ರಾಜ್ಯ ಕಾಂಗ್ರೆಸ್ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್? – Kannada News | Karnataka Cabinet Expansion: Will the Congress Finalise the Aspirants’ List by July 17
ಬೆಂಗಳೂರು, ಜುಲೈ 13: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಿ 40 ದಿನಗಳೇ ಕಳೆಯುತ್ತ ಬಂತು. ಆದರೆ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಮಾತ್ರ ಇನ್ನೂ ಬಿಟ್ಟಿಲ್ಲ. ಯಾವಾಗ ಗ್ರಹಣ ಬಿಡಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಸಿಕ್ತಿಲ್ಲ. 15ಕ್ಕೂ ಹೆಚ್ಚು ಸಚಿವ ಸ್ಥಾನಗಳು ಖಾಲಿ ಇವೆ. ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣಾ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ. ಇದರ ಭಾಗವಾಗಿ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಕಳೆದ ಹಲವು ದಿನಗಳ ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ…