ಗ್ರಾಹಕರಿಗೆ ಗುಡ್​ನ್ಯೂಸ್​​: ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ; ಯಾರಿಗೆಲ್ಲಾ ಅನ್ವಯ? – Kannada News | BESCOM Gruha Jyothi July Bill Update: Average Usage Calculated Without Meter Reading

ಬೆಂಗಳೂರು, ಜುಲೈ 02: ಗೃಹಜ್ಯೋತಿ (Gruha Jyothi Scheme) 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ (BESCOM)​​ ಮುಂದಾಗಿದೆ.

ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಟ್ವೀಟ್​

ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.

ಯಾರಿಗೆಲ್ಲಾ ಅನ್ವಯ 

ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು ಎಂದು ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸೂಪರ್ ಹಿಟ್ ಹಾರರ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಎಂಟ್ರಿ; ಆದರೆ ದೊಡ್ಡ ಟ್ವಿಸ್ಟ್ – Kannada News | Obsession Horror movie OTT streaming Release Date Price Catch

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು, ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 300 ಮಿಲಿಯನ್‌ ಡಾಲರ್​ಗೂ ಹೆಚ್ಚು ಹಣ ಬಾಚಿಕೊಂಡ ‘ಅಬ್ಸೆಷನ್’ (Obsession) ಸಿನಿಮಾ ಕೊನೆಗೂ ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳಿಗೆ ಲಗ್ಗೆ ಇಟ್ಟಿದೆ. ಯೂಟ್ಯೂಬರ್ ಕರಿ ಬಾರ್ಕರ್ ನಿರ್ದೇಶನದ ಈ ಜಾಗತಿಕ ಸೆನ್ಸೇಷನಲ್ ಸಿನಿಮಾ ಡಿಜಿಟಲ್ ಲೋಕಕ್ಕೆ ಪ್ರವೇಶ ಪಡೆದಿದೆಯಾದರೂ, ವೀಕ್ಷಕರಿಗೆ ಇಲ್ಲೊಂದು ಸಣ್ಣ ನಿರಾಸೆಯ ಸುದ್ದಿಯಿದೆ. ಯಾಕೆಂದರೆ, ಇದನ್ನು ಹಣ ಕೊಟ್ಟು ವೀಕ್ಷಿಸಬೇಕು.

ಈ ವರ್ಷದ ಅತಿ ದೊಡ್ಡ ಹಾರರ್ ಸರ್ಪ್ರೈಸ್ ಎನಿಸಿಕೊಂಡಿರುವ ‘ಅಬ್ಸೆಷನ್’ ಸಿನಿಮಾ ಈಗ ‘ಅಮೆಜಾನ್ ಪ್ರೈಮ್ ವಿಡಿಯೋ’ ಮತ್ತು ‘ಆಪಲ್ ಟಿವಿ’ ಮುಂತಾದ ಪ್ರಮುಖ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿದೆ. ಆದರೆ, ಚಂದಾದಾರರು ಇದನ್ನು ಉಚಿತವಾಗಿ ನೋಡಲು ಸದ್ಯಕ್ಕೆ ಸಾಧ್ಯವಿಲ್ಲ. ಅಂತಾರಾಷ್ಟ್ರೀಯ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಚಿತ್ರವನ್ನು ಖರೀದಿಸಲು 24.99 ಡಾಲರ್ ಹಾಗೂ ಬಾಡಿಗೆಗೆ ಪಡೆಯಲು 19.99 ಡಾಲರ್ ನಿಗದಿಪಡಿಸಲಾಗಿದೆ. ಎಲ್ಲರಿಗೂ ಮುಕ್ತವಾಗಿ ಸಿಗುವ ಪೂರ್ಣ ಪ್ರಮಾಣದ ಒಟಿಟಿ ಸ್ಟ್ರೀಮಿಂಗ್ ದಿನಾಂಕವನ್ನು ಚಿತ್ರತಂಡ ಈ ತಿಂಗಳ ಕೊನೆಯಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.

ವೀಕ್ಷಕರಿಗೆ ಸಿಗಲಿದೆ ಬೋನಸ್ ಕಂಟೆಂಟ್:

ಚಿತ್ರಮಂದಿರಗಳಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಆಪಲ್ ಟಿವಿ ಅಥವಾ ಪ್ರೈಮ್ ವಿಡಿಯೋದಲ್ಲಿ ಬಾಡಿಗೆ ಅಥವಾ ಹಣ ಪಾವತಿಸಿ ವೀಕ್ಷಿಸಬಹುದು. ಇದರೊಂದಿಗೆ ವೀಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಈ ಡಿಜಿಟಲ್ ಬಿಡುಗಡೆಯಲ್ಲಿ ಬಿಹೈಂಡ್ ದಿ ಸೀನ್ಸ್ ಮತ್ತು ನಿರ್ದೇಶಕ ಕರಿ ಬಾರ್ಕರ್ ಅವರ ವಿಶೇಷ ಕಾಮೆಂಟರಿ ಒಳಗೊಂಡ ಬೋನಸ್ ಕಂಟೆಂಟ್‌ಗಳನ್ನು ನೀಡಲಾಗುತ್ತಿದೆ. ಜುಲೈ 14ರಂದು ಇದರ ಡಿವಿಡಿ, ಬ್ಲೂ-ರೇ ಬಿಡುಗಡೆಯಾಗಲಿದ್ದು, ‘ಪೀಕಾಕ್’ ಒಟಿಟಿಯಲ್ಲೂ ಸಿನಿಮಾ ಸ್ಟ್ರೀಮ್ ಆಗುವ ಸಾಧ್ಯತೆಯಿದೆ.

ಕೇವಲ 700 ಸಾವಿರ ಡಾಲರ್ ಬಜೆಟ್:

ಮೇ 15ರಂದು ಫೋಕಸ್ ಫೀಚರ್ಸ್ ಮೂಲಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ, ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಅನಿರೀಕ್ಷಿತ ಬಾಕ್ಸ್ ಆಫೀಸ್ ಯಶಸ್ಸಿನ ಕಥೆಯಾಗಿದೆ. ಕೇವಲ 700 ಸಾವಿರ ಡಾಲರ್ (ಸುಮಾರು 5-6 ಕೋಟಿ ರೂ.) ಬಜೆಟ್‌ನಲ್ಲಿ ತಯಾರಾದ ಈ ಚಿತ್ರ, ಕೇವಲ ಪ್ರೇಕ್ಷಕರ ಬಾಯಿಮಾತಿನ ಪ್ರಚಾರದಿಂದಾಗಿ ಭರ್ಜರಿ ಗಳಿಕೆ ಮಾಡಿತು. ಟೊರೊಂಟೊ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಮಿಡ್‌ನೈಟ್ ಸೆಕ್ಷನ್‌ನಲ್ಲಿ ಪ್ರದರ್ಶನಗೊಂಡ ತಕ್ಷಣವೇ ಫೋಕಸ್ ಫೀಚರ್ಸ್ ಸಂಸ್ಥೆ ಇದನ್ನು 15 ಮಿಲಿಯನ್‌ ಡಾಲರ್​ಗಿಂತಲೂ ಹೆಚ್ಚು ಮೊತ್ತ ನೀಡಿ ಖರೀದಿಸಿತ್ತು. ಅಂತಿಮವಾಗಿ ಇದು ಜಾಗತಿಕವಾಗಿ 370 ಮಿಲಿಯನ್‌ ಡಾಲರ್​ಗಿಂತಲೂ ಹೆಚ್ಚು ಕಲೆಕ್ಷನ್ ಮಾಡಿ, ಫೋಕಸ್ ಫೀಚರ್ಸ್ ಸಂಸ್ಥೆಯ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಇದನ್ನೂ ಓದಿ: ಮೂವರು ಭಾರತೀಯರನ್ನು ಫಾಲೋ ಮಾಡುತ್ತಿರುವ ‘ಅಬ್ಸೆಷನ್’ ಸಿನಿಮಾ ನಿರ್ದೇಶಕ

‘ಅಬ್ಸೆಷನ್’ ಚಿತ್ರದ ಕಥೆಯೇನು?

ಕೇವಲ 20 ವರ್ಷದ ಯೂಟ್ಯೂಬರ್ ಕರಿ ಬಾರ್ಕರ್ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಮೈಕೆಲ್ ಜಾನ್ಸ್ಟನ್ (ಬೇರ್ ಪಾತ್ರದಲ್ಲಿ) ನಟಿಸಿದ್ದಾರೆ. ತನ್ನನ್ನು ತನ್ನ ಕ್ರಶ್ ಪ್ರೀತಿಸುವಂತೆ ಮಾಡಲು ‘ಒನ್ ವಿಶ್ ವಿಲೋ’ ಎಂಬ ನಿಗೂಢ ವಸ್ತುವನ್ನು ಬಳಸುವ ಹತಾಶ ಪ್ರೇಮಿಯ ಕಥೆ ಇದಾಗಿದೆ. ಆದರೆ, ಆತನ ಆಸೆ ಈಡೇರಿದ ನಂತರ ಪರಿಸ್ಥಿತಿ ಅತ್ಯಂತ ಭಯಾನಕ ತಿರುವು ಪಡೆದುಕೊಳ್ಳುತ್ತದೆ. ನಿಕ್ಕಿ (ಇಂಡಿ ನವರೇಟೆ) ಆತನಿಗೆ ಅಪಾಯಕಾರಿ ಹಾಗೂ ಗೀಳಿನ ರೀತಿಯಲ್ಲಿ ಅಂಟಿಕೊಳ್ಳುತ್ತಾಳೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2027: ಹಾರ್ದಿಕ್ ಪಾಂಡ್ಯ ಖರೀದಿ ಬಗ್ಗೆ ಮೌನ ಮುರಿದ ಸಿಎಸ್​ಕೆ ಸಿಇಒ – Kannada News | CSK CEO Denies Hardik Pandya Transfer Rumors for IPL 2027; No Talks with MI All Rounder

ಆರಂಭದಲ್ಲಿ ಕೇಳಿಬಂದ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಖರೀದಿಗೆ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗಳು ಒಲವು ತೋರಿವೆ ಎನ್ನಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈ ಎರಡು ತಂಡಗಳ ಜೊತೆಗೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸೇರಿಕೊಂಡಿದೆ ಎಂದು ವರದಿಯಾಗಿತ್ತು. ಆದರೀಗ ಹಾರ್ದಿಕ್ ಪಾಂಡ್ಯ ಖರೀದಿಯ ಸುದ್ದಿಯ ಬಗ್ಗೆ ಸಿಎಸ್​ಕೆ ಸಿಇಒ ಸ್ಪಷ್ಟನೇ ನೀಡುವ ಕೆಲಸ ಮಾಡಿದ್ದಾರೆ (PC-PTI).

Source link

Tirumala Horn Ban: ತಿರುಮಲ ಭಕ್ತರಿಗೆ ಬಿಗ್ ಅಲರ್ಟ್; ಬೆಟ್ಟದ ಮೇಲೆ ಹಾರ್ನ್ ಮಾಡಿದರೆ ಬೀಳುತ್ತೆ ದಂಡ! – Kannada News | Tirumala Horn Ban: TTD’s New Rule for Devotees and Drivers Penalty Info

ತಿರುಮಲ ಭಕ್ತರಿಗೆ ಬಿಗ್ ಅಲರ್ಟ್Image Credit source: Getty Images

ತಿರುಮಲಕ್ಕೆ ಹೋಗುವ ಶ್ರೀವಾರಿ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ನೀವು ನಿಮ್ಮ ಸ್ವಂತ ವಾಹನಗಳಲ್ಲಿ ಏಳುಬೆಟ್ಟಗಳ ಒಡೆಯನ ದರ್ಶನಕ್ಕೆ ಹೋಗುತ್ತಿದ್ದರೆ, ಈ ಹೊಸ ನಿಯಮವನ್ನು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ತಿರುಮಲ ಬೆಟ್ಟದ ಮೇಲಿನ ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡಲು ಮತ್ತು ಶಬ್ದ ಮಾಲಿನ್ಯವನ್ನು ಸಂಪೂರ್ಣವಾಗಿ ಕಡಿಮೆ ಮಾಡಲು ಟಿಟಿಡಿ ಇನ್ಮುಂದೆ ಹಾರ್ನ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

‘ಸೈಲೆಂಟ್ ತಿರುಮಲ ಇನಿಶಿಯೇಟಿವ್’ ವಿಶೇಷ ಕಾರ್ಯಕ್ರಮ:

ತಿರುಮಲ ಬೆಟ್ಟದಲ್ಲಿ ಕೇವಲ ಗೋವಿಂದ ನಾಮಸ್ಮರಣೆ ಮಾತ್ರ ಕೇಳಿಬರಬೇಕು ಎಂಬ ಉದ್ದೇಶದಿಂದ ಟಿಟಿಡಿ ‘ಸೈಲೆಂಟ್ ತಿರುಮಲ ಇನಿಶಿಯೇಟಿವ್’ (Silent Tirumala Initiative) ಹೆಸರಿನಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ನಿಯಮದ ಪ್ರಕಾರ, ತಿರುಮಲ ಘಾಟ್ ರಸ್ತೆ ಮತ್ತು ಬೆಟ್ಟದ ಮೇಲಿನ ರಸ್ತೆಗಳಲ್ಲಿ ವಾಹನ ಚಾಲಕರು ಯಾವುದೇ ಕಾರಣಕ್ಕೂ ಹಾರ್ನ್ ಮಾಡುವಂತಿಲ್ಲ. ಭಕ್ತರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ತಿರುಮಲಕ್ಕೆ ಹೋಗುವ ಮುಖ್ಯ ರಸ್ತೆಗಳ ಉದ್ದಕ್ಕೂ ಮತ್ತು ಬೆಟ್ಟದ ಮೇಲೆ ಆಕರ್ಷಕ ಮಾಹಿತಿ ಬೋರ್ಡ್‌ಗಳನ್ನು ಅಳವಡಿಸಲಾಗಿದೆ.

ವಿಐಪಿ ವಾಹನಗಳಿಗೂ ಅನ್ವಯಿಸಲಿದೆ ನಿಯಮ:

ಟಿಟಿಡಿ ಜಾರಿಗೆ ತಂದಿರುವ ಈ ಹೊಸ ನಿಯಮವು ಕೇವಲ ಸಾಮಾನ್ಯ ಭಕ್ತರ ವಾಹನಗಳಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ. ಸೈರನ್‌ಗಳನ್ನು ಬಳಸುವ ವಿಐಪಿ ವಾಹನಗಳು ಕೇವಲ ತುರ್ತು ಪರಿಸ್ಥಿತಿಗಳಲ್ಲಿ (Emergency) ಮಾತ್ರ ಹಾರ್ನ್ ಬಳಸಲು ಅವಕಾಶ ನೀಡಲಾಗಿದ್ದು, ಉಳಿದಂತೆ ಕಡ್ಡಾಯವಾಗಿ ಹಾರ್ನ್ ಆಫ್ ಮಾಡಿರಬೇಕು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಸಾನ್ನದ ನೀರಿಗೆ ಒಂದು ಚಿಟಿಕೆ ಕರ್ಪೂರ ಬೆರೆಸಿ; ಇದರ ಚಮತ್ಕಾರಿ ಪ್ರಯೋಜನಗಳು ಇಲ್ಲಿವೆ…

ಹೆಚ್ಚುತ್ತಿರುವ ವಾಹನ ದಟ್ಟಣೆ ಮತ್ತು ಶಬ್ದ ಮಾಲಿನ್ಯ:

ಹಿಂದಿನ ದಿನಗಳಿಗೆ ಹೋಲಿಸಿದರೆ ಇತ್ತೀಚೆಗೆ ತಿರುಮಲದಲ್ಲಿ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಹಿಂದೆ ಪ್ರತಿದಿನ ಸರಾಸರಿ 8,000 ವಾಹನಗಳು ಬರುತ್ತಿದ್ದರೆ, ಪ್ರಸ್ತುತ ದಿನಕ್ಕೆ 10,000 ಕ್ಕೂ ಹೆಚ್ಚು ವಾಹನಗಳು ಬೆಟ್ಟವನ್ನು ತಲುಪುತ್ತಿವೆ. ವಾರಾಂತ್ಯ (Weekends), ಹಬ್ಬದ ದಿನಗಳು ಮತ್ತು ಬೇಸಿಗೆ ರಜೆಯ ಅವಧಿಯಲ್ಲಿ ಅಲಿಪಿರಿ ಚೆಕ್ ಪೋಸ್ಟ್‌ನಲ್ಲಿ ವಾಹನಗಳ ದೀರ್ಘ ಸರತಿ ಸಾಲು ಕಾಣಸಿಗುತ್ತದೆ. ಇದರಿಂದಾಗಿ ಶಬ್ದ ಮಾಲಿನ್ಯ ಹೆಚ್ಚಾಗುತ್ತಿರುವುದನ್ನು ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಾದಿದೆ ದಂಡ:

ಸಾಮಾನ್ಯವಾಗಿ ಧಾರ್ಮಿಕ ಕ್ಷೇತ್ರಗಳು ಮತ್ತು ದೇವಸ್ಥಾನಗಳ ಸುತ್ತಮುತ್ತಲಿನ ಪ್ರದೇಶಗಳನ್ನು ‘ನಿಶ್ಯಬ್ದ ವಲಯ’ (Silence Zone) ಎಂದು ಘೋಷಿಸಲಾಗುತ್ತದೆ. ನಿಯಮಗಳ ಪ್ರಕಾರ ಇಲ್ಲಿ ಶಬ್ದದ ತೀವ್ರತೆಯು ಹಗಲಿನಲ್ಲಿ 50 ಡೆಸಿಬಲ್ ಮತ್ತು ರಾತ್ರಿಯಲ್ಲಿ 40 ಡೆಸಿಬಲ್ ಮೀರಬಾರದು. ಒಂದು ವೇಳೆ ಭಕ್ತರು ಅಥವಾ ವಾಹನ ಚಾಲಕರು ಈ ನಿಯಮವನ್ನು ಉಲ್ಲಂಘಿಸಿ ಅನಗತ್ಯವಾಗಿ ಹಾರ್ನ್ ಅಥವಾ ಸೈರನ್ ಬಾರಿಸಿದರೆ, ಟಿಟಿಡಿ ಜಾಗೃತ ದಳ ಮತ್ತು ಸಂಚಾರಿ ಪೊಲೀಸರು ಭಾರೀ ದಂಡ (Penalty) ವಿಧಿಸಲಿದ್ದಾರೆ. ಆದ್ದರಿಂದ, ತಿರುಮಲಕ್ಕೆ ಪ್ರಯಾಣಿಸುವ ಮುನ್ನ ಈ ನಿಯಮವನ್ನು ನೆನಪಿನಲ್ಲಿಟ್ಟುಕೊಳ್ಳಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ:

Published On – 2:56 pm, Thu, 2 July 26

Source link

ಬಿಜೆಪಿಯಲ್ಲಿ ಮುಂದುವರಿದ ಮುಖಂಡರ ಉಚ್ಚಾಟನೆ, ವಾರದಲ್ಲಿ 2ನೇ ವಿಕೆಟ್ ಪತನ! – Kannada News | After mg mahesh satish kadathanamale suspended from bjp for 6 years over anti party activities

ಬೆಂಗಳೂರು, (ಜುಲೈ 02): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮುಖಂಡರ ಉಚ್ಚಾಟನೆ ಪರ್ವ ಮುಂದುವರೆದಿದೆ. ಮೊನ್ನೆ ಅಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂಜಿ ಮಹೇಶ್‌ (MG Mahesh) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು.ಪಕ್ಷದ ಹೈಕಮಾಂಡ್‌ ನಾಯಕರು ಮತ್ತು ರಾಜ್ಯ ನಾಯಕತ್ವದ ವಿರುದ್ಧ ಹಗುರವಾಗಿ ಮಾತನಾಡಿದ ಆರೋಪದ ಮೇಲೆ ಉಚ್ಛಾಟಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು (ಜುಲೈ 02) ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ (satish kadathanamale) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.

ರೈತ ಮೋರ್ಚಾ ಪ್ರಧಾ‌ನ ಕಾರ್ಯದರ್ಶಿ ಉಚ್ಛಾಟನೆ

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಹಾಗೂ ಬಮೂಲ್ ನಿರ್ದೇಶಕರಾಗಿರುವ ಆಗಿರುವ ಸತೀಶ್ ಕಡತನಮಲೆ ಅವರನ್ನು ಉಚ್ಛಾಟಿಸಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಈ ಕ್ರಮಕೈಗೊಳ್ಳಲಾಗಿದೆ. ಸತೀಶ್ ಅವರ ನಡವಳಿಕೆ ಕುರಿತು ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ಸತೀಶ್ ಕಡತನಮಲೆ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ.

ಉಚ್ಚಾಟಿಸಿದ್ದು ಯಾಕೆ?

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ (SR Vishwanath) ಸೇರಿದಂತೆ ಸ್ಥಳೀಯ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪದೇಪದೇ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಮಾಧ್ಯಮಗಳ ಮುಂದೆ ಪಕ್ಷ ಮತ್ತು ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು. ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಅತ್ಯಂತ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದು ಸ್ಥಳೀಯ ಬಿಜೆಪಿ ನಾಯಕರ ಕೆಣ್ಣಿಗೆ ಗುರಿಯಾಗಿತ್ತು.

ಬಿಜೆಪಿ ರಾಜ್ಯ ಘಟಕದ ವಕ್ತಾರ ಉಚ್ಛಾಟನೆ

ಮೊನ್ನೇ ಅಷ್ಟೇ ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂಜಿ ಮಹೇಶ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ. ಕಳೆದ ಜೂನ್‌ 19ರಂದು ನಡೆದ ಬಿಜೆಪಿಯ ಪ್ರಮುಖ ಸಭೆಯಲ್ಲಿ, ಎಂಜಿ ಮಹೇಶ್‌ ಪಕ್ಷದ ಹೈಕಮಾಂಡ್‌ ನಾಯಕರು ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಸ್ಪಷ್ಟೀಕರಣ ಕೋರಿ ಶಿಸ್ತು ಸಮಿತಿಯು ರಾಜ್ಯ ವಕ್ತಾರರಿಗೆ ನೋಟಿಸ್‌ ಜಾರಿ ಮಾಡಿತ್ತು. ಆದರೆ ತನ್ನ ನೋಟಿಸ್‌ಗೆ ಎಂಜಿ ಮಹೇಶ್‌ ನೀಡಿರುವ ಉತ್ತರ ಸಮಂಜಸವಾಗಿರಲಿಲ್ಲ. ಹೀಗಾಗಿ ಎಂಜಿ ಮಹೇಶ್‌ ವಿರುದ್ಧ ಶಿಸ್ತು ಸಮಿತಿ ನೀಡಿದ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಲ್ಲದೇ ತಕ್ಷಣದಿಂದಲೇ ಜಾರಿಗೆ ಬರುವಂತೆ ಎಂಜಿ ಮಹೇಶ್‌ ಅವರಿಗೆ ನೀಡಲಾಗಿದ್ದ ಎಲ್ಲಾ ಜವಾಬ್ದಾರಿಗಳನ್ನೂ ಪಕ್ಷ ವಾಪಸ್‌ ಪಡೆದುಕೊಂಡಿದೆ.

ಶಿಸ್ತು ಸಮಿತಿ ವರದಿಯಲ್ಲಿ ಏನಿದೆ?

ಎಂಜಿ ಮಹೇಶ್‌ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾಡಿದ ಕೀಳುಮಟ್ಟದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಯಾವುದೇ ಆಧಾರಗಳಿಲ್ಲದೇ ಅವರು ನಾಯಕತ್ವವನ್ನು ಪ್ರಶ್ನಿಸಿದ್ದು, ಇದು ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘನೆ. ಈ ಹಿನ್ನೆಲೆಯಲ್ಲಿ ಎಂಜಿ ಮಹೇಶ್‌ ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಶಿಸ್ತು ಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

NBEMS Recruitment 2026: ಕೇಂದ್ರ ಸರ್ಕಾರಿ ಕೆಲಸ ಪಡೆಯಲು ಸುವರ್ಣವಕಾಶ; ಜುಲೈ 7 ರಿಂದ ಅರ್ಜಿ ಆರಂಭ, ಹುದ್ದೆಗಳ ವಿವರ ಇಲ್ಲಿದೆ – Kannada News | NBEMS Recruitment 2026: 53 Group B/C Posts, Apply Online from July 7!

ಉದ್ಯೋಗಾಕಾಂಕ್ಷಿಗಳಿಗೆ ಒಂದು ಪ್ರಮುಖ ಮಾಹಿತಿ. ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿಯು (NBEMS) ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಆಡಳಿತಾತ್ಮಕ ಕಾರಣಗಳಿಂದಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯ ದಿನಾಂಕವನ್ನು ಮುಂದೂಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಜುಲೈ 7 ರಿಂದ ಅಧಿಕೃತವಾಗಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 31 ರವರೆಗೆ NBEMS ನ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

53 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ವಿವರ:

ಈ ನೇಮಕಾತಿ ಅಭಿಯಾನದ ಮೂಲಕ ಮಂಡಳಿಯು ವಿವಿಧ ವಿಭಾಗಗಳಲ್ಲಿ ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುದ್ದೆಗಳ ವಿವರ ಹೀಗಿದೆ:

  • ಜೂನಿಯರ್ ಅಸಿಸ್ಟೆಂಟ್: 39 ಹುದ್ದೆಗಳು
  • ಸ್ಟೆನೋಗ್ರಾಫರ್: 07 ಹುದ್ದೆಗಳು
  • ಜೂನಿಯರ್ ಅಕೌಂಟೆಂಟ್: 04 ಹುದ್ದೆಗಳು
  • ಡೆಪ್ಯುಟಿ ಡೈರೆಕ್ಟರ್ (ಮೆಡಿಕಲ್): 02 ಹುದ್ದೆಗಳು
  • ಜೂನಿಯರ್ ಪ್ರೋಗ್ರಾಮರ್: 01 ಹುದ್ದೆ

(ಗಮನಿಸಿ: ಮಂಡಳಿಯ ಅಗತ್ಯಕ್ಕೆ ಅನುಗುಣವಾಗಿ ಹುದ್ದೆಗಳ ಸಂಖ್ಯೆಯಲ್ಲಿ ಬದಲಾವಣೆಗಳಾಗಬಹುದು ಎಂದು ಸ್ಪಷ್ಟಪಡಿಸಲಾಗಿದೆ).

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ವಿವಿಧ ಹುದ್ದೆಗಳಿಗೆ ಪ್ರತ್ಯೇಕ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ:

  • ಡೆಪ್ಯುಟಿ ಡೈರೆಕ್ಟರ್ (ಮೆಡಿಕಲ್): ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ವೈದ್ಯಕೀಯ ಪದವಿ (Postgraduate Medical Degree) ಪಡೆದಿರಬೇಕು. ಗರಿಷ್ಠ ವಯೋಮಿತಿ 35 ವರ್ಷಗಳು.
  • ಜೂನಿಯರ್ ಪ್ರೋಗ್ರಾಮರ್: ಬಿ.ಇ, ಬಿ.ಟೆಕ್, ಬಿಸಿಎ ಅಥವಾ ಕಂಪ್ಯೂಟರ್ ಸೈನ್ಸ್, ಐಟಿ, ಎಲೆಕ್ಟ್ರಾನಿಕ್ಸ್ ವಿಷಯಗಳಲ್ಲಿ ಪದವಿ ಪಡೆದಿರಬೇಕು.
  • ಜೂನಿಯರ್ ಅಕೌಂಟೆಂಟ್: ಗಣಿತ, (Statistics) ಅಥವಾ ವಾಣಿಜ್ಯ (Commerce) ವಿಷಯದಲ್ಲಿ ಪದವಿ ಹೊಂದಿರಬೇಕು.
  • ಸ್ಟೆನೋಗ್ರಾಫರ್ ಮತ್ತು ಜೂನಿಯರ್ ಅಸಿಸ್ಟೆಂಟ್: 12ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹಾಗೂ ಸಂಬಂಧಿತ ಸ್ಕಿಲ್ ಹೊಂದಿರಬೇಕಾಗುತ್ತದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಶುಲ್ಕದ ವಿವರ:

  • ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ (General/OBC/EWS) ಅಭ್ಯರ್ಥಿಗಳಿಗೆ: 1,500 ಅರ್ಜಿ ಶುಲ್ಕದೊಂದಿಗೆ ಶೇ.18 ಜಿಎಸ್‌ಟಿ ಪಾವತಿಸಬೇಕಾಗುತ್ತದೆ.
  • ಎಸ್ಸಿ, ಎಸ್ಟಿ, ದಿವ್ಯಾಂಗ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗೆ ಇರಲಿದೆ?

ಈ ನೇಮಕಾತಿಯಲ್ಲಿ ಯಾವುದೇ ಹುದ್ದೆಗಳಿಗೂ ಸಂದರ್ಶನ (Interview) ಇರುವುದಿಲ್ಲ. ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ (CBT) ಒಳಪಡಿಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ, ಹುದ್ದೆಯ ಅಗತ್ಯಕ್ಕೆ ಅನುಗುಣವಾಗಿ ಕಂಪ್ಯೂಟರ್ ಜ್ಞಾನ ಅಥವಾ ಸ್ಕಿಲ್ ಟೆಸ್ಟ್ (Skill Test) ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯ ದಿನಾಂಕಗಳನ್ನು ಮಂಡಳಿಯು ಶೀಘ್ರದಲ್ಲೇ ಪ್ರತ್ಯೇಕವಾಗಿ ಪ್ರಕಟಿಸಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಪ್ರಕ್ರಿಯೆ ಆರಂಭವಾದ ನಂತರ ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು:

  • NBEMS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮೊದಲು ನೋಂದಣಿ (Registration) ಮಾಡಿಕೊಳ್ಳಿ.
  • ಲಾಗಿನ್ ಆದ ನಂತರ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
  • ಕೇಳಲಾದ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ ಫಾರ್ಮ್ ಸಬ್ಮಿಟ್ ಮಾಡಿ.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಕೆಯ ಅಂತಿಮ ಸಬ್ಮಿಷನ್‌ಗೂ ಮುನ್ನ ಎಲ್ಲಾ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ. ಏಕೆಂದರೆ ಒಮ್ಮೆ ಫಾರ್ಮ್ ಸಬ್ಮಿಟ್ ಆದ ನಂತರ ಯಾವುದೇ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ 2028ರ ಚುನಾವಣೆಗೆ ಮಾಹಿತಿ ಸಂಗ್ರಹ: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ – Kannada News | HD Kumaraswamy Alleges Karnataka Govt Collecting Data for 2028 Elections in Name of Guarantee Scheme Revision

ಬೆಂಗಳೂರು, ಜುಲೈ 2: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಮತ್ತು ಮಾಹಿತಿ ಸಂಗ್ರಹವು 2028ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವುದು ಮತ್ತು ರಾಜಕೀಯ ತಂತ್ರ ರೂಪಿಸುವುದಕ್ಕಾಗಿ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವುದು, ಹಾಗೂ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳಿಗೆ ಫೋಟೋಗಳನ್ನು ಕಡ್ಡಾಯಗೊಳಿಸುವ ಮೂಲಕ, ಸರ್ಕಾರವು ಅಮಾಯಕ ಜನರಿಂದ ದತ್ತಾಂಶವನ್ನು ಸಂಗ್ರಹಿಸುತ್ತಿದೆ. ಈ ದತ್ತಾಂಶವನ್ನು ಮುಂಬರುವ 2028ರ ಚುನಾವಣಾ ತಂತ್ರಗಾರಿಕೆಗೆ ಬಳಸಿಕೊಳ್ಳಲು ಸಂಚು ರೂಪಿಸಿದೆ ಎಂದಿದ್ದಾರೆ.

ಅಲ್ಲದೆ, ಅರ್ಹ ಫಲಾನುಭವಿಗಳನ್ನು ಗುರುತಿಸುವ ನೆಪದಲ್ಲಿ, ಹಿಂದೆ ನೀಡಿದ ‘ಎಲ್ಲರಿಗೂ ಉಚಿತ’ ಎಂಬ ಭರವಸೆಯಿಂದ ಹಿಂದೆ ಸರಿದು, ಅನರ್ಹರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗುತ್ತಿದೆ. ಮೂರು ವರ್ಷಗಳ ಕಾಲ ಏನೂ ಮಾಡದ ಸರ್ಕಾರ ಈಗ ದಿಢೀರ್ ಪರಿಷ್ಕರಣೆಗೆ ಮುಂದಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

52 ಕ್ರಿಮಿನಲ್ ಪ್ರಕರಣ ವಾಪಸಾತಿಗೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: High Court Stays Withdrawal of 52 Criminal Cases

ಕರ್ನಾಟಕ ಹೈಕೋರ್ಟ್​​Image Credit source: Getty Images

ಬೆಂಗಳೂರು, ಜುಲೈ 02: 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ ಕೆಲ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. ಆದರೆ 2026 ಮೇ 27ರ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ಬ್ರೇಕ್​​ ಹಾಕಿದೆ. ಕೋಮುಗಲಭೆ ಆರೋಪಿಗಳ ಪರ ಯು.ಟಿ.ಖಾದರ್ ಶಿಫಾರಸು ಆರೋಪ ಸಂಬಂಧ ಯು.ಟಿ.ಖಾದರ್​ಗೆ ನೋಟಿಸ್ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಗೃಹ ಇಲಾಖೆ ಮತ್ತು ಅಭಿಯೋಜನೆ ಇಲಾಖೆಗೆ ನೋಟಿಸ್ ನೀಡಿದೆ.

2 ವಾರಗಳೊಳಗೆ ಉತ್ತರ ಸಲ್ಲಿಸಲು ನಿರ್ದೇಶನ

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಇದೇ ರೀತಿಯ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್‌ನ ಹಿಂದಿನ ತೀರ್ಪಿಗೆ ಪ್ರಾಥಮಿಕ ದೃಷ್ಟಿಯಿಂದ ವಿರುದ್ಧವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ವಿಬು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪ್ರಾಸಿಕ್ಯೂಷನ್ ನಿರ್ದೇಶನಾಲಯಕ್ಕೆ ನೀಡಲಾದ ನೋಟಿಸ್​​ಗೆ ಎರಡು ವಾರಗಳೊಳಗೆ ಉತ್ತರ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಆರ್​​ಎಸ್​​ಎಸ್​ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್‌ನಲ್ಲೂ ಪ್ರಿಯಾಂಕ್​​ ತಕರಾರು; ಸಚಿವರಿಗೆ ಉತ್ತರಿಸಿಯೇ ನ್ಯಾಯಾಲಯದಿಂದ ಸಮನ್ಸ್​​

ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ PIL

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಗಿರೀಶ್ ಭಾರದ್ವಾಜ್ ಎಂಬವರು ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಾಜರಾದ ವಕೀಲ ವೆಂಕಟೇಶ್ ಪಿ. ದಳವಾಯಿ, ಅಪರಾಧ ಪ್ರಕ್ರಿಯಾ ಸಂಹಿತೆ (CrPC), 1973ರ ಸೆಕ್ಷನ್ 321ರ ಅಡಿಯಲ್ಲಿ ಸರ್ಕಾರಿ ಅಭಿಯೋಜಕರಿಗೆ (Public Prosecutor) ಇರುವ ಸ್ವತಂತ್ರ ವಿವೇಚನಾ ಅಧಿಕಾರವನ್ನು ಕಾರ್ಯಾಂಗವು ಕಸಿದುಕೊಂಡಿದೆ ಎಂದು ವಾದಿಸಿದ್ದರು. ಅಲ್ಲದೆ, ಪ್ರಕರಣ ಹಿಂಪಡೆಯುವ ನಿರ್ಧಾರವು ಯಾವುದೇ ಸಾರ್ವಜನಿಕ ಹಿತಾಸಕ್ತಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿಲ್ಲ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

‘ಕಾನೂನು ಮೀರಿ ಆದೇಶ ಮಾಡಿಲ್ಲ’

ಇನ್ನು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕ್ರಮಕ್ಕೆ ತಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ಕೋರ್ಟ್​ ಆದೇಶದ ಕಾಪಿ ಸಿಕ್ಕಿದ ಬಳಿಕ ಚರ್ಚೆ ಮಾಡುತ್ತೇವೆ. ಆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಕೇಸ್​ ಕೂಡ ಸೇರಿವೆ. ಕಾನೂನು ಮೀರಿ ನಾವು ಯಾವುದೇ ಆದೇಶವನ್ನು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲೇ ಸಂಪುಟದಲ್ಲಿ ನಿರ್ಧಾರ ಮಾಡಲಾಗಿತ್ತು ಎಂದವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:19 pm, Thu, 2 July 26

Source link

ಹುಬ್ಬಳ್ಳಿ ಕಿಮ್ಸ್ ಸಾಧನೆಗೆ ಮತ್ತೊಂದು ಗರಿ: ರೋಬೋಟಿಕ್ ಶಸ್ತ್ರಚಿಕಿತ್ಸೆ ಮಾಡಿದ ಕರ್ನಾಟಕದ ಮೊದಲ ಸರ್ಕಾರಿ ಮೆಡಿಕಲ್ ಕಾಲೇಜು – Kannada News | Hubballi KIMS Becomes Karnataka First Government Medical College to Perform Successful Robotic Knee Replacement Surgery

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆImage Credit source: tv9

ಹುಬ್ಬಳ್ಳಿ, ಜುಲೈ 2: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಿಕಿತ್ಸೆಗಳು ಅತ್ಯಂತ ದುಬಾರಿಯಾಗುತ್ತಿದ್ದು, ಬಡವರು ಲಕ್ಷಾಂತರ ರೂಪಾಯಿ ವೆಚ್ಚದ ಆಪರೇಷನ್‌ಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಅತ್ಯಾಧುನಿಕ ರೋಬೋಟಿಕ್ ಯಂತ್ರದ ಸಹಾಯದಿಂದ ಮೊಣಕಾಲು ಚಿಪ್ಪು ಬದಲಾವಣೆ (Knee Joint Replacement) ಶಸ್ತ್ರಚಿಕಿತ್ಸೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಲಾಗಿದೆ. ಈ ಮೂಲಕ ರೋಬೋಟಿಕ್ ತಂತ್ರಜ್ಞಾನದಡಿ ಶಸ್ತ್ರಚಿಕಿತ್ಸೆ ನಡೆಸಿದ ಕರ್ನಾಟಕದ (Karnataka) ಮೊದಲ ಸರ್ಕಾರಿ ವೈದ್ಯಕೀಯ ಕಾಲೇಜು ಎಂಬ ಹೆಗ್ಗಳಿಕೆಗೆ ಕಿಮ್ಸ್ ಪಾತ್ರವಾಗಿದೆ.

ಒಂದೇ ದಿನದಲ್ಲಿ ಎದ್ದು ಓಡಾಡಿದ 55 ವರ್ಷದ ಮಹಿಳೆ!

ಮಂಡಿ ನೋವು ಹಾಗೂ ಮೂಳೆ ಸವಕಳಿಯ 4ನೇ ಹಂತದ (Advanced Arthritis) ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದ 55 ವರ್ಷದ ಮಹಿಳೆಯೊಬ್ಬರಿಗೆ ಕಿಮ್ಸ್‌ನ ಆರ್ಥೋಪಿಡಿಕ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್.ಎಫ್. ಕಮ್ಮಾರ್ ನೇತೃತ್ವದ ನುರಿತ ವೈದ್ಯರ ತಂಡವು ಕಳೆದ ಮಂಗಳವಾರ ಈ ರೋಬೋಟಿಕ್ ಶಸ್ತ್ರಚಿಕಿತ್ಸೆ ನೆರವೇರಿಸಿದೆ. ಹಿಂದೆಲ್ಲಾ ಇಂತಹ ಆಪರೇಷನ್‌ಗಳನ್ನು ಮ್ಯಾನುವಲ್ (ಮಾನವ ಶ್ರಮ) ಆಗಿ ಮಾಡಲಾಗುತ್ತಿತ್ತು. ಆದರೆ, ಕಿಮ್ಸ್ ಸಂಸ್ಥೆಯು ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಬರೋಬ್ಬರಿ 2.79 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ರೋಬೋಟಿಕ್ ಯಂತ್ರವನ್ನು ಇತ್ತೀಚೆಗಷ್ಟೇ ಖರೀದಿಸಿ, ಇದಕ್ಕಾಗಿ ಹೈಟೆಕ್ ಆಪರೇಷನ್ ಥಿಯೇಟರ್ (OT) ಸಿದ್ಧಪಡಿಸಿತ್ತು. ಈ ಹೊಸ ಯಂತ್ರದ ಮೂಲಕ ಚಿಕಿತ್ಸೆ ಪಡೆದ ಮಹಿಳೆ ಶಸ್ತ್ರಚಿಕಿತ್ಸೆ ಮುಗಿದ ಕೇವಲ ಒಂದೇ ದಿನದಲ್ಲಿ ಸುಲಭವಾಗಿ ಓಡಾಡುವಂತಾಗಿದ್ದಾರೆ.

ದೋಷಮುಕ್ತ ಹಾಗೂ ಶೀಘ್ರ ಗುಣಮುಖ

ರೋಬೋಟಿಕ್ ಯಂತ್ರದ ಮೂಲಕ ಶಸ್ತ್ರಚಿಕಿತ್ಸೆ ಮಾಡುವುದರಿಂದ ಯಾವುದೇ ರೀತಿಯ ಮಾನವ ದೋಷಗಳು (Human Errors) ಇರುವುದಿಲ್ಲ. ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಲು ಇದು ನೆರವಾಗುತ್ತದೆ. ರೋಗಿಗೆ ಅತ್ಯಂತ ಕಡಿಮೆ ನೋವಿರುತ್ತದೆ ಹಾಗೂ ರೋಗಿಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕಿಮ್ಸ್ ವೈದ್ಯರು ಮಾಹಿತಿ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆಗೆ ಕನಿಷ್ಠ 3 ಲಕ್ಷ ರೂ. ವೆಚ್ಚ

ಖಾಸಗಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆಗೆ ಕನಿಷ್ಠ 3 ಲಕ್ಷ ರೂಪಾಯಿಗೂ ಅಧಿಕ ಹಣ ವೆಚ್ಚವಾಗುತ್ತದೆ. ಆದರೆ, ಈ ರೋಗಿ ಬಿಪಿಎಲ್ ಕಾರ್ಡ್ ಹೊಂದಿದ್ದರಿಂದ ಸರ್ಕಾರದ ಯೋಜನೆಯಡಿ ಕಿಮ್ಸ್‌ನಲ್ಲಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ದಕ್ಷಿಣ ಭಾರತದ ಮೊದಲ ಅತ್ಯಾಧುನಿಕ ಚಾರ್ಕೋಲ್ ಘಟಕ ಆರಂಭ; ಒಣ ಕಸದಿಂದ ಉತ್ಪತ್ತಿಯಾಗಲಿದೆ ಹಸಿರು ಇದ್ದಿಲು!

ಈ ಭಾಗದ ಬಡ ರೋಗಿಗಳಿಗೆ ಈ ತಂತ್ರಜ್ಞಾನ ವರದಾನವಾಗಿದ್ದು, ರಾಜ್ಯ ಸರ್ಕಾರವು ಕಿಮ್ಸ್ ಸಂಸ್ಥೆಗೆ ಮತ್ತಷ್ಟು ಆರ್ಥಿಕ ಚೈತನ್ಯ ತುಂಬಿದರೆ ಉತ್ತರ ಕರ್ನಾಟಕದ ರೋಗಿಗಳಿಗೆ ಇನ್ನೂ ಹೆಚ್ಚಿನ ನೆರವಾಗಲಿದೆ ಎಂದು ಕಿಮ್ಸ್ ನಿರ್ದೇಶಕರು ಆಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ vs ಇಂಗ್ಲೆಂಡ್ 2ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | India vs England 2nd T20I Date, When And Where?

ಭಾರತ ಮತ್ತು ಇಂಗ್ಲೆಂಡ್ ನಡುವಣ ಬಹುನಿರೀಕ್ಷಿತ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾಗಿದ್ದು, ಹೀಗಾಗಿ ಅಭಿಮಾನಿಗಳು ದ್ವಿತೀಯ ಪಂದ್ಯಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯವು ಜುಲೈ 4 ರಂದು ಮ್ಯಾಂಚೆಸ್ಟರ್‌ನ ಐತಿಹಾಸಿಕ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

  • ಭಾರತ ಮತ್ತು ಇಂಗ್ಲೆಂಡ್​ ನಡುವಣ 2ನೇ ಟಿ20 ಪಂದ್ಯ ಶನಿವಾರ (ಜು.4) ನಡೆಯಲಿದೆ.
  • ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ಜರುಗಲಿದೆ.
  • ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7:00 ಗಂಟೆಗೆ ಶುರುವಾಗಲಿದೆ.
  • ಮೊದಲ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ ಆರಂಭವಾಗಿತ್ತು.
  • ದ್ವಿತೀಯ ಪಂದ್ಯವು ಇಂಗ್ಲೆಂಡ್​ನ ಕಾಲಮಾನ ಮಧ್ಯಾಹ್ನ 2:30 ಕ್ಕೆ ಶುರುವಾಗುವುದರಿಂದ ಭಾರತದಲ್ಲಿ 7 ಗಂಟೆಗೆ ಲೈವ್ ಇರಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

  • ನೇರ ಪ್ರಸಾರ (ಟಿವಿ): ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ.
  • ಲೈವ್ ಸ್ಟ್ರೀಮಿಂಗ್ (ಡಿಜಿಟಲ್): ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್.

ಆರಂಭದಲ್ಲೇ ಸಮಬಲ:

ಐದು ಮ್ಯಾಚ್​ಗಳ ಈ ಸರಣಿಯ ಮೊದಲ ಪಂದ್ಯವು ರದ್ದಾಗಿರುವ ಕಾರಣ ಸರಣಿ ಈಗ 0-0 ಅಂತರದಿಂದ ಸಮಬಲದಲ್ಲಿದೆ. ಅಂದರೆ ಈ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಎರಡು ಗೆಲುವು ದಾಖಲಿಸಿದರೆ ಸಾಕು. ಹೀಗಾಗಿ ಉಭಯ ತಂಡಗಳು ದ್ವಿತೀಯ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ.

ಓಲ್ಡ್ ಟ್ರಾಫರ್ಡ್ ಪಿಚ್:

ಓಲ್ಡ್ ಟ್ರಾಫರ್ಡ್ ಮೈದಾನವು ಸಮತೋಲಿತ ಪಿಚ್ ಹೊಂದಿದೆ. ಇದಾಗ್ಯೂ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಪಿಚ್ ನೆರವಾಗಲಿದ್ದು, ಪಂದ್ಯ ಮುಂದುವರಿದಂತೆ ಸ್ಪಿನ್ನರ್‌ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಬಹುದು.

ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದರಿಂದ, ಅಭಿಮಾನಿಗಳು ಈ ಪಂದ್ಯದಲ್ಲಾದರೂ ವರುಣದೇವ ಕೃಪೆ ತೋರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಶನಿವಾರದ ಹವಾಮಾನ ಮುನ್ಸೂಚನೆ ಪ್ರಕಾರ ಪಂದ್ಯಕ್ಕೆ ಹೆಚ್ಚಿನ ಮಳೆಯ ಅಡ್ಡಿ ಇರುವುದಿಲ್ಲ ಎನ್ನಲಾಗಿದೆ. ಹೀಗಾಗಿ ಓಲ್ಡ್ ಟ್ರಾಫರ್ಡ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

ಉಭಯ ತಂಡಗಳು:

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್, ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಅಪ್ಪಳಿಸಿದ ತಂದೆಯ ನಿಧನದ ಸುದ್ದಿ..!

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Source link

Exit mobile version