಫ್ ಮಾರ್ಗವು ಹಾರ್ಮುಜ್ ಜಲಸಂಧಿಯಷ್ಟು ಕಿರಿದಾಗಿಲ್ಲ. ಹೀಗಾಗಿ, ಇರಾನ್​ನಿಂದ ತಡೆ ಬರುವ ಸಾಧ್ಯತೆ ಕಡಿಮೆ.

ಯುಎಇಯ ಈ ನಿರ್ಧಾರಕ್ಕೆ ಕಾರಣಗಳೇನು?

  • ವ್ಯಾಪಾರ ಕುಸಿತ: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಫೆಬ್ರವರಿ ಕೊನೆಯಲ್ಲಿ ಹೋರ್ಮುಜ್ ಜಲಸಂಧಿಯನ್ನು ಬಂದ್ ಮಾಡಿತ್ತು. ಇದರಿಂದಾಗಿ ಜೆಬೆಲ್ ಅಲಿ ಬಂದರಿನ ಚಟುವಟಿಕೆಗಳು ಶೇ. 90 ರಿಂದ 95 ರಷ್ಟು ಕುಸಿದಿವೆ.
  • ಭದ್ರತಾ ಸವಾಲುಗಳು: ಪ್ರಸ್ತುತ ಬಿಕ್ಕಟ್ಟಿನಲ್ಲಿ ಯುಎಇ ನಿರಂತರವಾಗಿ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಜೆಬೆಲ್ ಅಲಿ ಬಂದರಿನ ಮೇಲೆಯೂ ಕ್ಷಿಪಣಿ ತಡೆದ ರಕ್ಷಣಾ ತ್ಯಾಜ್ಯ ಬಿದ್ದು ಬೆಂಕಿ ಅನಾಹುತ ಸಂಭವಿಸಿತ್ತು.
  • ಆರ್ಥಿಕ ಸುರಕ್ಷತೆ: ಮಧ್ಯಪ್ರಾಚ್ಯದಲ್ಲಿ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ರೀತಿಯ ಬಿಕ್ಕಟ್ಟುಗಳು ಮತ್ತು ದಿಗ್ಬಂಧನಗಳಿಂದ ತನ್ನ ಆರ್ಥಿಕತೆಯನ್ನು ಸುರಕ್ಷಿತವಾಗಿಡಲು ಯುಎಇ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.

ಇದನ್ನೂ ಓದಿ: ಟಾಟಾ ಮೋಟಾರ್ಸ್‌ ‘ಕೌಶಲ್ಯ ಯೋಜನೆ’: 23,000ಕ್ಕೂ ಹೆಚ್ಚು ಯುವಕರಿಗೆ ತರಬೇತಿ, 5,000ಕ್ಕೂ ಅಧಿಕ ಮಂದಿಗೆ ಉದ್ಯೋಗ ಭಾಗ್ಯ

ಜೆಬೆಲ್ ಅಲಿ ಬಂದರಿನ ಭವಿಷ್ಯವೇನು?

ಹೊಸ ಬಂದರು ನಿರ್ಮಾಣವಾದರೂ ದುಬೈನ ಜೆಬೆಲ್ ಅಲಿ ಬಂದರಿನ ಪ್ರಾಮುಖ್ಯತೆ ಕಡಿಮೆಯಾಗುವುದಿಲ್ಲ ಎಂದು ಡಿಪಿ ವರ್ಲ್ಡ್‌ನ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಹೊಸ ಯೋಜನೆಗಳು ಕೇವಲ ಮುನ್ನೆಚ್ಚರಿಕಾ ಹಾಗೂ ಪರ್ಯಾಯ ವ್ಯವಸ್ಥೆಯಾಗಿದ್ದು, ಪರಿಸ್ಥಿತಿ ಕೈಮೀರಿದಾಗ ಮಾತ್ರ ಬಳಸಲು ಯೋಜಿಸಲಾಗಿದೆ. ಈ ಹೊಸ ಬಂದರನ್ನು ಅತ್ಯಂತ ವೇಗವಾಗಿ ಅಂದರೆ ಕೇವಲ ಒಂದೂವರೆ ವರ್ಷದಲ್ಲಿ ನಿರ್ಮಿಸಿ ಮುಗಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಿರಾಕರಣೆ, ಸಂಕೀರ್ಣದೊಳಗೆ ನಮಾಜ್ ನಿಷೇಧ ಯಥಾವತ್ತು – Kannada News | Bhojshala Dispute: Supreme Court Refuses Stay on Namaz Ban, High Court Order Stands

ನವದೆಹಲಿ, ಜುಲೈ 14: ದೇಶದ ಮತ್ತೊಂದು ಅತ್ಯಂತ ಸೂಕ್ಷ್ಮ ಧಾರ್ಮಿಕ ಕೇಂದ್ರವಾದ ಮಧ್ಯಪ್ರದೇಶದ ಧಾರ್ ಜಿಲ್ಲೆಯ ‘ಭೋಜಶಾಲಾ-ಕಮಲ್ ಮೌಲಾ ಮಸೀದಿ’ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ್ದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಇದರೊಂದಿಗೆ ಸಂಕೀರ್ಣದ ಒಳಭಾಗದಲ್ಲಿ ಮುಸ್ಲಿಮರು ನಮಾಜ್(Namaz) ಮಾಡುವುದಕ್ಕೆ ಇದ್ದ ನಿಷೇಧ ಸದ್ಯಕ್ಕೆ ಮುಂದುವರೆದಿದೆ.

ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (CJI) ನೇತೃತ್ವದ ಪೀಠವು ಮಧ್ಯಂತರ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದೆ. ಅದರಂತೆ, ಭೋಜಶಾಲಾ ಸಂಕೀರ್ಣದ ಒಳಗೆ ಯಾವುದೇ ನಮಾಜ್ ಮಾಡಲು ಅವಕಾಶವಿರುವುದಿಲ್ಲ. ಬದಲಿಗೆ, ಸಂಕೀರ್ಣದ ಪಕ್ಕದಲ್ಲಿರುವ ತೆರೆದ ಜಾಗದಲ್ಲಿ ಮುಸ್ಲಿಂ ಸಮುದಾಯದವರು ಪ್ರತಿ ಶುಕ್ರವಾರ ಮಧ್ಯಾಹ್ನ 1 ರಿಂದ 3 ರವರೆಗೆ ಪ್ರಾರ್ಥನೆ ಸಲ್ಲಿಸಲು ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇವು ಬಹಳ ಸೂಕ್ಷ್ಮ ವಿಷಯಗಳು, ತಾಳ್ಮೆಯಿಂದಿರಿ: ಸಿಜೆಐ ಕಿವಿಮಾತು

ವಿಚಾರಣೆಯ ಸಂದರ್ಭದಲ್ಲಿ ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಅಗತ್ಯವನ್ನು ಮುಖ್ಯ ನ್ಯಾಯಮೂರ್ತಿಗಳು ಬಲವಾಗಿ ಒತ್ತಿ ಹೇಳಿದರು. ‘‘ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿದೆ. ಇಲ್ಲಿ ನ್ಯಾಯಾಲಯ ಆತುರದಲ್ಲಿ ನೀಡುವ ಯಾವುದೇ ಸಣ್ಣ ಆದೇಶವೂ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಬಹುದು ಮತ್ತು ಕಾನೂನು,ಸುವ್ಯವಸ್ಥೆಯ ಸಮಸ್ಯೆ ಸೃಷ್ಟಿಸಬಹುದು. ಹೈಕೋರ್ಟ್ ಆದೇಶದ ಬೆನ್ನಲ್ಲೇ ಉಂಟಾಗಿರುವ ರಾಜ್ಯದ ಅಸಹಾಯಕತೆಯನ್ನು ನಾವು ಗಮನಿಸಿದ್ದೇವೆ. ಹಾಗಾಗಿ ಎರಡೂ ಧರ್ಮದವರು ತಾಳ್ಮೆಯಿಂದ ಇರಬೇಕು’’ ಎಂದು ಸಿಜೆಐ ಹೇಳಿದ್ದಾರೆ.

ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸ್ವೀಕರಿಸಿದ ಪೀಠವು, ಹಿಂದೂ ಪಕ್ಷಗಳು, ಕೇಂದ್ರ ಸರ್ಕಾರ, ಮಧ್ಯಪ್ರದೇಶ ಸರ್ಕಾರ ಹಾಗೂ ಭಾರತೀಯ ಪುರಾತತ್ವ ಸಮೀಕ್ಷೆ (ASI) ಇಲಾಖೆಗೆ ಅಧಿಕೃತ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೋರಿದೆ. ಅಷ್ಟೇ ಅಲ್ಲದೆ, ನ್ಯಾಯಾಲಯದ ಲಿಖಿತ ಅನುಮತಿಯಿಲ್ಲದೆ ಎಎಸ್‌ಐ ಸಂಸ್ಥೆಯು ವಿವಾದಿತ ಸ್ಥಳದಲ್ಲಿ ಯಾವುದೇ ರೀತಿಯ ರಚನಾತ್ಮಕ ಬದಲಾವಣೆಗಳನ್ನು ಮಾಡುವಂತಿಲ್ಲ ಎಂದು ಕಠಿಣ ಆದೇಶ ನೀಡಿದೆ.

ಮತ್ತಷ್ಟು ಓದಿ: ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ

ವಿವಾದದ ಹಿನ್ನೆಲೆ ಮತ್ತು ಹೈಕೋರ್ಟ್ ನೀಡಿದ್ದ ಟ್ವಿಸ್ಟ್

ಈ ಇಡೀ ಸಂಘರ್ಷಕ್ಕೆ ಕಾರಣವಾಗಿದ್ದು ಮೇ 15 ರಂದು ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪು. ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ ಪೀಠವು, 11ನೇ ಶತಮಾನದ ಈ ಸ್ಮಾರಕವು ಮೂಲತಃ ವಾಗ್ದೇವಿ ದೇವಾಲಯ ಮತ್ತು ಪ್ರಾಚೀನ ಸಂಸ್ಕೃತ ಕಲಿಕಾ ಕೇಂದ್ರವಾಗಿತ್ತು ಎಂದು ತೀರ್ಪು ನೀಡಿತ್ತು.

ಇದಕ್ಕೂ ಮುನ್ನ, 2003 ರ ಎಎಸ್‌ಐ ನಿಯಮದ ಪ್ರಕಾರ ಹಿಂದೂಗಳು ಪ್ರತಿ ಮಂಗಳವಾರ ಪೂಜೆ ಮಾಡಲು ಹಾಗೂ ಮುಸ್ಲಿಮರು ಪ್ರತಿ ಶುಕ್ರವಾರ ಒಳಗೆ ನಮಾಜ್ ಮಾಡಲು ಅವಕಾಶವಿತ್ತು. ಆದರೆ ಹೈಕೋರ್ಟ್ ಈ ಹಳೆಯ ವ್ಯವಸ್ಥೆಯನ್ನು ರದ್ದುಗೊಳಿಸಿ, ಒಳಗೆ ನಮಾಜ್ ಮಾಡುವುದನ್ನು ಸಂಪೂರ್ಣ ನಿಷೇಧಿಸಿತ್ತು. ಅಲ್ಲದೆ, ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಿಸಲು ಧಾರ್ ನಗರದಲ್ಲೇ ಪರ್ಯಾಯ ಭೂಮಿಯನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನು ಮಸೀದಿಯ ಉಸ್ತುವಾರಿ ಖಾಜಿ ಮೊಯಿನುದ್ದೀನ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಜುಲೈ 3ನೇ ವಾರದಲ್ಲಿ ಅಂತಿಮ ಜಿದ್ದಾಜಿದ್ದಿ

ಐತಿಹಾಸಿಕ ಪ್ರಾಮುಖ್ಯತೆ: ಇತಿಹಾಸಕಾರರ ಪ್ರಕಾರ, ಈ ಭೋಜಶಾಲೆಯನ್ನು ತತ್ವಜ್ಞಾನಿ ಹಾಗೂ ಕಲಾ ಪೋಷಕನಾಗಿದ್ದ ರಾಜ ಭೋಜನ ಕಾಲದಲ್ಲಿ ನಿರ್ಮಿಸಲಾಗಿತ್ತು. ನಂತರದ ಮೊಘಲ್ ಆಡಳಿತಾವಧಿಯಲ್ಲಿ ಇದರ ಒಂದು ಭಾಗವನ್ನು ಕಮಲ್ ಮೌಲಾ ಮಸೀದಿಯಾಗಿ ಪರಿವರ್ತಿಸಲಾಯಿತು ಎಂಬುದು ಹಿಂದೂಗಳ ವಾದವಾಗಿದೆ. ಅಯೋಧ್ಯೆ ಮತ್ತು ಜ್ಞಾನವಾಪಿಯಂತೆಯೇ ಇದು ಕೂಡ ದೇಶದ ಅತ್ಯಂತ ಹಳೆಯ ಧಾರ್ಮಿಕ ವಿವಾದಗಳಲ್ಲಿ ಒಂದಾಗಿದೆ.

ಸುಪ್ರೀಂ ಕೋರ್ಟ್ ಸದ್ಯಕ್ಕೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಮಧ್ಯಂತರ ಆದೇಶ ನೀಡಿದ್ದು, ಪ್ರಕರಣದ ಮುಂದಿನ ಪ್ರಮುಖ ವಿಚಾರಣೆಯನ್ನು ಜುಲೈ ಮೂರನೇ ವಾರದಲ್ಲಿ ಕೈಗೆತ್ತಿಕೊಳ್ಳಲಿದೆ. ಜುಲೈ ಅಂತ್ಯದ ವೇಳೆಗೆ ದೇಶದ ಅತ್ಯುನ್ನತ ನ್ಯಾಯಾಲಯವು ಈ ಸೂಕ್ಷ್ಮ ಬಿಕ್ಕಟ್ಟಿಗೆ ಶಾಶ್ವತ ಪರಿಹಾರದ ದಾರಿ ತೋರಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್ – Kannada News | Bengaluru PSI Bhairappa Held for Attempted Murder of Wife and Dowry Torture

ಬೆಂಗಳೂರು, ಜು.14: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ (Commissioner of Police) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಪಿಎಸ್ಐ ಭೈರಪ್ಪ ಕಳೆದ ಕೆಲವು ಸಮಯದಿಂದ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರ ಕೌಟುಂಬಿಕ ಕಲಹ ತಾರಕಕ್ಕೇರಿದಾಗ, ಪಿಎಸ್ಐ ಭೈರಪ್ಪ ಅವರು ಮನೆಯಲ್ಲಿದ್ದ ಮಚ್ಚನ್ನು ಹಿಡಿದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

ಹಲ್ಲೆಯ ಬೆನ್ನಲ್ಲೇ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಆರಂಭದಲ್ಲಿ ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಸತ್ಯಾಂಶ ಬೆಳಕಿಗೆ ಬರುತ್ತಿದ್ದಂತೆಯೇ ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು!

ಪೊಲೀಸ್ ಅಧಿಕಾರಿಯಾಗಿದ್ದರೂ ಕಾನೂನು ಉಲ್ಲಂಘಿಸಿ ಕ್ರೌರ್ಯ ಮೆರೆದ ಭೈರಪ್ಪ ವಿರುದ್ಧ ಕೆಂಗೇರಿ ಪೊಲೀಸರು ಅತ್ಯಂತ ಕಠಿಣ ಕಾಯ್ದೆಗಳ ಅಡಿಯಲ್ಲಿ ಮೊಕದ್ದಮೆ ಹೂಡಿದ್ದಾರೆ. ಇವರ ಮೇಲೆ ಕೊಲೆ ಯತ್ನ ಹಾಗೂ ತೀವ್ರ ಸ್ವರೂಪದ ದೈಹಿಕ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪತ್ನಿಗೆ ಹಣ ಮತ್ತು ಆಸ್ತಿಗಾಗಿ ಕಿರುಕುಳ ನೀಡಿದ್ದಕ್ಕೆ ವರದಕ್ಷಿಣೆ ಕಿರುಕುಳ ಕಾಯ್ದೆಯಡಿಯೂ ಕೇಸ್ ಹಾಕಲಾಗಿದೆ. ಹಲ್ಲೆಗೆ ಮಚ್ಚು ಬಳಸಿದ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳನ್ನೂ ದೂರಿನಲ್ಲಿ ಸೇರಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:53 pm, Tue, 14 July 26

Source link

ಬಿಡದಿ ಟೌನ್​​ಶಿಪ್​​ ವಿವಾದ: ಯೋಜನೆ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ – Kannada News | Bidadi Township Row: HD Deve Gowda Warns of Vidhana Soudha Satyagraha if Project Isn’t Scrapped

ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ
Image Credit source: PTI

ಬೆಂಗಳೂರು, ಜುಲೈ 14: ವಿವಾದಿತ ಬಿಡದಿ ಟೌನ್​​ಶಿಪ್​​ ವಿರುದ್ಧ ಅನ್ನದಾತರ ಕಿಚ್ಚು ಕಟ್ಟೆಯೊಡೆದಿರುವ ಬೆನ್ನಲ್ಲೇ ಯೋಜನೆಯನ್ನ ತಕ್ಷಣವೇ ಕೈ ಬಿಡುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. ಒಂದೊಮ್ಮೆ ರಾಜ್ಯ ಸರ್ಕಾರ ತಮ್ಮ ಮನವಿ ತಿರಸ್ಕರಿಸಿದ್ದೇ ಆದಲ್ಲಿ ಈಗಾಗಲೇ ನಿರಂತರ ಹೋರಾಟ ಮತ್ತು ಧರಣಯಲ್ಲಿ ಇರುವ ರೈತರನ್ನು ಬೆಂಬಲಿಸಿ, ನಮ್ಮ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದವರು ಎಚ್ಚರಿಸಿದ್ದಾರೆ.

ದೇವೇಗೌಡರು ಸಿಎಂಗೆ ಬರೆದ ಪತ್ರದಲ್ಲೇನಿದೆ?

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬೈರಮಂಗಲ, ಬನಗಿರಿ, ಹೊಸೂರು, ಕೆ.ಜಿ.ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ (ಭಾಗಶಃ) ಗ್ರಾಮಗಳಲ್ಲಿ ಇರುವ 7481 ಎಕರೆ 21.08 ಗುಂಟೆ ರೈತರ ಕೃಷಿ ಜಮೀನನ್ನು ವಶಪಡಿಸಿಕೊಂಡು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು 18,133 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಆದರೆ ಈಗಾಗಲೇ ರಾಮನಗರ ಮತ್ತು ಕನಕಪುರ ತಾಲೂಕುಗಳಲ್ಲಿ ಸಾವಿರಾರು ಎಕರೆ ರೈತರ ಕೃಷಿಭೂಮಿಯನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಪ್ರದೇಶ ಮಂಡಳಿಯಿಂದ ವಶಪಡಿಸಿಕೊಂಡು ಕಾರ್ಖಾನೆಗಳನ್ನು ಸ್ಥಾಪಿಸಲು, ಅಭಿವೃದ್ಧಿ ಪಡಿಸಿದ ಕೈಗಾರಿಕಾ ಪ್ರದೇಶವನ್ನು ಹಂಚಿದೆ.

ಇದನ್ನೂ ಓದಿ: ರಾಮನಗರದಲ್ಲಿ ಭುಗಿಲೆದ್ದ ಟೌನ್​​ಶಿಪ್ ಕಿಚ್ಚು; ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

ಸರ್ಕಾರಿ ದಾಖಲಾತಿಗಳ ಪ್ರಕಾರ ಬಿಡದಿ ಸಮಗ್ರ ಉಪನಗರ ಯೋಜನಗೆ ಹೊರಡಿಸಿರುವ ಅಂತಿಮ ಅಧಿಸೂಚನೆಯಲ್ಲಿ ನಮೂದು ಆಗಿರುವಂತೆ 10,580 ಸಣ್ಣ ರೈತರಾಗಿರುತ್ತಾರೆ. ಈ ಪೈಕಿ ಶೇ. 82ರಷ್ಟು ರೈತರು ಒಂದು ಎಕರೆಗಿಂತ ಕಮ್ಮಿ ಹಿಡುವಳಿ ಹೊಂದಿರುವ ಅತಿ ಸಣ್ಣ ರೈತರು ಆಗಿರುತ್ತಾರೆ. ಸುಮಾರು 2555 ರೈತರು 5 ಗುಂಟೆಗಿಂತ ಕಮ್ಮಿ ಕೃಷಿ ಜಮೀನು ಹೊಂದಿರುತ್ತಾರೆ. ನಿಮಗೆ ತಿಳಿದಿರುವಂತೆ ಒಂದು ಸಾವಿರ ಎಕರೆ ಅಂಗಳವುಳ್ಳ ಮತ್ತು ಹಲವು ದಶಕಗಳಿಂದ ನೀರಾವರಿಗೆ ಆಶ್ರಯವಾಗಿದ್ದ ಭೈರಮಂಗಳ ಕೆರೆಯು ಇಂದು ವೃಷಭಾವತಿ ಕಣಿವೆಯಿಂದ ಬರುವ ತ್ಯಾಜ್ಯದ ನೀರು ಮತ್ತು ಕೈಗಾರಿಕ ಮಾಲಿನ್ಯ ನೀರಿನಿಂದ ತುಂಬಿ ಕೆರೆ ಅಂಗಳ ನೊರೆ ಮತ್ತು ಕಳೆಯಿಂದ ಅವೃತವಾಗಿದೆ. ಇದರಿಂದ ಸುತ್ತು-ಮುತ್ತಲಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ನಾಗರೀಕರು ಮತ್ತು ಜಾನುವಾರುಗಳ ಮೇಲೆ ಪರಿಸರ ಮಾಲಿನ್ಯ, ಕಲುಷಿತ ನೀರಿನ ವಾಸನೆಯಿಂದ ತೀವ್ರತರವಾದ ಆರೋಗ್ಯ ಸಮಸ್ಯೆ ಉಂಟಾಗಿದೆ.

ಅಲ್ಲದೇ ರಾಜ್ಯ ಸರ್ಕಾರ ಸಣ್ಣ ನೀರಾವರಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಂದಾಜು 300 ಕೋಟಿ ರೂ. ವೆಚ್ಚದಲ್ಲಿ ಈ ಕೆರೆಯನ್ನು ಪುನರ್ ಜೀವನಗೊಳಿಸಲು ಕೈಗೊಂಡಿರುವ ಯೋಜನೆಗಳು ದಶಕಗಳಿಂದ ನೆನೆಗುದಿಗೆ ಬಿದ್ದಿವೆ. ಇಂತಹ ಪರಿಸ್ಥಿತಿಯಲ್ಲಿ ಭೈರಮಂಗಲ ಕೆರೆಯ ಪಕ್ಕದಲ್ಲಿ ಸಮಗ್ರ ಉಪನಗರ ಯೋಜನೆಯನ್ನು ಕೈಗೊಂಡು ಸುತ್ತಮುತ್ತಲಿನ ಪರಿಸರಕ್ಕೆ ಧಕ್ಕೆ ತರುವುದು ಸಾರ್ವಜನಿಕ ದೃಷ್ಠಿಯಲ್ಲಿ ಒಳ್ಳೆಯದಲ್ಲ ಎಂದು ಹೆಚ್​​ಡಿಡಿ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದ ಬಳಿ ಪ್ರತಿಭಟನೆ ಎಚ್ಚರಿಕೆ

ತಮ್ಮ 7 ದಶಕಗಳ ಸಾರ್ವಜನಿಕ ಜೀವನದಲ್ಲಿ ರಾಜ್ಯ ಮತ್ತು ದೇಶದ ರೈತರ ಹಿತಕ್ಕೆ ಶ್ರಮಿಸುತ್ತಿದ್ದೇನೆ ಹಾಗೂ ಅಧಿಕಾರ ತ್ಯಾಗ ಮಾಡಿದ್ದೇನೆ. ರಾಜ್ಯ ಸರ್ಕಾರ ನನ್ನ ಮನವಿಯನ್ನು ತಿರಸ್ಕರಿಸಿದರೆ ಹಾಗೂ ತಮ್ಮ ಈ ಕೂಗಿಗೆ ಕಿವಿಕೊಡದೆ ಇದ್ದರೆ, ವಿಧಾನಸೌಧದ ಆವರಣದಲ್ಲಿನ ಗಾಂಧೀಜಿ ಪ್ರತಿಮೆ ಮುಂದೆ ಕುಳಿತು ಸತ್ಯಾಗ್ರಹ ನಡೆಸುತ್ತೇನೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಲು ಇಚ್ಚಿಸುತ್ತೇನೆ ಎಂದೂ ದೇವೇಗೌಡರು ಪತ್ರಮುಖೇನ ಸಿಎಂಗೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:49 pm, Tue, 14 July 26

Source link

‘ರಾಮ ಮಂದಿರದ ಬಗ್ಗೆ ಮಾತನಾಡಿದ್ದನ್ನು ಸಹಿಸದೇ ಈ ರೀತಿ ಮಾಡಿದ್ದಾರೆ’; ಕಿಡಿಕಾರಿದ ಅನುಪಮ್ ಖೇರ್ – Kannada News | Anupam Kher Opens Up on Ram Mandir Donation Row and Shri Ram Bhoomi Shooting in Ayodhya

ಬಾಲಿವುಡ್ ಹಿರಿಯ ನಟರಾದ ಅನುಪಮ್ ಖೇರ್ (Anupam Kher) ಮತ್ತು ನಸೀರುದ್ದೀನ್ ಶಾ ನಡುವಿನ ವೈಮನಸ್ಸಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗಿದೆ. ರಾಜಕೀಯ ವಿಚಾರವಾಗಿ ನಸೀರುದ್ದೀನ್ ಶಾ ಅವರು ಅನುಪಮ್ ಅವರನ್ನು ಕೋಡಂಗಿ ಎಂದು ಕರೆದಿದ್ದರು. ಈ ವಿಡಿಯೋ ವೈರಲ್ ಆಗಿದ್ದಕ್ಕೆ ಅನುಪಮ್ ಖೇರ್ ಈಗ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮಿಬ್ಬರ ನಡುವಿನ ಇಂದಿನ ಸಂಬಂಧ ಹೇಗಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಹಳೆಯ ವಿಡಿಯೋ ವೈರಲ್ ಆದದ್ದಕ್ಕೆ ಅನುಪಮ್ ಬೇಸರ:
ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಹಂಚಿಕೊಂಡಿರುವ ಅನುಪಮ್ ಖೇರ್ ಅವರು ವಿರೋಧಿಗಳ ವಿರುದ್ಧ ಕಿಡಿಕಾರಿದ್ದಾರೆ. ಇತ್ತೀಚೆಗೆ ರಾಮ್ ಮಂದಿರದ ದೇಣಿಗೆ ವಿವಾದದ ಬಗ್ಗೆ ತಾವು ಮಾತನಾಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ‘ನಾನು ರಾಮ್ ಮಂದಿರದ ಬಗ್ಗೆ ಆಡಿದ ಮಾತುಗಳು ಕೆಲವು ಜನರಿಗೆ ಇಷ್ಟವಾಗಲಿಲ್ಲ. ನನ್ನನ್ನು ಗುರಿಯಾಗಿಸಲು ಅವರಿಗೆ ಬೇರೆ ಏನೂ ಸಿಗದಿದ್ದಾಗ, ಈ 6 ವರ್ಷಗಳ ಹಳೆಯ ವಿಡಿಯೋವನ್ನು ಹುಡುಕಿ ವೈರಲ್ ಮಾಡಿದ್ದಾರೆ’ ಎಂದು ಅನುಪಮ್ ಹೇಳಿದ್ದಾರೆ.

ಇಬ್ಬರ ನಡುವೆ ಈಗಿನ ಸಂಬಂಧ ಹೇಗಿದೆ?

ಹಳೇ ವಿವಾದವನ್ನು ತಾವು ಈಗಾಗಲೇ ಮರೆತಿರುವುದಾಗಿ ಅನುಪಮ್ ಖೇರ್ ತಿಳಿಸಿದ್ದಾರೆ. ‘ನಿಜ ಹೇಳಬೇಕೆಂದರೆ ನಾನು ಮತ್ತು ನಸೀರುದ್ದೀನ್ ಶಾ ಈಗ ಒಳ್ಳೆಯ ಸ್ನೇಹಿತರು. ನಾವಿಬ್ಬರು ಇತ್ತೀಚೆಗೆ ಭೇಟಿಯಾಗಿ ಒಬ್ಬರನ್ನೊಬ್ಬರು ಅಪ್ಪಿಕೊಂಡು ಗೌರವ ಹಂಚಿಕೊಂಡಿದ್ದೇವೆ’ ಎಂದು ಅನುಪಮ್ ಸ್ಪಷ್ಟಪಡಿಸಿದ್ದಾರೆ. 2025ರಲ್ಲೇ ನಸೀರುದ್ದೀನ್ ಶಾ ಅವರು ಖುದ್ದಾಗಿ ಭೇಟಿಯಾಗಿ ತಮಗೆ ಕ್ಷಮೆ ಕೇಳಿದ್ದರು ಎಂಬ ವಿಷಯವನ್ನೂ ಅವರು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ‘ಶ್ರೀ ರಾಮ ಭೂಮಿ’ಯಲ್ಲಿ ಅನುಪಮ್ ಖೇರ್, ಅಶೋಕ್ ಸಿಂಘಾಲ್ ಪಾತ್ರದಲ್ಲಿ ನಟನೆ

ರಾಮ್ ಮಂದಿರ ವಿವಾದದ ಬಗ್ಗೆ ಮರು ಮಾತು

ಪ್ರಸ್ತುತ ಅಯೋಧ್ಯೆಯಲ್ಲಿ ‘ಶ್ರೀ ರಾಮ್ ಭೂಮಿ’ ಚಿತ್ರದ ಶೂಟಿಂಗ್‌ನಲ್ಲಿ ಅನುಪಮ್ ಬ್ಯುಸಿಯಾಗಿದ್ದಾರೆ. ದೇಣಿಗೆ ಕಳ್ಳತನದ ಬಗ್ಗೆ ಮಾತನಾಡಿದ ಅವರು, ‘ಕೆಲವು ಜನರ ತಪ್ಪು ಕೆಲಸಗಳಿಂದ ಮಂದಿರದ ಪವಿತ್ರತೆಗೆ ಧಕ್ಕೆ ಬರುವುದಿಲ್ಲ. ನಮ್ಮ ಸನಾತನ ಧರ್ಮ ಯುಗ ಯುಗಗಳಿಂದಲೂ ಇದೆ. ಆದರೆ ತಪ್ಪು ಮಾಡಿದ ಕಳ್ಳರನ್ನು ಹಿಡಿದು ಕಠಿಣ ಶಿಕ್ಷೆ ನೀಡಲೇಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫಿಫ್ಟಿ ಮತ್ತು ಫಿಫ್ಟಿ ಪ್ಲಸ್: 2 ದಾಖಲೆಗಳ ಮೇಲೆ ಕೊಹ್ಲಿ ಕಣ್ಣು!

Source link

Exit mobile version