ಶಾಲಾ ಮಕ್ಕಳ ನೆಚ್ಚಿನ ಜಂಕ್ ಫುಡ್ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು: ನೂರಕ್ಕೂ ಹೆಚ್ಚು ಕಡೆ ಭರ್ಜರಿ ರೇಡ್! – Kannada News | Junk Food Crackdown: Food Safety Department Raids Outlets Near Bengaluru Schools
ಬೆಂಗಳೂರು, ಜುಲೈ 14: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸ್ಥೂಲಕಾಯ (Obesity) ಮತ್ತು ಫ್ಯಾಟಿ ಲಿವರ್ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಅನಾರೋಗ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಶಾಲಾ-ಕಾಲೇಜು ಮಕ್ಕಳ ಫೇವರೆಟ್ ಕುರುಕಲು ತಿಂಡಿಗಳಾದ ಚಿಪ್ಸ್, ಬಜ್ಜಿ, ಬೋಂಡಾ, ಬೋಟಿ ಸೇರಿದಂತೆ ವಿವಿಧ ಜಂಕ್ ಫುಡ್ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಶಾಲಾ-ಕಾಲೇಜು, ಹಾಸ್ಟೆಲ್ಗಳ ಸುತ್ತಮುತ್ತ ಮೆಗಾ ಡ್ರೈವ್! ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತಿರುವ ಆಹಾರ ಸುರಕ್ಷತಾ ಇಲಾಖೆಯು…