ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ: ಮೂರೇ ದಿನಗಳಲ್ಲಿ ಕೆಆರ್‌ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು! – Kannada News | KRS Dam Water Level Reaches 100 Feet After 6 TMC Inflow in Three Days
ಮಂಡ್ಯ, ಆಗಸ್ಟ್ 3: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆ ಸುರಿಯುತ್ತಿದ್ದು, ಜಲಾಶಯದಲ್ಲಿ ಸುಮಾರು 8 ಅಡಿಯಷ್ಟು ನೀರು ಏರಿಕೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಕೇವಲ 17 ಟಿಎಂಸಿ ಇದ್ದ ನೀರಿನ ಸಂಗ್ರಹ ಈಗ 23 ಟಿಎಂಸಿ ತಲುಪಿದೆ. ಪ್ರಸ್ತುತ ಕೆಆರ್‌ಎಸ್ ಜಲಾಶಯಕ್ಕೆ 32,048 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 1,821 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಗರಿಷ್ಠ 124.80 ಅಡಿ…