ವಿಷಕಾರಿ ಓಝೋನ್‌ನಿಂದ ಬೆಂಗಳೂರು ಗಾಳಿ ಅಸುರಕ್ಷಿತ: ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಅಧ್ಯಯನ – Kannada News | Toxic Ozone Makes Bengaluru’s Air Unsafe: Shocking CSE Study Reveals Severe Health Risks

ಬೆಂಗಳೂರು, ಜುಲೈ 02: ಪ್ರತಿದಿನ ಸರಾಸರಿ 16 ಗಂಟೆಗಳ ಕಾಲ ಬೆಂಗಳೂರಿನಲ್ಲಿ (Bengaluru)  ಜನರು ವಿಷಕಾರಿ ಓಝೋನ್‌ಗೆ ಒಡ್ಡಿಕೊಳ್ಳುತ್ತಿರುವುದು ಕಂಡುಬಂದಿದ್ದು, ದಿನದ ಸುಮಾರು ಮೂರನೇ ಎರಡರಷ್ಟು ಸಮಯ ನಾಗರಿಕರು ಕಲುಷಿತ ಗಾಳಿಯನ್ನು ಉಸಿರಾಡುತ್ತಿದ್ದಾರೆ ಎಂದು ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (CSE) ನಡೆಸಿದ ಅಧ್ಯಯನ ತಿಳಿಸಿದೆ. ಕಳೆದ 71 ದಿನಗಳ ಅವಧಿಯಲ್ಲಿ 55 ದಿನಗಳು ನೆಲಮಟ್ಟದ (Ground-level) ಓಝೋನ್ ಪ್ರಮಾಣವು ರಾಷ್ಟ್ರೀಯ ವಾಯು ಗುಣಮಟ್ಟದ ಮಾನದಂಡ (NAAQS) ಮಿತಿಯನ್ನು ಮೀರಿರೋದು ಕೂಡ ಬಗಿರಂಗಗೊಂಡಿದೆ.

ಆತಂಕಕಾರಿ ಬೆಳವಣಿಗೆ

2026ರ ಮಾರ್ಚ್ 1ರಿಂದ ಮೇ 10ರವರೆಗೆ ದೇಶದ 25 ನಗರಗಳಲ್ಲಿ ನಡೆಸಿದ ಅಧ್ಯಯನದಲ್ಲಿ, ದೆಹಲಿ (62 ದಿನ) ಮತ್ತು ಭೋಪಾಲ್ (60 ದಿನ) ನಂತರ ಬೆಂಗಳೂರು (55 ದಿನ) ಅತಿ ಹೆಚ್ಚು ಅಪಾಯಕಾರಿ ಓಝೋನ್ ಮಟ್ಟ ದಾಖಲಿಸಿದ ನಗರವಾಗಿದೆ. ಅಧ್ಯಯನದ ಪ್ರಕಾರ, ನೆಲಮಟ್ಟದ ಓಝೋನ್ ಪ್ರಮಾಣವು ಗರಿಷ್ಠ ಎಂಟು ಗಂಟೆಗಳ ಅವಧಿಗೆ 100 ಮೈಕ್ರೋಗ್ರಾಂ ಪ್ರತಿ ಘನ ಮೀಟರ್ (μg/m³) ಎಂಬ ರಾಷ್ಟ್ರೀಯ ಮಿತಿಯನ್ನು ಕೇವಲ 16 ದಿನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಮೀರಿದೆ. ಇದುವರೆಗೆ ಹಗಲಿನ ಸಮಸ್ಯೆ ಎಂದು ಪರಿಗಣಿಸಲಾಗುತ್ತಿದ್ದ ವಿಷಕಾರಿ ಓಝೋನ್ ಈಗ ರಾತ್ರಿ ವೇಳೆಯಲ್ಲಿಯೂ ಮುಂದುವರಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬೆಂಗಳೂರಿನಲ್ಲಿ 14 ರಾತ್ರಿಗಳಲ್ಲಿ ಸೂರ್ಯಾಸ್ತದ ನಂತರವೂ ಓಝೋನ್ ಅಪಾಯಕಾರಿ ಮಟ್ಟದಲ್ಲೇ ಇತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ರಾಜ್ಯಾದ್ಯಂತ ಮುಂದುವರಿದ ಮೋಡ ಕವಿದ ವಾತಾವರಣ; ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

ಆರೋಗ್ಯದ ಮೇಲೆ ಗಂಭೀರ ಪರಿಣಾಮ

ಓಝೋನ್ ಅತ್ಯಂತ ಪ್ರಬಲ ಆಕ್ಸಿಡೆಂಟ್ ಆಗಿದ್ದು, ಶ್ವಾಸಕೋಶದ ಕೋಶಗಳನ್ನು ಹಾನಿಗೊಳಿಸಿ ಉಸಿರಾಟದ ಮಾರ್ಗಗಳಲ್ಲಿ ಉರಿಯೂತ ಉಂಟುಮಾಡುತ್ತದೆ. ಅಲ್ಪಾವಧಿಯಲ್ಲೇ ತೀವ್ರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದ್ದರೆ, ದೀರ್ಘಾವಧಿಯಲ್ಲಿ ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತ, ಪಾರ್ಶ್ವವಾಯು ಹಾಗೂ ಸಿಒಪಿಡಿ (COPD) ಕಾಯಿಲೆಯ ತೀವ್ರತೆ ಹೆಚ್ಚುವ ಅಪಾಯವಿದೆ ಎಂದು ವರದಿ ತಿಳಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕ ಇಂದಿನ ಹವಾಮಾನ: ರಾಜ್ಯಾದ್ಯಂತ ಮುಂದುವರಿದ ಮೋಡ ಕವಿದ ವಾತಾವರಣ; ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ – Kannada News | Red Alert Issued for 3 Coastal Districts; Bangalore and Interior Karnataka to Witness Cool Breezes and Light Showers

ಬೆಂಗಳೂರು, ಜುಲೈ 2: ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ಮುಂದುವರಿದಿದ್ದು, ಇಂದಿನ ಹವಾಮಾನದ ಕುರಿತು ಹವಾಮಾನ ಇಲಾಖೆ (IMD) ಪ್ರಮುಖ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಇಂದು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಪ್ರದೇಶಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಿಂದ (Light Rain) ಕೂಡಿರಲಿದ್ದು, ರಾತ್ರಿಯ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ದಿನವಿಡೀ ತಂಪಾದ ಗಾಳಿ ಹಾಗೂ ಸಾಧಾರಣ ಅಥವಾ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಇಲಾಖೆಯು ಈ ಭಾಗಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ನಿರಂತರ ಮೋಡ ಕವಿದ ವಾತಾವರಣ ಹಾಗೂ ತಂಪಾದ ಗಾಳಿ ಬೀಸುತ್ತಿರುವುದರಿಂದ ರಾಜ್ಯದ ಬಹುತೇಕ ನಗರಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27°C ಆಸುಪಾಸಿನಲ್ಲಿರಲಿದ್ದು, ರಾತ್ರಿಯ ವೇಳೆಗೆ ಚಳಿಯ ವಾತಾವರಣ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಉಡುಪಿ, ದಕ್ಷಿಣ ಕನ್ನಡಕ್ಕೆ ‘ರೆಡ್ ಅಲರ್ಟ್’: ರಜೆ ಆದೇಶ ಉಲ್ಲಂಘಿಸಿ ಕ್ಲಾಸ್ ನಡೆಸಿದರೆ ಕಠಿಣ ಕಾನೂನು ಕ್ರಮ

ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 24 ಗಂಟೆಗಳ ಕಾಲ ಭಾರಿ ಮುದ್ದತ್ತಾದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಬಳಿಕ ಪ್ರಸ್ತುತ ಜವಾಬ್ದಾರಿ ವಹಿಸಿರುವ ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಆದರೆ, ಸರ್ಕಾರದ ಆದೇಶ ಮೀರಿ ತರಗತಿ ನಡೆಸಲು ಮುಂದಾದ ಖಾಸಗಿ ಸಂಸ್ಥೆಗಳಿಗೆ ಜಿಲ್ಲಾಡಳಿತ ಈಗ ಕಾನೂನು ಚಾಟಿ ಬೀಸಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ; ಮೀನುಗಾರರಿಗೆ ಕಟ್ಟುನಿಟ್ಟಿನ ನಿಷೇಧ

ಇತ್ತ ಉಡುಪಿ ಮತ್ತು ದಕ್ಷಿಣ ಕನ್ನಡದ ಕರಾವಳಿ ತೀರದಲ್ಲಿ ಅರಬ್ಬಿ ಸಮುದ್ರದ ಅಲೆಗಳ ಆರ್ಭಟ ರಣಭೀಕರವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಗುಡುಗು, ಸಿಡಿಲು ಸಹಿತ ಗಂಟೆಗೆ ಭಾರಿ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಹೈಅಲರ್ಟ್ ಘೋಷಿಸಿದೆ. ಅಲ್ಲದೆ, ನದಿ ತೀರ ಹಾಗೂ ಕಡಲ ತೀರದ ನಿವಾಸಿಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಲ್ಲೇ ಉಳಿಯುವಂತೆ ಜಿಲ್ಲಾಡಳಿತಗಳು ಕರಪತ್ರ ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸುತ್ತಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಪರರನ್ನು ವಂಚಿಸಲು ವಿಫಲರಾಗುವರು… – Kannada News | Daily Horoscope for July 02, 2026: Uttarayan Greeshma season, jyeshtha Masa Krishna Paksha Thursday astrology prediction

ಮೇಷ ರಾಶಿ:

ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಹಳೆಯ ಪ್ರೇಯಸಿಯಿಂದ ಆಹ್ವಾನ ಬರಬಹುದು. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಶತ್ರುವನ್ನು ಮಿತ್ರನನ್ನು ಮಾಡಿಕೊಳ್ಳುವ ತಂತ್ರವನ್ನು ಹೂಡುವಿರಿ. ಕೆಲವು ಅಭ್ಯಾಸವು ಚಟವಾಗಿ ಪರಿವರ್ತನೆ ಆಗಬಹುದು. ಬಿಡಸಲಾಗದ ಸಮಸ್ಯೆಗಳು ನಿಮ್ಮನ್ನು ಇಬ್ಬಂದಿ ಮಾಡಬಹುದು. ಆಪ್ತರ ಸಲಹೆಯನ್ನು ಪಡೆಯಿರಿ.

ವೃಷಭ ರಾಶಿ:

ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಕಾನೂನಿಗೆ ವಿರುದ್ಧವಾದ ಕೆಲಸದಿಂದ ಹಣವನ್ನು ಪಡೆಯಲು ಹೋಗಬಹುದು. ಅದು ನಿಮ್ಮ ವೃತ್ತಿಜೀವನದ ಮೇಲೂ ಪರಿಣಾಮವನ್ನು ಉಂಟುಮಾಡಬಹುದು. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಹೂಡಿಕೆಯಲ್ಲಿ ಲಾಭವು ಕಾಣಿಸುವುದು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ:

ತಂದೆಯ ಜೊತೆ ಹಣಕಾಸಿನ ವಿಚಾರಕ್ಕೆ ಕಲಹ. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ಸದ್ದಿಲ್ಲದೆ ಮಾಡಿದ ಕೆಲಸದಿಂದ ಎಲ್ಲರೂ ಅಚ್ಚರಿಪಡುವರು. ಒಂದೇ ವಿಚಾರವನ್ನು ಮತ್ತೆ ಮತ್ತೆ ಹೇಳಿದೆ ಎನ್ನಿಸಿದರೂ ಹಿರಿಯರ ಮಾತುಗಳನ್ನು ಅವರ ಮೇಲಿನ‌ ಗೌರವದಿಂದ ಕೇಳಬೇಕಾಗಬಹುದು. ಹಳೆಯ ಖಾಯಿಲೆಯು ಮತ್ತೆ ಬರಬಹುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ:

ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಸ್ನೇಹಿತರಿಗೋಸ್ಕರ ಸಮಯವನ್ನು ಕೊಡಬೇಕಾಗಿಬರಬಹುದು. ಅನ್ಯರ ಪ್ರಭಾವಕ್ಕೆ ಒಳಗಾಗಿ ನಿಮ್ಮನ್ನು ಪರಿವರ್ತಿಸಿಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ಚಿಂತಿಸುವಿರಿ. ಮಕ್ಕಳಿಗೆ ನಿಮ್ಮಿಂದ ಪ್ರೊತ್ಸಾಹ ಬೇಕು. ಶಿಕ್ಷಿತರಾದಕಾರಣ ಇದನ್ನು ಹಿಡಿತದಲ್ಲಿ ಇಟ್ಟಿಕೊಳ್ಳಬೇಕಾಗುವುದು. ಯಾವುದನ್ನೂ ಆಗದು ಎಂಬ ಮಾತು ನಿಮ್ಮಿಂದ ಬರುವುದು ಬೇಡ.

ಸಿಂಹ ರಾಶಿ:

ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಸ್ಥಿರಾಸ್ತಿಯ ಖರೀದಿಯನ್ನು ಮಾಡುವಿರಿ. ಹೊಸ ಕೆಲಸವನ್ನು ಮಾಡಲು ನಿಮಗೆ ಧೈರ್ಯ ಸಾಲದು. ನಿಮಗೆ ದೈರ್ಯವನ್ನು ತುಂಬುವವರೂ ಇಲ್ಲವಾಗಬಹುದು. ಪ್ರೇಮಸಂಬಂಧದಲ್ಲಿ ಹುರುಳಿಲ್ಲ ಎನಿಸುವುದು. ಹೂಡಿಕೆಯಲ್ಲಿ ನೀವು ಬದಲಾವಣೆಯನ್ನು ಬಯಸುವಿರಿ. ಅಕಾರಣವಾಗಿ ದುಃಖದ ಸನ್ನಿವೇಷಗಳು ಬರಬಹುದು. ಮನಸ್ಸಿಗೆ ಹಿಡಿಸುವ ಕೆಲಸವನ್ನು ಮಾಡಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂಬ ಖುಷಿ.

ಕನ್ಯಾ ರಾಶಿ:

ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ವ್ಯಾಪಾರದಲ್ಲಿ ಇಷ್ಟವಿಲ್ಲದಿದ್ದರೂ ಲಾಭವನ್ನು ನಿರೀಕ್ಷಿಸುವುದು ಬೇಡ. ಹೂಡಿಕೆ ಮಾಡುವ ಮನಸ್ಸಿದ್ದರೆ ಸ್ವಲ್ಪ ಮಾಡಿ. ಆದರೆ ನೀವು ನಿರೀಕ್ಷಿಸಿದಷ್ಟು ಲಾಭವನ್ನು ಪಡೆಯುವುದು ಕಷ್ಟವಾಗಬಹುದು. ನಿಮ್ಮ ಮಾತಿನಲ್ಲಿ ತಪ್ಪು ಹುಡುಕುವವರಿಗೆ ಭಯಪಡುವಿರಿ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದು.

ತುಲಾ ರಾಶಿ:

ನೀವೇ ಆಯ್ಕೆ ಮಾಡಿಕೊಂಡ ಕ್ಷೇತ್ರವು ನಿಮಗೆ ಯಶಸ್ಸನ್ನು ಕೊಡಲಿದೆ. ಶ್ರಮದ ಅವಶ್ಯಕತೆ ಬಹಳ ಇರಲಿದೆ. ಸ್ನೇಹವು ಬಲಗೊಳ್ಳಬಹುದು. ಕಛೇರಿಯಲ್ಲಿ ಇಂದು ಅಸಮಾಧನಕಾರ ವಾತಾವರಣ ಇರಲಿದೆ. ಕಛೇರಿಯ ಆರಂಭದಲ್ಲಿ ಮೇಲಧಿಕಾರಿಗಳಿಂದ ಬೈಗುಳ ಕೇಳಿಬರುವುದು. ನಿಮ್ಮ ವಿರುದ್ಧ ಯಾರೋ ಏನ್ನೋ ನಡೆಸುತ್ತಿದ್ದಾರೆ ಎಂಬ ಅನುಮಾನ ಕಾಡಲಿದೆ. ಆಗುವುದೆಲ್ಲ ಒಳ್ಳೆಯದಕ್ಕೆ ಎಂಬ ಮಾನಸಿಕತೆ ನಿಮ್ಮನ್ನು ಖುಷಿಯಿಂದ ಇಡಲಿದೆ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ.

ವೃಶ್ಚಿಕ ರಾಶಿ:

ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ಕಾಲು ನೋವಿನಿಂದ ನರಕದ ಅನುಭವವಾಗಬಹುದು. ನಿಮ್ಮ ನಾಯಕತ್ವವು ಎಲ್ಲರಿಗೂ ಅರಿವಿಗೆ ಬರುವುದು. ಅಧಿಕಾರವು ಸಿಕ್ಕ ಮಾತ್ರಕ್ಕೆ ಹೇಗಾದರೂ ಚಲಾಯಿಸಬೇಕೆಂದಿಲ್ಲ. ನೈತಿಕವಾಗಿ ಮಾತು ಇರಲಿ. ಜನರನ್ನು ಅವರ ಯೋಗ್ಯತೆಯ ಆಧಾರದ ಮೇಲೆ ಕೆಲಸಕ್ಕೆ ಜೋಡಿಸಿ. ತಾನು ಕಂಡಿದ್ದು ಮಾತ್ರ ಸರಿ ಎಂಬ ವಾದವು ನಿಮ್ಮವರಿಗೆ ಬೇಸರ ತರಿಸೀತು. ದಾಂಪತ್ಯದಲ್ಲಿ ಉಂಟಾದ ಕಲಹವು ಮಕ್ಕಳ‌ನ್ನು ಪ್ರ ಭಾವಿಸುವುದು.

ಧನು ರಾಶಿ:

ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ವಾಹನ ರಿಪೇರಿಯಿಂದ ಖರ್ಚಾಗಲಿದೆ. ಕುಟುಂಬದಲ್ಲಿ ತಾನೇ ಶ್ರೇಷ್ಠ ಎಂಬ ಭಾವ ಬೇಡ. ಸ್ಥಳ ಖರೀದಿಗೆ ಕೂಡಿಟ್ಟ ಹಣವು ಮತ್ತೆಲ್ಲಿಗೋ ವಿಯೋಗವಾಗುವುದು. ಸಮಯವು ಒಂದೇ ರೀತಿಯಲ್ಲಿ ಇರದು. ಅಕಸ್ಮಾತ್ ಆಗಿ ಸಿಕ್ಕ ಜವಾಬ್ದಾರಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಯಾರನ್ನೂ ನಂಬದವರು ಇಂದು ನಂಬಿ ಮೋಸ ಹೋಗಬಹುದು. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು.

ಇದನ್ನೂ ಓದಿ: ಜುಲೈ 2026 ಮಾಸ ಭವಿಷ್ಯ: ಈ ರಾಶಿಯ ಜನರಿಗೆ ಪರಿವರ್ತನಾ ಯೋಗ; ಜುಲೈ ತಿಂಗಳಲ್ಲಿ ಶುಭವೋ ಶುಭ

ಮಕರ ರಾಶಿ:

ಸರಿಯಾದ ಬದಲಾವಣೆಯನ್ನು ಹೊಂದಿರಿ. ಯಾರನ್ನೂ ಸಾಧರಣ‌ ಮನುಷ್ಯ ತಿಳಿದುಕೊಳ್ಳಬೇಡಿ. ಅವರ ಯೋಗ್ಯತೆಯನ್ನು ಅವರ ಬಟ್ಟೆಯಿಂದ, ಮಾತಿನಿಂದ ಅಳೆಯಲು ನೀವಿಂದು ಅಶಕ್ಯರು. ಒತ್ತಡಗಳು ನಿಮ್ಮ ಆರೋಗ್ಯವನ್ನು ಇನ್ನೂ ದುರ್ಬಲ ಸ್ಥಿತಿಗೆ ಒಯ್ಯುವುದು. ಒಂದೊಂದೇ ಖರ್ಚನ್ನು ನೀವು ನಿಭಾಯಿಸುವಾಗ ಅದೊಂದು ದೊಡ್ಡ ಮೊತ್ತವಾಗಿ ಕಾಣಬಹುದು. ಸಂಕಷ್ಟ‌ ಬಂದಾದ ಎಲ್ಲದಕ್ಕೂ ಏನೋ‌ ಒಂದು ಕಾರಣವಿರಬಹುದು ಎಂದು ಸಮಾಧಾನವನ್ನು ತಂದುಕೊಳ್ಳುವಿರಿ.

ಕುಂಭ ರಾಶಿ:

ಹತ್ತಿರದ ಊರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಹಳೆಯ ವಿಚಾರಗಳನ್ನು ಪತಿಯಿಂದ ಕೇಳುವ ಸಂದರ್ಭ ಬರಬಹುದು. ಸಾಮಾಜಿಕವಾದ ಕೆಲಸವನ್ನು ಮಾಡುವವರಿಗೆ ತಾಳ್ಮೆ ಮುಖ್ಯವಾಗಿ ಬೇಕಾಗಿದೆ. ಆರ್ಥಿಕ ವಿಚಾರದಲ್ಲಿ ಹೊಂದಾಣಿಕೆ ಇದ್ದರೆ ಅದು ಕೆಲವು ಕಾಲದ ವರೆಗೆ ಮಾತ್ರ. ಸ್ವಭಾವವನ್ನು ತಿದ್ದಿಕೊಳ್ಳಲು ಇಷ್ಟಪಟ್ಟರೂ ನಿಮ್ಮ ಜೊತೆಗಿರುವವರು ಅದನ್ನು ಬಿಡಲಾರರು. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು.

ಮೀನ ರಾಶಿ:

ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ನನಸು ಮಾಡಿಕೊಳ್ಳುವಿರಿ. ಬಂಧುಗಳ ವಿಯೋಗವಾರ್ತೆಯು ಬರಬಹುದು. ನೀವಂದು ಅಶಕ್ತರಿಗೆ ಸಹಾಯ ಮಾಡುವಿರಿ. ಅತಿಯಾದ ಹಠಮಾರಿತನವನ್ನು ಉಳಿಸಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು. ಒಲಿಸಿಕೊಳ್ಳಲು ಸ್ತ್ರೀಯರು ನಿಮ್ಮನ್ನು ಪ್ರಶಂಸಿಸಿಯಾರು. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಶ್ರವಣಾ, ಯೋಗ : ವೈಧೃತಿ, ಕರಣ : ಗರಜ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:59 – 15:36, ಯಮಗಂಡ ಕಾಲ 05:59 – 06:35, ಗುಳಿಕ ಕಾಲ 09:11 – 10:47

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ನಾಯಕನಾಗಿ ಮೊದಲ ಅರ್ಧಶತಕ ಬಾರಿಸಿದ ಶ್ರೇಯಸ್ ಅಯ್ಯರ್ – Kannada News | India vs England: Shreyas Iyer Hits 68, Ends Poor Run with Crucial T20 Fifty

ನಾಯಕನಾಗಿ ಮೊದಲ ಟಿ20 ಸರಣಿ ಸೋಲಿನ ಆಘಾತಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್​ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಎರಡರಲ್ಲೂ ವಿಫಲರಾಗಿದ್ದರು. ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 3 ರನ್​ಗಳಿಗೆ ಸುಸ್ತಾಗಿದ್ದ ಅಯ್ಯರ್, ಎರಡನೇ ಟಿ20 ಪಂದ್ಯದಲ್ಲಿ ಕೇವಲ 10 ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದರು (PC-PTI).

Source link

IND vs ENG: ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್‌; ವಿಶ್ವದಾಖಲೆ ಬರೆದ ಅಭಿಷೇಕ್ ಶರ್ಮಾ

Source link

ಅಸ್ಸಾಂನಲ್ಲಿ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಕಿರಣ್ ರಿಜಿಜು – Kannada News | Union Ministers Shivraj Chouhan and Kiren Rijiju visited flood hit areas in Assam Dhemaji

ಧೇಮಾಜಿ, ಜುಲೈ 1: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ಅಸ್ಸಾಂನ ಪ್ರವಾಹ (Assam Flood) ಪೀಡಿತ ಧೇಮಾಜಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಪ್ರವಾಹ ಸಂತ್ರಸ್ತರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದರು. ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಪರಾಮರ್ಶೆ ನಡೆಸಲು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಕೇಂದ್ರ ಸಚಿವರಿಬ್ಬರೂ ಇಂದು ಧೇಮಾಜಿ ಜಿಲ್ಲೆಯ ಅತ್ಯಂತ ತೀವ್ರವಾಗಿ ತತ್ತರಿಸಿರುವ ‘ಅರುಣ್ ಚಾಪೋರಿ’ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಈ ಪ್ರದೇಶವು ಭಾರಿ ವಿನಾಶಕ್ಕೆ ಸಾಕ್ಷಿಯಾಗಿದೆ. ನದಿಯು ತನ್ನ ಹರಿವಿನ ಹಾದಿಯನ್ನು ಬದಲಾಯಿಸಿದ್ದರಿಂದ ಮನೆಗಳು, ಗೃಹೋಪಯೋಗಿ ಆಸ್ತಿಪಾಸ್ತಿಗಳು, ಬೆಳೆಗಳು ಮತ್ತು ವಿದ್ಯುತ್ ಮೂಲಸೌಕರ್ಯಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಬಿಕ್ಕಟ್ಟಿನ ಪ್ರಮಾಣವು ಅತ್ಯಂತ ಗಂಭೀರವಾಗಿದೆ” ಎಂದು ಹೇಳಿದರು.

ರಾಜ್ಯ ಸರ್ಕಾರ ಮತ್ತು ಸಂತ್ರಸ್ತ ಜನರಿಗೆ ಕೇಂದ್ರ ಸರ್ಕಾರವು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದರು. ಅಲ್ಲದೆ, ಈ ಪ್ರದೇಶದಲ್ಲಿ ಪ್ರತಿ ವರ್ಷ ಎದುರಾಗುವ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಗ್ರ ದೀರ್ಘಕಾಲೀನ ಕಾರ್ಯತಂತ್ರವನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಒತ್ತಿಹೇಳಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ – Kannada News | Japan Prime Minister Arrives In Delhi Vows To Deepen Ties With India

ನವದೆಹಲಿ, ಜುಲೈ 1: ಜಪಾನ್ ಪ್ರಧಾನಿ (Japan PM in India) ಸನಾಯ್ ಟಕೈಚಿ ಅವರು ಮೂರು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಇಂದು ನವದೆಹಲಿಗೆ ಆಗಮಿಸಿದ್ದಾರೆ. ಇದು ತಮ್ಮ ಪಾಲಿಗೆ ಮೊದಲ ಭಾರತ ಭೇಟಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿರುವ ಅವರು, ಭಾರತದೊಂದಿಗೆ ಕಾರ್ಯತಂತ್ರದ ಬಾಂಧವ್ಯವನ್ನು ಮತ್ತಷ್ಟು ಆಳವಾಗಿಸಲು ಜಪಾನ್ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಇಳಿದ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಟಕೈಚಿ, ಪ್ರಮುಖ ಜಾಗತಿಕ ಮತ್ತು ದ್ವಿಪಕ್ಷೀಯ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ಉತ್ಸುಕರಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಅವರು ನವದೆಹಲಿಗೆ ಆಗಮಿಸಿದ ಕೆಲವು ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

“ನಾನು ಭಾರತದ ರಾಜಧಾನಿ ದೆಹಲಿಗೆ ಆಗಮಿಸಿದ್ದೇನೆ. ಜಪಾನ್ ಪ್ರಧಾನಿಯಾಗಿ ಸುಮಾರು 3 ವರ್ಷಗಳ ನಂತರ ಇದು ನನ್ನ ಮೊದಲ ಭಾರತ ಪ್ರವಾಸವಾಗಿದೆ. ವೈಯಕ್ತಿಕವಾಗಿ ಹೇಳುವುದಾದರೆ, ನಾನು ಈ ದೇಶಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ” ಎಂದು ಅವರು ಬರೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಚರ್ಚೆಯು ಆರ್ಥಿಕ ಭದ್ರತೆ ಮತ್ತು ಇಂಧನ ಭದ್ರತೆ ಸೇರಿದಂತೆ ಅತ್ಯಂತ ತುರ್ತು ವಿಷಯಗಳ ಮೇಲೆ ಕೇಂದ್ರೀಕೃತವಾಗಲಿದ್ದು, ಉಭಯ ದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಪ್ರಾಣ ಬೆದರಿಕೆ; ‘ಡಿ ಕಂಪನಿ’ ಫ್ಯಾನ್ ಪೇಜ್ ಅಡ್ಮಿನ್ ಸೇರಿ 3 ಫ್ಯಾನ್ಸ್ ಅರೆಸ್ಟ್ – Kannada News | Renukaswamy Murder Case: Three Darshan Fans Arrested for Threatening Witness

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್‌ನ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿತ್ತು. ಈ ಬಗ್ಗೆ ಸಾಕ್ಷಿದಾರ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಸಾಕ್ಷಿಗೆ ಬಿಗಿ ರಕ್ಷಣೆ ನೀಡಿ, ಬೆದರಿಕೆ ಹಾಕಿದ ಆರೋಪಿಗಳಿಗಾಗಿ ಜಾಲ ಬೀಸಿದ್ದರು. ಸದ್ಯ ಕಾರ್ಯಾಚರಣೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ವೇಣು, ಸುಹಾಸ್ ಮತ್ತು ಪುನೀತ್ ಎಂಬ ಮೂವರನ್ನು ಅರೆಸ್ಟ್ ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಧಿತ ಆರೋಪಿಗಳ ಹಿನ್ನೆಲೆಯನ್ನು ಕೆದಕಿದಾಗ ಆಘಾತಕಾರಿ ಸತ್ಯಗಳು ಹೊರಬಂದಿವೆ. ಬಂಧಿತರಲ್ಲಿ ಪುನೀತ್ ಎಂಬಾತ ಸೋಶಿಯಲ್ ಮೀಡಿಯಾದಲ್ಲಿ ‘ಡಿ ಕಂಪನಿ’ ಫ್ಯಾನ್ ಪೇಜ್ ಅನ್ನು ಸಕ್ರಿಯವಾಗಿ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರಾಗಿದ್ದಾರೆ.

ಸಾಕ್ಷಿದಾರ ಸಂದೀಪ್‌ ಅವರ ಜೊತೆ ಮಾತುಕತೆ ನಡೆಸುವ ನೆಪದಲ್ಲಿ ಯಾವುದೋ ಒಂದು ಜಾಗಕ್ಕೆ ಕರೆಸಿಕೊಂಡಿದ್ದ ಈ ಗ್ಯಾಂಗ್, ಆತನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡಿಸಿದೆ. ಈ ವೇಳೆ ಕೋರ್ಟ್‌ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ತೀವ್ರ ಒತ್ತಡ ಹೇರಿದ್ದಾರೆ. ಇದಕ್ಕೆ ಸಾಕ್ಷಿದಾರ ಒಪ್ಪದಿದ್ದಾಗ ಆರೋಪಿ ಸುಹಾಸ್ ಜೈಲಿನಲ್ಲಿರುವ ದರ್ಶನ್ ಹೆಸರೇಳಿ ಪ್ರಾಣ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್: 17ನೇ ಸಾಕ್ಷಿಗೆ ಬೆದರಿಕೆ ಕರೆ; ಭದ್ರತೆ ನೀಡಲು ಕೋರ್ಟ್ ಆದೇಶ

ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಮತ್ತು ಆತನ ಗೆಳತಿ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿದ್ದಾರೆ. ಪವಿತ್ರಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್‌ಆರ್ ನಗರದ ಶೆಡ್‌ಗೆ ಕರೆತಂದು ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ಇದೆ. ಈ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ಈಗಾಗಲೇ ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಸದ್ಯ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ENG: ಇಂಗ್ಲೆಂಡ್‌ ವಿರುದ್ಧವೂ ಪುಟಿದೇಳದ ಸಂಜು ಸ್ಯಾಮ್ಸನ್​ಗೆ ಇನ್ನೇಷ್ಟು ಅವಕಾಶ?

Source link

ಕರೆಂಟ್, ನೀರು ಆಯ್ತು ಈಗ ಹಾಸ್ಪಿಟಲ್ ಬಿಲ್ ಸರದಿ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರವೂ ದುಬಾರಿ – Kannada News | Minimum Wage Hike Pushes Private Hospitals to Increase Treatment Fees

ಪ್ರಾತಿನಿಧಿಕ ಚಿತ್ರImage Credit source: Getty images

ಬೆಂಗಳೂರು, ಜುಲೈ 01: ಕರೆಂಟ್, ನೀರಿನ ದರ ಏರಿಕೆ ಮಧ್ಯೆ ಇದೀಗ ಖಾಸಗಿ ಆಸ್ಪತ್ರೆಗಳ (Private Hospitals) ಚಿಕಿತ್ಸಾ ದರವು ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಸರ್ಕಾರ ಕನಿಷ್ಠ ಕಾರ್ಮಿಕ ವೇತನವನ್ನು ಶೇ.60ರಷ್ಟು ಹೆಚ್ಚಿಸಿದ ಹಿನ್ನೆಲೆ, ಆಸ್ಪತ್ರೆಗಳ ನಿರ್ವಹಣಾ ವೆಚ್ಚ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಅಂತ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಚಿಕಿತ್ಸಾ ದರ ಏರಿಕೆಗೆ ಮುಂದಾಗಿದೆ.

ಕನಿಷ್ಠ ವೇತನ ಹೆಚ್ಚಳ: ಖಾಸಗಿ ಆಸ್ಪತ್ರೆಗಳಿಗೆ ಆರ್ಥಿಕ ಹೊರೆ 

ರಾಜಧಾನಿಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಲಕ್ಷಣಗಳು ಕಾಣಿಸುತ್ತಿವೆ. ಕನಿಷ್ಠ ವೇತನವನ್ನು ಸರ್ಕಾರ ಶೇ.60ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಖಾಸಗಿ ಆಸ್ಪತ್ರೆಗಳ ಮೇಲೆ ಭಾರೀ ಆರ್ಥಿಕ ಹೊರೆ ತಂದಿದೆ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟ ಆರೋಪಿಸಿದೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಇನ್ಮುಂದೆ ಸಿಬ್ಬಂದಿ ಹಾಜರತಿಗೆ ವೇತನ ಲಿಂಕ್!

ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆಯ ಪ್ರಕಾರ ಬೆಂಗಳೂರಿನಲ್ಲಿ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಟ 23,376 ರೂಪಾಯಿ ವೇತನ ನಿಗದಿಯಾಗಿದೆ. ಇದರಿಂದ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ನರ್ಸ್‌ಗಳು, ಸಪೋರ್ಟ್ ಸ್ಟಾಫ್, ಜೂನಿಯರ್ ಮೆಡಿಕಲ್ ಸಿಬ್ಬಂದಿ ಸೇರಿದಂತೆ ಬಹುತೇಕ ಉದ್ಯೋಗಿಗಳ ವೇತನದಲ್ಲಿ ಏರಿಕೆಯಾಗಲಿದ್ದು, ಆಸ್ಪತ್ರೆಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಲಿದೆ ಅಂತ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ಆಕ್ರೋಶ ವ್ಯಕ್ತಪಡಿಸಿದೆ.

ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷ ಡಾ ಶೋಭಾ ಪ್ರಕಾಶ್​ ಹೇಳಿದ್ದಿಷ್ಟು

ಈಗಾಗಲೇ ವಿದ್ಯುತ್ ದರ, ನೀರಿನ ದರ ಸೇರಿದಂತೆ ವಿವಿಧ ಕಾರ್ಯಾಚರಣಾ ವೆಚ್ಚಗಳು ಹೆಚ್ಚಿರುವ ಪರಿಸ್ಥಿತಿಯಲ್ಲಿ, ಏಕಾಏಕಿ ಕನಿಷ್ಠ ವೇತನವನ್ನು ಶೇ.60ರಷ್ಟು ಹೆಚ್ಚಿಸಿರುವುದು ಮಧ್ಯಮ ಮತ್ತು ಸಣ್ಣ ಆಸ್ಪತ್ರೆಗಳ ನಿರ್ವಹಣೆ ಸವಾಲಾಗಿದೆ. ಹೀಗಾಗಿ ಸರ್ಕಾರ ಕನಿಷ್ಠ ವೇತನದ ಆದೇಶವನ್ನು ಮರುಪರಿಶೀಲಿಸಿ ತಿದ್ದುಪಡಿ ಮಾಡಬೇಕು. ಇಲ್ಲದಿದ್ದರೆ ಚಿಕಿತ್ಸಾ ದರ ಹೆಚ್ಚಿಸುವುದು ಆಸ್ಪತ್ರೆಗಳಲ್ಲಿ ಅನಿವಾರ್ಯವಾಗಲಿದೆ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷ ಡಾ ಶೋಭಾ ಪ್ರಕಾಶ್​ ಹೇಳಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆ ಪಡೆದ್ರೂ ಮಕ್ಕಳಾಗಿಲ್ಲ: ರಾಯಚೂರು ಖಾಸಗಿ ಐವಿಎಫ್ ಮಾಫಿಯಾ ಬಯಲು

ಇನ್ನೊಂದೆಡೆ, ಆಸ್ಪತ್ರೆಗಳಷ್ಟೇ ಅಲ್ಲದೆ ವಿವಿಧ ಕೈಗಾರಿಕಾ ವಲಯ ಕೂಡ ಕನಿಷ್ಠ ವೇತನ ಹೆಚ್ಚಳದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು, ಹೋಟೆಲ್ ಉದ್ಯಮವು ಇದರ ವಿರುದ್ಧ ಕೋರ್ಟ್ ಮೊರೆ ಕೂಡ ಹೋಗಿದೆ. ಒಟ್ಟಿನಲ್ಲಿ ಕಾರ್ಮಿಕರ ಕನಿಷ್ಠ ವೇತನ ಏರಿಕೆಗೆ ಎಲ್ಲ ವಲಯಗಳಿಂದ ವ್ಯಾಪಕರ ವಿರೋಧ ಶುರುವಾಗಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version