Horoscope Today 14 July : ನಿಮ್ಮ ರಾಶಿಯ ರಹಸ್ಯಗಳು ಇಂದು ಬಹಿರಂಗ – Kannada News | Daily Horoscope 14 July 2026: What the Stars Foretell for Your Zodiac Sign

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಮಂಗಳವಾರದಂದು ಶತ್ರುಗಳ ಜಯ, ದಿನಾಂತ್ಯದಲ್ಲಿ ಶುಭವಾರ್ತೆ, ಪ್ರಯಾಣಕ್ಕೆ ತಯಾರಿ, ಪ್ರತಿಜ್ಞೆ, ಮುಂಗಡದಿಂದ ಪಾವತಿ, ಅಪಘಾತ ಸೂಚನೆ, ಕಾರ್ಯಸಾಧನೆಗೆ ಪ್ರಯತ್ನ, ಪ್ರಭಾವ ಬಳಕೆ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಧ್ರುವ, ಕರಣ : ಶಕುನಿ, ಸೂರ್ಯೋದಯ – 06 – 01 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:37 – 17:13, ಯಮಗಂಡ ಕಾಲ 09:14 – 10:50, ಗುಳಿಕ ಕಾಲ 12:25 – 14:01

ಮೇಷ ರಾಶಿ :

ಯಾರೇ ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ.‌ ನೀವು ಇಂದು ಆಲಂಕಾರಿಕ ವಸ್ತುಗಳನ್ನು ಹೆಚ್ಚು ಖರೀದಿಸುವಿರಿ. ಆಯ್ಕೆಗಳ ವಿಚಾರದಲ್ಲಿ ಗೊಂದಲದಲ್ಲಿ ಇರಬೇಕಾಗಬಹುದು. ಶತ್ರುಗಳ ಪರಾಜಯವನ್ನು ಕಂಡು ಸಂತಸಪಡುವಿರಿ. ಇಂದು ಹೆಚ್ಚು ಹುಡುಗಾಟದ ಮಾನಸಿಕತೆ ಇರಲಿದೆ ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ದುರಭ್ಯಾಸವು ಹೆಚ್ಚಾಗುವ ಸಾಧ್ಯತೆ ಇದೆ. ಸ್ನೇಹಿತರ ವಿವಾಹ ಸಮಾರಂಭದಲ್ಲಿ ಖುದ್ದಾಗಿ ಭಾಗಿಯಾಗುವಿರಿ.

ವೃಷಭ ರಾಶಿ :

ನಿಮಗೆ ಆತ್ಮವಿಶ್ವಾಸವನ್ನು ಪಡೆಯಲು ಮತ್ತು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಇನ್ನೊಬ್ಬರಿಗೆ ಹೋಲಿಸುವುದು ಅಪಮಾನವಾಗವುದು. ಇಂದು ನಿಮ್ಮ ವ್ಯಕ್ತಿತ್ವದ ಸ್ಪಷ್ಟ ಚಿತ್ರಣವನ್ನು ನಿಮ್ಮವರಿಗೆ ತೋರಿಸುವಿರಿ. ವಿದೇಶ ಪ್ರಯಾಣವನ್ನು ಮಾಡುವವರು ಹೆಚ್ಚು ಸಿದ್ಧತೆಯಲ್ಲಿ ತೊಡಗುವರು. ದಿನಾಂತ್ಯವು ಬಹಳ ಆನಂದದಲ್ಲಿ ಮುಕ್ತಾಯವಾಗುವುದು. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು.

ಮಿಥುನ ರಾಶಿ :

ನೀವು ಮತ್ತು ನಿಮ್ಮ ಸಂಗಾತಿ ಉತ್ತಮ ಸಮಯವನ್ನು ಹೊಂದಿರುತ್ತೀರಿ. ಇಂದು ನೀವು ಕುಟುಂಬದ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಏರಿಸುವಿರಿ. ಬೇಡವಾದ ಸಂಗತಿಗಳೇ ನಿಮ್ಮ ಕಿವಿಗೆ ಬೀಳಬಹುದು. ನಿಮ್ಮ ಸಾಧನೆಗೆ ಗೌರವ ಸಿಗಲಿದೆ. ಸಣ್ಣ ಆದಾಯವನ್ನೂ ಕಡೆಗಣಿಸುವುದು ಬೇಡ. ನಿಮ್ಮ ಉಳಿತಾಯಕ್ಕೆ ಬೆಲೆ ಇಂದು ಬರುವುದು. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಯಾರ ಜೊತೆಗೂ ನೇರವಾದ ಮಾತುಗಳನ್ನು ಆಡದೇ ಕುಹಕವಾಡುವಿರಿ.‌

ಕರ್ಕಾಟಕ ರಾಶಿ :

ಇಂದು ಮನೆಯ ಕಾರ್ಯವನ್ನು ನಿರ್ವಹಿಸಲು ಸಮರ್ಥರಾಗುವುದಿಲ್ಲ. ನೀವು ಇಂದು ದಿನದ ಚಟುವಟಿಕೆಗಳನ್ನು ಬದಲಾಯಿಸುವ ಮನಸ್ಸು ಮಾಡುವಿರಿ. ವೃತ್ತಿಜೀವನವು ನಿಮ್ಮನ್ನು ಕೈಬೀಸಿ ಕರೆದರೂ ನಿಮ್ಮಲ್ಲಿ ನಿರಾಸಕ್ತಿ ಇರುವುದು. ಸಾಲದ ಬಗ್ಗೆ ಹೆಚ್ಚು ಚಿಂತೆ ಮಾಡುವಿರಿ. ರಾಜಕಾರಣಿಗಳು ಅತ್ಯಂತ ಸಂತೋಷದಿಂದ ಇರುವ ದಿನವಾಗಿದೆ. ಭಾವುಕರಾಗುವ ಸಂದರ್ಭವು ಬರಬಹುದು. ಬೇಕೆಂದೇ ನಿಮ್ಮನ್ನು ಕೆಣಕಬಹುದು.

ಸಿಂಹ ರಾಶಿ :

ನೀವು ಇಂದು ಪ್ರಾಮಾಣಿಕತೆಯ ಫಲವನ್ನು ಕಾಣಲಿದ್ದೀರಿ. ಸಂಗಾತಿಯಿಂದ ಶುಭಸಮಾಚಾರವು ಬರಲಿದೆ. ಸಿಟ್ಟಿಂದ ಕೆಲಸವನ್ನು ಸಾಧಿಸಲಾಗದು. ವಾಹನದಿಂದ ಜಾರುವಿರಿ. ಅಪಾಯದ ಯಾವದೇ ಲಕ್ಷಣ ಕಾಣಿಸದು. ತಾಳ್ಮೆ ಮತ್ತು ಕ್ರಮಬದ್ಧ ತಂತ್ರದಿಂದ ಸಾಧ್ಯವಾಗುವುದು. ಮನೋರಂಜನೆಯನ್ನು ಇಷ್ಟಪಡುವಿರಿ. ಅಪರಿಚಿತರಿಗೆ ಮಾಡಿದ ಸಹಾಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ನಿಮ್ಮ ಭದ್ರತೆಯಲ್ಲಿ‌ ಲೋಪವಾಗುವ ಸಾಧ್ಯತೆ ಇದೆ.

ಕನ್ಯಾ ರಾಶಿ :

ನಿಮಗೆ ಆರ್ಥಿಕತೆಯಲ್ಲಿ ಸ್ಪಷ್ಟತೆ ಅವಶ್ಯವಾಗಿ ಬೇಕು. ಕಷ್ಟವೇ ನಿಮಗೆ ಎತ್ತರಕ್ಕೇರುವ ಸಾಧನವಾಗಲಿದೆ. ಕೆಲಸದ ತಪ್ಪನ್ನು ಯಾರಮೇಲೂ ಹಾಕದೇ ನೀವೇ ಸರಿ ಮಾಡಿಕೊಳ್ಳುವಿರಿ. ಪ್ರೇಮವ್ಯವಹಾರದಲ್ಲಿ ಸಿಕ್ಕಿಕೊಂಡು ಒದ್ದಾಡುವಿರಿ. ಮುದ್ರಣದ ವಿಚಾರದಲ್ಲಿ ಸರಿಯಾದ ನಿರ್ಧಾರ ಪಡೆಯಲಾಗದು. ಅನುಕರಣೆಯಿಂದ ನಿಮಗೆ ಅಪಾಯ ಸಾಧ್ಯತೆ ಇದೆ. ಬಂಧುಗಳ ಸಹಾಯವನ್ನು ಪಡೆದು ನೆಮ್ಮದಿಯಿಂದ ಇರಿ. ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು ಎನ್ನುವುದು ನಿಜವಾದರೂ, ಅದಕ್ಕೂ ವಿಧಾನವಿದೆ.

ತುಲಾ ರಾಶಿ :

ನಿಮ್ಮನ್ನು ಭೇಟಿ ಮಾಡಲು ಇಂದು ಆಪ್ತರು ಬರಬಹುದು. ಕೆಲಸದ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಆಗಲಿದೆ. ಮನೆಯ ಕೆಲಸ ಕಾರ್ಯಗಳು ಪರ್ವತಾಕಾರದಲ್ಲಿ ತೋರುವುದು. ಆರಂಭದ ಗೊಂದಲೂ ಆದೀತು. ವಾಹನ ಖರೀದಿಗೆ ಪರ ಊರಿಗೆ ಹೋಗುವಿರಿ. ಶತ್ರುಗಳ ಮಸಲತ್ತು ನಿಮಗೆ ಗೊತ್ತಾಗಿ ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡುವಿರಿ. ಇಂದು ಹೆಚ್ಚು ನಗುತ್ತ ಸಂತೋಷದಿಂದ ಇರುವಿರಿ. ಯಾವುದೇ ಗೌಪ್ಯವನ್ನು ನೀವು ಬಿಟ್ಟುಕೊಡಲಾರಿರಿ. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ.

ವೃಶ್ಚಿಕ ರಾಶಿ :

ನಿಮಗೆ ಉದ್ಯೋಗಕ್ಕೆ ಬೇಕಾದ ಉಪಯುಕ್ತ ಮಾಹಿತಿಯನ್ನು ಪಡೆಯುವಿರಿ. ಸ್ವಂತ ಕಾರ್ಯ ನಿಮಿತ್ತ ದೂರ ಪ್ರಯಾಣ ಮಾಡುವಿರಿ.‌ ಇಂದಿನ ನಿಮ್ಮ ಸುತ್ತಲಿನ ವಾತಾವರಣ ಕಿರಿಕಿರಿ ತರಿಸುವುದು. ಅಂದುಕೊಂಡ ಕೆಲಸವು ಪೂರ್ಣವಾಗುವುದು. ಅಪರಿಚಿತ ಕೆಲಸದಲ್ಲಿ ಮುನ್ನುಗ್ಗಲು ಭಯಪಡುವಿರಿ. ನಿಮ್ಮ ವರ್ತನೆಯು ಅಹಂಕಾರದಂತೆ ತೋರೀತು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ.

ಧನು ರಾಶಿ :

ಹೊರಗೆ ಹೋಗುವ ಎಲ್ಲ ಕೆಲಸಕ್ಕೂ ವಿರಾಮ ಕೊಟ್ಟು ಮನೆಯಲ್ಲಿ ಇದ್ದು ಆನಂದವನ್ನು ಪಡೆಯುವಿರಿ. ಯಾರದೋ ಯೋಜನೆಯನ್ನು ನೀವು ಬಳಸಿಕೊಂಡು ಪ್ರಸಿದ್ಧಿ ಪಡೆಯುವಿರಿ. ಭವಿಷ್ಯದ ಸಂಗಾತಿಯನ್ನು ಮನೆಯವರಿಗೆ ಪರಿಚಯಿಸುವಿರಿ. ಎಲ್ಲವನ್ನೂ ಕಳೆದುಕೊಂಡೆ ಎಂಬ ನೋವು ನಿಮ್ಮನ್ನು ಅಕಾರ್ಯದಲ್ಲಿ ತೊಡಗುವಂತೆ ಮಾಡೀತು. ಆರ್ಥಿಕ ಅಸಮತೋಲನವನ್ನು ಸರಿದೂಗಿಸಿಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಕೊಟ್ಟ ಹಣವನ್ನು ನೀವು ಪುನಃ ಕೇಳುವುದರಿಂದ‌ ಕಲಹವಾಗಬಹುದು.

ಮಕರ ರಾಶಿ :

ಸಂಗಾತಿಯು ಸ್ಪಂದಿಸುತ್ತಿಲ್ಲ ಸರಿಯಾಗಿ ಎಂಬ ವಿಚಾರದಲ್ಲಿ ಬೇಸರವಿರಲಿದೆ. ಮಾಧ್ಯಮದಲ್ಲಿ ಇರುವವರಿಗೆ ಒಳ್ಳೆಯ ವಿಚಾರಗಳು ತಮ್ಮ ಪ್ರಚಾರಕ್ಕೆ ಸಿಗುವುದು. ಖರ್ಚುಗಳನ್ನು ನೀವಾಗಿಯೇ ತಂದುಕೊಳ್ಳಲಿದ್ದೀರಿ. ಅಪರಿಚಿತರು ನಿಮ್ಮ ಸ್ನೇಹದ ನೆಪದಲ್ಲಿ ಬರಬಹುದು. ಬೇಕಾದಷ್ಟು ಅವಕಾಶವಿದ್ದರೂ ನೀವು ಬಳಸಿಕೊಳ್ಳದೇ ಸುಮ್ಮನಾಗುವಿರಿ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು.

ಕುಂಭ ರಾಶಿ :

ಕಾರ್ಯದ ಸ್ಥಳದಿಂದ ಒಳ್ಳೆಯ ಸುದ್ದಿಗಳು ಬರಲಿವೆ. ಇಂದು ಭೂಮಿಗೆ ಸಂಬಂಧಿಸಿದಂತೆ ಲಾಭ ಪಡೆಯುವಿರಿ. ಇಂದು ನಿಮ್ಮ ಸ್ವಂತ ಆಲೋಚನೆಗಳಿಂದ ಮುಂದುವರಿಯಿರಿ. ಇನ್ನೊಬ್ಬರ ಮಾತಿಗೂ ಬೆಲೆ ಇರಲಿ. ಸಂಗಾತಿಯನ್ನು ದ್ವೇಷಿಸುವಿರಿ. ವ್ಯಾಪಾರದಲ್ಲಿ ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ.‌ ಹೆಚ್ಚಿನ ನಿರೀಕ್ಷೆಯಲ್ಲಿ ಇರುವುದು ಬೇಡ. ನಿಮ್ಮ ಅನುಕೂಲತೆಗೆ ತಕ್ಕಂತೆ ಇಂದಿನ ದಿನವನ್ನು ಇಟ್ಟುಕೊಳ್ಳಿ. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ.

ಇದನ್ನೂ ಓದಿ: ವಾರ ಭವಿಷ್ಯ ಜುಲೈ 12-18, 2026: ಆರೋಗ್ಯ, ಆರ್ಥಿಕತೆ, ವಿದ್ಯಾಭ್ಯಾಸ ಎಲ್ಲ ರಾಶಿಗಳ ಭವಿಷ್ಯ

ಮೀನ ರಾಶಿ :

ಇಂದು ನಿಮ್ಮ ನೋವನ್ನು ಯಾರ ಜೊತೆಯೂ ಹಂಚಿಕೊಳ್ಳಲು ಹೋಗುವುದಿಲ್ಲ. ಕಷ್ಟವಾದರೂ ಕೆಲಸವನ್ನು ಮಾಡಬೇಕಾದೀತು. ಹಿಂಸೆಯ ಸ್ವಭಾವವು ನಿಮಗೆ ಇಷ್ಟವಾಗದು. ವಿದ್ಯಾಭ್ಯಾಸದಿಂದ ಗಮನ ಬೇರೆಡೆಗೆ ಹೋಗುವ ಸಾಧ್ಯತೆ. ಹೂಡಿಕೆಯಲ್ಲಿ ನಿಮಗೆ ಗೊದಲವಾಗಬಹುದು. ಅಪರೂಪದ ಬಂಧುಗಳ ಭೇಟಿಯಾಗಲಿದೆ. ಇನ್ನೊಬ್ಬರ ಜವಾಬ್ದಾರಿಯನ್ನು ನೀವು ಕಸಿದುಕೊಳ್ಳುವ ಆಲೋಚನೆ ಮಾಡುವಿರಿ. ಬೇರೆ ಕಾರ್ಯದಿಂದಾಗಿ ನಿಮ್ಮ ಮುಖ್ಯ‌ ಕಾರ್ಯವು ಹಿಂದುಳಿಯುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:41 am, Tue, 14 July 26

Source link

ಬಿಡದಿ ಟೌನ್​ಶಿಪ್​ ಯೋಜನೆ ವಿವಾದ: ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ ಪ್ರಹ್ಲಾದ್​​ ಜೋಶಿ – Kannada News | Bidadi Township Row: Pralhad Joshi Terms Women’s ‘Broom Protest’ as Warning Bell to Karnataka Government

ಪ್ರಹ್ಲಾದ್​​ ಜೋಶಿImage Credit source: PTI and Tv9 Kannada

ಬೆಂಗಳೂರು, ಜುಲೈ 13: ಟೌನ್​ಶಿಪ್​ ಯೋಜನೆ ಸಂಬಂಧ ಬಿಡದಿಗೆ ಸರ್ವೆಗೆಂದು ಹೋಗಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಏಟು ನೀಡಿರುವ ಸಂಬಂಧ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇದು ಭೂಮಿತಾಯಿ ಉಳಿಸಿಕೊಳ್ಳಲು ಅನ್ನದಾತರ ಒಡಲ ಆಕ್ರೋಶವಾಗಿದ್ದು, ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ. ಟೌನ್‌ಶಿಪ್ ನೆಪದಲ್ಲಿ ಜಮೀನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಅತಿರೇಕದ್ದು ಎಂದವರು ಕಿಡಿ ಕಾರಿದ್ದಾರೆ.

‘ಸರ್ಕಾರದ ಧೋರಣೆ ಖಂಡನೀಯ’

ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆಯಲ್ಲಿ ಮುನ್ನುಗ್ಗುತ್ತಿರುವುದು ದುರಾಡಳಿತದ ಪರಮಾವಧಿ. ರೈತರ ಒಪ್ಪಿಗೆಯಿಲ್ಲದೆ ಅವರ ಜೀವನಾಧಾರವಾಗಿರುವ ಭೂಮಿಯನ್ನೇ ಕಿತ್ತುಕೊಂಡು ಮಾಡುವ ಟೌನ್‌ಶಿಪ್ ಅಭಿವೃದ್ಧಿ ಯಾರ ಉದ್ಧಾರಕ್ಕಾಗಿ? ರೈತರನ್ನು ಹೆದರಿಸಿ, ಬೆದರಿಸಿ ಜಮೀನು ವಶಪಡಿಸಿಕೊಳ್ಳಲು ಯತ್ನಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ. ಪೊಲೀಸ್ ಬಲ ಬಳಸಿ ಜಮೀನು ಕಿತ್ತುಕೊಳ್ಳಬಹುದು ಎಂದುಕೊಂಡಿದ್ದರೆ ಅದು ಭ್ರಮೆ. ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಇನ್ನಾದರೂ ಕಣ್ತೆರೆದುಕೊಳ್ಳಬೇಕಿದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಭುಗಿಲೆದ್ದ ಟೌನ್​​ಶಿಪ್ ಕಿಚ್ಚು; ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

ಎಕ್ಸ್​​​ ಪೋಸ್ಟ್​​ ಮೂಲಕ ಅಶೋಕ್​​ ಕಿಡಿ

ರೈತರ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಆರ್​.ಅಶೋಕ್ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಸಕರ್ಕರದ ಧೋರಣೆ ಖಂಡಿಸಿರುವ ಅವರು, ರೈತರ ಧ್ವನಿಯನ್ನು ಆಲಿಸುವ ಬದಲು ಪೊಲೀಸರ ಬಲಪ್ರಯೋಗ ಮತ್ತು ಅಧಿಕಾರಿಗಳ ದಬ್ಬಾಳಿಕೆಯ ಮೂಲಕ ಜೆಎಂಸಿ ಸರ್ವೆ ನಡೆಸಲು ಸರ್ಕಾರ ಮುಂದಾಗಿರೋದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದದ್ದು. ಅಭಿವೃದ್ಧಿ ಎಂದರೆ ರೈತರ ಬದುಕನ್ನು ಬಲಿ ಕೊಡುವುದಲ್ಲ. ಯಾವುದೇ ಯೋಜನೆಯೂ ರೈತರ ವಿಶ್ವಾಸ, ಒಪ್ಪಿಗೆ ಮತ್ತು ನ್ಯಾಯಯುತ ಪರಿಹಾರದ ಆಧಾರದ ಮೇಲೆಯೇ ಜಾರಿಯಾಗಬೇಕು. ರೈತರ ಹಕ್ಕುಗಳನ್ನು ಕಡೆಗಣಿಸುವ ಏಕಪಕ್ಷೀಯ ಧೋರಣೆ ಕೈಬಿಡಬೇಕು. ರಾಜ್ಯ ಸರ್ಕಾರ ಕೂಡಲೇ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಿ, ಟೌನ್‌ಶಿಪ್ ಯೋಜನೆ ಕುರಿತು ರೈತರೊಂದಿಗೆ ಮುಕ್ತ ಸಂವಾದ ನಡೆಸಬೇಕು. ಅನ್ನದಾತರ ಹಕ್ಕು ಮತ್ತು ಬದುಕಿನ ರಕ್ಷಣೆಗೆ ನಾವು ರೈತರೊಂದಿಗೆ ನಿಲ್ಲುತ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 10:27 pm, Mon, 13 July 26

Source link

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ – Kannada News | Us military releases footage of sea drones attack in combat against iran for the first time

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ.

ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಅಮೆರಿಕ ಪಡೆಗಳು ಭಾನುವಾರ ಇರಾನ್‌ನ ಅತ್ಯಂತ ನಿರ್ಣಾಯಕ ಜಲಮಾರ್ಗವಾಗಿರುವ ‘ಬಂದರ್ ಅಬ್ಬಾಸ್’ ಪೋರ್ಟ್ ಮೇಲೆ ದಾಳಿ ನಡೆಸಿವೆ. ಮೂರು ‘ಕೋರ್ಸೇರ್’ ಹೆಸರಿನ ಒನ್-ವೇ ಅಟ್ಯಾಕ್ ಕಡಲ ಡ್ರೋನ್‌ಗಳನ್ನು ಬಳಸಿ ಇರಾನ್‌ನ ಜಲಾಂತರ್ಗಾಮಿ ಮತ್ತು ಹಡಗುಗಳ ರಿಪೇರಿ ಹಾಗೂ ನಿರ್ವಹಣಾ ಕೇಂದ್ರವನ್ನು ಯಶಸ್ವಿಯಾಗಿ ಧ್ವಂಸಗೊಳಿಸಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೆಲವೊಮ್ಮೆ ಮಕ್ಕಳು ತಪ್ಪು ಮಾಡುತ್ತಾರೆ; ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರ ಪೇಪರ್ ಎಸೆತ ಘಟನೆಗೆ ಸಿಜೆಐ ಸೂರ್ಯ ಕಾಂತ್ ಪ್ರತಿಕ್ರಿಯೆ – Kannada News | Children sometimes act unexpectedly CJI Surya Kant Breaks Silence After Petitioner Abuses Him and Throws Papers In Supreme Court

ನವದೆಹಲಿ, ಜುಲೈ 13: ಸುಪ್ರೀಂ ಕೋರ್ಟ್ (Supreme Court) ಒಳಗಡೆಯೇ ಅರ್ಜಿದಾರರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಅತ್ಯಂತ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿದ ಹಾಗೂ ಗಾಳಿಯಲ್ಲಿ ದಾಖಲೆ ಪತ್ರಗಳನ್ನು ತೂರಿದ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಶಿಕ್ಷಿಸುವ ಬದಲು, ದೊಡ್ಡ ಗುಣ ಪ್ರದರ್ಶಿಸಿರುವ ಸಿಜೆಐ ಸೂರ್ಯ ಕಾಂತ್, ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿಹೇಳಿದ್ದಾರೆ.

ತಮ್ಮ ವಿರುದ್ಧ ನಡೆದ ನಿಂದನೆಯ ಘಟನೆಯನ್ನು ಹಗುರವಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಯುವಕರು ಕೆಲವೊಮ್ಮೆ ಇಂತಹ ವರ್ತನೆಗಳಲ್ಲಿ ತೊಡಗುತ್ತಾರೆ. ಆದರೆ ದೇಶದ ಸಾಂವಿಧಾನಿಕ ಸಂಸ್ಥೆಗಳ ಗೌರವ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಜೆಐ ಸೂರ್ಯಕಾಂತ್, “ಈ ವಿಷಯವನ್ನು ದೊಡ್ಡದು ಮಾಡದೆ ಬಿಟ್ಟುಬಿಡಿ. ಮಕ್ಕಳು ಕೆಲವೊಮ್ಮೆ ಈ ರೀತಿ ಮಾಡಿಬಿಡುತ್ತಾರೆ. ದೊಡ್ಡವರಾದ ನಾವು ಅದನ್ನೇ ಮನಸಿನಲ್ಲಿಟ್ಟುಕೊಳ್ಳಬಾರದು. ಸಾಂವಿಧಾನಿಕ ಸಂಸ್ಥೆಗಳ ಮರ್ಯಾದೆ, ಘನತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಮತ್ತು ಪ್ರತಿಯೊಬ್ಬರೂ ಇದನ್ನು ನಿಭಾಯಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಹೈಡ್ರಾಮಾ; ನ್ಯಾಯಮೂರ್ತಿಗಳನ್ನು ನಿಂದಿಸಿ, ಪೇಪರ್ ಎಸೆದ ಅರ್ಜಿದಾರ

ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದೇನು?:

ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಸ್ವತಃ ತಾನೇ ವಾದ ಮಂಡಿಸುತ್ತಿದ್ದ ಅರ್ಜಿದಾರರೊಬ್ಬರು ಇದ್ದಕ್ಕಿದ್ದಂತೆ ದಾಖಲೆ ಪತ್ರಗಳ ಕಂತೆಗಳನ್ನು ಗಾಳಿಯಲ್ಲಿ ತೂರಿ ಎಸೆದಿದ್ದಲ್ಲದೆ, ಸಿಜೆಐ ಸೂರ್ಯ ಕಾಂತ್ ಅವರ ವಿರುದ್ಧ ಅತ್ಯಂತ ಅಸಂಸದೀಯ ಹಾಗೂ ನಿಂದನಾತ್ಮಕ ಭಾಷೆಯನ್ನು ಬಳಸಿದ್ದರು. ಲಕ್ನೋ ಮೂಲದ ಪ್ರಬಲ್ ಪ್ರತಾಪ್ ಎಂದು ಗುರುತಿಸಲಾದ ಆ ವ್ಯಕ್ತಿಯನ್ನು ತಕ್ಷಣವೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಕೋರ್ಟ್ ರೂಮ್‌ನಿಂದ ಹೊರಗೆ ಎಳೆದುಕೊಂಡು ಹೋಗಿ ಪೊಲೀಸರ ವಶಕ್ಕೆ ಒಪ್ಪಿಸಿದರು. ಆದರೆ, ಆತನ ವರ್ತನೆಯು ಅಸಂಬದ್ಧ ಮತ್ತು ಮಾನಸಿಕ ಅಸ್ಥಿರತೆಯಿಂದ ಕೂಡಿದಂತೆ ಕಂಡುಬಂದಿದ್ದರಿಂದ, ಕೋರ್ಟ್ ಆತನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ನಂತರ ಬಿಡುಗಡೆ ಮಾಡಲು ಅನುಮತಿಸಿತು.

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್​​ನ ಗೋಹತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಕಪ್ಪು ಕೋಟು ಮತ್ತು ಬಿಳಿ ಶರ್ಟ್ ಧರಿಸಿದ್ದ ಪ್ರಬಲ್ ಪ್ರತಾಪ್, ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠದ ಮುಂದೆ ತನ್ನ ಪ್ರಕರಣದ ವಾದ ಮಂಡಿಸಲು ನಿಂತಿದ್ದರು. ವಾದದ ಆರಂಭದಲ್ಲೇ ಆತ ನ್ಯಾಯಾಧೀಶರನ್ನು ಸಂಬೋಧಿಸಲು ಬಳಸಿದ ಪದಗಳು ಎಲ್ಲರನ್ನೂ ಬೆಚ್ಚಿಬೀಳಿಸಿದವು. ನ್ಯಾಯಾಧೀಶರನ್ನು “ನ್ಯಾಯಾಂಗದ ನೌಕರರೇ ಎಂದು ಕರೆದ ಆತ, “ಲಕ್ನೋದ ವಿಕಾಸ್ ನಗರದ ಎಸಿಪಿ ಮತ್ತು ಡುಪ್ಲೆಕ್ಸ್ ಟೆಕ್ನಾಲಜೀಸ್ ಸರ್ವಿಸಸ್ ಲಿಮಿಟೆಡ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸುವಂತೆ ನಾನು ನಿಮಗೆ ಆದೇಶಿಸುತ್ತೇನೆ!” ಎಂದರು.

ಆತನ ಮಾತುಗಳನ್ನು ಕೇಳಿ ತಕ್ಷಣವೇ ತಡೆದ ನ್ಯಾಯಾಧೀಶರು, “ನೀವು ನಮಗೆ ಆದೇಶ ನೀಡುತ್ತಿದ್ದೀರಾ?” ಎಂದು ಪ್ರಶ್ನಿಸಿದರು. ಆದರೆ ಪ್ರತಾಪ್ ಅದಕ್ಕೆ ನೇರ ಉತ್ತರ ನೀಡದೆ ತನ್ನ ವಾದವನ್ನು ಮುಂದುವರಿಸಿದರು. ನನ್ನ ಕಡೆಯಿಂದ ಇಷ್ಟೇ ಹೇಳಬೇಕಾಗಿರುವುದು. ಉಳಿದ ಎಲ್ಲಾ ದಾಖಲೆಗಳು ರೆಕಾರ್ಡ್‌ನಲ್ಲಿವೆ” ಎಂದು ಹೇಳಿ ತನ್ನ ಬಳಿ ಇದ್ದ ಕಾಗದಪತ್ರಗಳನ್ನು ನ್ಯಾಯಪೀಠದತ್ತ ಎಸೆದರು. ಇದರಿಂದ ಕೋರ್ಟ್​ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಅವರು ಸಿಜೆಐ ವಿರುದ್ಧವೂ ಜೋರಾಗಿ ನಿಂದನಾತ್ಮಕ ಮಾತುಗಳನ್ನು ಆಡಲು ಶುರುಮಾಡಿದರು. ತಕ್ಷಣ ಕೋರ್ಟ್‌ರೂಮ್ ಒಳಗಿದ್ದ ದೆಹಲಿ ಪೊಲೀಸ್ ಸಿಬ್ಬಂದಿ ಪ್ರತಾಪ್‌ನನ್ನು ವಶಕ್ಕೆ ಪಡೆದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಚಿವ ಭೈರತಿ ಸುರೇಶ್​​ ರಿಯಾಲಿಟಿ ಚೆಕ್ ವೇಳೆ ಉದ್ಧಟತನ: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು – Kannada News | BMTC Bus Conductor Suspended After Rude Behaviour During Minister Byrathi Suresh’s Reality Check

ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತುImage Credit source: tv9 kannada

ಬೆಂಗಳೂರು, ಜುಲೈ 13: ಇತ್ತೀಚೆಗೆ ಸಾರಿಗೆ ಸಚಿವ ಭೈರತಿ ಸುರೇಶ್ (Minister Byrathi Suresh)​​ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಬಸ್‌ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸುವ ಮೂಲಕ ರಿಯಾಲಿಟಿ ಚೆಕ್​ ಮಾಡಿದ್ದರು. ಈ ವೇಳೆ “ಚಿಲ್ಲರೆ ಕೊಡಿ, ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯಿರಿ” ಎಂದಿದ್ದ ಚಾಲಕ ಕಂ ನಿರ್ವಾಹಕನನ್ನು ಬಿಎಂಟಿಸಿ ನಿಗಮ ಇದೀಗ ಅಮಾನತು (suspended) ಮಾಡಿದೆ. ರಾಮಕೃಷ್ಣ ಟಿ.ಜಿ ಅಮಾನತು ಆದ ಬಿಎಂಟಿಸಿ ಸಿಬ್ಬಂದಿ.

ನಡೆದಿದ್ದೇನು?

ಜುಲೈ 11ರಂದು ರಾತ್ರಿ ಸುಮಾರು 9:30ರ ವೇಳೆಗೆ ಸಾರಿಗೆ ಸಚಿವ ಭೈರತಿ ಸುರೇಶ್, ಹೆಬ್ಬಾಳದಿಂದ ಭೂಪಸಂದ್ರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ ಏರಿದ್ದರು. ಈ ವೇಳೆ ಟಿಕೆಟ್‌ಗಾಗಿ ಸಚಿವರು ಹಣ ನೀಡಿದಾಗ ಚಾಲಕ ಕಂ ನಿರ್ವಾಹಕ ರಾಮಕೃಷ್ಣ ಟಿ.ಜಿ. 6 ಚಿಲ್ಲರೆ ನೀಡುವಂತೆ ಕೇಳಿದ್ದಾರೆ. ಸಚಿವರು ತಮ್ಮ ಬಳಿ ಚಿಲ್ಲರೆ ಇಲ್ಲ ಎಂದಿದ್ದಾರೆ. ಆಗ ನಿರ್ವಾಹಕ ಚಿಲ್ಲರೆ ನೀಡದಿದ್ದರೆ ಬಸ್‌ನಿಂದ ಇಳಿಯುವಂತೆ ಉದ್ಧಟತನದಿಂದ ವರ್ತಿಸಿದ್ದಾರೆ.

ಯುಪಿಐ ವ್ಯವಸ್ಥೆ ಇದ್ದರೂ ಮಾಹಿತಿ ನೀಡದ ಸಿಬ್ಬಂದಿ

ಬಿಎಂಟಿಸಿ ಬಸ್‌ಗಳಲ್ಲಿ 2024ರಿಂದಲೇ ಯುಪಿಐ ಮೂಲಕ ಡಿಜಿಟಲ್ ಟಿಕೆಟ್ ಪಾವತಿ ವ್ಯವಸ್ಥೆ ಜಾರಿಯಲ್ಲಿದ್ದು, ಪ್ರಸ್ತುತ ಸಂಸ್ಥೆಯ ಒಟ್ಟು ಟಿಕೆಟ್ ಆದಾಯದಲ್ಲಿ ಸುಮಾರು 53% ರಷ್ಟು ಯುಪಿಐ ಮೂಲಕವೇ ಸಂಗ್ರಹವಾಗುತ್ತಿದೆ. ಹೀಗಿರುವಾಗ ಸಾರ್ವಜನಿಕರಿಗಾಗಲಿ, ಸಚಿವರಿಗಾಗಲಿ ಯುಪಿಐ ಪಾವತಿ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡುವಲ್ಲಿ ನಿರ್ವಾಹಕ ಸಂಪೂರ್ಣ ವಿಫಲರಾಗಿದ್ದಾರೆ. ಕಂಡಕ್ಟರ್‌ನ ಈ ವರ್ತನೆಯಿಂದಾಗಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಪ್ರಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ನಿಗಮ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ನಿರ್ವಾಹಕ ರಾಮಕೃಷ್ಣರನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಸಚಿವರ ಸೂಚನೆ ಬೆನ್ನಲ್ಲೇ ಬಸ್ ನಿಲುಗಡೆಗೆ ಅವಕಾಶ

ಇನ್ನು ಸಚಿವರ ರಿಯಾಲಿಟಿ ಚೆಕ್ ವೇಳೆ ಜಯಮಹಲ್ ರಸ್ತೆ, ಫನ್ ವರ್ಲ್ಡ್ ಸಮೀಪ ಪ್ರಯಾಣಿಕರೊಬ್ಬರು ಕೈ ಸನ್ನೆ ಮಾಡಿ ನಿಲ್ಲಿಸಲು ಸೂಚಿಸಿದರೂ ಬಸ್ ನಿಲ್ಲಿಸದೆ ಹೋಗಿರುವುದನ್ನು ಸಚಿವರು ಗಮನಿಸಿದ್ದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸಚಿವ ನಿರ್ದೇಶನದ ಮೇರೆಗೆ, ಫನ್ ವರ್ಲ್ಡ್ ಸಮೀಪ ಅಧಿಕೃತ ಬಸ್ ನಿಲುಗಡೆಯನ್ನು ಇಂದಿನಿಂದಲೇ ಜಾರಿಗೆ ತರಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs ENG: ಭಾರತ- ಇಂಗ್ಲೆಂಡ್‌ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? – Kannada News | India vs England ODI: Birmingham Weather, Pitch Report and Head to Head Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 14, ಮಂಗಳವಾರ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ( Edgbaston) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ಕೂಡ ಈ ಸರಣಿಗಾಗಿ ಸಕಲ ತಯಾರಿ ಮಾಡಿಕೊಂಡಿವೆ. ಅಲ್ಲದೆ ಆತಿಥೇಯ ಇಂಗ್ಲೆಂಡ್‌ ಕೂಡ ಈ ಸರಣಿಯ ಮೊದಲ ಪಂದ್ಯಕ್ಕಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಸಹ ಪ್ರಕಟಿಸಿದೆ. ಆದರೆ ಟಿ20 ಸರಣಿಯ ಮೊದಲ ಪಂದ್ಯದಂತೆ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ವರದಿ ಅಭಿಮಾನಿಗಳನ್ನು ನಿರಾಳರನ್ನಾಗಿಸಿದೆ.

ಬರ್ಮಿಂಗ್‌ಹ್ಯಾಮ್‌ ಹವಾಮಾನ ಹೇಗಿರಲಿದೆ?

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಕೇವಲ ಶೇ. 1 ರಷ್ಟು ಮಾತ್ರ. ಇದರರ್ಥ ಈ ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆ ಇಲ್ಲ. ಈ ಪಂದ್ಯದ ಸಮಯದಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಇದರಿಂದ ಆಟಗಾರರು ಮೈದಾನದಲ್ಲಿ ಬಿಸಿಲಿನ ಬೇಗೆಯಲ್ಲಿ ಬಳಲುವ ಅವಕಶ್ಯಕತೆ ಇಲ್ಲ.

ಪಿಚ್ ಯಾರಿಗೆ ಸಹಕಾರಿ?

ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನ ಪಿಚ್ ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳು ಸುಲಭವಾಗಿ ರನ್ ಗಳಿಸಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, ಆಟ ಮುಂದುವರೆದಂತೆ, ಇದು ನಿಧಾನಗೊಳ್ಳುತ್ತದೆ, ಸ್ಪಿನ್ನರ್‌ಗಳು ಮತ್ತು ಬೌಲರ್‌ಗಳಿಗೆ ಕೊಂಚ ನೆರವು ಸಿಗಲಿದೆ. ಆದಾಗ್ಯೂ, ಮೊದಲು ಬ್ಯಾಟಿಂಗ್ ಮಾಡುವ ತಂಡವು ದೊಡ್ಡ ಮೊತ್ತವನ್ನು ಗಳಿಸಬಹುದು. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್‌ ಆಯ್ದುಕೊಳ್ಳುವ ಸಾಧ್ಯತೆಗಳಿವೆ.

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

ಉಭಯ ತಂಡಗಳ ಮುಖಾಮುಖಿ

ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ 110 ಏಕದಿನ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 61 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇಂಗ್ಲೆಂಡ್‌ನಲ್ಲಿ ಭಾರತದ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಭಾರತ ಇದುವರೆಗೆ 86 ಏಕದಿನ ಪಂದ್ಯಗಳನ್ನು ಆಡಿದ್ದು, 45 ಗೆದ್ದಿದ್ದರೆ, 37 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದೆ, ಮತ್ತು ಮೂರು ಡ್ರಾ ಆಗಿದೆ. ಭಾರತ ಇದುವರೆಗೆ ಬರ್ಮಿಂಗ್ಹ್ಯಾಮ್‌ನಲ್ಲಿ 12 ಏಕದಿನ ಪಂದ್ಯಗಳನ್ನು ಆಡಿದ್ದು, ಎಂಟು ಪಂದ್ಯಗಳಲ್ಲಿ ಗೆದ್ದಿದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಪಾನ್‌ನಲ್ಲಿ ಮೋಡಿ ಮಾಡಲು ‘ಧುರಂಧರ್ 2’ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ – Kannada News | Ranveer Singh Dhurandhar Movie Box Office Collection Day 1 in Japan flops

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು. ಈ ಫ್ರಾಂಚೈಸಿಯ ಎರಡೂ ಸಿನಿಮಾಗಳು ಸೇರಿ ಬರೋಬ್ಬರಿ 3,100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದ್ದವು. ಆದರೆ, ಜುಲೈ 10ರಂದು ಜಪಾನ್‌ನಲ್ಲಿ ಬಿಡುಗಡೆಯಾಗಿರುವ ಈ ಆ್ಯಕ್ಷನ್ ಡ್ರಾಮಾ ಸಿನಿಮಾ ಅಲ್ಲಿನ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ಕಾಣುವ ಮೂಲಕ ತನ್ನ ಜರ್ನಿಯನ್ನು ಆರಂಭಿಸಿದೆ.

25 ಸಿನಿಮಾಗಳ ಪಟ್ಟಿಯಲ್ಲೂ ಇಲ್ಲ:

ಭಾರೀ ಬಜೆಟ್‌ನ ಈ ಆ್ಯಕ್ಷನ್ ಚಿತ್ರವನ್ನು ಜಪಾನ್‌ನ ಸುಮಾರು 80 ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಮಾಡಲಾಗಿತ್ತು. ಬಿಡುಗಡೆಗೂ ಮುನ್ನ ಜಪಾನ್‌ನಲ್ಲಿ ಚಿತ್ರದ ಪ್ರಚಾರವನ್ನು ಕೂಡ ಜೋರಾಗಿಯೇ ಮಾಡಲಾಗಿತ್ತು. ಆದರೆ, ವರದಿಗಳ ಪ್ರಕಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಮೂರೂ ದಿನಗಳಲ್ಲಿ ಜಪಾನ್‌ನ ಟಾಪ್ 25 ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕೂಡ ಈ ಸಿನಿಮಾ ವಿಫಲವಾಗಿದೆ.

ಮೊದಲ ದಿನದ ಆಘಾತಕಾರಿ ಕಲೆಕ್ಷನ್:

ಚಿತ್ರ ಬಿಡುಗಡೆಯಾದ ಮೊದಲ ದಿನ ಮಧ್ಯಾಹ್ನ 2 ಗಂಟೆಯವರೆಗೆ 57 ಚಿತ್ರಮಂದಿರಗಳಲ್ಲಿ ಕೇವಲ 449 ಪ್ರೇಕ್ಷಕರು ಮಾತ್ರ ಸಿನಿಮಾ ನೋಡಿದ್ದರು. ಇನ್ನು ದಿನದ ದ್ವಿತೀಯಾರ್ಧದಲ್ಲೂ ಚಿತ್ರದ ಕಲೆಕ್ಷನ್‌ನಲ್ಲಿ ಯಾವುದೇ ದೊಡ್ಡ ಸುಧಾರಣೆ ಕಂಡುಬರಲಿಲ್ಲ. ಒಟ್ಟಾರೆಯಾಗಿ ಮೊದಲ ದಿನ ಜಪಾನ್‌ನ 80 ಸ್ಕ್ರೀನ್‌ಗಳಿಂದ ಚಿತ್ರಕ್ಕೆ ಸಿಕ್ಕಿದ್ದು ಕೇವಲ 900 ಪ್ರೇಕ್ಷಕರು ಮಾತ್ರ.

ಟಾಪ್ 10 ಲಿಸ್ಟ್‌ನಿಂದ ಹೊರಬಿದ್ದ ಧುರಂಧರ್:

ಜಪಾನ್‌ನಲ್ಲಿ ಅತಿ ಹೆಚ್ಚು ಪ್ರೇಕ್ಷಕರನ್ನು ಸೆಳೆದ ಭಾರತದ ಟಾಪ್ 10 ಸಿನಿಮಾಗಳ ಲಿಸ್ಟ್‌ಗೆ ಸೇರಲು ‘ಧುರಂಧರ್’ ಚಿತ್ರಕ್ಕೆ ಕನಿಷ್ಠ 1,300 ಪ್ರೇಕ್ಷಕರ ಅಗತ್ಯವಿತ್ತು. ಸದ್ಯ 1,300 ಪ್ರೇಕ್ಷಕರೊಂದಿಗೆ ಸಲ್ಮಾನ್ ಖಾನ್ ಅವರ ‘ಟೈಗರ್ 3’ ಸಿನಿಮಾ 10ನೇ ಸ್ಥಾನದಲ್ಲಿದೆ. ಆದರೆ ರಣವೀರ್ ಸಿಂಗ್ ಸಿನಿಮಾ ಇದನ್ನು ಮೀರಿಸಲು ಸಾಧ್ಯವಾಗದೇ ಮುಗ್ಗರಿಸಿದೆ. ಇದಕ್ಕೂ ಮುನ್ನ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೂಡ ಈ ಟಾಪ್ 10 ಲಿಸ್ಟ್ ಸೇರುವಲ್ಲಿ ವಿಫಲವಾಗಿತ್ತು.

ಇದನ್ನೂ ಓದಿ: ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ

ಜಪಾನ್‌ನಲ್ಲಿ ಮೊದಲ ದಿನವೇ 8,230 ಪ್ರೇಕ್ಷಕರನ್ನು ಸೆಳೆಯುವ ಮೂಲಕ ‘ಆರ್‌ಆರ್‌ಆರ್’ ಸಿನಿಮಾ ಮೊದಲ ಸ್ಥಾನದಲ್ಲಿದೆ. ಇದರ ನಂತರದ ಸ್ಥಾನಗಳಲ್ಲಿ ‘ಸಾಹೋ’, ‘ಕಲ್ಕಿ 2898 ಎಡಿ’, ‘ಪಠಾಣ್’, ‘ಸಲಾರ್’, ‘ಜವಾನ್’, ‘ರಂಗಸ್ಥಲಂ’, ‘ದೇವರ’, ‘ಬಾಹುಬಲಿ 2’ ಮತ್ತು ‘ಟೈಗರ್ 3’ ಸಿನಿಮಾಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ. ಆದಾಗ್ಯೂ ಮೊದಲ ಏಕದಿನಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಖಚಿತವಾಗಿದೆ. ಆ ಪ್ಲೇಯಿಂಗ್​ನಲ್ಲಿ ಸ್ಥಾನ ಪಡೆಯಲಿರುವ ಬರೋಬ್ಬರಿ 8 ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಇದು ಮೊದಲ ಏಕದಿನ ಪಂದ್ಯವಾಗಿದೆ.

ಇಂಗ್ಲೆಂಡ್‌ನಲ್ಲಿ ಆಡಿದವರಿವರು

ಈ ಏಕದಿನ ಸರಣಿಗೆ ಆಯ್ಕೆಯಾಗಿರುವ 15 ಸದಸ್ಯರ ಭಾರತ ತಂಡದಲ್ಲಿ ಕೆಲವೇ ಕೆಲವು ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಏಕದಿನ ಸರಣಿಯನ್ನಾಡಿದ ಅನುಭವವಿದೆ. ಆ ಅನುಭವಿಗಳಲ್ಲಿ ವಿರಾಟ್ ಕೊಹ್ಲಿ (16 ಏಕದಿನ ಪಂದ್ಯ), ರೋಹಿತ್ ಶರ್ಮಾ 10 ಏಕದಿನ ಪಂದ್ಯ), ಜಸ್ಪ್ರೀತ್ ಬುಮ್ರಾ (3 ಏಕದಿನ ಪಂದ್ಯ), ಕೆಎಲ್ ರಾಹುಲ್ (3 ಏಕದಿನ ಪಂದ್ಯ), ಕುಲ್ದೀಪ್ ಯಾದವ್ (4 ಏಕದಿನ ಪಂದ್ಯ), ಪ್ರಸಿದ್ಧ್ ಕೃಷ್ಣ (3 ಏಕದಿನ ಪಂದ್ಯ) ಸೇರಿದ್ದಾರೆ.

ಇವರಿಗೆ ಇಂಗ್ಲೆಂಡ್​ನಲ್ಲಿ ಮೊದಲ ಏಕದಿನ ಸರಣಿ

ಉಳಿದಂತೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ, ಪ್ರಿನ್ಸ್ ಯಾದವ್ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್‌ ನೆಲದಲ್ಲಿ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಇದರಲ್ಲಿ ಕೆಲವು ಆಟಗಾರರಿ ಇಂಗ್ಲೆಂಡ್‌ ವಿರುದ್ಧ ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಇಂಗ್ಲೆಂಡ್‌ ನೆಲದಲ್ಲಿ ಆಡಿಲ್ಲ. ಇನ್ನು ಕೆಲವರು ಇಂಗ್ಲೆಂಡ್‌ ನೆಲದಲ್ಲಿ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನಾಡಿದ್ದಾರೆ. ಆದರೆ ಏಕದಿನ ಸರಣಿಯನ್ನು ಆಡಿಲ್ಲ. ಹೀಗಾಗಿ ಈ ಎಲ್ಲಾ ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಮೊದಲ ಏಕದಿನ ಸರಣಿ ಇದಾಗಲಿದೆ.

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸರಕುಗಳ ಮೇಲೆ ಅಮೆರಿಕದಿಂದ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ – Kannada News | Donald Trump says US taking control of Strait of Hormuz To Charge 20 percent fee on all cargo shipped

ವಾಷಿಂಗ್ಟನ್, ಜುಲೈ 13: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಅತ್ಯಂತ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಜಾಗತಿಕವಾಗಿ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗಣೆ ಮಾಡಲಾಗುವ ಎಲ್ಲಾ ಸರಕುಗಳ ಮೇಲೆ ಅಮೆರಿಕವು ಶೇ. 20ರಷ್ಟು ಶುಲ್ಕವನ್ನು ವಿಧಿಸಲಿದೆ ಎಂದು ತಿಳಿಸಿದ್ದಾರೆ. “ಇಂದಿನಿಂದ ಯುಎಸ್‌ಎ (USA) ಅನ್ನು ‘ದಿ ಗಾರ್ಡಿಯನ್ ಆಫ್ ದಿ ಹಾರ್ಮುಜ್ ಸ್ಟ್ರೈಟ್’ (ಹಾರ್ಮುಜ್ ಜಲಸಂಧಿಯ ರಕ್ಷಕ) ಎಂದು ಕರೆಯಲಾಗುವುದು. ಜಗತ್ತಿನ ಅತ್ಯಂತ ಅಸ್ಥಿರವಾಗಿರುವ ಈ ಜಲಮಾರ್ಗಕ್ಕೆ ಸಂಪೂರ್ಣ ರಕ್ಷಣೆ ಮತ್ತು ಭದ್ರತೆ ಒದಗಿಸುವ ಕೆಲಸಕ್ಕಾಗಿ, ನ್ಯಾಯದ ದೃಷ್ಟಿಯಿಂದ ಅಮೆರಿಕಕ್ಕೆ ಮರುಪಾವತಿ ಸಿಗಬೇಕಿದೆ. ಹೀಗಾಗಿ ಇಲ್ಲಿ ಸಾಗಣೆಯಾಗುವ ಎಲ್ಲಾ ಸರಕುಗಳ ಮೇಲೆ ಶೇ. 20ರಷ್ಟು ದರದಲ್ಲಿ ಶುಲ್ಕ ವಿಧಿಸಲಾಗುವುದು. ಈ ಪ್ರಕ್ರಿಯೆ ಮತ್ತು ವ್ಯವಸ್ಥೆ ತಕ್ಷಣವೇ ಜಾರಿಗೆ ಬರಲಿದೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ನಾವು ಹಾರ್ಮುಜ್ ಜಲಸಂಧಿಯ ರಕ್ಷಕರು ಎಂದ ಟ್ರಂಪ್:

ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಪೂರೈಕೆಯಲ್ಲಿ ಸುಮಾರು 5ನೇ 1 ಭಾಗ (ಶೇ. 20ರಷ್ಟು) ಇದೇ ಜಲಸಂಧಿಯ ಮೂಲಕ ಸಾಗುವುದರಿಂದ ಇದು ಜಗತ್ತಿನ ಅತ್ಯಂತ ಪ್ರಮುಖ ಜಲಮಾರ್ಗವಾಗಿದೆ. ಈ ಕುರಿತು ಮಾತನಾಡಿದ ಟ್ರಂಪ್, “ನಾವು ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಳ್ಳುತ್ತಿದ್ದೇವೆ. ಇರಾನ್ ಬಳಿ ಏನೂ ಇಲ್ಲ. ಇನ್ನು ಮುಂದೆ ನಾವೇ ಈ ಜಲಸಂಧಿಯ ರಕ್ಷಕರಾಗಲಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ನಾನೇ ನಂಬರ್ 1 ಟಾರ್ಗೆಟ್, ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಡೊನಾಲ್ಡ್ ಟ್ರಂಪ್

ರಕ್ಷಣೆ ನೀಡಿದ್ದಕ್ಕಾಗಿ ಅಮೆರಿಕಕ್ಕೆ ಹಣ:

ಅಮೆರಿಕವು ಈ ಹಾರ್ಮುಜ್ ಜಲಮಾರ್ಗಕ್ಕೆ ಭದ್ರತೆ ಒದಗಿಸುತ್ತಿರುವುದಕ್ಕೆ ಪ್ರತಿಯಾಗಿ ಜಗತ್ತಿನ ಶ್ರೀಮಂತ ರಾಷ್ಟ್ರಗಳಿಂದ ತಮಗೆ ಹಣ ಸಿಗಬೇಕು ಎಂದು ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. “ಈ ಜಲಸಂಧಿಗೆ ಕಾವಲು ಕಾಯುತ್ತಿರುವುದಕ್ಕೆ ನಮಗೂ ಲಾಭ ಬೇಕಲ್ಲವೇ? ನಮ್ಮ ಸೈನಿಕರನ್ನು ಅಪಾಯಕ್ಕೆ ತಳ್ಳಿ ಇಷ್ಟೆಲ್ಲಾ ಭದ್ರತೆ ಒದಗಿಸುತ್ತಿರುವುದಕ್ಕೆ ನಮಗೆ ಮರುಪಾವತಿ ಸಿಗಬೇಕು ಎಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿಯ ನಿಯಂತ್ರಣದ ವಿಷಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ದೀರ್ಘಕಾಲದಿಂದ ಸಂಘರ್ಷ ನಡೆಯುತ್ತಿದೆ. ಈ ಜಲಸಂಧಿಯ ಮೇಲೆ ತನಗೆ ಸಂಪೂರ್ಣ ನಿಯಂತ್ರಣವಿದೆ ಎಂದು ಇರಾನ್ ಹೇಳಿಕೊಳ್ಳುತ್ತಿದೆ. ಆದರೆ, ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಇದು ಮುಕ್ತ ಜಲಮಾರ್ಗವಾಗಿದ್ದು, ಎಲ್ಲಾ ದೇಶಗಳ ಹಡಗುಗಳು ಇಲ್ಲಿ ಮುಕ್ತವಾಗಿ ಸಂಚರಿಸಬಹುದು ಎಂದು ಅಮೆರಿಕ ವಾದಿಸುತ್ತಿದೆ.

ಇರಾನ್ ಎಚ್ಚರಿಕೆ:

ಟ್ರಂಪ್ ಅವರ ಈ ಘೋಷಣೆಗೆ ಇರಾನ್‌ನ ‘ಖಾತಮ್ ಅಲ್-ಅನ್ಬಿಯಾ’ ಮಿಲಿಟರಿ ಕಮಾಂಡ್‌ನ ವಕ್ತಾರರು ವಿಡಿಯೋ ಸಂದೇಶದ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಯಾವುದೇ ಪರಿಸ್ಥಿತಿಯಲ್ಲೂ ಜಲಸಂಧಿಯ ನಿರ್ವಹಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಲು ನಾವು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ. ಈ ಜಲಮಾರ್ಗದ ವಿಷಯದಲ್ಲಿ ಅಮೆರಿಕದೊಂದಿಗೆ ಸಹಕರಿಸುವ ಯಾವುದೇ ಗಲ್ಫ್ ದೇಶಗಳ ಕ್ರಮವನ್ನು “ಯುದ್ಧದ ಘೋಷಣೆ” ಎಂದೇ ಪರಿಗಣಿಸಲಾಗುವುದು ಎಂದು ಅವರು ಗಲ್ಫ್ ರಾಷ್ಟ್ರಗಳಿಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಇರಾನ್‌ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ

ಸಂಘರ್ಷಕ್ಕೆ ಕಾರಣವೇನು?:

ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಹಡಗೊಂದರ ಮೇಲೆ ಇರಾನ್ ದಾಳಿ ನಡೆಸಿತ್ತು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅಮೆರಿಕ, ಇರಾನ್‌ನ ಮಿಲಿಟರಿ ನೆಲೆಗಳು ಮತ್ತು ಪ್ರಮುಖವಾಗಿ ಅದರ ಡ್ರೋನ್ ಉತ್ಪಾದನಾ ಕೇಂದ್ರಗಳ ಮೇಲೆ ಭಾರಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಸಹ ಯುಎಇ (UAE) ಮತ್ತು ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಸಂಘರ್ಷದ ಕಾರಣದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಏಕಾಏಕಿ ಶೇ. 5ರಷ್ಟು ಏರಿಕೆಯಾಗಿವೆ.

ಕಳೆದ ತಿಂಗಳಷ್ಟೇ ಉಭಯ ದೇಶಗಳು ಡಿಜಿಟಲ್ ರೂಪದಲ್ಲಿ ತಾತ್ಕಾಲಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದವು ಮತ್ತು ಮಾತುಕತೆಗೆ ಒಪ್ಪಿಕೊಂಡಿದ್ದವು. ಆದರೆ, ಕಳೆದ ವಾರ ಆ ಕದನ ವಿರಾಮ ಒಪ್ಪಂದವು ಮುಕ್ತಾಯಗೊಂಡಿದೆ ಎಂದು ಟ್ರಂಪ್ ಘೋಷಿಸಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ – Kannada News | Monsoon Magic: Dudhsagar Falls Draws Tourists After Heavy Rains in Western Ghats

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version