GT vs RR: ಗೆದ್ದವರು RCB ತಂಡದ ಎದುರಾಳಿ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 29) ಮುಲ್ಲನ್ಪುರದ ಎಂವೈಎಸ್ಸಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಫೈನಲ್ಗೆ ಎಂಟ್ರಿ ಕೊಡಲಿದೆ. ಅಂದರೆ ಇಂದಿನ ಮ್ಯಾಚ್ ವಿಜಯಿ ಮೇ 31 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಹೀಗಾಗಿ ಆರ್ಸಿಬಿ ಎದುರಾಳಿ ಯಾರು ಎಂಬ…