ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ 1ನೇ ಸ್ಥಾನ – Kannada News | Yash starrer Toxic Tops IMDb Most Anticipated Films List, Setting New Records
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic) ಸದ್ಯ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಈ ಚಿತ್ರದ ವಿರುದ್ಧ ಎಷ್ಟೇ ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ, ಯಾವುದೂ ಚಿತ್ರದ ಕ್ರೇಜ್‌ಗೆ ಧಕ್ಕೆ ತರಲು ಸಾಧ್ಯವಾಗಿಲ್ಲ. ಸಿನಿಮಾ ರಿಲೀಸ್ ವಿಳಂಬ ಆದರೂ ಚಿತ್ರದ ಮೇಲಿರುವ ನಿರೀಕ್ಷೆ ಒಂದುಚೂರು ಕಮ್ಮಿ ಆಗಿಲ್ಲ ಎಂಬುದಕ್ಕೆ ಐಎಂಡಿಬಿ ಬಿಡುಗಡೆ ಮಾಡಿರುವ ಹೊಸ ಪಟ್ಟಿಯೇ ಸಾಕ್ಷಿ. ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ…