West Bengal:ಬಂಗಾಳದ ಲಕ್ಷ್ಮಿ ಭಂಡಾರ್ ಯೋಜನೆಯಲ್ಲಿ ಬೃಹತ್ ವಂಚನೆ: 30 ಲಕ್ಷ ಜನರಿಗೆ ಸಿಗಲ್ಲ ಸೌಲಭ್ಯ ಸಿಎಂ ಸುವೇಂದು ಘೋಷಣೆ

ಕೋಲ್ಕತ್ತಾ, ಮೇ 28: ಪಶ್ಚಿಮ ಬಂಗಾಳ(West Bengal) ರಾಜಕೀಯದಲ್ಲಿ ಮಹಿಳಾ ಕಲ್ಯಾಣ ಯೋಜನೆಗಳ ಕುರಿತು ಮತ್ತೊಮ್ಮೆ ಭಾರಿ ವಿವಾದ ಸೃಷ್ಟಿಯಾಗಿದೆ. ರಾಜ್ಯದ ಜನಪ್ರಿಯ ‘ಲಕ್ಷ್ಮಿ ಭಂಡಾರ್’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸುಮಾರು 3 ಮಿಲಿಯನ್ (30 ಲಕ್ಷ) ಫಲಾನುಭವಿಗಳು ಈ ಯೋಜನೆಗೆ ಸಂಪೂರ್ಣ ಅನರ್ಹರಾಗಿದ್ದಾರೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ  ಹೇಳಿದ್ದಾರೆ.

ಅನರ್ಹರಾಗಲು ಕಾರಣವೇನು?

ನಬನ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಈ 30 ಲಕ್ಷ ಫಲಾನುಭವಿಗಳು ಭಾರತೀಯ ನಾಗರಿಕರಲ್ಲ ಅಥವಾ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಶಾಶ್ವತವಾಗಿ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ನಿಯಮಗಳ ಪ್ರಕಾರ ಇವರು ಯೋಜನೆಗೆ ಅರ್ಹರಲ್ಲದಿದ್ದರೂ, ಸೌಲಭ್ಯ ಪಡೆಯುತ್ತಿದ್ದಾರೆ. ಕೆಲವರು ಅಗತ್ಯ ಪೌರತ್ವ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹೊಸ ‘ಅನ್ನಪೂರ್ಣ ಭಂಡಾರ್’ ಯೋಜನೆ ಘೋಷಣೆ

ಮಮತಾ ಬ್ಯಾನರ್ಜಿ ಸರ್ಕಾರ ಆರಂಭಿಸಿದ್ದ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪರ್ಯಾಯವಾಗಿ, ಬಿಜೆಪಿಯ ಪ್ರಸ್ತಾವಿತ ಹೊಸ ಯೋಜನೆ ‘ಅನ್ನಪೂರ್ಣ ಭಂಡಾರ್’ ನಮೂನೆಯನ್ನು (ಫಾರ್ಮ್) ಮುಖ್ಯಮಂತ್ರಿ ಪ್ರಸ್ತುತಪಡಿಸಿದರು. ಚುನಾವಣಾ ಭರವಸೆಯಂತೆ ಈ ಹೊಸ ಯೋಜನೆಯಡಿ ಅರ್ಹ ಮಹಿಳೆಯರಿಗೆ ತಿಂಗಳಿಗೆ 3 ಸಾವಿರ ರೂ. ರೂಪಾಯಿ ಆರ್ಥಿಕ ಸಹಾಯ ನೀಡಲಾಗುತ್ತದೆ.

ಮತ್ತಷ್ಟು ಓದಿ: ಬಂಗಾಳದ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಪ್ರಸ್ತುತ ಇರುವ ಲಕ್ಷ್ಮಿ ಭಂಡಾರ್ ಯೋಜನೆಯಡಿ ಸಾಮಾನ್ಯ ವರ್ಗದ ಮಹಿಳೆಯರಿಗೆ ತಿಂಗಳಿಗೆ 1,500 ರೂ.. ಹಾಗೂ ಎಸ್‌ಸಿ/ಎಸ್‌ಟಿ ವರ್ಗದ ಮಹಿಳೆಯರಿಗೆ 1700 ರೂ. ನೀಡಲಾಗುತ್ತಿದೆ. ಹೊಸ ಯೋಜನೆಗೆ ಸರಿಯಾದ ದಾಖಲೆಗಳಿದ್ದವರು ಮಾತ್ರ ಅರ್ಹರಾಗಿರುತ್ತಾರೆ. ಪೌರತ್ವ ಕಾಯ್ದೆಗೆ (CAA) ಸಂಬಂಧಿಸಿದ ಅರ್ಜಿ ಸಲ್ಲಿಸಿದವರು ಅಥವಾ ವಿಶೇಷ ನ್ಯಾಯಮಂಡಳಿಗೆ ಮೇಲ್ಮನವಿ ಸಲ್ಲಿಸಿದವರನ್ನು ಮಾತ್ರ ಅರ್ಹರೆಂದು ಪರಿಗಣಿಸಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ವಿಶೇಷ ಅರ್ಜಿ ನಮೂನೆಯ ಮೂಲಕ ಇನ್ನು ಮುಂದೆ ಫಲಾನುಭವಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಮಹಿಳಾ ಕಲ್ಯಾಣ ಸಚಿವೆ ಅಗ್ನಿಮಿತ್ರ ಪಾಲ್ ಈ ಪ್ರಕ್ರಿಯೆಯನ್ನು ನೋಡಿಕೊಳ್ಳಲಿದ್ದು, ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಕಾರ್ಯದರ್ಶಿ ಕೂಡ ಇದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ಪರಿಶೀಲನಾ ಪ್ರಕ್ರಿಯೆ ಮುಗಿಯಲು ಸಮಯ ತೆಗೆದುಕೊಳ್ಳುವುದರಿಂದ, ಅಲ್ಲಿಯವರೆಗೆ ಸದ್ಯದ ಫಲಾನುಭವಿಗಳಿಗೆ ಹಳೆಯ ಯೋಜನೆಯಡಿ ಹಣಕಾಸಿನ ನೆರವು ಸಿಗುತ್ತಲೇ ಇರಲಿದೆ ಎಂದು ಸರ್ಕಾರ ಭರವಸೆ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಗೂಬೆಗಳನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ (optical Illusion) ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಕೆಲವು ಒಗಟಿನ ಚಿತ್ರಗಳನ್ನು ಬಿಡಿಸುವಾಗ ಟ್ರಿಕ್ಕಿ ಅನಿಸುತ್ತದೆ. ಆದರೆ ಕೆಲವರು ತಮ್ಮ ಬುದ್ಧಿವಂತಿಕೆ ಬಳಸಿ ಸುಲಭವಾಗಿ ಒಗಟು ಬಿಡಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಇದರಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಮೂರು ಗೂಬೆಗಳನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯ ಹತ್ತು ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ.

ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು?

ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಜನರ ಗುಂಪನ್ನು ಕಾಣಬಹುದು. ಈ ಚಿತ್ರದಲ್ಲಿ ಜನರ ನಡುವೆ ಪ್ರಾಣಿ ಪಕ್ಷಿಗಳಿವೆ. ಆದರೆ ನೀವು ಈ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಮೂರು ಗೂಬೆಗಳನ್ನು ಕಂಡು ಹಿಡಿಯಬೇಕು. ಮೊದಲಿಗೆ ನಿಮಗೆ ಕಷ್ಟವೆನಿಸಬಹುದು.. ನೀವು ಎರಡು ಅಥವಾ ಮೂರು ಬಾರಿ ಪ್ರಯತ್ನಿಸಿದರೆ ಹತ್ತು ಸೆಕೆಂಡುಗಳಲ್ಲಿ ಗೂಬೆ ಕಂಡು ಹಿಡಿಯಲು ಸಾಧ್ಯ.

ಇದನ್ನೂ ಓದಿ: ಈ ಚಿತ್ರದಲ್ಲಿ o ಅಕ್ಷರಗಳ ನಡುವೆ ಇರುವ ಸೊನ್ನೆಯನ್ನು ಗುರುತಿಸಬಲ್ಲಿರಾ

ಗೂಬೆಗಳು ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುವ ಈ ಇಲ್ಯೂಷನ್ ಚಿತ್ರದಲ್ಲಿ ಗೂಬೆಗಳನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲವೇ. ಜನರ ಗುಂಪಿನ ನಡುವೆ ಈ ಪಕ್ಷಿಯಿದ್ದರೂ ಅಷ್ಟು ಸುಲಭವಾಗಿ ಈ ಗೂಬೆಗಳು ನಿಮ್ಮ ಕಣ್ಣಿಗೆ ಬೀಳುವುದಿಲ್ಲ. ಹೆಚ್ಚು ಚಿಂತಿಸುವ ಅಗತ್ಯವಿಲ್ಲ, ನಾವು ಈ ಕೆಳಗಿನ ಚಿತ್ರದಲ್ಲಿ ಗೂಬೆ ಎಲ್ಲಿದೆ ಎಂದು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:01 am, Thu, 28 May 26

Source link

ಮಗನ ಸಿನಿಮಾಕ್ಕಿದ್ದ ಸಮಸ್ಯೆ ಪರಿಹರಿಸಿದ ಮೆಗಾಸ್ಟಾರ್ ಚಿರಂಜೀವಿ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ‘ಆರ್​​ಆರ್​​ಆರ್’ ಬಳಿಕ ರಾಮ್ ಚರಣ್ ಭಾರಿ ನಿರೀಕ್ಷೆ ಇರಿಸಿರುವ ಸಿನಿಮಾ ಇದಾಗಿದೆ. ಸಿನಿಮಾಕ್ಕಾಗಿ ಸಾಕಷ್ಟು ಶ್ರಮವನ್ನು ರಾಮ್ ಚರಣ್ ಹಾಕಿದ್ದಾರೆ. ಸಿನಿಮಾಕ್ಕೆ ಭಾರಿ ದೊಡ್ಡ ಬಂಡವಾಳ ಹೂಡಲಾಗಿದ್ದು, ಸಿನಿಮಾದ ಪ್ರಚಾರಕ್ಕೂ ಕೋಟ್ಯಂತರ ಖರ್ಚು ಮಾಡಲಾಗಿದೆ. ಆದರೆ ಸಿನಿಮಾದ ಬಿಡುಗಡೆ ಸಮಯದಲ್ಲಿ ಕೆಲವು ಪ್ರದರ್ಶಕರು ಮತ್ತು ವಿತರಕರು ಕಿರಿಕ್ ಪ್ರಾರಂಭಿಸಿದ್ದಾರೆ. ತೆಲಂಗಾಣದ ಕೆಲ ಸಿನಿಮಾ ಪ್ರದರ್ಶಕರಂತೂ ತಾವು ಸಿನಿಮಾ ಬಿಡುಗಡೆಗೆ ಅನುಮತಿ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದೀಗ ಸಮಸ್ಯೆ ಪರಿಹಾರಕ್ಕಾಗಿ ಖುದ್ದು ಚಿರಂಜೀವಿ ಅವರೇ ಮುಂದೆ ಬಂದಿದ್ದಾರೆ.

‘ಪೆದ್ದಿ’ ಸಿನಿಮಾದ ಲಾಭದಲ್ಲಿ ಪಾಲು ನೀಡಬೇಕು ಎಂದು ಪ್ರದರ್ಶಕರು ಒತ್ತಾಯಿಸಿದ್ದರು. ಅಲ್ಲದೆ, ‘ಪೆದ್ದಿ’ ಸಿನಿಮಾದ ಟಿಕೆಟ್ ದರಗಳನ್ನು ಹೆಚ್ಚಿಸಲು ಸರ್ಕಾರ ಅನುಮತಿ ಕೊಡಬಾರದು, ವಿಶೇಷ ಶೋಗಳಿಗೂ ಅನುಮತಿ ಕೊಡಬಾರದು ಎಂದು ಆಗ್ರಹಿಸಿದ್ದರು. ಒಂದೊಮ್ಮೆ ‘ಪೆದ್ದಿ’ ಸಿನಿಮಾ ನಿರ್ಮಾಪಕರು ಲಾಭ ಹಂಚಿಕೆಗೆ ಒಪ್ಪಲಿಲ್ಲವಾದರೆ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಪ್ರದರ್ಶಕರು ಸುದ್ದಿಗೋಷ್ಠಿ ಕರೆಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ಇದೀಗ ರಾಮ್ ಚರಣ್ ತಂದೆ, ಮೆಗಾಸ್ಟಾರ್ ಚಿರಂಜೀವಿ ಅವರು ಖುದ್ದು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರ ಜೊತೆಗೆ ಮಾತುಕತೆ ನಡೆಸಿದ್ದು, ಪ್ರದರ್ಶಕರನ್ನು ಒಪ್ಪಿಸಿದ್ದು, ‘ಪೆದ್ದಿ’ ಸಿನಿಮಾವನ್ನು ಈ ಹಿಂದಿನ ಮಾದರಿಯಲ್ಲಿಯೇ ಬಿಡುಗಡೆ ಮಾಡುವಂತೆ ಒಪ್ಪಿಸಿದ್ದಾರೆ. ಏಷಿಯನ್ ಸುನಿಲ್, ಅಲ್ಲು ಅರವಿಂದ್, ಚೇಂಬರ್ ಅಧ್ಯಕ್ಷ ಸುರೇಶ್ ಇನ್ನೂ ಹಲವರನ್ನು ಸೇರಿಸಿಕೊಂಡು ಸಂಧಾನ ನಡೆಸಿದ ಮೆಗಾಸ್ಟಾರ್ ಚಿರಂಜೀವಿ, ಮುನಿಸಿಕೊಂಡಿದ್ದ ಪ್ರದರ್ಶಕರನ್ನು ವಿತರಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ರಂಗ ಸಮಸ್ಯೆಗೆ ಸಿಲುಕಿದಾಗ ಪ್ರತಿಬಾರಿ ಖುದ್ದು ಮುಂದೆ ಬಂದು ಸಮಸ್ಯೆ ಬಗೆಹರಿಸಲು ಯತ್ನಿಸಿದ್ದಾರೆ. ಆಂಧ್ರದಲ್ಲಿ ಈ ಹಿಂದೆ ಜಗನ್ ಸಿಎಂ ಆಗಿದ್ದಾಗ, ಸಿನಿಮಾ ಟಿಕೆಟ್ ದರಗಳನ್ನು ಧಾರುಣವಾಗಿ ತಗ್ಗಿಸಿದ್ದರು, ಚಿತ್ರಮಂದಿರಗಳನ್ನು ಮುಚ್ಚಿಸಿದ್ದರು, ವಿಶೇಷ ಶೋಗಳನ್ನು ರದ್ದು ಮಾಡಿದ್ದರು. ಆಗಲೂ ಸಹ ಚಿರಂಜೀವಿ, ಖುದ್ದು ಜಗನ್ ಅವರನ್ನು ಭೇಟಿಯಾಗಿ ಹಲವು ಸುತ್ತುಗಳ ಮಾತುಕತೆ ನಡೆಸಿದ್ದರು. ಈಗ ಮತ್ತೆ ತಮ್ಮ ಹಿರಿತನವನ್ನು ಚಿರಂಜೀವಿ ಪ್ರದರ್ಶಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆತ್ಮೀಯ ಕ್ಷಣ! ಇಲ್ಲಿವೆ ಅಪರೂಪದ ಚಿತ್ರಗಳು

Source link

ಅಭಿಮಾನಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಮುಂದಾದ ಧೋನಿ

ಐಪಿಎಲ್ 2026ರ ಸೀಸನ್‌ನಲ್ಲಿ (IPL 2026) ಒಂದೂ ಪಂದ್ಯ ಆಡದಿದ್ದರೂ ಎಂ.ಎಸ್. ಧೋನಿ ಅವರ ಕ್ರೇಜ್ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಇಡೀ ಸೀಸನ್‌ನಲ್ಲಿ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಧೋನಿ, ಮುಂದಿನ ಐಪಿಎಲ್ 2027ರಲ್ಲಿ ಮರಳಿ ಮೈದಾನಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಧೋನಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಧೋನಿ ಮುಂದಿನ ಸೀಸನ್‌ನಲ್ಲಿ ಆಡಲಿದ್ದಾರೆ ಮತ್ತು ಸಿಎಸ್‌ಕೆ ಅಭಿಮಾನಿಗಳಿಗೆ ಚೆನ್ನೈನಲ್ಲಿ ವಿದಾಯದ ಪಂದ್ಯ ಆಡುವುದಾಗಿ ಕೊಟ್ಟಿರುವ ಮಾತನ್ನು ಅವರು ಖಂಡಿತ ಉಳಿಸಿಕೊಳ್ಳಲಿದ್ದಾರೆ ಎಂದು ತಂಡದ ಮ್ಯಾನೇಜ್‌ಮೆಂಟ್ ವಿಶ್ವಾಸ ವ್ಯಕ್ತಪಡಿಸಿದೆ.

ಈ ಬಾರಿಯ ಸೀಸನ್‌ನ ಆರಂಭದಲ್ಲಿ ಕಾಲಿನ ಸ್ನಾಯು ಸೆಳೆತ ಮತ್ತು ನಂತರದ ದಿನಗಳಲ್ಲಿ ಹೆಬ್ಬೆರಳಿನ ಗಾಯಕ್ಕೆ ಒಳಗಾದ ಧೋನಿ, 19 ವರ್ಷಗಳ ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಡೀ ಸೀಸನ್‌ನಲ್ಲಿ ಒಂದೂ ಪಂದ್ಯ ಆಡದೆ ಹೊರಗುಳಿದರು. ಜುಲೈ ತಿಂಗಳಲ್ಲಿ ಧೋನಿಗೆ 45 ವರ್ಷ ತುಂಬಲಿದ್ದು, ಅವರ ವಯಸ್ಸು ಮತ್ತು ಫಿಟ್‌ನೆಸ್ ನೋಡಿದರೆ ಅವರು ಈಗಾಗಲೇ ತಮ್ಮ ಕೊನೆಯ ಪಂದ್ಯ ಆಡಿದ್ದಾರಾ ಎಂಬ ಆತಂಕ ಫ್ಯಾನ್ಸ್‌ನಲ್ಲಿ ಮನೆಮಾಡಿತ್ತು.

ಮೇ 18 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಸಿಎಸ್‌ಕೆ ತಂಡದ ಕೊನೆಯ ತವರು ಪಂದ್ಯ ಧೋನಿಯ ವಿದಾಯದ ಪಂದ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತಾದರೂ, ಗಾಯದ ಕಾರಣ ಧೋನಿ ಅಂಗಳಕ್ಕಿಳಿಯಲಿಲ್ಲ.

ಕೊಟ್ಟ ಮಾತು ಉಳಿಸಿಕೊಳ್ಳಲಿದ್ದಾರೆ ಧೋನಿ: ಸಿಎಸ್‌ಕೆ ಸಿಇಒ

ಧೋನಿ ನಿವೃತ್ತಿ ವದಂತಿಗಳ ಬೆನ್ನಲ್ಲೇ ‘ಕ್ರಿಕ್‌ಬಜ್’ ಜೊತೆ ಮಾತನಾಡಿರುವ ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್, ‘ನನ್ನ ಪ್ರಕಾರ ಧೋನಿ ಮುಂದಿನ ಸೀಸನ್‌ನಲ್ಲಿ ಆಡಲಿದ್ದಾರೆ. ಈ ಬಗ್ಗೆ ನಾವು ಇನ್ನೂ ಅವರ ಜೊತೆ ಅಧಿಕೃತವಾಗಿ ಮಾತನಾಡಿಲ್ಲವಾದರೂ, ಅವರು ಮರಳಿ ಬರುತ್ತಾರೆಂಬ ಭರವಸೆ ನಮಗಿದೆ. ತಾವು ಆಡುವ ಕೊನೆಯ ಐಪಿಎಲ್ ಪಂದ್ಯವನ್ನು ಚೆನ್ನೈನಲ್ಲೇ ಆಡುವುದಾಗಿ ಧೋನಿ ಸಿಎಸ್‌ಕೆ ಅಭಿಮಾನಿಗಳಿಗೆ ಮಾತು ಕೊಟ್ಟಿದ್ದಾರೆ. ಅವರು ಆ ಮಾತನ್ನು ಖಂಡಿತ ಉಳಿಸಿಕೊಳ್ಳಲಿದ್ದಾರೆ ಎನ್ನುವ ನಂಬಿಕೆ ನಮಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ರಾಹುಲ್ ದ್ರಾವಿಡ್ ಸಿಎಸ್‌ಕೆ ಕೋಚ್ ಆಗ್ತಾರಾ?

ಮತ್ತೊಂದೆಡೆ, ಕಳೆದ ಮೂರು ಸೀಸನ್‌ಗಳಿಂದ ಸಿಎಸ್‌ಕೆ ಪ್ಲೇಆಫ್ ತಲುಪಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರನ್ನು ಬದಲಾಯಿಸಬೇಕು ಎಂಬ ಒತ್ತಾಯ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿದೆ. ಫ್ಲೆಮಿಂಗ್ ಜಾಗಕ್ಕೆ ಭಾರತದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಬರಲಿದ್ದಾರೆ ಎಂಬ ವದಂತಿಗಳೂ ಹಬ್ಬಿವೆ.

ಇದನ್ನೂ ಓದಿ:  ರಾಜಸ್ಥಾನ್ ವಿರುದ್ಧ ಸೋತು ಐಪಿಎಲ್​ನಿಂದ ಹೊರಬಿದ್ದ ಸನ್‌ರೈಸರ್ಸ್

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಶಿ ವಿಶ್ವನಾಥನ್, ‘ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ದ್ರಾವಿಡ್ ಅವರನ್ನೂ ಸಂಪರ್ಕಿಸಿಲ್ಲ’ ಎಂದು ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ ಎಮ್ಮೆಗೆ ಕೊನೆ ಕ್ಷಣದಲ್ಲಿ ಸಿಕ್ಕಿತು ಜೀವದಾನ, ಈದ್ ಬಲಿ ನಿಲ್ಲಿಸಿ ಮೃಗಾಲಯಕ್ಕೆ ಕಳುಹಿಸುವಂತೆ ಸರ್ಕಾರದ ಆದೇಶ

ಢಾಕಾ, ಮೇ 28: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಪ್ರಸಿದ್ಧ ಕೇಶವಿನ್ಯಾಸವನ್ನು ಹೋಲುವ ಕೂದಲನ್ನು ಹೊಂದಿದ್ದರಿಂದ ಸಾಮಾಜಿಕ ಮಾಧ್ಯಮದಲ್ಲಿ ‘ಡೊನಾಲ್ಡ್ ಟ್ರಂಪ್’ ಎಂದೇ ಜಾಗತಿಕವಾಗಿ ವೈರಲ್ ಆಗಿದ್ದ ಬಾಂಗ್ಲಾದೇಶದ ಅಪರೂಪದ ಆಲ್ಬಿನೋ ಎಮ್ಮೆಯೊಂದಕ್ಕೆ ಕೊನೆಗೂ ಜೀವದಾನ ಸಿಕ್ಕಿದೆ. ಈದ್ ಹಬ್ಬದ ಸಂದರ್ಭದಲ್ಲಿ ಬಲಿ ನೀಡಲು ಈ ಎಮ್ಮೆಯನ್ನು ಮಾರಾಟ ಮಾಡಲಾಗಿತ್ತಾದರೂ, ಕೊನೆಯ ಕ್ಷಣದಲ್ಲಿ ಪ್ರಧಾನಿ ತಾರಿಕ್ ರೆಹಮಾನ್ ಅವರ ಸರ್ಕಾರವು ಮಧ್ಯಪ್ರವೇಶಿಸಿ ಬಲಿಯನ್ನು ತಡೆದಿದೆ.

ಗೃಹ ಸಚಿವರ ಮಹತ್ವದ ಆದೇಶ
ಬಾಂಗ್ಲಾದೇಶದ ಗೃಹ ಸಚಿವ ಸಲಾಹುದ್ದೀನ್ ಅಹ್ಮದ್ ಅವರ ವಿಶೇಷ ಆದೇಶದ ಮೇರೆಗೆ, ಎಮ್ಮೆಯನ್ನು ಖರೀದಿಸಿದ್ದ ವ್ಯಕ್ತಿಗೆ ಹಣವನ್ನು ಮರುಪಾವತಿಸಲು ಮತ್ತು ಎಮ್ಮೆಯನ್ನು ಸುರಕ್ಷಿತವಾಗಿ ಢಾಕಾದ ರಾಷ್ಟ್ರೀಯ ಮೃಗಾಲಯಕ್ಕೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದೆ. ಈ ವಿಶಿಷ್ಟ ಪ್ರಾಣಿಯನ್ನು ನೋಡಲು ವಿಪರೀತ ಜನಸಮೂಹ ಜಮಾಯಿಸುತ್ತಿದ್ದರಿಂದ, ಅಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಮತ್ತು ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ‘ಡೊನಾಲ್ಡ್ ಟ್ರಂಪ್’ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದರಿಂದ ಯಾವುದೇ ಅನಗತ್ಯ ಜಾಗತಿಕ ಅಥವಾ ರಾಜಕೀಯ ಉದ್ವಿಗ್ನತೆ ಸೃಷ್ಟಿಯಾಗಬಾರದು ಎಂಬುದು ಸರ್ಕಾರದ ಉದ್ದೇಶ ಎನ್ನಲಾಗಿದೆ.

‘ಡೊನಾಲ್ಡ್ ಟ್ರಂಪ್’ ಎಂದು ಹೆಸರಿಟ್ಟಿದ್ದು ಏಕೆ?
ಚಿನ್ನದ ಕೇಶವಿನ್ಯಾಸ: ಸುಮಾರು700ಕೆಜಿ ತೂಕದ ಈ ಆಲ್ಬಿನೋ ಎಮ್ಮೆಯ ತಲೆಯ ಮೇಲೆ ಚಿನ್ನದ ಬಣ್ಣದ ಕೂದಲು ತೂಗಾಡುತ್ತಿತ್ತು. ಈ ಕೇಶವಿನ್ಯಾಸವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಂತೆಯೇ ಇದ್ದಿದ್ದರಿಂದ ಮಾಲೀಕ ಜಿಯಾವುದ್ದೀನ್ ಮೃಧಾ ಅವರ ಕಿರಿಯ ಸಹೋದರ ಇದಕ್ಕೆ ಮೊದಲು ಆ ಹೆಸರಿಟ್ಟಿದ್ದನು.

ಮತ್ತಷ್ಟು ಓದಿ: ಬಾಂಗ್ಲಾದೇಶ: ವೈರಲ್ ಆಗಿರುವ ‘ಡೊನಾಲ್ಡ್​ ಟ್ರಂಪ್’ ಎಮ್ಮೆಯನ್ನು ಬಲಿಕೊಡಲು ಮುಂದಾದ ಮಾಲೀಕ

ಢಾಕಾ ಬಳಿಯ ನಾರಾಯಣಗಂಜ್‌ನ ಜಮೀನಿನಲ್ಲಿದ್ದ ಈ 4 ವರ್ಷದ ಎಮ್ಮೆಯನ್ನು 10 ತಿಂಗಳ ಹಿಂದೆ ಖರೀದಿಸಲಾಗಿತ್ತು. ಇದಕ್ಕೆ ವಿಶೇಷ ಆಹಾರ ಮತ್ತು ನಿಯಮಿತ ಸ್ನಾನದ ವ್ಯವಸ್ಥೆ ಮಾಡಲಾಗಿತ್ತು. ಇದು ಸಾಮಾನ್ಯ ಎಮ್ಮೆಗಳಿಗಿಂತ ಅತ್ಯಂತ ಶಾಂತ ಸ್ವಭಾವದ್ದಾಗಿದೆ.

ಆಲ್ಬಿನೋ ಎಮ್ಮೆಗಳು ಏಕೆ ಅಪರೂಪ?
ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿ ಕಪ್ಪು ಅಥವಾ ಗಾಢ ಬೂದು ಬಣ್ಣದ ಎಮ್ಮೆಗಳು ಮಾತ್ರ ಕಂಡುಬರುತ್ತವೆ. ಆದರೆ ‘ಆಲ್ಬಿನಿಸಂ’ ಎಂಬುದು ದೇಹದಲ್ಲಿ ಮೆಲನಿನ್ ಉತ್ಪತ್ತಿಯಾಗದ ಒಂದು ಅಪರೂಪದ ಆನುವಂಶಿಕ ಸ್ಥಿತಿಯಾಗಿದೆ. ಇದರಿಂದಾಗಿ ಪ್ರಾಣಿಗಳ ಚರ್ಮ ತಿಳಿಯಾಗಿದ್ದು, ಹೊಂಬಣ್ಣ ಅಥವಾ ಬಿಳಿ ಕೂದಲು ಮತ್ತು ಗುಲಾಬಿ ಬಣ್ಣದ ಮೂಗು ಮೂಡುತ್ತದೆ.

ಈ ಅಪರೂಪದ ವೈಶಿಷ್ಟ್ಯದಿಂದಾಗಿಯೇ ಇಡೀ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ಎಮ್ಮೆ ಈಗ ಬಲಿಯಾಗುವುದರಿಂದ ಪಾರಾಗಿದ್ದು, ಇನ್ನು ಮುಂದೆ ಢಾಕಾದ ರಾಷ್ಟ್ರೀಯ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗೆ ವಿಶೇಷ ಆಕರ್ಷಣೆಯಾಗಿ ಉಳಿಯಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Akasa Air: ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ, ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಲಕ್ನೋ. ಮೇ 28: ಬೆಂಗಳೂರಿನಿಂದ ಭುವನೇಶ್ವರಕ್ಕೆ 194 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಆಕಾಶ ಏರ್(Akasa Air) ಸಂಸ್ಥೆಯ ವಿಮಾನ ಇಂಧನ ಕೊರತೆಯಿಂದಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ದೊಡ್ಡದೊಂದು ವಿಮಾನ ಅಪಘಾತ ತಪ್ಪಿದಂತಾಗಿದೆ.

ಘಟನೆಗೆ ಕಾರಣವೇನು?

ನಿಗದಿತ ವೇಳಾಪಟ್ಟಿಯಂತೆ ವಿಮಾನವು ಭುವನೇಶ್ವರಕ್ಕೆ ತಲುಪಬೇಕಿತ್ತು. ಆದರೆ ಅಲ್ಲಿ ಹವಾಮಾನ ಅತ್ಯಂತ ಕೆಟ್ಟದಾಗಿದ್ದ ಕಾರಣ, ರಾತ್ರಿ 8.40 ರ ಸುಮಾರಿಗೆ ವಿಮಾನವನ್ನು ಲಕ್ನೋ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ಈ ಮಾರ್ಗಮಧ್ಯೆ ವಿಮಾನದ ಇಂಧನ ಮಟ್ಟ ಅತ್ಯಂತ ವೇಗವಾಗಿ ಕಡಿಮೆಯಾಗುತ್ತಿರುವುದನ್ನು ಪೈಲಟ್ ಗಮನಿಸಿದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಪೈಲಟ್ ತಕ್ಷಣವೇ ಪ್ಯಾನ್ ಪ್ಯಾನ್ (Pan-Pan) ತುರ್ತು ಕರೆ ನೀಡಿ, ವಾಯು ಸಂಚಾರ ನಿಯಂತ್ರಣ (ATC) ಸಂಸ್ಥೆಯಿಂದ ಆದ್ಯತೆಯ ಮೇರೆಗೆ ವಿಮಾನ ಇಳಿಸಲು ಅನುಮತಿ ಕೋರಿದರು.

ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತು ಪರಿಸ್ಥಿತಿ

ರಾತ್ರಿ 9.02 ಕ್ಕೆ ಪೈಲಟ್‌ನಿಂದ ಸಂದೇಶ ಸಿಗುತ್ತಿದ್ದಂತೆ ಎಚ್ಚೆತ್ತ ಲಕ್ನೋ ಎಟಿಸಿ, ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿತು. ರನ್‌ವೇಯನ್ನು ತಕ್ಷಣವೇ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‌ಪಿಎಫ್ (CRPF) ಸಿಬ್ಬಂದಿ, ಅಗ್ನಿಶಾಮಕ ದಳದ ವಾಹನಗಳು, ವೈದ್ಯಕೀಯ ತಂಡ ಹಾಗೂ ಆಂಬ್ಯುಲೆನ್ಸ್‌ಗಳನ್ನು ರನ್‌ವೇ ಸುತ್ತಲೂ ಸನ್ನದ್ಧವಾಗಿ ನಿಲ್ಲಿಸಲಾಯಿತು.

ಮತ್ತಷ್ಟು ಓದಿ: ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ಎಲ್ಲಾ ಆತಂಕಗಳ ಮಧ್ಯೆ, ಬೋಯಿಂಗ್ 737 ಮ್ಯಾಕ್ಸ್ ವಿಮಾನವು ರಾತ್ರಿ 9.21 ಕ್ಕೆ ರನ್‌ವೇ 09 ರಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ವಿಮಾನ ಇಳಿದ ತಕ್ಷಣ ಎಲ್ಲವೂ ಸಾಮಾನ್ಯವಾಗಿದೆ ಎಂದು ಪೈಲಟ್ ತಿಳಿಸಿದ ನಂತರ ಅಧಿಕಾರಿಗಳು ನಿಟ್ಟುಸಿರು ಬಿಟ್ಟರು. ರಾತ್ರಿ 9.30 ರ ಸುಮಾರಿಗೆ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಯಿತು.

ಈ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ವಿಮಾನ ಇಳಿದ ಬಳಿಕ ಮೂವರು ಪ್ರಯಾಣಿಕರು ಲಕ್ನೋದಲ್ಲೇ ಇಳಿದುಕೊಂಡರು. ನಂತರ ವಿಮಾನಕ್ಕೆ ಮತ್ತೊಮ್ಮೆ ಇಂಧನ ತುಂಬಿಸಿ, ಭುವನೇಶ್ವರಕ್ಕೆ ಕಳುಹಿಸಿಕೊಡಲು ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka Political Crisis Live: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಕೂಟ ಶುರು

28 May 2026 10:06 AM (IST)

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್​

ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್​ಫಾಸ್ಟ್​ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ​ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್​ ಖರ್ಗೆ, ಎನ್​.ಎಸ್.ಬೋಸರಾಜು, ಡಾ.ಶರಣಪ್ರಕಾಶ್​ ಪಾಟೀಲ್​, ಎಸ್​.ಎಸ್.ಮಲ್ಲಿಕಾರ್ಜುನ್​, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್​.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, H​.K.ಪಾಟೀಲ್​, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್​ ಗುಂಡೂರಾವ್, ಶಾಸಕರಾದ ಪೊನ್ನಣ್ಣ, ರಾಯರೆಡ್ಡಿ, ಅಶೋಕ್ ಪಟ್ಟಣ್, ಪುಟ್ಟರಂಗಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದಾರೆ.

28 May 2026 10:05 AM (IST)

ಡಿಕೆ ಶಿವಕುಮಾರ್ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತೆ

ಬೆಂಗಳೂರಿನ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆಯಲ್ಲಿ ಹೆಚ್ಚುವರಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಪೊಲೀಸ್ ಕಬಡ್ಡಿ ಟೀಮ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕೂಡಾ ನಿಯೋಜಿಸಲಾಗಿದೆ.

28 May 2026 10:05 AM (IST)

ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕವೂ ಮುಗಿದಿಲ್ಲ ಆಟ

ಯಾವುದೇ ರೀತಿಯ ದುಡುಕಿನ ಹೇಳಿಕೆ ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎಂಬುದು ತಿಳಿದುಬಂದಿದೆ. ಹೈಕಮಾಂಡ್ ನಾಯಕರು ನನ್ನ ಜೊತೆಗೆ ಏನೂ ಮಾತನಾಡಿಲ್ಲ, ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ. ಸಿಎಂ ರಾಜೀನಾಮೆ ವಿಷಯವೂ ಗೊತ್ತಿಲ್ಲ ಎಂದು ತಮ್ಮನ್ನು ಭೇಟಿಯಾದ ಸಚಿವರು, ಶಾಸಕರಿಗೆಲ್ಲ ಡಿಕೆಶಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Source link

ಜಪಾನ್​​ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ; ವಿದೇಶಿ ನಟನ ಮೆಚ್ಚುಗೆ

Source link

ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿಯ ಬಲೆಗೆ ಬಿದ್ದು ಕೋಟ್ಯಾಂತರ ರೂ. ಕಳೆದುಕೊಂಡ ಟೆಕ್ಕಿ!

ಬೆಂಗಳೂರು, ಮೇ 28: ಆಧುನಿಕ ಜಗತ್ತಿನಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿವೆ. ಸದ್ಯ ನಗರದಲ್ಲಿ ಡೇಟಿಂಗ್ ಆ್ಯಪ್ (Dating App) ಮೂಲಕ ಸುಂದರಿಯೊಬ್ಬಳ ಬಣ್ಣದ ಮಾತಿಗೆ ಮರುಳಾದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ಬರೊಬ್ಬರಿ 1.66 ಕೋಟಿ ರೂಪಾಯಿ ಕಳೆದುಕೊಂಡು ವಂಚನೆಗೊಳಗಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮುಖ್ಯಾಂಶಗಳು

  • ಡೇಟಿಂಗ್ ಆ್ಯಪ್ ಸುಂದರಿ ನಂಬಿ ಬೆಂಗಳೂರು ಟೆಕ್ಕಿ ಕೋಟ್ಯಂತರ ಹಣ ಕಳೆದುಕೊಂಡಿದ್ದಾರೆ.
  • ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗಲಾಗಿದೆ.
  • ಮೂರು ತಿಂಗಳಲ್ಲಿ ಟೆಕ್ಕಿಯಿಂದ 1.66 ಕೋಟಿ ರೂಪಾಯಿ ಪೀಕಿದ ವಂಚಕಿ.

ಮದುವೆಯ ಆಸೆ ತೋರಿಸಿ ನಂಬಿಕೆ ದ್ರೋಹ

ಬೆಂಗಳೂರಿನ ಸೌರವ್ ದುಬೆ ಎಂಬ ಟೆಕ್ಕಿಗೆ ಕಳೆದ ಫೆಬ್ರವರಿ 15ರಂದು ‘ಟಂಟನ್’ (Tantan) ಎಂಬ ಪ್ರಸಿದ್ಧ ಡೇಟಿಂಗ್ ಆ್ಯಪ್‌ನಲ್ಲಿ ರಿಯಾ ಅಗರ್ವಾಲ್ ಎಂಬ ಯುವತಿಯ ಪರಿಚಯವಾಗಿತ್ತು. ಆರಂಭದಲ್ಲಿ ಚಾಟಿಂಗ್ ಮೂಲಕ ಶುರುವಾದ ಇವರ ಪರಿಚಯ, ದಿನಕಳೆದಂತೆ ಆತ್ಮೀಯ ಸ್ನೇಹಕ್ಕೆ ತಿರುಗಿತ್ತು. ನಂತರ ಯುವತಿಯೇ ಸೌರವ್ ಮೊಬೈಲ್ ನಂಬರ್ ಪಡೆದುಕೊಂಡು ನಿರಂತರವಾಗಿ ಆಡಿಯೋ ಮತ್ತು ವಿಡಿಯೋ ಕಾಲ್ ಮಾಡುವ ಮೂಲಕ ಅವರ ಸಂಪೂರ್ಣ ವಿಶ್ವಾಸವನ್ನು ಗಳಿಸಿದ್ದಳು. ಅಷ್ಟೇ ಅಲ್ಲದೆ, ತಾನು ಸೌರವ್‌ನನ್ನು ಮದುವೆಯಾಗುವುದಾಗಿ ನಂಬಿಸಿದ್ದಳು.

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಭಾರಿ ವಂಚನೆ

ಸೌರವ್ ತನ್ನನ್ನು ಸಂಪೂರ್ಣವಾಗಿ ನಂಬಿದ್ದಾನೆ ಎಂದು ಖಚಿತಪಡಿಸಿಕೊಂಡ ರಿಯಾ, ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಕಡಿಮೆ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಲಾಭ ಗಳಿಸಬಹುದು ಎಂಬ ಆಮಿಷ ಒಡ್ಡಿದ್ದಾಳೆ. ಮದುವೆಯಾಗಲಿರುವ ಯುವತಿಯ ಮಾತನ್ನು ನಿಜವೆಂದು ನಂಬಿದ ಟೆಕ್ಕಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಬರೊಬ್ಬರಿ 1.66 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದ್ದಾರೆ.

ಮೊಬೈಲ್ ಸ್ವಿಚ್ ಆಫ್!

ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿದ ನಂತರ ಸೌರವ್‌ಗೆ ವಾಪಸ್ ಸಿಕ್ಕಿದ್ದು ಕೇವಲ 4,250 ರೂಪಾಯಿ ಮಾತ್ರ. ಇದರಿಂದ ಅನುಮಾನಗೊಂಡ ಸೌರವ್ ತನಗೆ ಬರಬೇಕಾದ ಲಾಭದ ಹಣ ಮತ್ತು ಅಸಲನ್ನು ವಾಪಸ್ ನೀಡುವಂತೆ ರಿಯಾ ಬಳಿ ಕೇಳಿದ್ದ. ಯಾವಾಗ ಸೌರವ್ ಹಣಕ್ಕಾಗಿ ಒತ್ತಾಯಿಸಲು ಆರಂಭಿಸಿದನೋ, ತಕ್ಷಣವೇ ಆಕೆ ತನ್ನ ಮೊಬೈಲ್ ನಂಬರ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ. ತಾನು ಸಂಪೂರ್ಣವಾಗಿ ಮೋಸ ಹೋಗಿರುವುದು ತಡವಾಗಿ ಅರಿವಿಗೆ ಬರುತ್ತಿದ್ದಂತೆ ಸೌರವ್​ಗೆ ದಿಕ್ಕು ತೋಚದಂತಾಗಿದೆ.

ಇದನ್ನೂ ಓದಿ ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ಕೊನೆಗೆ ಸಂತ್ರಸ್ತ ಟೆಕ್ಕಿ ಸೌರವ್ ದುಬೆ ಬೆಂಗಳೂರಿನ ಅಗ್ನೇಯ ವಿಭಾಗದ ಸೆನ್ (CEN) ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕ ಯುವತಿ ಹಾಗೂ ಆಕೆಯ ಬ್ಯಾಂಕ್ ಖಾತೆಗಳ ಜಾಡು ಹಿಡಿದು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಡೇಟಿಂಗ್ ಆ್ಯಪ್‌ಗಳಲ್ಲಿ ಅಪರಿಚಿತರ ಪ್ರಲೋಭನೆಗೆ ಒಳಗಾಗಬೇಡಿ ಎಂದು ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version