Headlines

ಬಂಕಿಪುರ ಉಪಚುನಾವಣೆ : ಪ್ರಶಾಂತ್ ಕಿಶೋರ್ ಕುಟುಂಬದ ಒಟ್ಟು ಆಸ್ತಿ 198 ಕೋಟಿ ರೂ.ಗೂ ಅಧಿಕ! – Kannada News | Prashant Kishor’s Rs198 Crore Assets Declared for Bankipur By Election Nomination

ಪಾಟ್ನಾ, ಜುಲೈ 14: ಚುನಾವಣಾ ರಾಜಕೀಯಕ್ಕೆ ಪ್ರಥಮ ಬಾರಿಗೆ ನೇರವಾಗಿ ಧುಮುಕಿರುವ ಪ್ರಶಾಂತ್ ಕಿಶೋರ್(Prashanth Kishor), ಜುಲೈ 30ರಂದು ನಡೆಯಲಿರುವ ಬಂಕಿಪುರ ವಿಧಾನಸಭಾ ಉಪ ಚುನಾವಣೆ(Assembly Election)ಗಾಗಿ ಸೋಮವಾರ ರೋಡ್ ಶೂ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಶಾಂತ್ ಕಿಶೋರ್ ಹಾಗೂ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರ ಒಟ್ಟು ಕುಟುಂಬದ ಆಸ್ತಿ ಮೌಲ್ಯ ಬರೋಬ್ಬರಿ 198 ಕೋಟಿ ರೂ.ಗೂ ಅಧಿಕ ಎಂದು ಘೋಷಿಸಲಾಗಿದೆ. ಅವರು…

Read More

Navagrahas in Temples: ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಏಕೆ ಇರುವುದಿಲ್ಲ? ಇದರ ಹಿಂದಿನ ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Navagrahas in Temples: Why Ancient Vaishnava Shrines Lack Them While Shiva Temples Don’t

ಹಿಂದೂ ಧರ್ಮದಲ್ಲಿ ನವಗ್ರಹಗಳಿಗೆ ವಿಶೇಷ ಮಹತ್ವವಿದೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತು ಈ ಒಂಬತ್ತು ಗ್ರಹಗಳು ಮಾನವನ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಆದ್ದರಿಂದ ದೇವಾಲಯಗಳಿಗೆ ತೆರಳುವ ಅನೇಕ ಭಕ್ತರು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ಆಶೀರ್ವಾದ ಪಡೆಯುತ್ತಾರೆ. ಆದರೆ ಒಂದು ಕುತೂಹಲಕಾರಿ ವಿಷಯವೆಂದರೆ, ಅನೇಕ ಪ್ರಾಚೀನ ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪಗಳು ಕಾಣಿಸುವುದಿಲ್ಲ. ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಇಲ್ಲದಿರಲು ಕಾರಣವೇನು? ಆಧ್ಯಾತ್ಮಿಕ…

Read More

ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ – Kannada News | Udupi Sri Krishna Mutt Adi Shankaracharya controversy: Harikatha Artist Apologises, Shirur Mutt Issues Clarification

ಹರಿಕಥೆ ಕಲಾವಿದೆ ಹಾಗೂ ಶಿರೂರು ಮಠದ ಸ್ಪಷ್ಟನೆImage Credit source: tv9 ಉಡುಪಿ, ಜುಲೈ 14: ಉಡುಪಿ  (Udupi) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಕಲಾವಿದೆ, ‘ಯಾರನ್ನೂ ನಿಂದಿಸುವ ಉದ್ದೇಶ ನಮಗಿರಲಿಲ್ಲ….

Read More

ಮಂಗಳೂರಿನಲ್ಲಿ ಮತ್ತೆ 11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ – Kannada News | 11 More Illegal Bangladeshi Immigrants Detained in Mangaluru During Police Crackdown; Total Reaches 17

11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನImage Credit source: Mangalore Police ಮಂಗಳೂರು, ಜುಲೈ 14: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada)  ಮಂಗಳೂರು (Mangaluru) ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ…

Read More

ಶಸ್ತ್ರಚಿಕಿತ್ಸೆ ಮಾಡದೆ ನಿರ್ಲಕ್ಷ್ಯ, ಮಹಿಳೆ ಸಾವು: ಜಯದೇವ ಹೃದ್ರೋಗ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ – Kannada News | Jayadeva Hospital Negligence Allegation: Family Claims 65 Year Old Woman Died After Delay in Heart Surgery

ಬೆಂಗಳೂರು, ಜುಲೈ 14: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿರುದ್ಧ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪ ಕೇಳಿಬಂದಿದೆ. 65 ವರ್ಷದ ಮಾಯಮ್ಮ ಎಂಬ ಮಹಿಳೆಗೆ ತುರ್ತು ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೂ, ಸಮಯಕ್ಕೆ ಚಿಕಿತ್ಸೆ ನೀಡದೆ ವಿಳಂಬ ಮಾಡಿದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರ ಪ್ರಕಾರ, ಕಳೆದ ಶುಕ್ರವಾರ ಮಾಯಮ್ಮ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ಬಳಿಕ ತಕ್ಷಣ ಓಪನ್ ಹಾರ್ಟ್ ಸರ್ಜರಿ ಅಗತ್ಯವಿದೆ…

Read More

Video: ಸುಪ್ರೀಂ ಕೋರ್ಟ್ ಖಡಕ್ ಸೂಚನೆ; ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ! – Kannada News | Supreme Court Takes Serious Note of Ayodhya Ram Mandir Donation Theft Case, Issues Notices

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣವು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದ್ದು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು, ಅಯೋಧ್ಯೆ ಕಾಣಿಕೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸ್ತುತ ತನಿಖೆ ನಡೆಸುತ್ತಿರುವ ಎಸ್ಐಟಿಗೆ, ಪ್ರಕರಣದ ಪ್ರಗತಿ ವರದಿಯನ್ನು ಒಂದು…

Read More

ಚಂದ್ರದ್ರೋಣ ಪರ್ವತ ಚಾರಣ ದುರಂತದ ಎಫೆಕ್ಟ್: ಇನ್ನೂ ಆರಂಭವಾಗದ ಟ್ರೆಕಿಂಗ್, ಚಾರಣ ಪ್ರಿಯರ ಪರದಾಟ! – Kannada News | Trekking Ban in Karnataka: Bengaluru Trekking Spots Closed Awaiting New SOP Rules

ಬೆಂಗಳೂರು, ಜುಲೈ 14: ಮಡಿಕೇರಿ ಹಾಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಡೆದ ಚಾರಣ (Trekking) ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಟ್ರೆಕಿಂಗ್ ಚಟುವಟಿಕೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಿತ್ತು. ಚಾರಣಿಗರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹೊಸ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಗೆ ತರುವವರೆಗೆ ನಿರ್ಬಂಧ ಹೇರಲಾಗಿತ್ತು. ಆದರೆ, ಇಷ್ಟು ದಿನ ಕಳೆದರೂ ಎಸ್‌ಒಪಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸದ ಕಾರಣ ರಾಜ್ಯದ ಹಲವೆಡೆ ಟ್ರೆಕಿಂಗ್ ಇನ್ನೂ ಆರಂಭವಾಗಿಲ್ಲ. ಇದು ಚಾರಣ ಪ್ರಿಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ….

Read More

ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ 1ನೇ ಸ್ಥಾನ – Kannada News | Yash starrer Toxic Tops IMDb Most Anticipated Films List, Setting New Records

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic) ಸದ್ಯ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಈ ಚಿತ್ರದ ವಿರುದ್ಧ ಎಷ್ಟೇ ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ, ಯಾವುದೂ ಚಿತ್ರದ ಕ್ರೇಜ್‌ಗೆ ಧಕ್ಕೆ ತರಲು ಸಾಧ್ಯವಾಗಿಲ್ಲ. ಸಿನಿಮಾ ರಿಲೀಸ್ ವಿಳಂಬ ಆದರೂ ಚಿತ್ರದ ಮೇಲಿರುವ ನಿರೀಕ್ಷೆ ಒಂದುಚೂರು ಕಮ್ಮಿ ಆಗಿಲ್ಲ ಎಂಬುದಕ್ಕೆ ಐಎಂಡಿಬಿ ಬಿಡುಗಡೆ ಮಾಡಿರುವ ಹೊಸ ಪಟ್ಟಿಯೇ ಸಾಕ್ಷಿ. ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ…

Read More

ನಾವು ಹೆದರಲ್ಲ… ಕೊಹ್ಲಿ, ರೋಹಿತ್​​ಗೆ ಡಕೆಟ್ ಸವಾಲು! – Kannada News | IND vs ENG: Ben Duckett issues bold warning to Virat Kohli, Rohit Sharma

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದ್ದರೇನಂತೆ, ನಾವು ಯಾರಿಗೂ ಹೆದರುವುದಿಲ್ಲ… ಹೀಗಂದಿರುವುದು ಮತ್ಯಾರೂ ಅಲ್ಲ, ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್. ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಕೆಟ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್​ಪ್ರೀತ್ ಬುಮ್ರಾ ಅವರಂತಹ ದಿಗ್ಗಜ ಆಟಗಾರರು ಭಾರತ ತಂಡಕ್ಕೆ ಮರಳಿರುವುದು ದೊಡ್ಡ ಸವಾಲೇ ಸರಿ. ಆದರೆ ಇದಕ್ಕೆ ಹೆದರಿ ಇಂಗ್ಲೆಂಡ್ ತನ್ನ ಆಕ್ರಮಣಕಾರಿ ಶೈಲಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ …

Read More

ದಿಗ್ಗಜರ ಪುನರ್ಮಿಲನ: ಇದುವೇ ಟೀಮ್ ಇಂಡಿಯಾದ ನೈಜ ಬಲ – Kannada News | Jasprit Bumrah return to ODI cricket after 968 days

ಬರೋಬ್ಬರಿ 968 ದಿನಗಳ ಬಳಿಕ ಮೂವರು ದಿಗ್ಗಜರ ಪುನರ್ಮಿಲನ. ಅಚ್ಚರಿ ಎನಿಸಿದರೂ ಇದುವೇ ಸತ್ಯ. ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾ ಜೊತೆಯಾಗಿ ಕಣಕ್ಕಿಳಿದು ಬರೋಬ್ಬರಿ 968 ದಿನಗಳು ಕಳೆದಿವೆ. ಅಂದರೆ ಈ ಮೂವರು ಮೂರು ವರ್ಷಗಳ ಹಿಂದೆ ಜೊತೆಯಾಗಿ ಏಕದಿನ ಪಂದ್ಯವಾಡಿದ್ದರು. ಇದಾದ ಬಳಿಕ ಬುಮ್ರಾ ಭಾರತದ ಪರ ಒಂದೇ ಒಂದು ಏಕದಿನ ಪಂದ್ಯವಾಡಿಲ್ಲ. ಕೊನೆಯ ಬಾರಿ ಮೂವರು ಕಣಕ್ಕಿಳಿದದ್ದು ಯಾವಾಗ? ನವೆಂಬರ್ 19, 2023 ರಂದು ಅಹಮದಾಬಾದ್‌ನಲ್ಲಿ ನಡೆದ…

Read More