ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match
2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ….